ಕೆನರಾ ಕಾಲೇಜಿಗೆ ʻಸ್ವಾಯತ್ತ’ ಮಾನ್ಯತೆ, ಉದ್ಯೋಗಾಧಾರಿತ ಹೊಸ ಕೋರ್ಸ್‌ಗಳು ಶೀಘ್ರದಲ್ಲಿ ಆರಂಭ

ಮಂಗಳೂರು: ಕಳೆದ ಐದು ದಶಕಗಳಿಂದ ಮೌಲ್ಯಾಧಾರಿತ ಶಿಕ್ಷಣ ನೀಡುತ್ತಾ ಬಂದಿರುವ Canara Collegeಗೆ ‘ಸ್ವಾಯತ್ತತೆ’ (Autonomy) ಸ್ಥಾನಮಾನ ಲಭಿಸಿದ್ದು, 2025-26ನೇ ಶೈಕ್ಷಣಿಕ ವರ್ಷದಿಂದ ಈ ಬದಲಾವಣೆ ಜಾರಿಗೆ ಬರಲಿದೆ ಎಂದು ಸಂಸ್ಥೆಯ ಪ್ರಮುಖರು ತಿಳಿಸಿದರು. ನಗರದ The Ocean Pearl ಹೋಟೆಲ್‌ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಹರ್ಷ ವ್ಯಕ್ತಪಡಿಸಿದ Canara High School Association ಅಧ್ಯಕ್ಷ ಡಿ. ವಾಸುದೇವ ಕಾಮತ್, “1973ರಲ್ಲಿ ಸ್ಥಾಪನೆಯಾದ ನಮ್ಮ ಕಾಲೇಜು ಇಂದು Mangalore University ವ್ಯಾಪ್ತಿಯಲ್ಲಿ ಪ್ರಮುಖ ಶೈಕ್ಷಣಿಕ ಕೇಂದ್ರವಾಗಿ…

Read More

ಮಂಗಳೂರು ಡಿಸೈನ್ ಸಮಿಟ್ 2026: ಸ್ಥಿರ ಭವಿಷ್ಯದತ್ತ ನಗರ ಚಿಂತನೆ

ಮಂಗಳೂರು: ನಗರಗಳ ಸ್ಥಿರ ಹಾಗೂ ಸಮಗ್ರ ಅಭಿವೃದ್ಧಿಯತ್ತ ದಾರಿ ತೋರಿಸುವ ಉದ್ದೇಶದಿಂದ “ಮಂಗಳೂರು ಡಿಸೈನ್ ಸಮಿಟ್ 2026” ಕಾರ್ಯಕ್ರಮವು ಮಾರ್ಚ್ 7 ಹಾಗೂ 8ರಂದು ನಗರದ St Aloysius Deemed to be Universityಯಲ್ಲಿ ನಡೆಯಲಿದೆ ಎಂದು ಸಮಿತಿಯ ನಿರ್ದೇಶಕಿ ಅಲ್ಕಾ ಮನೋಜ್ ತಿಳಿಸಿದರು. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಿಟ್‌ನ ಪ್ರಮುಖ ಭಾಷಣಗಳು ಎರಿಕ್ ಮಥಿಯಾಸ್ ಸಭಾಂಗಣದಲ್ಲಿ ನಡೆಯಲಿದ್ದು, ಕಾರ್ಯಾಗಾರಗಳು ಮದರ್ ತೆರೇಸಾ ಪೀಸ್ ಪಾರ್ಕ್‌ನಲ್ಲಿ ಆಯೋಜಿಸಲಾಗಿದೆ ಎಂದರು. ನಗರ ಯೋಜನೆ, ಸಮುದ್ರ…

Read More

ಸರ್ವಧರ್ಮ ಭಾವೈಕ್ಯತೆಯ ಸಂದೇಶ ಸಾರಲಿರುವ ಧಾರ್ಮಿಕ ಮುಖಂಡರು

ಕರ್ನಾಟಕ ಸರಕಾರದ ವಿಧಾನ ಪರಿಷತ್ ಶಾಸಕರಾದ ಐವನ್ ಡಿ’ಸೋಜಾರವರ ನೇತೃತ್ವದಲ್ಲಿ 11ನೇ ವರ್ಷದ ಇಫ್ತಾರ್ ಸೌಹಾರ್ಧ ಕೂಟವು ಮಾರ್ಚ್ 7 ರಂದು ಮಂಗಳೂರಿನ ಜೆಪ್ಪು ಮೋರ್ಗನ್ಸ್‌ ಗೇಟ್ ನ ಪಾಲೇಮಾರ್ ಗಾರ್ಡನ್‌ನಲ್ಲಿ ನಡೆಯಲಿದೆ ಎಂದು ಮಾಜಿ ಕಾರ್ಪೋರೇಟರ್ ಜೆ.ನಾಗೇಂದ್ರ ಕುಮಾರ್ ತಿಳಿಸಿದರು . ನಗರದ ಪತ್ರಿಕಾಭವನದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ , ಕಳೆದ 10 ವರ್ಷಗಳಿಂದ ಸರ್ವಧರ್ಮಗಳ ಭಾವೈಕ್ಯತೆಯ ಸಂಗಮವಾದ ದೀಪಾವಳಿ ಹಬ್ಬ, ಕ್ರಿಸ್ಮಸ್ ಸಂಭ್ರಮಾಚರಣೆ ಹಾಗೂ ರಂಜಾನ್ ಹಬ್ಬವನ್ನು ಮಂಗಳೂರಿನ ಹಲವು ಕಡೆಗಳಲ್ಲಿ ಸರ್ವಧರ್ಮಿಯರು ಸೇರಿಕೊಂಡು…

Read More

ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ, ಪೊಲೀಸರ ವಶದಿಂದ ಪರಾರಿ: ಆರೋಪಿಗೆ 3 ವರ್ಷ ಜೈಲು ಶಿಕ್ಷೆ

ಸುಳ್ಯ: ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ, ಪೊಲೀಸರ ವಶದಿಂದ ಪರಾರಿಯಾದ ಪ್ರಕರಣದಲ್ಲಿ ಆರೋಪಿಗೆ ಸುಳ್ಯದ ಎಸ್‌ಸಿ‌ಜೆ ಹಾಗೂ ಜೆಎಂಎಫ್‌ಸಿ ನ್ಯಾಯಾಲಯವು ಶಿಕ್ಷೆ ಪ್ರಕಟಿಸಿದೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ.118/24 ಪ್ರಕರಣ (ಕಲಂ 121(1), 132, 262 BNS) ಸಂಬಂಧ ತನಿಖೆಯನ್ನು ಸುಳ್ಯ ವೃತ್ತ ನಿರೀಕ್ಷಕರಾದ ತಿಮ್ಮಪ್ಪ ನಾಯ್ಕ ಅವರು ನಡೆಸಿ, ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ರಾಘವನ್ @ ಕೋಳಿಕರಣ್ ವಿರುದ್ಧ ದೋಷಾರೋಪಣೆಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ಪೂರ್ಣಗೊಂಡ ಬಳಿಕ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ, ಮಾನ್ಯ ನ್ಯಾಯಾಧೀಶರಾದ…

Read More

ಉಳ್ಳಾಲ ಮಸೀದಿಗೆ ಬಾಂಬ್ ಬೆದರಿಕೆ ಕಾಮೆಂಟ್: ಭಟ್ಕಳ ಮೂಲದ ಆರೋಪಿ ಬಂಧನ

ಸಾಮಾಜಿಕ ಜಾಲತಾಣದಲ್ಲಿ ಮಂಗಳೂರಿನ ಉಳ್ಳಾಲ ಮಸೀದಿಗೆ ಬಾಂಬ್ ಸ್ಪೋಟದ ಕಾಮೆಂಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಭಟ್ಕಳ ‌ದೇವಿನಗರ ನಿವಾಸಿ ಶಂಕರ್‌ ಮಸ್ತಪ್ಪ ಮೊಗೆರ್ (35)‌ ಎಂದು ಪೊಲೀಸರು ತಿಳಿಸಿದ್ದಾರೆ. ಈತ ʼshankar11916ʼ ಎಂಬ Instagram ಖಾತೆಯಲ್ಲಿ “Support maadi bro ullal masjid hatra bomb blast madthini” ಎಂದು ಪೋಸ್ಟ್‌ ಮಾಡಿದ್ದು, ಇದು ವೈರಲ್‌ ಆಗಿತ್ತು. ಇದನ್ನು ಸಾಮಾಜಿಕ ಜಾಲತಾಣದ ಮೋನಿಟರಿಂಗ್ ಕರ್ತವ್ಯ ನಿರ್ವಹಿಸುತ್ತಿದ್ದ ಸಂತೋಷ್ ದೊಡ್ಡಮನಿ ಅವರು…

Read More

ಯಕ್ಷಮಂಜರಿ ಮಹಿಳಾ ಯಕ್ಷಗಾನ ತಾಳಮದ್ದಳೆ ಅಷ್ಟಾಹ ಸಂಭ್ರಮ : ತೃತೀಯ ದಿನ

ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಆಯೋಜಿಸಿರುವ ಮಹಿಳಾ ಯಕ್ಷಗಾನ ತಾಳಮದ್ದಲೆ ಅಷ್ಟಾಹ ಸಂಭ್ರಮ ಯಕ್ಷಮಂಜರಿಯ ತೃತೀಯ ದಿನದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಯಕ್ಷಗಾನ ಕಲಾವಿದರೂ ನಾಟಕ ರಚನೆಕಾರರೂ,ವಾಗ್ಮಿಗಳೂ ಆದ ಕದ್ರಿ ನವನೀತ ಶೆಟ್ಟಿ ಮಾತನಾಡುತ್ತಾ ಯಕ್ಷಗಾನ ಕ್ಷೇತ್ರದ ತನ್ನ ಅನುಭವಗಳನ್ನು ಮೆಲುಕು ಹಾಕುತ್ತಾ ಯಕ್ಷಗಾನ ಕ್ಷೇತ್ರಕ್ಕೆ ಬರುವ ಹೊಸ ಕಲಾವಿದರು ಮೊದಲು ಉತ್ತಮ ಪ್ರೇಕ್ಷಕರಾಗಬೇಕು ಹಾಗಾದರೆ ಮಾತ್ರ ಅವರು ಕಲಾವಿದರಾಗಬಲ್ಲರು ಎಂದು ಹೇಳುತ್ತಾ ಮಹಿಳಾ ದಿನಾಚರಣೆಯ ಪ್ರಯುಕ್ತ ಆಯೋಜಿಸಿರುವ ಮಹಿಳಾ ತಾಳಮದ್ದಳೆ ಅಷ್ಟಾಹ ಕಾರ್ಯಕ್ರಮ ಯಶಸ್ವಿಯಾಗಿ…

Read More

ಮಾರ್ಚ್ 5 ಕ್ಕೆ ಗೋ ನಂದಿ ಪರಿವಾರ ರಥಯಾತ್ರೆಗೆ ಚಾಲನೆ … !

ಮಂಗಳೂರು:ಬಂಟ್ವಾಳ ತಾಲೂಕಿನ ಪುದು ಗ್ರಾಮದಲ್ಲಿರುವ ರಾಧಾಸುರಭಿ ಗೋಮಂದಿರ, ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್ (ರಿ.) ವತಿಯಿಂದ ಗೋ ನಂದಿ ಪರಿವಾರ ರಥಯಾತ್ರೆಯು ಅಡ್ಯಾರು ಕಟ್ಟೆಯಿಂದ ಮಾರ್ಚ್ 5 ಕ್ಕೆ ಉದ್ಘಾಟನೆಗೊಂಡು ಅಡ್ಯಾರಿನ ವೀರಾಂಜನೇಯ ದೇವಸ್ಥಾನದಲ್ಲಿ ಸಪ್ತಾಹದ ಆಚರಣೆಗೆ ಅಣಿಯಾಗಲಿದೆ ಎಂದು ಗೋಸೇವಾ ಗತಿವಿಧಿಯ ದಕ್ಷಿಣ ಪ್ರಾಂತ ಗೋ-ಸೇವಾ ಸಂಯೋಜಕ ಪ್ರವೀಣ್ ಸರಳಾಯ ತಿಳಿಸಿದರು ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಗೋ ನಂದಿ ಪರಿವಾರ ರಥಯಾತ್ರೆಯ ಪ್ರಮುಖ ಉದ್ದೇಶ ಗೋ ರಕ್ಷಣೆಯಾಗಿದೆ . ಗೋ…

Read More

ಬಿಜೈ ವಾರ್ಡ್‌ನಲ್ಲಿ ರಾಜ್ಯ ಕಾಲುವೆಗೆ ತಡೆಗೋಡೆ ನಿರ್ಮಾಣಕ್ಕೆ ರೂ.30 ಲಕ್ಷ: ಐವನ್ ಡಿ’ಸೋಜಾ ಸ್ಥಳ ಪರಿಶೀಲನೆ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 31ನೇ ಬಿಜೈ ವಾರ್ಡ್‌ನ ಆನೆಗುಂಡಿ ಆಶ್ರಯ ರಸ್ತೆಯ ಬಳಿ ಹಾಗೂ ನಂದಗೋಕುಲ ಅಪಾರ್ಟ್‌ಮೆಂಟ್ ಸಮೀಪದ ರಾಜ್ಯ ಕಾಲುವೆಗೆ ತಡೆಗೋಡೆ ನಿರ್ಮಾಣ ಕಾಮಗಾರಿಗಾಗಿ ರೂ.30 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಶಾಸಕರಾದ ಐವನ್ ಡಿ’ಸೋಜಾ ಅವರು ಇಂದು ಪಾಲಿಕೆಯ ಅಧಿಕಾರಿಗಳು ಹಾಗೂ ಪಕ್ಷದ ನಾಯಕರೊಂದಿಗೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Read More

ಓವರ್‌ಟೇಕ್ ವೇಳೆ ಅಪಘಾತ: ಅಡ್ಯಾರು ನಿವಾಸಿ ಜಯರಾಮ ಮೃತ್ಯು

ಬಂಟ್ವಾಳ: ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಸ್ಕೂಟರ್ ಸವಾರನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಇಂದು ನಡೆದಿದೆ. ಅಡ್ಯಾರು ನಿವಾಸಿ ಜಯರಾಮ (65) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಎರಡು ದಿನಗಳ ಹಿಂದೆ ಬಂಟ್ವಾಳ ತಾಲೂಕಿನ ಬಡಗುಂಡಿ ಎಂಬಲ್ಲಿ ಧರ್ಮಸ್ಥಳ ಕಡೆಯಿಂದ ಬರುತ್ತಿದ್ದ ಕಾರೊಂದು ಓವರ್ ಟೇಕ್ ಮಾಡುವ ಭರದಲ್ಲಿ ಸ್ಕೂಟರ್ ಸವಾರನಿಗೆ ಡಿಕ್ಕಿಯಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ‌ಸ್ಕೂಟರ್ ಸವಾರನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟ ಬಗ್ಗೆ…

Read More

ಬ್ರಹ್ಮರಕೋಟ್ಲು ಟೋಲ್ ಗೇಟ್ ಮುಚ್ಚಲು ಬಂಟ್ವಾಳದಲ್ಲಿ ಭಾರೀ ಧರಣಿ

ಬಂಟ್ವಾಳ: ಕಳೆದ 23 ವರ್ಷಗಳಿಂದ ಟೋಲ್ ಸಂಗ್ರಹಿಸುತ್ತಿರುವ ,ಅಂತರದ ಸಹಿತ ಹಲವು ನಿಯಮಗಳನ್ನು ಉಲ್ಲಂಘಿಸಿರುವ ಬ್ರಹ್ಮರಕೋಟ್ಲು ಟೋಲ್ ಗೇಟ್ ಮುಚ್ಚಲು ಆಗ್ರಹಿಸಿ,ಮಾಜಿ ಸಚಿವ ಬಿ.ರಮಾನಾಥ ರೈ ನೇತ್ರತ್ವದಲ್ಲಿ ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ವದಲ್ಲಿ ಸಾಮೂಹಿಕ ಧರಣಿ ನಡೆಯಿತು.ಮಾಜಿ ಸಚಿವ ಬಿ.ರಮಾನಾಥ ರೈ ಅವರು ಮಾತನಾಡಿ ನಿಯಮಬಾಹಿರವಾದ ,ಕಾನೂನು ಬಾಹಿರವಾದ ಸುಲಿಗೆಯ ಕೇಂದ್ರವಾಗಿರುವ ಬ್ರಹ್ಮರಕೋಟ್ಲು ಟೋಲ್ ತೆರವು ಹೋರಾಟಕ್ಕೆ ಎಲ್ಲರ ಸಹಮತವಿದೆ ಎಂಬ ವಿಶ್ವಾಸವಿದೆ ಎಂದು ಅವರು ಹೇಳಿದರು.ಟೋಲ್ ತೆರವು ಮಾಡಿ ಎಂಬುದು ನಮ್ಮ ಪೂರ್ಣಪ್ರಮಾಣದ ನ್ಯಾಯಯುತವಾದ ಬೇಡಿಕೆಯಾಗಿದೆ….

Read More
error: Content is protected !!