ಮುಲ್ಕಿ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ
2022ರಲ್ಲಿ ಮುಲ್ಕಿಯಲ್ಲಿ ನಡೆದಿದ್ದ ವ್ಯಕ್ತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ನ್ಯಾಯಾಲಯ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. 2022ರ ಮಾರ್ಚ್ 19ರಂದು ರಾತ್ರಿ ಸುಮಾರು 9.45ರ ಸುಮಾರಿಗೆ ಬಪ್ಪನಾಡು ಗ್ರಾಮದ ಮುಲ್ಕಿ ಪೇಟೆಯ ಟೂರಿಸ್ಟ್ ಕಾರು ಪಾರ್ಕಿಂಗ್ ಸಮೀಪ ಈ ಘಟನೆ ನಡೆದಿತ್ತು. ಉಲ್ಲಂಜೆ ನಿವಾಸಿ ಹರೀಶ್ ಸಾಲ್ಯಾನ್ (47) ಅವರನ್ನು ಹಣಕಾಸಿನ ವೈಷಮ್ಯದಿಂದ ಆರೋಪಿ ಮುರುಗನ್ ಕ್ರೂರವಾಗಿ ಹತ್ಯೆ ಮಾಡಿದ್ದನು. ಹರೀಶ್ ಸಾಲ್ಯಾನ್ ಅವರ ಮುಖಕ್ಕೆ ಸಿಮೆಂಟ್ ಕಾಂಕ್ರಿಟ್ ಅಂಟಿದ್ದ ಕೆಂಪು…
