ಮರೋಳಿ ಶಾಂತಿನಗರದಲ್ಲಿ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ: ಶಾಸಕ ವೇದವ್ಯಾಸ್ ಕಾಮತ್ ಚಾಲನೆ
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಮರೋಳಿ ಸೂರ್ಯ ನಾರಾಯಣ ದೇವಸ್ಥಾನ ಸಮೀಪದ 37ನೇ ವಾರ್ಡಿನ ಶಾಂತಿನಗರ ರುಕ್ಕಯ್ಯ ದೇವಾಡಿಗ ಮನೆ ಪರಿಸರದ ರಸ್ತೆ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆಯು ಶಾಸಕ ವೇದವ್ಯಾಸ್ ಕಾಮತ್ ರವರ ನೇತೃತ್ವದಲ್ಲಿ ನಡೆಯಿತು. ಈ ವೇಳೆ ಮಾತನಾಡಿದ ಶಾಸಕರು, ಸ್ಥಳೀಯರ ಮನವಿ ಮೇರೆಗೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರದಿಂದ ಸುಮಾರು 28 ಲಕ್ಷ ರೂ ವೆಚ್ಚದಲ್ಲಿ ರಸ್ತೆ, ಚರಂಡಿ ಹಾಗೂ ತಡೆಗೋಡೆ ನಿರ್ಮಾಣ ಕಾಮಗಾರಿಯು ನಡೆಯಲಿದೆ. ಇದು ತುರ್ತಾಗಿ ನಡೆಯಬೇಕಿರುವ ಕಾಮಗಾರಿಯಾಗಿದ್ದು ಈ ಹಿಂದೆಯೇ…
