ಬಜಾಲ್ ವಾರ್ಡಿನಲ್ಲಿ ₹75 ಲಕ್ಷ ತಡೆಗೋಡೆ ಕಾಮಗಾರಿಗೆ ಭೂಮಿ ಪೂಜೆ

ಮಂಗಳೂರು:ಮಹಾನಗರ ಪಾಲಿಕೆ ವ್ಯಾಪ್ತಿಯ 53ನೇ ಬಜಾಲ್ ವಾರ್ಡಿನ ಜಯನಗರದ ರೋಹಿಣಿ ಮನೆ ಬಳಿಯಿಂದ ಹರಿಣಾಕ್ಷಿ ಮನೆ ತನಕ 75 ಲಕ್ಷ ರೂ. ವೆಚ್ಚದಲ್ಲಿ ತಡೆಗೋಡೆ ಅಭಿವೃದ್ಧಿ ಕಾಮಗಾರಿ ನಡೆಯಲಿದ್ದು ಶಾಸಕ ವೇದವ್ಯಾಸ್ ಕಾಮತ್‌ ನೇತೃತ್ವದಲ್ಲಿ ಭೂಮಿ ಪೂಜೆ ನಡೆಯಿತು. ನಂತರ ಮಾತನಾಡಿದ ಶಾಸಕರು, ಇದು ಬಹಳಷ್ಟು ವರ್ಷಗಳಿಂದ ಬೇಡಿಕೆಯಿದ್ದ ಅತೀ ಅಗತ್ಯ ಕಾಮಗಾರಿಯಾಗಿದೆ. ಈ ಪ್ರದೇಶವು ಎತ್ತರ ತಗ್ಗು ಇರುವುದರಿಂದ ರಸ್ತೆ ನಿರ್ಮಾಣ ಬಹು ದೊಡ್ಡ ಸವಾಲು. ದಿನನಿತ್ಯದ ಕೆಲಸಗಳಿಗೆ ಇಲ್ಲಿನ ಜನರು ತೀವ್ರ ತೊಂದರೆ ಅನುಭವಿಸುತ್ತಿರುವುದು…

Read More

ಗೃಹಲಕ್ಷ್ಮಿ ಯೋಜನೆ ಮಹಿಳಾ ಸಬಲೀಕರಣಕ್ಕೆ ಮುನ್ನುಡಿ: ಲಕ್ಷ್ಮೀ ಹೆಬ್ಬಾಳಕರ್

ಕಾರ್ಕಳ:ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ನೇತೃತ್ವದ ನಮ್ಮ ಸರ್ಕಾರ ಸಾಮಾಜಿಕ ನೆಲೆಗಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಗೃಹಲಕ್ಷ್ಮಿ ಯೋಜನೆಯನ್ನು ಮನೆ ಮನೆಗೆ ತಲುಪಿಸುವ ಮೂಲಕ ಮಹಿಳಾ ಸಬಲೀಕರಣಕ್ಕೆ ಮುನ್ನುಡಿ ಬರೆದಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.ಕಾರ್ಕಳದ ಕುಕ್ಕುಂದೂರಿನಲ್ಲಿ ಕಿಸಾನ್ ಸಭಾ ಟ್ರಸ್ಟ್ ವತಿಯಿಂದ ನಡೆದ ಕಿಸಾನ್ ಸಭಾ ಸಭಾಂಗಣದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಇದುವರೆಗೂ 26 ಕಂತಿನ ಹಣವನ್ನು 1.24 ಕೋಟಿ ಮಹಿಳೆಯರಿಗೆ…

Read More

ಬಂಟ್ವಾಳದಲ್ಲಿ ಅಕ್ರಮ ಕಪ್ಪುಕಲ್ಲು ಗಣಿಗಾರಿಕೆ ವಿರೋಧಿಸಿ ಹಠಾತ್ ಪ್ರತಿಭಟನೆ

ಬಂಟ್ವಾಳ: ಸ್ಫೋಟಕ ವಸ್ತುಗಳನ್ನು ಬಳಸಿ ಅಕ್ರಮವಾಗಿ ಕಪ್ಪು ಕಲ್ಲಿನ ಕೋರೆಯ ವಿರುದ್ದ ಗ್ರಾಮಸ್ಥರು ಹಠಾತ್ ಪ್ರತಿಭಟನೆ ನಡೆಸಿ ವಿರೋಧ ವ್ಯಕ್ತಪಡಿಸಿದ ಘಟನೆ ಫೆ. 24 ರಂದು ಮಂಗಳವಾರ ರಾತ್ರಿ ನಡೆದಿದೆ.ರಾಯಿ ಗ್ರಾಮದ ಲಕ್ಷ್ಮಿಕೋಡಿ ಎಂಬಲ್ಲಿ ನಡೆಯುತ್ತಿರುವ ಕಪ್ಪು‌ಕಲ್ಲಿನ ಗಣಿಗಾರಿಕೆಯಲ್ಲಿ‌ ಅಕ್ರಮ ಸ್ಪೋಟಕ ಉಪಯೋಗಿಸುವ ಬಗ್ಗೆ ಹಾಗೂ ಘನ ವಾಹನಗಳ ಸಂಚಾರಿಂದ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ನಷ್ಟವಾಗುತ್ತಿರುವ ಬಗ್ಗೆ ಆರೋಪಿಸಿ ಕೋರೆಗೆ ಬರುವ ವಾಹನಗಳನ್ನು ತಡೆದು ಹೊರಂಗಳ ಗ್ರಾಮಸ್ಥರು ರಸ್ತೆ ಮದ್ಯೆ ಪ್ರತಿಭಟಿಸಿದ್ದಾರೆ. ರಾಯಿ ಗ್ರಾಮದ ಲಕ್ಷ್ಮಿಕೋಡಿ ಎಂಬಲ್ಲಿ ಕೃಷಿ…

Read More

ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಸಿಸಿಟಿವಿಯಲ್ಲಿ ಸ್ಪಷ್ಟವಾಗಿ ಸೆರೆ

ಮಂಗಳೂರು:ನಗರದ ಕದ್ರಿ ದೇವಸ್ಥಾನ ಬಳಿಯ ಡಾಕ್ಟರ್ಸ್ ಕಾಲನಿಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು ಸ್ಥಳೀಯರನ್ನು ಆತಂಕಕ್ಕೀಡು ಮಾಡಿದೆ. ಫೆ.23ರ ಸೋಮವಾರ ಮಧ್ಯರಾತ್ರಿ ಒಂದು ಗಂಟೆ ಸುಮಾರಿಗೆ ಚಿರತೆ ಬಂದಿದ್ದು ಸಿಸಿಟಿವಿಯಲ್ಲಿ ಸ್ಪಷ್ಟವಾಗಿ ಸೆರೆಯಾಗಿದೆ.ಡಾಕ್ಟರ್ಸ್ ಕಾಲನಿ ಗೇಟ್ ಮುಂಭಾಗದಲ್ಲಿ ಚಿರತೆ ಅಡ್ಡಾಡುವುದು ಅಲ್ಲಿರುವ ಎರಡು ಸಿಸಿಟಿವಿಗಳಲ್ಲಿ ದಾಖಲಾಗಿದೆ. ಕದ್ರಿ ದೇವಸ್ಥಾನ ಮೇಲ್ಬಾಗದಲ್ಲಿ ಸ್ವಲ್ಪ ಕಾಡು ಇರುವುದು ಬಿಟ್ಟರೆ ಉಳಿದೆಲ್ಲ ಕಡೆ ಕಾಂಕ್ರೀಟ್ ಕಾಡು ಮಾತ್ರ ಇದೆ. ಇದಲ್ಲದೆ ದೊಡ್ಡ ಅಪಾರ್ಟೆಂಟ್ ಗಳು, ವಿಲ್ಲಾ ರೀತಿಯ ಮನೆಗಳು ಮಾತ್ರ ಇರುವುದರಿಂದ ಚಿರತೆಗೆ ಇಲ್ಲಿ…

Read More

ಫೆ.28ಕ್ಕೆ ಎರ್ಮಾಳು ತೆಂಕ- ಬಡಾ ಜೋಡುಕರೆ ಕಂಬಳ.ಕಂಬಳ ಇತಿಹಾಸದಲ್ಲಿ ಅತೀ ಉದ್ದದ ಕರೆ ನಿರ್ಮಾಣ

ಉಡುಪಿ: ಶ್ರೀ ಜನಾರ್ದನ ಕಂಬಳ ವತಿಯಿಂದ ದಾನಿಗಳ ಸಹಕಾರದೊಂದಿಗೆ ಪ್ರಥಮ ವರ್ಷದ ಹೊನಲು ಬೆಳಕಿನ “ಎರ್ಮಾಳು ತೆಂಕ- ಬಡಾ ಜೋಡುಕರೆ ಕಂಬಳ” ಇದೇ ಫೆ. 28ರಂದು ಎರ್ಮಾಳು ಬಡಕೊಟ್ಟು ಬಾಕುಮಾರು ಗದ್ದೆಯಲ್ಲಿ ನಡೆಯಲಿದೆ ಎಂದು ಕಂಬಳ ಸಮಿತಿಯ ಅಧ್ಯಕ್ಷ ಎರ್ಮಾಳು ರೋಹಿತ್ ಹೆಗ್ಡೆ ತಿಳಿಸಿದರು. ಎರ್ಮಾಳು ರಾಮ್ ದೇವ್ ಹೋಟೆಲ್ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಂಬಳ ಇತಿಹಾಸದಲ್ಲಿ ಅತೀ ಉದ್ದ (ಸುಮಾರು 151 ಮೀ.)ದ ಕರೆ ನಿರ್ಮಾಣ ಮಾಡಲಾಗಿದೆ. ತೀರ್ಪುಗಾರರ ಕೊಠಡಿ, ಎರಡು ನೀರಿನ…

Read More

ಭಾರತೀಯ ಮಜ್ದೂರ್ ಸಂಘ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ಮತ್ತು ಪ್ರಧಾನಮಂತ್ರಿಗೆ ಮನವಿ

ಭಾರತೀಯ ಮಜ್ದೂರ್ ಸಂಘ (BMS) ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯಿಂದ ವಿವಿಧ ಕಾರ್ಮಿಕರ ಬೇಡಿಕೆಗಳ ಈಡೇರಿಕಾಗಿ ಪ್ರತಿಭಟನೆ ಮತ್ತು ಮನವಿಯನ್ನು ದ ಕ ಜಿಲ್ಲಾಧಿಕಾರಿಗಳ ಮತ್ತು ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರ ಕಚೇರಿಯಲ್ಲಿ ಮಾನ್ಯ ಪ್ರಧಾನಮಂತ್ರಿಗಳಿಗೆ, ಕೇಂದ್ರ ಕಾರ್ಮಿಕ ಸಚಿವರಿಗೆ, ರಾಜ್ಯದ ಮುಖ್ಯಮಂತ್ರಿಗೆ, ರಾಜ್ಯ ಕಾರ್ಮಿಕ ಸಚಿವರಿಗೆ ಕಾರ್ಮಿಕರ ದೀರ್ಘಕಾಲದ ಸಮಸ್ಯೆಗಳು ಹಾಗೂ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಮಾಡಲಾಯಿತು.ಪ್ರತಿಭಟನೆ ಮತ್ತು ಮನವಿಯ ನೇತೃತ್ವವನ್ನು ಬಿಎಮ್ಎಸ್ ಜಿಲ್ಲಾ ಅಧ್ಯಕ್ಷ, ವಕೀಲರಾದ ಅನಿಲ್ ಕುಮಾರ್ ಯು ವಹಿಸಿದ್ದರು. ಪ್ರತಿಭಟನೆಯಲ್ಲಿ…

Read More

ಕಪ್ಪೆಕೆರೆ,‌ ಮಾಂಬಾಡಿ, ಜಬ್ಬಾರ್ ಸಮೊಗೆ ಯಕ್ಷಮಂಗಳ ಪ್ರಶಸ್ತಿ, ‘ಬಲಿಪ ಮಾರ್ಗ’ ಹಾಗೂ ‘ಅಗರಿ ಮಾರ್ಗ’ ಗ್ರಂಥಕ್ಕೆ ಕೃತಿ ಪ್ರಶಸ್ತಿ

ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ.ದಯಾನಂದ ಪೈ ಮತ್ತು ಶ್ರೀ‌ ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ 2025-26ನೇ ಸಾಲಿನ ಯಕ್ಷಮಂಗಳ ಪ್ರಶಸ್ತಿಗೆ ಯಕ್ಷಗಾನ ರಂಗದ ಹಿರಿಯ ಕಲಾವಿದ ಕಪ್ಪೆಕೆರೆ ಸುಬ್ರಾಯ ಭಾಗವತ, ಯಕ್ಷಗಾನ ಗುರುಗಳಾದ ಮಾಂಬಾಡಿ ಸುಬ್ರಹ್ಮಣ್ಯ ಭಟ್, ಹಿರಿಯ ಯಕ್ಷಗಾನ ಅರ್ಥಧಾರಿ ಜಬ್ಬಾರ್ ಸಮೊ ಅವರು ಆಯ್ಕೆಯಾಗಿದ್ದಾರೆ. ಯಕ್ಷಮಂಗಳ ಕೃತಿ ಪ್ರಶಸ್ತಿಗೆ ಕೃಷ್ಣ ಪ್ರಕಾಶ್ ಉಳಿತ್ತಾಯ ಅವರ ‘ಬಲಿಪ ಮಾರ್ಗ ಹಾಗೂ ಅಗರಿಮಾರ್ಗ’ ಕೃತಿಯು ಆಯ್ಕೆಯಾಗಿದೆ.ಯಕ್ಷಮಂಗಳ ಪ್ರಶಸ್ತಿಯು 25,000 ರೂ ನಗದು, ಪ್ರಶಸ್ತಿ ಪತ್ರ, ಸ್ಮರಣಿಕೆ…

Read More

ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಉದಯ್ ಬಾನು ಚಿಬ್ ಬಂಧನ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಪ್ರತಿಭಟನೆ … !

ಮಂಗಳೂರು:ಪ್ರಧಾನಿ ಮೋದಿ ಅಮೆರಿಕಕ್ಕೆ ಶರಣಾಗಿದ್ದಾರೆ (Epstein Files) ಎಂದು ಆರೋಪಿಸಿ, ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಉದಯ್ ಬಾನು ಚಿಬ್ ಬಂಧನ ಖಂಡಿಸಿ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಬುಧವಾರ ನಗರದ ಲಾಲ್‌ಬಾಗ್‌ನಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಯ ಬಳಿ ಪ್ರತಿಭಟನೆಯನ್ನು ನಡೆಸಿದರು . ಈ ಸಂದರ್ಭದಲ್ಲಿ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹೀಂ ನವಾಝ್ ನೇತೃತ್ವವಹಿಸಿದ್ದರು. ಪ್ರತಿಭಟನೆಯಲ್ಲಿ ರಾಜ್ಯ ಕಾಂಗ್ರೆಸ್ ವಕ್ತಾರ ಎಂ.ಜಿ.ಹೆಗಡೆ, ರಾಜ್ಯ ಯುವ ಕಾಂಗ್ರೆಸ್ ನಾಯಕ ಸುಹೈಲ್ ಕಂದಕ್, ಡೆನ್ನಿಸ್…

Read More

ಆಂಬ್ಯುಲೆನ್ಸ್ ವಾಹನದಲ್ಲಿ ಗಂಡು ಮಗುವಿಗೆ ಜನ್ಮ .ಹೆರಿಗೆ ಮಾಡಿಸಿದ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಸಿಸ್ಟರ್ ಗಳು

ಬೆಳ್ತಂಗಡಿ : ಹೆರಿಗೆಗಾಗಿ ಮಂಗಳೂರು ಆಸ್ಪತ್ರೆಗೆ ಆಂಬ್ಯುಲೆನ್ಸ್ ಮೂಲಕ ಹೋಗುತ್ತಿದ್ದಾಗ ದಾರಿ ಮಧ್ಯೆ ಮಹಿಳೆಯೊಬ್ಬರು ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ.ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಫೆ.23 ರಂದು ಬೆಳಗ್ಗಿನ ಜಾವ ಹೆರಿಗೆಗೆಂದು ಬಂದಿದ್ದ ಬೆಳ್ತಂಗಡಿ ನಗರದ ಸುದೆಮುಗೇರು ನಿವಾಸಿ ಲೀಲಾವತಿ ಎಂಬ ಮಹಿಳೆ ಆಸ್ಪತ್ರೆಗೆ ದಾಖಲಾಗಿದ್ದು.ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯಲ್ಲೇ ಹೆರಿಗೆಯಾಗಬೇಕೆಂಬ ಅಭಿಲಾಷೆಯೊಂದಿಗೆ ಅಲ್ಲಿನ ವೈದ್ಯರ ಸೂಚನೆ ಮೇರೆಗೆ ಇಬ್ಬರು ಶುಶ್ರೂಶಕಿಯರ ಜೊತೆಗೆ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯ ತುರ್ತು ವಾಹನದಲ್ಲಿ ವೈದ್ಯರು ಮಂಗಳೂರಿಗೆ ಕಳುಹಿಸಿದ್ದರು….

Read More

ವಿಕಸಿತ ಭಾರತ ಜಿ ರಾಮ್ ಜಿ ಯೋಜನೆಯಿಂದ ಗ್ರಾಮೀಣ ಜನರ ಜೀವನ ಸುಭದ್ರ: ಸಂಸದ ಕೋಟ

ಉಡುಪಿ: ಭಾರತ ಸರ್ಕಾರದ ವಾರ್ತಾ ಶಾಖೆ, ಬೆಂಗಳೂರು (ಪಿಐಬಿ) ವತಿಯಿಂದ ಇಂದು ಉಡುಪಿಯಲ್ಲಿ ವಿಕಸಿತ ಭಾರತ ಜಿ ರಾಮ್ ಜಿ ಹಾಗೂ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತು ಆಯೋಜಿಸಿದ್ದ ‘ವಾರ್ತಾಲಾಪ’ ಕಾರ್ಯಾಗಾರವನ್ನು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ…

Read More
error: Content is protected !!