ಬಂಟ್ವಾಳದಲ್ಲಿ ನರೇಗಾ ಪರಿಷ್ಕರಣೆ ಕುರಿತ ಬೃಹತ್ ಪಾದಯಾತ್ರೆ

ಬಂಟ್ವಾಳ: ನರೇಗಾ ಯೋಜನೆ ಹಲವು ಬಾರಿ ಹೆಸರು ಪರಿವರ್ತನೆ ಆಗಿದೆ. ನರೇಗಾದಲ್ಲಿರುವ ಕುಂದುಕೊರತೆ ನಿವಾರಿಸಿ ಯೋಜನೆ ಪರಿಷ್ಕರಿಸಲಾಗಿದೆ. 100 ದಿನ ಇದ್ದ ಉದ್ಯೋಗ 125 ದಿನ ಆಗಿರುವುದು ಲಾಭವಾ ನಷ್ಟವಾ ಎಂದು ಜನರು ತಿಳಿದುಕೊಳ್ಳಬೇಕು ಎಂದು ಬಂಟ್ವಾಳ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು.ಅವರು ಬಂಟ್ವಾಳ ಮಂಡಲದ ವತಿಯಿಂದ ಹಮ್ಮಿಕೊಂಡ ಮಹಾತ್ಮ ಗಾಂಧಿ ನರೇಗಾ ಯೋಜನೆಯಲ್ಲಿನ ಭ್ರಷ್ಟಾಚಾರವನ್ನು ತೊಡೆದು ಹಾಕಲು ಹಾಗೂ ಕೇಂದ್ರ ಸರಕಾರದ ಹೊಸ ಕಾಯ್ದೆಯ ಬಗ್ಗೆ ಜನಜಾಗೃತಿ ಮೂಡಿಸಲು ಹಾಗೂ ಭ್ರಷ್ಟಾಚಾರ ಮುಕ್ತ ಆಡಳಿತಕ್ಕಾಗಿ ಹಮ್ಮಿಕೊಂಡ…

Read More

ವಿಟ್ಲದ ಕ್ಲಿನಿಕ್ ಲ್ಯಾಬೊರೇಟರಿ ವೈದ್ಯರ ವಿರುದ್ದ ಆರೋಪ …. !

ಮಂಗಳೂರು:ವಿಟ್ಲದ ಚಂದಳಿಕೆ ಪರಿಸರದ ‘ರಕ್ಷಾ ಕ್ಲಿನಿಕ್ ಅಂಡ್ ಲ್ಯಾಬೋರೇಟರಿ’ಯಲ್ಲಿ ನೀಡಲಾದ ರಕ್ತ ಪರೀಕ್ಷಾ ವರದಿಯಲ್ಲಿ (CBC Report) ಪ್ಲೇಟ್‌ಲೆಟ್ ಸಂಖ್ಯೆ ಅಸಹಜವಾಗಿ ವ್ಯತ್ಯಾಸವಾಗಿದ್ದು, ರೋಗಿಯ ಪ್ರಾಣದ ಜೊತೆ ಚೆಲ್ಲಾಟವಾಡಲಾಗುತ್ತಿದೆ ಎಂದು ಕಿಯಾನ್ಸ್ ಹರ್ಬಲ್ ಸೆಂಟರ್ ಮಾಲಕ ಶರತ್ ಶೆಟ್ಟಿ ಅವರು ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದಾರೆ. ಆರೋಪಗಳು: “ನಾನು ವಿಟ್ಲ ಮತ್ತು ಕಬಕ ಮಧ್ಯವಿರುವ ಚಂದಳಿಕೆ ಪರಿಸರದಲ್ಲಿ ರಕ್ಷಾ ಕ್ಲಿನಿಕ್ ಅಂಡ್ ಲ್ಯಾಬೊರೇಟರಿನಲ್ಲಿ CBC ರಕ್ತ ಪರೀಕ್ಷೆಯನ್ನು ಮಾಡಿಸಿದ್ದೇನೆ ಸಮಯ ಸುಮಾರು 10 ಗಂಟೆ 50 ನಿಮಿಷ ಬೆಳಗ್ಗೆ ಅದರ…

Read More

ಉಡುಪಿ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಹರಿದ ಕ್ರೈನ್-ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ಪಾದಾಚಾರಿ

ಉಡುಪಿ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಕ್ರೈನ್ ಹರಿದ ಭಯಾನಕ ಘಟನೆ ಉಡುಪಿ ಜಿಲ್ಲೆಯ ಪೆರಂಪಳ್ಳಿಯ ಹೆರ್ಗ ಸೊಸೈಟಿಯ ಮುಂಭಾಗದಲ್ಲಿ ನಡೆದಿದೆ. ಮಾಹಿತಿಯ ಪ್ರಕಾರ, ಎದುರಿನಿಂದ ಬರುತ್ತಿದ್ದ ಕಾರಿಗೆ ಸೈಡ್ ನೀಡುವ ಭರದಲ್ಲಿ ಕ್ರೈನ್ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಹರಿಸಿದ್ದಾನೆ. ಪರಿಣಾಮವಾಗಿ ಪಾದಾಚಾರಿ ಕ್ರೈನ್ ಚಕ್ರದಡಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಇದೀಗ ಜೀವನ್ಮರಣ ಹೋರಾಟ ನಡೆಸುತ್ತಿರುವುದಾಗಿ ತಿಳಿದುಬಂದಿದೆ….

Read More

ಸೋಮೇಶ್ವರ ರೈಲು ಗೇಟ್ ಫೆ.19ರಿಂದ 21ರವರೆಗೆ ಬಂದ್

ಉಳ್ಳಾಲ : ತುರ್ತು ಟ್ರ್ಯಾಕ್ ನವೀಕರಣ ಹಾಗೂ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಫೆಬ್ರವರಿ 19ರ ಸಂಜೆ 6.00 ಗಂಟೆಯಿಂದ ಫೆಬ್ರವರಿ 21ರ ಮಧ್ಯಾಹ್ನ 12.00 ಗಂಟೆಯವರೆಗೆ ಉಳ್ಳಾಲ ರೈಲ್ವೆ ನಿಲ್ದಾಣ ಸಮೀಪದ ಸಂಚಾರಕ್ಕೆ ಗೇಟ್ ಸಂಪೂರ್ಣ ಬಂದ್ ಮಾಡಲಾಗುತ್ತದೆ ಎಂದು ದಕ್ಷಿಣ ರೈಲ್ವೆ ಮಂಗಳೂರು ವಿಭಾಗದ ಹಿರಿಯ ಸೆಕ್ಷನ್ ಇಂಜಿನಿಯರ್ (ಪರ್ಮನೆಂಟ್ ವೇ) ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. ಇಲಾಖೆ ಪ್ರಕಟಣೆಯಲ್ಲಿ , ಕಿ.ಮೀ. 877/200–300ರಲ್ಲಿ ಇರುವ ಎಲ್.ಸಿ. ನಂ.293 (ಸೋಮೇಶ್ವರ ರೈಲು ಗೇಟ್) ನಲ್ಲಿ ಟ್ರ್ಯಾಕ್…

Read More

ಮಂಗಳೂರು: ಕಿನ್ಯಾ ಬಳಿ ಸ್ಕೂಟರ್ ವಿದ್ಯುತ್ ಕಂಬಕ್ಕೆ ಡಿಕ್ಕಿ – ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳಿಗೆ ಗಾಯ

ಮಂಗಳೂರು: ಸ್ಕೂಟರ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಉಳ್ಳಾಲ ತಾಲೂಕಿನ ಕಿನ್ಯಾ ಬಳಿ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ವಿಜಯಪುರ ಮತ್ತು ಬಾಗಲಕೋಟೆಯ ವೈದ್ಯಕೀಯ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ಮುರಿದು ಬಿದ್ದಿದೆ. ಸವಾರ ಮತ್ತು ಹಿಂಬದಿ ಸವಾರ ಇಬ್ಬರೂ ಗಾಯಗೊಂಡಿದ್ದಾರೆ, ಘಟನೆಯ ಬಗ್ಗೆ ಇದುವರೆಗೆ ಯಾವುದೇ ಔಪಚಾರಿಕ ಪೊಲೀಸ್ ದೂರು ದಾಖಲಾಗಿಲ್ಲ.

Read More

ಮಂಗಳೂರು ಸೆಂಟ್ರಲ್ ರೈಲ್ವೆ ಎದುರು ₹18 ಲಕ್ಷ ವೆಚ್ಚದಲ್ಲಿ ಆಟೋ ಪಾರ್ಕ್‌ಗೆ ಶಿಲಾನ್ಯಾಸ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 40ನೇ ಕೋರ್ಟ್ ವಾರ್ಡ್‌ನ ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣ ಎದುರು ರಿಕ್ಷಾ ಮಾಲಕ-ಚಾಲಕರ ಹಾಗೂ ಸಾರ್ವಜನಿಕರ ಬಹುಕಾಲದ ಬೇಡಿಕೆಯ ಮೇರೆಗೆ ₹18 ಲಕ್ಷ ವಿಶೇಷ ಅನುದಾನದಲ್ಲಿ ಆಟೋ ಪಾರ್ಕ್ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ ನೆರವೇರಿತು. ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು. ಶಿಲಾನ್ಯಾಸದ ಬಳಿಕ ಮಾತನಾಡಿದ ಶಾಸಕರು, ನಿರ್ಮಾಣಗೊಳ್ಳಲಿರುವ ಸುಸಜ್ಜಿತ ಮೇಲ್ಛಾವಣಿಯಿಂದ ರಿಕ್ಷಾ ಚಾಲಕರು ಉರಿ ಬಿಸಿಲು ಹಾಗೂ ಮಳೆಗಾಲದಲ್ಲಿ ಆಶ್ರಯ ಪಡೆಯಲು ಹೆಚ್ಚಿನ ಅನುಕೂಲವಾಗಲಿದೆ ಎಂದು…

Read More

ಫೆ.21ರಂದು “ಕುದ್ರೋಳಿ ತೀರ್ಥಾಟನೆ” ನಮ್ಮ ನಡಿಗೆ ಶ್ರೀ ಗುರುವಿನೆಡೆಗೆ ಪಾದಯಾತ್ರೆ

ಉಡುಪಿ: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ನೇತೃತ್ವದಲ್ಲಿ ವಿವಿಧ ಬಿಲ್ಲವ ಸಂಘಟನೆಗಳ ಸಹಯೋಗದಲ್ಲಿ “ಕುದ್ರೋಳಿ ತೀರ್ಥಾಟನೆ” ನಮ್ಮ ನಡಿಗೆ ಶ್ರೀ ಗುರುವಿನೆಡೆಗೆ ಪಾದಯಾತ್ರೆಯು ಫೆ. 21ರಂದು ಮಂಗಳೂರಿನಲ್ಲಿ ನಡೆಯಲಿದೆ ಎಂದು ಕ್ಷೇತ್ರದ ಪ್ರತಿನಿಧಿ ಜಯಾನಂದ್ ತಿಳಿಸಿದ್ದಾರೆ.ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬೆಳಿಗ್ಗೆ 9 ಗಂಟೆಗೆ ಸೆಂಟ್ರಲ್ ರೈಲ್ವೇ ನಿಲ್ದಾಣದಿಂದ ಆರಂಭಗೊಳ್ಳುವ ತೀರ್ಥಾಟನೆಯು ನಗರದಲ್ಲಿ ಸುಮಾರು 7 ಕಿ.ಮೀ.ಗಳ ನಡಿಗೆಯ ಮೂಲಕ 11 ಗಂಟೆಗೆ ಕುದ್ರೋಳಿ ಕ್ಷೇತ್ರವನ್ನು ತಲುಪಲಿದೆ. ಗುರು ಪ್ರಾರ್ಥನೆಯೊಂದಿಗೆ ಆರಂಭಗೊಳ್ಳುವ ಈ ತೀರ್ಥಾಟನೆಯು ಕ್ಷೇತ್ರ ತಲುಪಿದ…

Read More

ಎಮ್.ಕೆ. ಫೈಝಿ ಅವರಿಗೆ ಜಾಮೀನು ಮಂಜೂರು: ದೇಶದ ಧ್ವನಿಯಿಲ್ಲದ ಸಮುದಾಯಗಳಿಗೆ ದೊರೆತ ಕಾನೂನಿನ ವಿಜಯ – ಅನ್ವರ್ ಸಾದತ್ ಬಜತ್ತೂರು

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಇದರ ರಾಷ್ಟ್ರೀಯ ಅಧ್ಯಕ್ಷರಾದ ಎಂ.ಕೆ. ಫೈಝಿ ಅವರಿಗೆ ದೆಹಲಿ ಹೈಕೋರ್ಟ್ ನಲ್ಲಿ ಜಾಮೀನು ಮಂಜೂರಾದ ಹಿನ್ನೆಲೆಯಲ್ಲಿ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ವತಿಯಿಂದ ಬಿ.ಸಿ. ರೋಡ್ ಕೈಕಂಬದಲ್ಲಿರುವ ಪಕ್ಷದ ಕಚೇರಿ ಮುಂಭಾಗದಲ್ಲಿ ವಿಜಯೋತ್ಸವ ಸಂಭ್ರಮಾಚರಣೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಶಾಹುಲ್ ಹಮೀದ್ ಎಸ್ ಎಚ್ ವಹಿಸಿದ್ದರು.ಪಕ್ಷದ ನಾಯಕರು, ಕಾರ್ಯಕರ್ತರು, ಹಿತೈಷಿಗಳು ಹಾಗೂ ಅಭಿಮಾನಿಗಳು ಭಾಗವಹಿಸಿ ಸಿಹಿ…

Read More

ಛಲವಾದಿ ಟಿ.ನಾರಾಯಣಸ್ವಾಮಿ ವಿರುದ್ಧ ಅವಹೇಳನ ಆರೋಪ.ಶಾಸಕರ ವಿರುದ್ಧ ಕ್ರಮಕ್ಕೆ ಬಿಜೆಪಿ ಎಸ್ಸಿ ಮೋರ್ಚಾ ಆಗ್ರಹ.

ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಅವರು ಕರ್ನಾಟಕ ಸರಕಾರದ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ಟಿ.ನಾರಾಯಣ ಸ್ವಾಮಿ ಅವರ ಬಗ್ಗೆ ಅವಹೇಳನ ಪದ ಬಳಕೆ ಮಾಡುವ ಮೂಲಕ ಪರಿಶಿಷ್ಟ ಜಾತಿಯ ಸಮುದಾಯಕ್ಕೆ ಮಾಡಿರುವ ಅವಮಾನ. ಈ ಕುರಿತು ಶಾಸಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಪರಿಶಿಷ್ಟ ಜಾತಿ ಸಮುದಾಯವನ್ನು ಸೇರಿಸಿ ಪ್ರತಿಭಟನೆ ಮಾಡುವ ಸ್ಥಿತಿ ತಲುಪಬಹುದು ಎಂದು ಬಿಜೆಪಿ ಜಿಲ್ಲಾ ಕಾರ್ಯದರ್ಶಿ ದಿನೇಶ್ ಅಮ್ಮೂರು ಅವರು ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ. ಛಲವಾದಿ ನಾರಾಯಣ ಸ್ವಾಮಿ…

Read More

ಬಿಲ್ಡರ್‌ ಜಿತೇಂದ್ರ ಕೊಟ್ಟಾರಿ ವಿರುದ್ಧ ಎಫ್‌ಐಆರ್‌ ದಾಖಲು ಸತ್ಯಕ್ಕೆ ಸಿಕ್ಕ ವಿಜಯ : ಉಜಿರೆ ತನುಷ್ ಶೆಟ್ಟಿ

ಮಂಗಳೂರಿನ ಬಿಲ್ಡರ್ ಜಿತೇಂದ್ರ ಕೊಟ್ಟಾರಿ ಮತ್ತು ಉಜಿರೆ ನಿವಾಸಿ ತನುಷ್ ಶೆಟ್ಟಿ ನಡುವಿನ ‘ರೋಡ್ ರೇಜ್’ ವಿವಾದ ಹೊಸ ತಿರುವು ಪಡೆದಿದೆ. ಒಂದೂವರೆ ವರ್ಷಗಳ ಸುದೀರ್ಘ ಕಾನೂನು ಹೋರಾಟದ ನಂತರ, ಬಿಲ್ಡರ್ ಜಿತೇಂದ್ರ ಕೊಟ್ಟಾರಿ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ನ್ಯಾಯಾಲಯ ಆದೇಶಿಸಿರುವುದು ಸಂತಸ ತಂದಿದ್ದು ಇದು ನ್ಯಾಯಕ್ಕೆ ಸಿಕ್ಕ ಜಯ ಎಂದು ತನುಷ್ ಶೆಟ್ಟಿ ಹೇಳಿದ್ದಾರೆ. ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ಟೋಬರ್ 9, 2024 ರಂದು ಮಂಗಳೂರಿನಲ್ಲಿ ಕ್ರಿಕೆಟ್ ಪಂದ್ಯ ಮುಗಿಸಿ ಹಿಂತಿರುಗುತ್ತಿದ್ದಾಗ…

Read More
error: Content is protected !!