ವಾರಾಹಿ ಪೈಪ್‌ಲೈನ್ ಕಾಮಗಾರಿ ನಿರ್ಲಕ್ಷ್ಯ: ಆರೂರಿನಲ್ಲಿ ನದಿ ಪಾಲಾಗುತ್ತಿರುವ ಕೃಷಿಭೂಮಿ, ರೈತರ ಆತಂಕ

ಉಡುಪಿ: ಉಡುಪಿ ಜಿಲ್ಲೆಯ ಆರೂರು ಗ್ರಾಮದಲ್ಲಿ ವಾರಾಹಿ ಕುಡಿಯುವ ನೀರಿನ ಪೈಪ್‌ಲೈನ್ ಕಾಮಗಾರಿ ಬಳಿಕ ನದಿಯಲ್ಲಿ ಹಾಕಿದ್ದ ಮಣ್ಣು ಹಾಗೂ ಕಲ್ಲುಗಳನ್ನು ತೆರವುಗೊಳಿಸದ ಕಾರಣ ನದಿಯ ಹರಿವಿನ ದಿಕ್ಕು ಬದಲಾಗಿದ್ದು, ಕೃಷಿಭೂಮಿಗಳು ನದಿ ಪಾಲಾಗುತ್ತಿರುವ ಘಟನೆ ರೈತರಲ್ಲಿ ಆತಂಕ ಮೂಡಿಸಿದೆ. ಆರೂರು ಗ್ರಾಮದ ತೆಂಕಬೆಟ್ಟು ಸೇತುವೆ ಸಮೀಪ ಹರಿಯುವ ಮಡಿಸಾಲು ಹೊಳೆಯಲ್ಲಿ ವಾರಾಹಿಯಿಂದ ಮಣಿಪಾಲಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಪೈಪ್‌ಲೈನ್ ಅಳವಡಿಸುವ ವೇಳೆ ನದಿಗೆ ಅಡ್ಡಲಾಗಿ ಮಣ್ಣು ಮತ್ತು ಕಲ್ಲುಗಳನ್ನು ಹಾಕಲಾಗಿತ್ತು. ಕಾಮಗಾರಿ ಪೂರ್ಣಗೊಂಡು ಒಂದು…

Read More

ವಂದೇ ಮಾತರಂಗೆ ರಾಷ್ಟ್ರಗೀತೆ ಸಮಾನ ಪ್ರಾಮುಖ್ಯತೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ : ವಂದೇ ಮಾತರಂ ಗೀತೆ ಸ್ವಾತಂತ್ರ್ಯ ಚಳುವಳಿಯಲ್ಲಿ ಬಹುಮುಖ್ಯ ಪಾತ್ರವಹಿಸಿದೆ. ಇದಕ್ಕೆ ರಾಷ್ಟ್ರಗೀತೆ ಸಮನಾದ ಪ್ರಾಮುಖ್ಯತೆ ಸಿಕ್ಕಿರುವುದು ಸಂತೋಷದ ವಿಚಾರ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಬುಧವಾರ ಎಂಜಿಎಂ ಕಾಲೇಜಿನ ಮುದ್ದಣ್ಣ ಮಂಟಪದಲ್ಲಿ ರಂಗಭೂಮಿ ಉಡುಪಿ ವತಿಯಿಂದ ಕೇಂದ್ರ ಸಂಗೀತ ನಾಟಕ ಅಕಾಡೆಮಿಯ ಸಹಕಾರದಲ್ಲಿ ವಂದೇ ಮಾತರಂನ 150 ರ ಸಂಭ್ರಮಾಚರಣೆ, ಕವಿ ಚಕ್ರವರ್ತಿ ಕಾಳಿದಾಸ ಜಯಂತಿ ಅಂಗವಾಗಿ ನಡೆದ ಯುವ ರಂಗೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇದೀಗ ದೇಶಾದ್ಯಂತ ಸುಮಾರು 20…

Read More

ಕೊಳಲಗಿರಿ–ಪರಾರಿ ಸೇತುವೆ ದುಸ್ಥಿತಿ: ತಕ್ಷಣ ದುರಸ್ತಿ, ಸಿಸಿಟಿವಿ ಅಳವಡಿಕೆಗೆ ಆಗ್ರಹ

ಉಡುಪಿ, ಜು.16:ಉಡುಪಿ ನಗರಸಭೆ ವ್ಯಾಪ್ತಿಯ ಕೊಳಲಗಿರಿ–ಪರಾರಿ–ಮಣಿಪಾಲ ಸಂಪರ್ಕಿಸುವ ಶೀಮ್ರಾ (ಪರಂಪಳ್ಳಿ) ಸೇತುವೆ ತೀವ್ರ ದುಸ್ಥಿತಿಯಲ್ಲಿದ್ದು, ಸಾರ್ವಜನಿಕರು, ಮಹಿಳೆಯರು ಹಾಗೂ ವಾಹನ ಸವಾರರ ಸುರಕ್ಷತೆಗೆ ಗಂಭೀರ ಅಪಾಯ ಎದುರಾಗಿದೆ. ಸೇತುವೆಯನ್ನು ತಕ್ಷಣ ದುರಸ್ತಿ ಮಾಡಿ ಅಗತ್ಯ ಮೂಲಸೌಕರ್ಯ ಕಲ್ಪಿಸುವಂತೆ ಉಡುಪಿ ಜಿಲ್ಲೆಯ ಸಾಮಾಜಿಕ ಕಾರ್ಯಕರ್ತ ಹಾಗೂ ಸಮಾಜಸೇವಕ ಸತೀಶ್ ಪೂಜಾರಿ ಕೀಳಂಜೆ ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮಣಿಪಾಲ, ಕೆಎಂಸಿ ಆಸ್ಪತ್ರೆ, ಬ್ರಹ್ಮಾವರ, ಪೆರಡೂರು, ಮಂದರ್ತಿ, ಕೊಕ್ಕರ್ಣೆ ಸೇರಿದಂತೆ ವಿವಿಧ ಭಾಗಗಳಿಗೆ ಸಂಪರ್ಕ…

Read More

ಕಾಂಗ್ರೆಸ್ ಏಕಪಕ್ಷೀಯ ಮೀಸಲಾತಿ ಪ್ರಕಟಿಸಿದೆ: ಸತೀಶ್ ಕುಂಪಲ

ಮಂಗಳೂರು : ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಗ್ರಾಪಂ ಚುನಾವಣೆ ಕಾಂಗ್ರೆಸ್ ಸರಕಾರ ಏಕ ಪಕ್ಷೀಯವಾಗಿ ಮೀಸಲಾತಿ ಪ್ರಕಟಿಸಿದೆ. ಇದಕ್ಕೆ ಆಕ್ಷೇಪ ಸಲ್ಲಿಸುವ ಬಗ್ಗೆ ತೀರ್ಮಾನಿಸಲಾಗಿದೆ. ಚುನಾವಣೆಯನ್ನು ಎದುರಿಸುವ ನಿಟ್ಟಿನಲ್ಲಿ ಸಿದ್ಧತೆ ಈಗಾಗಲೇ ನಡೆಸಲಾಗಿದ್ದು, ಪ್ರಮುಖರಾದ ಕಿಶೋರ್ ಕುಮಾರ್, ಪ್ರತಾಪಸಿಂಹ ನಾಯಕ್, ಪ್ರೇಮಾನಂದ ಶೆಟ್ಟಿ ಸಂಜೀವ ಮಠಂದೂರು ಅವರನ್ನೊಳಗೊಂಡ ಸಮಿತಿ ರಚಿಸಲಾಗಿದೆ ಎಂದರು.

Read More

ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಸಾಧ್ಯತೆ: ಜುಲೈ 19ರವರೆಗೆ ಮುನ್ನೆಚ್ಚರಿಕೆ ವಹಿಸಲು ಮನವಿ

ಬೆಂಗಳೂರು: ರಾಜ್ಯದಾದ್ಯಂತ ಜುಲೈ 15ರಿಂದ 19ರವರೆಗೆ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 3 ರಿಂದ 5 ಡಿಗ್ರಿ ಸೆಲ್ಸಿಯಸ್‌ವರೆಗೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ. ಹೆಚ್ಚುತ್ತಿರುವ ಉಷ್ಣಾಂಶದ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಇಲಾಖೆ ಮನವಿ ಮಾಡಿದೆ. ಬಿಸಿಲಿನ ತೀವ್ರತೆ ಹೆಚ್ಚಿರುವ ಸಮಯದಲ್ಲಿ ಅನಗತ್ಯವಾಗಿ ಹೊರಗಡೆ ಸಂಚರಿಸುವುದನ್ನು ತಪ್ಪಿಸುವುದು, ಸಾಕಷ್ಟು ನೀರು ಸೇವಿಸುವುದು ಹಾಗೂ ಮಕ್ಕಳು, ವೃದ್ಧರು ಮತ್ತು ಅನಾರೋಗ್ಯ ಪೀಡಿತರ ಬಗ್ಗೆ ವಿಶೇಷ ಕಾಳಜಿ ವಹಿಸುವಂತೆ ಸೂಚಿಸಲಾಗಿದೆ. ಉಷ್ಣಾಂಶ…

Read More

ಜಾತಿ ಸಮೀಕ್ಷೆ ವರದಿ ಬಹಿರಂಗಪಡಿಸಿ: ಕೇಶವ ಪ್ರಸಾದ್ ಆಗ್ರಹ

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ನಾಯಕ್ ನೇತೃತ್ವದಲ್ಲಿ ಸಿದ್ಧಪಡಿಸಲಾದ ‘ಕರ್ನಾಟಕ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ’ ವರದಿಯನ್ನು ಬಹಿರಂಗಪಡಿಸಬೇಕು ಹಾಗೂ ಮುಂದಿನ ಅಧಿವೇಶನದಲ್ಲಿ ಇದರ ಚರ್ಚೆಗೆ ಅವಕಾಶ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಕೇಶವ ಪ್ರಸಾದ್ ಆಗ್ರಹಿಸಿದ್ದಾರೆ. ಗುರುವಾರ ನಗರ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆವರು, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಕೊನೆಯ ದಿನಗಳಲ್ಲಿ ವರದಿ ಸರಕಾರದ ಕೈಸೇರಿದೆ. ಪ್ರಸ್ತುತ ಸಿಎಂ ಬದಲಾಗಿದ್ದಾರೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವರದಿಯನ್ನು ಕ್ಯಾಬಿನೆಟ್ ಮುಂದೆ…

Read More

ಲಯನ್ಸ್ ಜಿಲ್ಲೆ 317ಡಿ: ತಾರಾನಾಥ್ ಎಚ್.ಎಂ. ಅವರಿಗೆ ಅಧಿಕಾರ ಹಸ್ತಾಂತರ

ಮಂಗಳೂರು:ಲಯನ್ಸ್ ಜಿಲ್ಲೆ 317ಡಿ ವತಿಯಿಂದ 2025-26ನೇ ಸಾಲಿನ ಜಿಲ್ಲಾ ರಾಜ್ಯಪಾಲರಾಗಿದ್ದ ಕುಡುಪಿ ಅರವಿಂದ್ ಶೆಣೈ ಅವರು 2026-27ನೇ ಸಾಲಿನ ನೂತನ ಜಿಲ್ಲಾ ರಾಜ್ಯಪಾಲ ತಾರಾನಾಥ್ ಎಚ್.ಎಂ. ಅವರಿಗೆ ಜಿಲ್ಲಾ ಕಚೇರಿಯಲ್ಲಿ ಅಧಿಕಾರವನ್ನು ಅಧಿಕೃತವಾಗಿ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಗಣ್ಯರು, ಲಯನ್ಸ್ ಸಂಸ್ಥೆಯ ಸೇವಾ ಚಟುವಟಿಕೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ವಿಸ್ತರಿಸುವ ನಿಟ್ಟಿನಲ್ಲಿ ನೂತನ ಆಡಳಿತ ಮಂಡಳಿ ಕಾರ್ಯನಿರ್ವಹಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಅಧಿಕಾರ ಹಸ್ತಾಂತರ ಸಮಾರಂಭದಲ್ಲಿ ಪ್ರಥಮ ಉಪ ಜಿಲ್ಲಾ ರಾಜ್ಯಪಾಲ ಗೋವರ್ಧನ್ ಶೆಟ್ಟಿ, ದ್ವಿತೀಯ ಉಪ…

Read More

ಉಪ್ಪೂರಿನ ನಂದಿನಿ ಡೇರಿಗೆ ಸಂಪರ್ಕಿಸುವ ರಸ್ತೆಯಲ್ಲಿ ಬಿರುಕು; ತಕ್ಷಣ ದುರಸ್ತಿಗೆ ಸಾರ್ವಜನಿಕರ ಆಗ್ರಹ

ಬ್ರಹ್ಮಾವರ: ಉಪ್ಪೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಎಂಎಫ್ ನಂದಿನಿ ಡೇರಿಗೆ ಸಂಪರ್ಕಿಸುವ ಪ್ರಮುಖ ರಸ್ತೆಯ ಮಧ್ಯಭಾಗದಲ್ಲಿ ದೊಡ್ಡ ಬಿರುಕು ಉಂಟಾಗಿದ್ದು, ಯಾವುದೇ ಕ್ಷಣದಲ್ಲಿ ಭಾರಿ ಅನಾಹುತ ಸಂಭವಿಸುವ ಆತಂಕ ಎದುರಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ರಸ್ತೆಯ ಎರಡೂ ಬದಿಗಳಲ್ಲಿ ಆಳವಾದ ಕಂದಕಗಳಿದ್ದು, ಕಳೆದ ಒಂದು ವರ್ಷದಿಂದ ಈ ಸಮಸ್ಯೆ ಮುಂದುವರಿದಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸಮಾಜಸೇವಕ ಸತೀಶ್ ಪೂಜಾರಿ ಕೀಳಂಜೆ ದೂರಿದ್ದಾರೆ. ಪ್ರತಿದಿನ ನಂದಿನಿ ಡೇರಿಗೆ ಹಾಲು ಸಾಗಿಸುವ ಟ್ಯಾಂಕರ್‌ಗಳು, ಕಂಟೇನರ್‌ಗಳು ಸೇರಿದಂತೆ ಭಾರೀ…

Read More

ಕ್ರೀಡಾಪಟುಗಳಿಗೆ ಹಾಜರಾತಿ ವಿನಾಯಿತಿ, ಉದ್ಯೋಗ ಮೀಸಲಾತಿ: ಡಾ. ಜಿ. ಪರಮೇಶ್ವರ

ಬೆಂಗಳೂರು: ರಾಜ್ಯ ಹಾಗೂ ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಹಾಜರಾತಿಯಲ್ಲಿ ಶೇ.15 ಹಾಗೂ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವವರಿಗೆ ಶೇ.25ರಷ್ಟು ವಿನಾಯಿತಿ ನೀಡುವ ಸರ್ಕಾರಿ ಆದೇಶ ಜಾರಿಗೊಳಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ಜಿ. ಪರಮೇಶ್ವರ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಜರಾತಿ ಕೊರತೆಯಿಂದ ಯಾವುದೇ ಕ್ರೀಡಾಪಟು ಪರೀಕ್ಷೆಯಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದರು. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ನೇಮಕಾತಿಯಲ್ಲಿ ಶೇ.2ರಷ್ಟು…

Read More

ಮಳೆಗಾಗಿ ಕದ್ರಿ ದೇವಾಲಯದಲ್ಲಿ ಪರ್ಜನ್ಯ ಜಪ

ಮಂಗಳೂರು: ರಾಜ್ಯ ಸೇರಿದಂತೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಕೊರತೆ ಉಂಟಾಗಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಕದ್ರಿ ಶ್ರೀ ಮಂಜುನಾಥ ದೇವಾಲಯದಲ್ಲಿ ಶುಕ್ರವಾರ ಪರ್ಜನ್ಯ ಜಪ ಹಾಗೂ ವಿಶೇಷ ಪ್ರಾರ್ಥನೆ ನೆರವೇರಿಸಲಾಯಿತು. ಸಂಭಾವ್ಯ ಬರ ಪರಿಸ್ಥಿತಿ ನಿವಾರಣೆ, ಸಮರ್ಪಕ ಮಳೆ ಹಾಗೂ ನೀರಿನ ಕೊರತೆ ನೀಗಿಸುವಂತೆ ವರುಣ ದೇವರಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ಕದ್ರಿ ದೇವಾಲಯದ ಗೋಮುಖ ತೀರ್ಥದಲ್ಲಿ ವೇದ ಪಾರಾಯಣದೊಂದಿಗೆ ಪರ್ಜನ್ಯ ಜಪ ನಡೆಯಿತು. ಈ ಕುರಿತು ಕಲ್ಕೂರ ಪ್ರತಿಷ್ಠಾನದ ಪ್ರದೀಪ್ ಕುಮಾರ್ ಕಲ್ಕೂರ ಮಾತನಾಡಿ, ಕರಾವಳಿಯಲ್ಲಿ…

Read More
error: Content is protected !!