ಮಾ. 4 ರಿಂದ 8ರ ವರೆಗೆ ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಬ್ರಹ್ಮಕಲಶೋತ್ಸವ … .. ! ಗಂಗಾರತಿಗೆ ಸಾಕ್ಷಿಯಾಗಲಿದೆ ಕಡಲ ಕಿನಾರೆ ..!

ಮಂಗಳೂರು:ಕಡಲ ಕಿನಾರೆಯಲ್ಲಿ ನೆಲೆಯಾದ ಪುರಾಣ ಪ್ರಸಿದ್ದ ಸಸಿಹಿತ್ಲು ಶ್ರೀ ಭಗವತೀ ಅಮ್ಮನವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಮಹೋತ್ಸವವು ಇದೇ ಬರುವ ಮಾ. 4 ರಿಂದ 8ರ ವರೆಗೆ ವಿಜೃಂಭಣೆಯಿಂದ ನಡೆಯಲಿದೆ ಎಂದು ಮಾಜಿ ಸಂಸದರು ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ತಿಳಿಸಿದರು . ಅವರು ದೇವಾಲಯದ ಸಭಾಂಗಣದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಶ್ರೀ ಭಗವತಿ ಮಾತೆಯು ಅನೇಕ ಕಾರಣಿಕ ಶಕ್ತಿಯನ್ನು ಈ ಮಣ್ಣಿನಲ್ಲಿ ಅವತರಿಸಿದ ಐತಿಹ್ಯ ಈ ಮಣ್ಣಿಗಿದೆ . ವಿದ್ವಾನ್ ವೇದಮೂರ್ತಿ…

Read More

ಮೀನುಗಾರಿಕಾ ದಕ್ಕೆಯ ಕಾರ್ಮಿಕ ಮುರುಗನ್ ಸಾವು – ನ್ಯಾಯಕ್ಕಾಗಿ ಹಾಗೂ 25 ಲಕ್ಷ ರೂ. ಪರಿಹಾರಕ್ಕಾಗಿ ಒತ್ತಾಯಿಸಿ ಪ್ರತಿಭಟನೆ

ಮಂಗಳೂರು ಮೀನುಗಾರಿಕಾ ದಕ್ಕೆ ಪ್ರದೇಶದಲ್ಲಿ ದುಡಿಯುತ್ತಿದ್ದ ವೇಳೆಯಲ್ಲಿ ತುಕ್ಕು ಹಿಡಿದ ದಾರಿದೀಪದ ಕಂಬವೊಂದು ಬಿದ್ದಿದ್ದರ ಪರಿಣಾಮವಾಗಿ ತಮಿಳುನಾಡು ಮೂಲದ ಕಾರ್ಮಿಕ ಮುರುಗನ್ ರವರು ಸ್ಥಳದಲ್ಲೇ ಮೃತಪಟ್ಟಿದ್ದು,ಈ ಸಾವಿಗೆ ಕಾರಣರಾದವರ ವಿರುದ್ದ ಕಠಿಣ ಕ್ರಮಕ್ಕೆ ಆಗ್ರಹಿಸಿ ಹಾಗೂ ಈ ಸಾವಿಗೆ ನ್ಯಾಯ ದೊರಕಿಸಿಕೊಡಬೇಕು,ಮೃತರಾದ ಮುರುಗನ್ ಕುಟುಂಬಕ್ಕೆ ರೂ.25 ಲಕ್ಷದಷ್ಟು ಪರಿಹಾರ ನೀಡಬೇಕೆಂದು ಒತ್ತಾಯಿಸಿ ಕೇಂದ್ರ ಕಾರ್ಮಿಕ ಸಂಘಟನೆ CITU ಹಾಗೂ ಯುವಜನ ಸಂಘಟನೆ DYFI ಜಂಟಿ ನೇತ್ರತ್ವದಲ್ಲಿ ಇಂದು ದಕ್ಕೆ ಪ್ರದೇಶದಲ್ಲಿ ಪ್ರತಿಭಟನಾ ಪ್ರದರ್ಶನವನ್ನು ನಡೆಸಲಾಯಿತು. 300ಕ್ಕೂ ಮಿಕ್ಕಿದ…

Read More

ಕದ್ರಿ–ಶಕ್ತಿನಗರ ಪ್ರದೇಶಗಳಲ್ಲಿ ಚಿರತೆ ಸಂಚಾರ: ಶಾಸಕರ ಸಭೆ, ಅರಣ್ಯ ಇಲಾಖೆಯ ಕಟ್ಟುನಿಟ್ಟಿನ ಕ್ರಮ

ನಗರದ ಕದ್ರಿ, ಶಕ್ತಿನಗರ, ಭಾಗಗಳಲ್ಲಿ ರಾತ್ರಿ ವೇಳೆ ಚಿರತೆ ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ರವರು ಅರಣ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿ ಸಾರ್ವಜನಿಕರ ಹಿತದೃಷ್ಟಿಯಿಂದ ಕೈಗೊಂಡಿರುವ ಕ್ರಮಗಳ ಬಗ್ಗೆ ಸಮಗ್ರ ಮಾಹಿತಿ ಪಡೆದುಕೊಂಡರು. ಕದ್ರಿ ಕೈಬಟ್ಟಲ್, ಶಕ್ತಿನಗರದ ಕೋರ್ಡೆಲ್‌ ಪ್ರದೇಶಗಳಲ್ಲಿ ಚಿರತೆ ಓಡಾಡುತ್ತಿದ್ದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾಗಳಲ್ಲಿ ದಾಖಲಾಗಿದ್ದು, ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆಯಿಂದ ಬೋನುಗಳನ್ನು ಇಡಲಾಗಿದೆ. ಈ ಎರಡೂ ಭಾಗಗಳಲ್ಲಿ ಕಾಣಿಸಿಕೊಂಡ ಚಿರತೆ ಒಂದೇ ಆಗಿರುವ ಸಾಧ್ಯತೆಯೂ ಇದೆ. ಚಿರತೆ ಸಂಚಾರ ಮಾಡಿರುವ ಪ್ರದೇಶದಲ್ಲಿ…

Read More

ಅಕ್ರಮ ಗೋಹತ್ಯಾ ಕೇಸ್ ಫೈಲ್: ಆರೋಪಿಯ ಮನೆ ಆವರಣ ಜಪ್ತಿ

ಅಕ್ರಮ ಗೋಹತ್ಯಾ ಕೇಸ್ ಗೆ ಸಂಬಂಧಿಸಿದಂತೆ ಮನೆ ಆವರಣವನ್ನು ಜಪ್ತಿ ಮಾಡಿದ ಘಟನೆ ಬೆಳ್ತಂಗಡಿ ಬಾರ್ಯ ಗ್ರಾಮದ ಹೊಸವಕ್ಲು ಎಂಬಲ್ಲಿ ನಡೆದಿದೆ. ಮನೆಯೊಂದರ ಆವರಣದಲ್ಲಿ ಅಕ್ರಮವಾಗಿ ಗೋಹತ್ಯೆ ಮಾಡಿ ಮಾಂಸ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣಾ ಪಿಎಸ್ಐ ಸಿಬ್ಬಂದಿಗಳೊಂದಿಗೆ ಸ್ಥಳದಲ್ಲಿದ್ದ ಹೆಚ್‌ ಅಬ್ದುಲ್‌ ರಹಿಮಾನ್‌ ಎಂಬವರ ಮನೆಯ ಬಳಿ ಹೋದಾಗ, ಮನೆಯ ಆವರಣದಿಂದ ಇಬ್ಬರು ವ್ಯಕ್ತಿಗಳು ಓಡಿಹೋಗಿದ್ದಾರೆ. ಸ್ಥಳವನ್ನು ಪರಿಶೀಲಿಸಿದಾಗ ಗೋಮಾಂಸವನ್ನು ಪ್ಯಾಕೆಟ್ ಮಾಡಿಡಲಾಗಿದ್ದು, ಸಮೀಪದಲ್ಲಿದ್ದ ರಿಕ್ಷಾದಲ್ಲಿಯೂ ಗೋಮಾಂಸದ ಪ್ಯಾಕೆಟ್ ಗಳು…

Read More

ಸಂಸ್ಕಾರ ಪುಸ್ತಕಗಳ ಉಚಿತ ವಿತರಣೆ

ಉಡುಪಿ : ಸಚ್ಚಿದಾನಂದ ಪರಮಾರ್ಥ ಟ್ರಸ್ಟ್ ವತಿಯಿಂದ ಶ್ರೀ ವಿಷ್ಣುಮೂರ್ತಿ ಪ್ರೌಢಶಾಲೆ, ಕೊಡಿ ಬೆಟ್ಟು, ಹಿರಿಯಡ್ಕ, ಉಡುಪಿ ಇಲ್ಲಿನ 60 ವಿದ್ಯಾರ್ಥಿಗಳಿಗೆ ಉಚಿತವಾಗಿ ಸಂಸ್ಕಾರ ನೋಟ್ ಪುಸ್ತಕಗಳನ್ನು ವಿತರಿಸುವ ಕಾರ್ಯಕ್ರಮವನ್ನು ನಡೆಸಲಾಯಿತು. ‘ಸಂಸ್ಕಾರ ವಹಿ’ಯ ಮುಖಪುಟ ಹಾಗೂ ಹಿಂಬದಿಯ ಪುಟಗಳಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ರಾಷ್ಟ್ರಪುರುಷರ ಹಾಗೂ ಉತ್ತಮ ರಾಜ್ಯಾಡಳಿತ ನಡೆಸಿ ಪ್ರಜೆಗಳ ಹಿತಕ್ಕಾಗಿ ದುಡಿದ ರಾಜ–ಮಹಾರಾಜರ ಆದರ್ಶಗಳು ನೀಡಲಾಗಿದೆ. ಒಳಗಿನ ಪುಟಗಳಲ್ಲಿ ಸುಸಂಸ್ಕಾರ ಮತ್ತು ನೈತಿಕತೆ ಕುರಿತು ವಿಷಯಗಳು ಒಳಗೊಂಡಿವೆ. ಅದನ್ನು ಓದಿ ತಿಳಿದುಕೊಂಡು ಜೀವನದಲ್ಲಿ ಅಳವಡಿಸಿಕೊಂಡರೆ…

Read More

ವಿಕಲಚೇತನರಿಗೆ ತ್ವರಿತಗತಿಯಲ್ಲಿ ಸೌಲಭ್ಯ ಮಂಜೂರು – ಟಿ.ಎಂ ಶಾಹೀದ್

ಮಂಗಳೂರು:ವಿಕಲಚೇತನರು ಸಮಾಜದಲ್ಲಿ ಸಮಾನವಾಗಿ ಪ್ರಗತಿ ಸಾಧಿಸಲು ಅವರಿಗೆ ಅರ್ಹವಾಗಿ ದೊರಕಬೇಕಾದ ಸೌಲಭ್ಯಗಳನ್ನು ತ್ವರಿತಗತಿಯಲ್ಲಿ ಒದಗಿಸಬೇಕು ಎಂದು ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ ಶಾಹೀದ್ ತೆಕ್ಕಿಲ್ ತಿಳಿಸಿದರು.ಅವರು ಶುಕ್ರವಾರ ಪದವಿನಂಗಡಿ ದೇವಿನಗರದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ ಕಾರ್ಖಾನೆಗಳು, ಬಾಯ್ಲರ್‍ಗಳು, ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಸಾರಿಗೆ ಇಲಾಖೆ ಇವರ ಸಹಯೋಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ…

Read More

ಜಿಲ್ಲಾ ಮಟ್ಟದ ವಿಕಸಿತ್ ಭಾರತ್ ಯುವ ಸಂಸತ್

ಮಂಗಳೂರು:ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ‘ಮೈ ಭಾರತ್’ ದಕ್ಷಿಣ ಕನ್ನಡ ವಿಭಾಗ, ಮಂಗಳೂರು ವಿಶ್ವವಿದ್ಯಾನಿಲಯದ ಎನ್.ಎಸ್.ಎಸ್ ಘಟಕ ಹಾಗೂ ಮಂಗಳೂರಿನ ಸೈಂಟ್ ಆಗ್ನೆಸ್ ಸ್ವಾಯತ್ತ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ‘ವಿಕಸಿತ್ ಭಾರತ್ ಯುವ ಸಂಸತ್ 2026’ ಜಿಲ್ಲಾ ಮಟ್ಟದ ಸ್ಪರ್ಧೆಯು ಸೈಂಟ್ ಆಗ್ನೆಸ್ ಕಾಲೇಜಿನ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು. ಕಾರ್ಯಕ್ರಮವನ್ನು ಸೈಂಟ್ ಆಗ್ನೆಸ್ ಸ್ವಾಯತ್ತ ಕಾಲೇಜಿನ ಉಪ ಪ್ರಾಂಶುಪಾಲೆ ಸಿಸ್ಟರ್ ಡಾ. ರೂಪಾ ರೋಡ್ರಿಗಸ್ ಎ.ಸಿ. ಉದ್ಘಾಟಿಸಿದರು. ಮೈ ಭಾರತ್ ದಕ್ಷಿಣ ಕನ್ನಡ…

Read More

ಗರ್ಭಕೋಶದ ಕ್ಯಾನ್ಸರ್ ತಪಾಸಣಾ ಶಿಬಿರ

ಮಂಗಳೂರು : ರೋಟರಿ ಕ್ಲಬ್ ಮಂಗಳೂರು, ಝಲೇಖಾ ಯೆನಪೆÇಯ ಇನ್ಸ್ಟಿಟ್ಯೂಟ್ ಆಫ್ ಅಂಕೋಲಾಜಿ ಹಾಗೂ ಎಸ್.ಕೆ. ಮುನ್ಸಿಪಲ್ ಎಂಪ್ಲಾಯಿಸ್ ಯೂನಿಯನ್ ಮಹಾನಗರಪಾಲಿಕೆ ಮಂಗಳೂರು ಇದರ ಸಹಯೋಗದೊಂದಿಗೆ ವಿಶೇಷವಾಗಿ ಮಹಿಳೆಯರಿಗಾಗಿ ಸ್ತನ ಕ್ಯಾನ್ಸರ್, ಗರ್ಭಕಂಠದ ಕ್ಯಾನ್ಸರ್ ಹಾಗೂ ಗರ್ಭಕೋಶದ ಕ್ಯಾನ್ಸರ್ ತಪಾಸಣಾ ಶಿಬಿರದ ಉದ್ಘಾಟನಾ ಸಮಾರಂಭವು ಬುಧವಾರ ಎಸ್.ಕೆ.ಮುನ್ಸಿಪಲ್ ಎಂಪ್ಲಾಯಿಸ್ ಯೂನಿಯನ್ ಕಛೇರಿಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಮಹಾನಗರಪಾಲಿಕೆಯ ಆಯುಕ್ತ ರವಿಚಂದ್ರ ನಾಯಕ್ ಉದ್ಘಾಟಿಸಿ ಮಾತನಾಡಿ, ಮಹಿಳಾ ಸಿಬ್ಬಂದಿಗಳಿಗೆ ಈ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಯಾವುದೇ ಅಂಜಿಕೆ ಇಲ್ಲದೇ ಮಹಿಳೆಯರು ಇದರ…

Read More

ದ್ವಿತೀಯ ಪಿಯುಸಿ ಪರೀಕ್ಷೆ ಹಿನ್ನಲೆ ನಿಷೇಧಾಜ್ಞೆ ಜಾರಿ…. !

ಮಂಗಳೂರು : ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ 2026ನೇ ಸಾಲಿನ ದ್ವಿತೀಯ ಪಿಯುಸಿ-I ವಾರ್ಷಿಕ ಪರೀಕ್ಷೆಗಳು ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ ಮಂಗಳೂರು, ಮೂಡಬಿದ್ರೆ, ಉಳ್ಳಾಲ ಮತ್ತು ಮುಲ್ಕಿ ತಾಲೂಕಿನ ಒಟ್ಟು 33 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷೆ ನಡೆಯುವ ಸಮಯ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಶಾಂತಿಯುತವಾಗಿ, ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು…

Read More

ನಡು ರಸ್ತೆಯಲ್ಲಿ ಕಲ್ಲು ಹಿಡಿದು ಇಬ್ಬರ ಹೊಡೆದಾಟ – ವಿಡಿಯೋ ವೈರಲ್

ಮಂಗಳೂರು, ಫೆ.27: ಕ್ಷುಲ್ಲಕ ಕಾರಣಕ್ಕೆ ಇಬ್ಬರು ವ್ಯಕ್ತಿಗಳು ನಡು ರಸ್ತೆಯಲ್ಲಿ ಕಲ್ಲು ಹಿಡಿದು ಹೊಡೆದಾಡಿಕೊಂಡ ಘಟನೆ ಮಂಗಳೂರು ನಗರದ ಕಾರ್ ಸ್ಟ್ರೀಟ್ ನಲ್ಲಿ ನಡೆದಿದೆ. ರಸ್ತೆಯಲ್ಲಿ ಹೊರಳಾಡಿಕೊಂಡು ಇಬ್ಬರೂ ಹೊಡೆದಾಟ ಮಾಡಿದ್ದಾರೆ. ಎರಡು ದಿನಗಳ ಹಿಂದೆ ಘಟನೆ ನಡೆದಿದ್ದು ರಸ್ತೆ ಬದಿ ಮೂಡೆ ಮಾರಾಟಕ್ಕೆ ಇಟ್ಟಿದ್ದನ್ನು ಒಬ್ಬಾತ ಅಪರಿಚಿತ ತುಳಿದುಕೊಂಡು ಹೋಗಿದ್ದಾನೆ. ಇದನ್ನು ಆಕ್ಷೇಪಿಸಿದ ಸ್ಥಳೀಯರೊಬ್ಬರ ಮೇಲೆ ಅಪರಿಚಿತ ವ್ಯಕ್ತಿ ಅಲ್ಲಿಯೇ ನೆಲದಲ್ಲಿದ್ದ ಕಲ್ಲನ್ನು ಎತ್ತಿ ಹಲ್ಲೆ ನಡೆಸಿದ್ದಾನೆ. ಸ್ಥಳೀಯ ವ್ಯಕ್ತಿಯ ತಲೆಯಲ್ಲಿ ರಕ್ತ ಸೋರುತ್ತಿದ್ದರೂ ಯಾರೋ…

Read More
error: Content is protected !!