ಬ್ರಹ್ಮರಕೋಟ್ಲು ಟೋಲ್ ಗೇಟ್ ಮುಚ್ಚಲು ಬಂಟ್ವಾಳದಲ್ಲಿ ಭಾರೀ ಧರಣಿ

ಬಂಟ್ವಾಳ: ಕಳೆದ 23 ವರ್ಷಗಳಿಂದ ಟೋಲ್ ಸಂಗ್ರಹಿಸುತ್ತಿರುವ ,ಅಂತರದ ಸಹಿತ ಹಲವು ನಿಯಮಗಳನ್ನು ಉಲ್ಲಂಘಿಸಿರುವ ಬ್ರಹ್ಮರಕೋಟ್ಲು ಟೋಲ್ ಗೇಟ್ ಮುಚ್ಚಲು ಆಗ್ರಹಿಸಿ,ಮಾಜಿ ಸಚಿವ ಬಿ.ರಮಾನಾಥ ರೈ ನೇತ್ರತ್ವದಲ್ಲಿ ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ವದಲ್ಲಿ ಸಾಮೂಹಿಕ ಧರಣಿ ನಡೆಯಿತು.ಮಾಜಿ ಸಚಿವ ಬಿ.ರಮಾನಾಥ ರೈ ಅವರು ಮಾತನಾಡಿ ನಿಯಮಬಾಹಿರವಾದ ,ಕಾನೂನು ಬಾಹಿರವಾದ ಸುಲಿಗೆಯ ಕೇಂದ್ರವಾಗಿರುವ ಬ್ರಹ್ಮರಕೋಟ್ಲು ಟೋಲ್ ತೆರವು ಹೋರಾಟಕ್ಕೆ ಎಲ್ಲರ ಸಹಮತವಿದೆ ಎಂಬ ವಿಶ್ವಾಸವಿದೆ ಎಂದು ಅವರು ಹೇಳಿದರು.ಟೋಲ್ ತೆರವು ಮಾಡಿ ಎಂಬುದು ನಮ್ಮ ಪೂರ್ಣಪ್ರಮಾಣದ ನ್ಯಾಯಯುತವಾದ ಬೇಡಿಕೆಯಾಗಿದೆ….

Read More

ಮಾರ್ಚ್ 6 ಕ್ಕೆ ನಿಟ್ಟೆ ಉಷಾ ನರ್ಸಿಂಗ್ ಸೈನ್ಸಸ್ ಸಂಸ್ಥೆಯಿಂದ “ಸಮನ್ವಯ 2026” ಸಂಭ್ರಮ …. !

ಮಂಗಳೂರು:ನಿಟ್ಟೆ ಉಷಾ ನರ್ಸಿಂಗ್ ಸೈನ್ಸಸ್ ಸಂಸ್ಥೆಯು ತನ್ನ 33ನೇ ವಾರ್ಷಿಕೋತ್ಸವವನ್ನು ಮಾರ್ಚ್ 6 ಕ್ಕೆ ಕೆಎಸ್‌ ಹೆಗ್ಡೆ ಮೆಡಿಕಲ್ ಅಕಾಡೆಮಿ ಅಡಿಟೋರಿಯಂನಲ್ಲಿ “ಸಮನ್ವಯ 2026” ಎಂಬ ಶೀರ್ಷಿಕೆಯಲ್ಲಿ ಆಚರಿಸುತ್ತಿದೆ ಎಂದು ಸಂಸ್ಥೆಯ ಪ್ರಾಂಶುಪಾಲರಾದ ಡಾ. ಫಾತಿಮಾ ಡಿಸಿಲ್ವಾ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ನವದೆಹಲಿ ಟೈನ್‌ ನರ್ಸ್ ಅಸೋಸಿಯೇಷನ್ ಆಫ್ ಇಂಡಿಯಾದ ಕಾರ್ಯದರ್ಶಿಯಾದ ಎವ್ಲಿನ್ ಪಿ. ಕಣ್ಣನ್ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿಟ್ಟೆ ಡೀಮ್ಸ್ ಟು…

Read More

ಪಶ್ಚಿಮ ಕರಾವಳಿಯಲ್ಲಿಯೇ ಪ್ರಪ್ರಥಮ ಇಂಡಿಯಾ ಅಲ್ಟಿಮೇಟ್ ಬೀಚ್ ನ್ಯಾಷನಲ್ಸ್ 2026 ಮಂಗಳೂರಿನಲ್ಲಿ

ಮಂಗಳೂರು:ಪಶ್ಚಿಮ ಕರಾವಳಿಯಲ್ಲಿಯೇ ಪ್ರಪ್ರಥಮ ಇಂಡಿಯಾ ಅಲ್ಟಿಮೇಟ್ ಬೀಚ್ ನ್ಯಾಷನಲ್ಸ್ 2026 ಸ್ಪರ್ಧೆಯು ಮಾರ್ಚ್ 6 ರಿಂದ 8 ರ ತನಕ ತಣ್ಣೀರಭಾವಿಯ ಬ್ಲೂ ಬೇ ಬೀಚ್ನಲ್ಲಿ ನಡೆಯಲಿದ್ದು ಇದರಲ್ಲಿ ದೇಶದ ವಿವಿಧ ರಾಜ್ಯಗಳಿಂದ ಒಟ್ಟು 25 ತಂಡಗಳು ಭಾಗವಹಿಸಲಿದೆ ಎಂದು ಕರ್ನಾಟಕ ಅಲ್ಟಿಮೇಟ್ ಆಟಗಾರರ ಸಂಘದ ಅಧ್ಯಕ್ಷರಾದ ಅಭಿಜಿತ್ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಪದ್ಯಕೂಟಕ್ಕೆ ಶ್ರೇಷ್ಠ ತಂಡಗಳು ಓಪನ್ ಮತ್ತು ಮಹಿಳಾ ವಿಭಾಗಗಳಲ್ಲಿ ಭಾಗವಹಿಸಲಿವೆ.ಒಂದು ತಂಡದಲ್ಲಿ 2೦ ಮಂದಿ…

Read More

ಯಕ್ಷಮಂಜರಿ ಮಹಿಳಾ ಯಕ್ಷಗಾನ ತಾಳಮದ್ದಳೆ ಅಷ್ಟಾಹ ಸಂಭ್ರಮ : ದ್ವಿತೀಯ ದಿನ

ಯಕ್ಷ ಸ್ನೇಹ ಕಲಾಪ್ರತಿಷ್ಠಾನ (ರಿ) ಕೊಂಚಾಡಿ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಆಯೋಜಿಸಿರುವ ಮಹಿಳಾ ಯಕ್ಷಗಾನ ತಾಳಮದ್ದಲೆ ಅಷ್ಟಾಹ ಸಂಭ್ರಮ ಯಕ್ಷಮಂಜರಿಯ ದ್ವಿತೀಯ ದಿನದ ಕಾರ್ಯಕ್ರಮವನ್ನು ಶ್ರೀ ದುರ್ಗಾಪರಮೇಶ್ವರೀ ನಾಗಕನ್ನಿಕ ದೇವಸ್ಥಾನದ ಪ್ರಧಾನ ಅರ್ಚಕರಾದ ವಿದ್ವಾನ್ ಶ್ರೀ ಅರವಿಂದ ಭಟ್ ಇವರು ದೀಪ ಪ್ರಜ್ವಲನೆ ಮಾಡಿ ಮಾತನಾಡುತ್ತಾ ದೇವಸ್ಥಾನಗಳು ಕೇವಲ ಪೂಜಾ ಕೇಂದ್ರಗಳಾಗದೇ ನಮ್ಮ ಸಂಸ್ಕೃತಿ ಸಂಸ್ಕಾರ ಬೆಳೆಸುವ ಕೇಂದ್ರಗಳಾಗ ಬೇಕು ಎಂದು ಹೇಳುತ್ತಾ ಇಂತಹ ಕಾರ್ಯಕ್ರಮಗಳು ಪ್ರತಿಷ್ಠಾನದಿಂದ ಆಯೋಜಿಸಲ್ಪಡಲಿ ದೇವರ ಅನುಗ್ರಹ ಸರ್ವರಿಗೂ ಪ್ರಾಪ್ತವಾಗಲಿ ಎಂದು…

Read More

22,600ರೂ ಲಂಚ ಪಡೆಯುತ್ತಿದ್ದ ವೇಳೆ ಮಂಗಳೂರು ಲೋಕಾಯುಕ್ತ ದಾಳಿ

ಫಿರ್ಯಾದುದಾರರು ಕರ್ನಾಟಕ ಸರ್ಕಾರದ ಮಾನ್ಯತೆ ಪಡೆದ ಇಲೆಕ್ಟ್ರಿಕಲ್ ಪ್ರಥಮ ದರ್ಜೆಯ ಗುತ್ತಿಗೆದಾರರಾಗಿ ಕೆಲಸ ಮಾಡಿಕೊಂಡಿದ್ದು, 2025 ರ ಸಾಲಿನಲ್ಲಿ ಉಡುಪಿ ಜಿಲ್ಲೆಯ ಗ್ರಾಮ ಪಂಚಾಯತ್‌ಗಳಿಗೆ ಒಳಪಟ್ಟ ದಾರಿ ದೀಪ ವಿಸ್ತರಣೆಯ ಸರ್ಕಾರಿ ಕಾಮಗಾರಿಗಳನ್ನು ನಿರ್ವಹಿಸಿದ್ದು, ಸದರಿ ಕೆಲಸದ ಬಿಲ್‌ಗೆ 4 ಪರ್ಸೆಂಟ್‌ನಂತೆ ಒಟ್ಟು ರೂ 22,600/- ಕೊಡಬೇಕು ಎಂಬುದಾಗಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಛೇರಿ, ವಿದ್ಯುತ್ ಉಪವಿಭಾಗ, ಲೋಕೋಪಯೋಗಿ ಇಲಾಖೆ, ಮಂಗಳೂರು ಇಲ್ಲಿನ ಎಸ್.ಡಿ.ಎ ಸಂಪತ್ ರವರು ಫಿರ್ಯಾದುದಾರರಲ್ಲಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಮಂಗಳೂರು…

Read More

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿ ಸಭೆ ಮಂಗಳೂರಿನಲ್ಲಿ, ಐಕಳ ಹರೀಶ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಮಹತ್ವದ ನಿರ್ಧಾರಗಳು

ಮಂಗಳೂರು: ನಿರಂತರ ಸಮಾಜ ಕಾರ್ಯಗಳಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ತೊಡಗಿಸಿಕೊಂಡಿದೆ. ಮುಲ್ಕಿಯಲ್ಲಿ ಡಾ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದ ಕೆಲಸ ತ್ವರಿತವಾಗಿ ನಡೆಯುತ್ತಿದೆ. ಮಹಾದಾನಿ ಡಾ ಕನ್ಯಾನ ಸದಾಶಿವ ಶೆಟ್ಟಿಯವರ ಆಶಯ, ಆಶೀರ್ವಾದಿಂದ ಸಂಕೀರ್ಣದ ಕೆಲಸ ಪ್ರಗತಿಯಲ್ಲಿದೆ. ಸಂಕೀರ್ಣದಲ್ಲಿ ಶ್ರೀಮತಿ ಶಶಿರೇಖಾ ಆನಂದ ಶೆಟ್ಟಿ ಅವರ ಹೆಸರಿನಲ್ಲಿ ವೇದಿಕೆ ಇದೆ. ಇದರ ಜೊತೆಗೆ ಕಿರು ಸಭಾಂಗಣ, ಧರ್ಮಚಾವಡಿ, ಪ್ರವೀಣ್ ಭೋಜ ಶೆಟ್ಟಿ ಆಡಳಿತ ಕಚೇರಿಯೂ ಇದೆ. ಡಿಸೆಂಬರ್ ತಿಂಗಳಲ್ಲಿ “ಡಾ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣ”…

Read More

ಚಿನ್ನವನ್ನು ಪಾಲಿಶ್‌ ಮಾಡುವ ಹೆಸರಿನಲ್ಲಿ ವಂಚಿಸಿದ ಆರೋಪಿ ಬಂಧನ

ಚಿನ್ನವನ್ನು ಪಾಲಿಶ್ ಮಾಡಿಕೊಡುವ ನೆಪದಲ್ಲಿ ವ್ಯಕ್ತಿಯೊಬ್ಬ ಮನೆಗೆ ಬಂದು ರಾಸಾಯನಿಕ ಬಳಸಿ ಚಿನ್ನವನ್ನು ಕರಗಿಸಿ ವಂಚನೆ ಮಾಡಿ ಪರಾರಿಯಾದ ಪ್ರಕರಣದಲ್ಲಿ ಸಂಬಂಧಿತ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ವೇಣೂರು ಪೊಲೀಸರು ಮೂಡುಬಿದಿರೆ ತಾಲ್ಲೂಕಿನ ಗಂಟಾಲ್‌ಕಟ್ಟೆಯಲ್ಲಿ ಬಂಧಿಸಿದ್ದಾರೆ. ವೇಣೂರು ಪೊಲೀಸ್‌ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕು ಕಾಶಿಪಟ್ಣ ಗ್ರಾಮದ ಪಣಿಲಾಜೆ ಎಂಬಲ್ಲಿ, ದಿನಾಂಕ 10.02.2026 ರಂದು ಆರೋಪಿಯು ಸೇಲ್ಸ್‌ ಮ್ಯಾನ್‌ ರೂಪದಲ್ಲಿ, ಚಿನ್ನದ ಒಡವೆಗಳನ್ನು ತೊಳೆದು ಪಾಲಿಶ್ ಮಾಡಿಕೊಡುವುದಾಗಿ ನಂಬಿಸಿ, ಚಿನ್ನವನ್ನು ಪಡೆದುಕೊಂಡು ಅದನ್ನು ಯಾವುದೋ ದ್ರಾವಣ ಬಳಸಿ…

Read More

ಉಳ್ಳಾಲ ಮಸೀದಿ ಹತ್ತಿರ ಬಾಂಬ್‌ ಬ್ಲಾಸ್ಟ್‌ ಮಾಡುತ್ತೇವೆ ಎಂದು ಬೆದರಿಕೆ: ಎಫ್ ಐಆರ್ ದಾಖಲು

ಮಂಗಳೂರು : ಮಂಗಳೂರಿನ ಉಳ್ಳಾಲ ಮಸೀದಿ ಹತ್ತಿರ ಬಾಂಬ್‌ ಬ್ಲಾಸ್ಟ್‌ ಮಾಡುತ್ತೇನೆ ಎಂದು ಫೇಸ್‌ ಬುಕ್‌ನಲ್ಲಿ ಮೆಸೇಜ್ ಮಾಡಿದ ವ್ಯಕ್ತಿ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಆರೋಪಿಗಾಗಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಫೇಸ್‌ಬುಕ್‌ನಲ್ಲಿ ಬೇರೊಬ್ಬರು ಹಂಚಿಕೊಂಡ ಪೋಸ್ಟ್‌ಗೆ ‘ಶಂಕರ್‌11916’ ಎಂಬ ಖಾತೆಯನ್ನು ಬಳಸಿ ಈ ರೀತಿ ಕಮೆಂಟ್‌ ಮಾಡಲಾಗಿದೆ. ಮೊಹಮ್ಮದ್ ರಿಯಾಜ್ ಕಡಂಬು ಅವರು ಈ ಕುರಿತು ಫೇಸ್‌ಬುಕ್‌ನಲ್ಲಿ ಮಾಹಿತಿ ಹಂಚಿಕೊಂಡು, ‘ಆರೋಪಿಯನ್ನು ಪೊಲೀಸರು ಆದಷ್ಟು ಬೇಗ ಬಂಧಿಸಬೇಕೆಂದು ತಿಳಿಸಿದ್ದಾರೆ . ಯಾವುದಕ್ಕೂ ಉಳ್ಳಾಲ…

Read More

ಗುರುಪುರ ಹೋಬಳಿಯಲ್ಲಿ ಸಮುದಾಯ ಆಸ್ಪತ್ರೆ ಸ್ಥಾಪನೆಗೆ ಒತ್ತಾಯಿಸಿ ಸಿಪಿಐಎಂ ನಿಂದ ಪಾದಯಾತ್ರೆ

ಗ್ರಾಮೀಣ ಭಾಗದಲ್ಲಿ ಸಾರ್ವಜನಿಕ ಆರೋಗ್ಯ ಕ್ಷೇತ್ರ ಬಲಪಡಿಸಲು ಆಗ್ರಹ ಗಂಜಿಮಠ ಆರೋಗ್ಯ ಕೇಂದ್ರವನ್ನು ಗುರುಪುರ ಹೋಬಳಿಯ ಸಮುದಾಯ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿಸಬೇಕು, ಹೋಬಳಿಯ ಕುಪ್ಪೆಪದವು, ಕೊಂಪದವು, ವಾಮಂಜೂರು ಆರೋಗ್ಯ ಕೇಂದ್ರಗಳಿಗೆ ವೈದ್ಯರ ಸಹಿತ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು, ಜಿಲ್ಲೆಯಲ್ಲಿ‌ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ, ಜಯದೇವ ಹೃದಯದ ಆಸ್ಪತ್ರೆಯ ಘಟಕಗಳನ್ನು ಸ್ಥಾಪಿಸಬೇಕು ಎಂಬ ಬೇಡಿಕೆಗಳನ್ನು ಮುಂದಿಟ್ಟು ಸಿಪಿಐಎಂ ಗುರುಪುರ ವಲಯ ಸಮಿತಿ ನೇತೃತ್ವದಲ್ಲಿ ಕುಪ್ಪೆಪದವು ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಗಂಜಿಮಠ ಪ್ರಾಥಮಿಕ ಆರೋಗ್ಯ ಕೇಂದ್ರದವರಗೆ ಹಕ್ಕೊತ್ತಾಯ ಪಾದಯಾತ್ರೆ ನಡೆಯಿತು….

Read More

ಸಾಮಾಜಿಕ ಜಾಲತಾಣಗಳಲ್ಲಿ ಭಯ ಹರಡುವ ಸಂದೇಶದ ವಿರುದ್ಧ ಕಠಿಣ ಕ್ರಮಕ್ಕೆ ಸ್ವೀಕರ್ ಯು.ಟಿ.ಖಾದರ್ ಸೂಚನೆ

ಮಂಗಳೂರು:ಉಳ್ಳಾಲ ಮಸೀದಿ ಬಳಿ ಬಾಂಬ್ ಬ್ಲಾಸ್ಟ್ ಮಾಡುವುದಾಗಿ ಬೆದರಿಕೆಯೊಡ್ಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ ಕಿಡಿಕೇಡಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಭಾಧ್ಯಕ್ಷ ಯು.ಟಿ.ಖಾದರ್ ಸೂಚನೆ ನೀಡಿದ್ದಾರೆ. ಈ ಬಗ್ಗೆ ಪೊಲೀಸ್ ಕಮಿಷನ‌ರ್ ಜೊತೆ ಮಾತುಕತೆ ನಡೆಸಿರುವ ಸಭಾಧ್ಯಕ್ಷ ಯು.ಟಿ.ಖಾದರ್, ಉಳ್ಳಾಲದಲ್ಲಿ ಸರ್ವ ಧರ್ಮೀಯರು ಸೌಹಾರ್ದಯುತ ಸಹಬಾಳ್ವೆ ನಡೆಸುತ್ತಿದ್ದು ಈ ರೀತಿಯ ಬೆದರಿಕೆ ಪೋಸ್ಟ್ ಗಳ ಮೂಲಕ ಕೋಮು ಸೌಹಾರ್ದವನ್ನು ಕದಡುವ ಹುನ್ನಾರದ ಬಗ್ಗೆ ಪೋಲೀಸ್ ಇಲಾಖೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದ್ದಾರೆ.

Read More
error: Content is protected !!