ಯಕ್ಷಮಂಜರಿ ಮಹಿಳಾ ಯಕ್ಷಗಾನ ತಾಳಮದ್ದಳೆ ಅಷ್ಟಾಹ ಸಂಭ್ರಮ : ಚತುರ್ಥ ದಿನ

ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಆಯೋಜಿಸಿರುವ ಮಹಿಳಾ ಯಕ್ಷಗಾನ ತಾಳಮದ್ದಳೆ ಅಷ್ಟಾಹ ಸಂಭ್ರಮ ಯಕ್ಷಮಂಜರಿಯ ಚತುರ್ಥ ದಿನದ ಕಾರ್ಯಕ್ರಮವನ್ನು ದೀಪ ಪ್ರಜ್ವಲನೆ ಮಾಡಿ ಮಾತನಾಡಿದ ದಕ್ಷಿಣ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರೂ ಧಾರ್ಮಿಕ ಮುಂದಾಳು, ಹಿರಿಯರಾದ ಧರ್ಮದರ್ಶಿ ಹರಿಕೃಷ್ಣ ಪುನರೂರು ಇವರು ನಮ್ಮ ಭಾರತೀಯ ಸನಾತನ ಸಂಸ್ಕೃತಿ ಉಳಿಯಬೇಕಾದರೆ ನಮ್ಮಲ್ಲಿ ಧಾರ್ಮಿಕ ಪ್ರಜ್ಞೆ ಮೂಡಬೇಕು ಪ್ರಸ್ತುತ ಶಿಕ್ಷಣ ವ್ಯವಸ್ಥೆಯಲ್ಲಿ ಆ ಕುರಿತಾದ ಚಿಂತನೆಗೆ ಅವಕಾಶ ಇಲ್ಲದಿರುವುದರಿಂದ, ಮಕ್ಕಳು ಮಹಿಳೆಯರು ಇಂತಹ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಜಾಗೃತಿ ಸಾಧ್ಯ…

Read More

ಪುತ್ತೂರಿನಲ್ಲಿ ಭೂಮಿಗೆ ಅತೀ ಸಮೀಪದಲ್ಲಿ ಹಾರಿದ ವಿಮಾನ: ಸ್ಥಳೀಯರಲ್ಲಿ ಆತಂಕ

ಪುತ್ತೂರು: ಪುತ್ತೂರಿನಲ್ಲಿ ಗುರುವಾರ ಸಂಜೆ ವಿಮಾನವೊಂದು ಭೂಮಿ ಮಟ್ಟಕ್ಕೆ ಅತೀ ಸಮೀಪದಲ್ಲಿ ಹಾರಾಟ ನಡೆಸಿದ ದೃಶ್ಯ ಕಂಡುಬಂದಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿತು. ಬಳಿಕ ಇದು ಭೂ ವಿಜ್ಞಾನಕ್ಕೆ ಸಂಬಂಧಿಸಿದ ಸಮೀಕ್ಷಾ ಕಾರ್ಯವೆಂದು ತಿಳಿದು ಬಂದ ಹಿನ್ನೆಲೆಯಲ್ಲಿ ಜನರು ನಿಟ್ಟುಸಿರು ಬಿಟ್ಟರು. ಪುತ್ತೂರು ಮಹಾಲಿಂಗೇಶ್ವರ ದೇವಾಲಯದ ವಠಾರದ ಗದ್ದೆ ಪ್ರದೇಶದ ಮೇಲ್ಭಾಗದಲ್ಲಿ ನೆಲ ಮಟ್ಟಕ್ಕೆ ಬಹಳ ಸಮೀಪದಲ್ಲಿ ವಿಮಾನ ಹಾರಾಡುತ್ತಿರುವುದನ್ನು ಸ್ಥಳೀಯರು ಗಮನಿಸಿದರು. ಈ ವಿಮಾನವು ನಗರದ ವಿವಿಧ ಭಾಗಗಳ ಮೇಲೂ ಸುಮಾರು 10 ರಿಂದ 15 ಸುತ್ತು…

Read More

ಮಂಗಳೂರು ವಿಶ್ವವಿದ್ಯಾಲಯದಲ್ಲಿ 5ನೇ ರ‍್ಯಾಂಕ್‌ ಪಡೆದ ಐಷಾ: ಬರಕಾ ಸಂಸ್ಥೆಗೆ ಹೆಮ್ಮೆಯ ಕ್ಷಣ

ಆಡ್ಯಾರ್‌ನ ಬರಕಾ ಇಂಟರ್‌ನ್ಯಾಷನಲ್ ಶಾಲೆ ಹಾಗೂ ಕಾಲೇಜಿಗೆ ಮತ್ತೊಂದು ಹೆಮ್ಮೆಯ ಕ್ಷಣ ಲಭಿಸಿದೆ. ಸಂಸ್ಥೆಯ ಪದವಿ ಕಾಲೇಜಿನ ವಿದ್ಯಾರ್ಥಿನಿ ಐಷಾ ಅವರು ಮಂಗಳೂರು ವಿಶ್ವವಿದ್ಯಾಲಯದ ಬಿ.ಎ. ವಿಭಾಗದಲ್ಲಿ 5ನೇ ರ‍್ಯಾಂಕ್‌ ಗಳಿಸಿ ಸಂಸ್ಥೆಯ ಕೀರ್ತಿಪತಾಕೆಯನ್ನು ಮತ್ತೊಮ್ಮೆ ಎತ್ತಿಹಿಡಿದಿದ್ದಾರೆ.ಐಷಾ ಅವರು ಅಶ್ರಫ್ ಅಲಿ ಹಾಗೂ ರಮ್ಲತ್ ದಂಪತಿಯ ಪುತ್ರಿಯಾಗಿದ್ದು, ಅಲ್ತಾಫ್ ಉಮರ್ ಅವರ ಪತ್ನಿಯಾಗಿದ್ದಾರೆ. ಈಗಾಗಲೇ ಶೈಕ್ಷಣಿಕ ಸಾಧನೆಯಲ್ಲಿ ಮೆಚ್ಚುಗೆ ಗಳಿಸಿರುವ ಅವರು ಪ್ರಸ್ತುತ ಮಂಗಳೂರು ವಿಶ್ವವಿದ್ಯಾಲಯದಲ್ಲೇ ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ (ಎಂ.ಎ.) ಅಭ್ಯಾಸ ಮಾಡುತ್ತಿದ್ದಾರೆ. ಅವರ…

Read More

ಮಂಗಳೂರು: ಮಾರ್ಚ್ 5ರಂದು 117ನೇ ಸಾಹಿತ್ಯ ಅಭಿರುಚಿ ಕಾರ್ಯಕ್ರಮ

ಮಂಗಳೂರು: ಅಮೃತ ಪ್ರಕಾಶ ಪತ್ರಿಕೆ ಮಂಗಳೂರು ಹಾಗೂ ಮ್ಯಾಪ್ಸ್ ಕಾಲೇಜು ಮಂಗಳೂರು ಇವರ ಜಂಟಿ ಆಶ್ರಯದಲ್ಲಿ 117ನೇ ‘ಸಾಹಿತ್ಯ ಅಭಿರುಚಿ’ ಕಾರ್ಯಕ್ರಮ ಮಾರ್ಚ್ 5ರಂದು ಬೆಳಿಗ್ಗೆ 11:30ಕ್ಕೆ ಮ್ಯಾಪ್ಸ್ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮ್ಯಾಪ್ಸ್ ಕಾಲೇಜು ಮಂಗಳೂರಿನ ಪ್ರಾಂಶುಪಾಲರಾದ ಡಾ. ಶೃತಿ ಶೆಟ್ಟಿ ವಹಿಸಲಿದ್ದಾರೆ. ಮುಖ್ಯ ಸಂಪನ್ಮೂಲ ಅತಿಥಿಗಳಾಗಿ ಎ.ಜೆ. ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನ ಕೇಂದ್ರ ಮಂಗಳೂರಿನ ಔಷಧ ಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಚಂದ್ರಶೇಖರ್ ಹಾಗೂ ವಿಜಯ ಕರ್ನಾಟಕ ದೈನಿಕದ…

Read More

ತುಳು ಅಧಿಕೃತ ಭಾಷೆ ಕುರಿತು ಅಧ್ಯಯನ ವರದಿ ಸರಕಾರಕ್ಕೆ ಸಲ್ಲಿಕೆ

ಮಂಗಳೂರು: ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಪ್ರಸ್ತಾಪದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯನ್ನು ಘೋಷಿಸುವಾಗ ಅನುಸರಿಸಿರುವ ಮಾನದಂಡಗಳ ಕುರಿತು ಅಧ್ಯಯನ ನಡೆಸಲು ರಚಿಸಲಾಗಿದ್ದ ಸಮಿತಿಯು ತನ್ನ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಂದಿನ ನಿರ್ದೇಶಕಿ ಕೆ.ಎಂ. ಗಾಯತ್ರಿ ಅವರ ಅಧ್ಯಕ್ಷತೆಯಲ್ಲಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅವರ ಉಪಸ್ಥಿತಿಯಲ್ಲಿ ಆರು ಸದಸ್ಯರ ಅಧ್ಯಯನ ಸಮಿತಿಯನ್ನು ಸರ್ಕಾರ ನೇಮಿಸಿತ್ತು. ಈ ಸಮಿತಿ…

Read More

ಮಲ್ಪೆ: ಮಂಜು ಕೊಳಗೆ ಚೂರಿ ಇರಿತ ಪ್ರಕರಣ – ಐವರು ಆರೋಪಿಗಳ ಬಂಧನ

ಉಡುಪಿ: ಹಿಂದೂ ಯುವ ಸೇನೆಯ ಮುಖಂಡ ಹಾಗೂ ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಅವರ ಪತಿ ಮಂಜು ಕೊಳ ಅವರಿಗೆ ಚೂರಿ ಇರಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಪಲಿಮಾರು ನಿವಾಸಿಗಳಾದ ಪ್ರಜೇಶ್, ಪುನೀತ್, ಅಮೃತ್‌, ಅಭಿಜಿತ್ ಹಾಗೂ ಇನ್ನೋರ್ವ ಆರೋಪಿಯೆಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರೀತಿಯ ವಿಚಾರಕ್ಕೆ ಸಂಬಂಧಿಸಿದಂತೆ ರಾಜಿ ಪಂಚಾಯತಿ ನಡೆಸಲು ಮಂಜು ಕೊಳ ಅವರನ್ನು ಕರೆಸಲಾಗಿತ್ತು ಎನ್ನಲಾಗಿದೆ. ಈ ವೇಳೆ ಮಾತಿಗೆ ಮಾತು ಬೆಳೆದು…

Read More

ಸಹಕಾರಿ ಕ್ಷೇತ್ರದಲ್ಲಿ ಸಾಂಪ್ರದಾಯಿಕ ಕುಣಿತದೊಂದಿಗೆ ಹೋಳಿ ಹಬ್ಬದ ಆಚರಣೆ

ಉಡುಪಿ ಕರಾವಳಿಯಲ್ಲಿ ಬಹುವೈಶಿಷ್ಟ್ಯತೆಯಿಂದ ಮರಾಠಿ, ಕುಡುಬಿ ಹಾಗೂ ಖಾರ್ವಿ ಸಮುದಾಯಗಳು ಆಚರಿಸುವ ಹೋಳಿ ಕುಣಿತವನ್ನು ಉಡುಪಿ ಛತ್ರಪತಿ ಶಿವಾಜಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಹೋಳಿ ಕುಣಿತದಲ್ಲಿ ವಿಶೇಷ ಆಕರ್ಷಣೆಯಾಗಿ ಹಕ್ಕಿಯ ಬಾಲದ ಗರಿ, ಸುರಗಿ ಸುರ ಸಂಪಿಗೆ ಹೂವು, ಅಬ್ಬಲಿ ಮಾಲೆಯ ಹೂವು, ವೇಷಭೂಷಣ, ಹೂವಿನಿಂದ ಅಲಂಕೃತ ಪೇಟವನ್ನು ತೊಟ್ಟು ಸಾಂಪ್ರದಾಯಿಕ ಕುಣಿತದೊಂದಿಗೆ ಸಂಭ್ರಮಿಸಿದರು. ಛತ್ರಪತಿ ಶಿವಾಜಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ದಿನೇಶ್ ಸಿ. ನಾಯ್ಕ್ ಅವರ ನೇತೃತ್ವದಲ್ಲಿ ಸಂಘದ ಪ್ರಧಾನ ಕಚೇರಿ…

Read More

ಉಡುಪಿ: ಮಲ್ಪೆ ಬಂದರಿನಲ್ಲಿ ಶ್ರಮಿಕರ ಮೇಲಿನ ಗೂಂಡಾಗಿರಿ ಖಂಡಿಸಿ ಪ್ರತಿಭಟನೆ

ಉಡುಪಿ ಜಿಲ್ಲೆಯಲ್ಲಿ ಮಲ್ಪೆ ಬಂದರಿನಲ್ಲಿ ಶ್ರಮಿಕರ ಮೇಲಿನ ದೌರ್ಜನ್ಯವನ್ನು ಖಂಡಿಸಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಬುಧವಾರ ಪ್ರತಿಭಟನೆ ನಡೆಯಿತು. ಅಜ್ಜರಕಾಡಿನ ಹುತಾತ್ಮ ಸ್ಮಾರಕದ ಬಳಿ ಈ ಪ್ರತಿಭಟನೆ ನಡೆಸಲಾಯಿತು. ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (CITU), ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ), ಸಹಬಾಳ್ವೆ ಉಡುಪಿ ಜಿಲ್ಲೆ ಹಾಗೂ ಇತರೆ ಸಮಾನ ಮನಸ್ಕ ಸಂಘಟನೆಗಳು ಪ್ರತಿಭಟನೆಗೆ ನೇತೃತ್ವ ನೀಡಿದರು.. ಪ್ರತಿಭಟನೆಯಲ್ಲಿ ಮಾತನಾಡಿದ ದಲಿತ ಮುಖಂಡ ಸುಂದರ್ ಮಾಸ್ಟರ್, ಮಲ್ಪೆ ಬಂದರಿನಲ್ಲಿ ಎಲ್ಲರಿಗೂ ಸಮಾನವಾಗಿ ದುಡಿಯುವ…

Read More

ಭಾರತೀಯ ಜನತಾ ಪಕ್ಷ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯೋಜನಾ ಸಭೆ; ‘ಪಂಡಿತ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ–2026’ ಚಾಲನೆ

ಪಂಡಿತ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ – 2026 ರ ಭಾಗವಾಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಮಟ್ಟದ ಯೋಜನಾ ಸಭೆ ಇಂದು 04 ಮಾರ್ಚ್ 2026 ರಂದು ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ನಡೆಯಿತು.ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಉದ್ಘಾಟಿಸಿ ಮಾತಾನಾಡಿ ಪಕ್ಷದ ಸಿದ್ಧಾಂತ ಮತ್ತು ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ನಮ್ಮ ಹಿರಿಯರು ಹಾಕಿಕೊಟ್ಟ ದಾರಿಯಲ್ಲಿ, ಶಿಸ್ತು ಮತ್ತು ರಾಷ್ಟ್ರಭಕ್ತಿಯೊಂದಿಗೆ ಸಾಗಲು ಈ ಪ್ರಶಿಕ್ಷಣ ವರ್ಗವು ಭದ್ರ ಬುನಾದಿಯಾಗಲಿದೆ ಎಂದರು….

Read More

ಕಾರ್ಮಿಕ ಸಂಹಿತೆಗಳ ವಿರುದ್ಧ ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನೆ

ಮಂಗಳೂರು: ಮಾ.4: ಕಾರ್ಮಿಕ ವಿರೋಧಿ ಸಂಹಿತೆಗಳ ವಿರುದ್ಧ ಆಕ್ಷೇಪಣೆ ಸಲ್ಲಿಕೆ ಹಾಗೂ ಪ್ರತಿಭಟನಾ ಪ್ರದರ್ಶನವು ಇಂದು ನಗರದ ಸಹಾಯಕ ಕಾರ್ಮಿಕ ಆಯುಕ್ತರ ಕಚೇರಿಯೆದುರು ಜರುಗಿತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೋಂದಾಯಿತ ವಿವಿಧ ಯೂನಿಯನ್‌ಗಳು ಹಾಗೂ ಕಾರ್ಮಿಕ ಸಂಘಟನೆಗಳ ಸದಸ್ಯರು Centre of Indian Trade Unions (CITU) ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ಪ್ರತ್ಯೇಕ ಮನವಿಗಳನ್ನು ಸಲ್ಲಿಸುವ ಮೂಲಕ ಕಾರ್ಮಿಕ ಸಂಹಿತೆಗಳ ವಿರುದ್ಧ ತಮ್ಮ ಆಕ್ಷೇಪಣೆಗಳನ್ನು ದಾಖಲಿಸಿದರು. ಕೇಂದ್ರ ಸರಕಾರವು ಕಾರ್ಮಿಕ ವರ್ಗವನ್ನು ಗುಲಾಮಗಿರಿಯತ್ತ ತಳ್ಳಲು ಸಂಚು…

Read More
error: Content is protected !!