ಪತ್ರಕರ್ತ ನಾಗೇಶ್ ಗಾಣಿಗ ನೇರಳಕಟ್ಟೆ ಹೃದಯಾಘಾತದಿಂದ ನಿಧನ

ಉಡುಪಿ: ಕುಂದಾಪುರ ತಾಲೂಕಿನ ಸಿದ್ದಾಪುರ ಭಾಗದ ವಿಜಯಕರ್ನಾಟಕ ಪತ್ರಿಕೆಯ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪತ್ರಕರ್ತ ನಾಗೇಶ್ ಗಾಣಿಗ ನೇರಳಕಟ್ಟೆ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 40 ವರ್ಷ ವಯಸ್ಸಾಗಿತ್ತು. ನಾಗೇಶ್ ಗಾಣಿಗ ಅವರು, ಕಳೆದ ಹಲವಾರು ವರ್ಷಗಳಿಂದ ವಿಜಯಕರ್ನಾಟಕ ಪತ್ರಿಕೆಯ ವರದಿಗಾರರಾಗಿದ್ದರು. ಗ್ರಾಮೀಣ ಭಾಗದ ಸಮಸ್ಯೆಗಳ ಬಗ್ಗೆ ತಮ್ಮ ವರದಿಗಾರಿಕೆಯ ಮೂಲಕ ಬೆಳಕು ಚೆಲ್ಲಿದ್ದಲ್ಲದೇ ಹಲವಾರು ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಯಶಸ್ವಿಯಾಗಿದ್ದರು. ಕರ್ತವ್ಯದಲ್ಲಿರುವಾಗ ತೀವ್ರ ಹೃದಯಾಘಾತಕ್ಕೊಳಗಾಗಿದ್ದು, ಅವರನ್ನು ಕುಂದಾಪುರದ ಖಾಸಗೀ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಷ್ಟರಲ್ಲಾಗಲೇ ಅವರು…

Read More

ಆಳ್ವಾಸ್ ವೈದ್ಯಕೀಯ ಕಾಲೇಜಿಗೆ ಎನ್‌ಎಂಸಿ ಅನುಮೋದನೆ; 150 ಎಂಬಿಬಿಎಸ್ ಸೀಟುಗಳಿಗೆ ಹಸಿರು ನಿಶಾನೆ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮಹತ್ವಾಕಾಂಕ್ಷೆಯ ವೈದ್ಯಕೀಯ ಶಿಕ್ಷಣ ಯೋಜನೆಗೆ ಮಹತ್ವದ ಯಶಸ್ಸು ದೊರೆತಿದ್ದು, 2026-27ನೇ ಶೈಕ್ಷಣಿಕ ಸಾಲಿನಿಂದ ಮಿಜಾರಿನ ಆಳ್ವಾಸ್ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರದಲ್ಲಿ 150 ಎಂಬಿಬಿಎಸ್ ವಿದ್ಯಾರ್ಥಿಗಳ ಪ್ರವೇಶಕ್ಕೆ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ಅಧಿಕೃತ ಅನುಮೋದನೆ ನೀಡಿದೆ. ಅತ್ಯಾಧುನಿಕ ಮೂಲಸೌಕರ್ಯ, ಸುಸಜ್ಜಿತ ಪ್ರಯೋಗಾಲಯಗಳು, ಬೋಧನಾ ಆಸ್ಪತ್ರೆ ಹಾಗೂ ಅನುಭವಿ ಬೋಧಕ ವೃಂದದೊಂದಿಗೆ ಗುಣಮಟ್ಟದ ವೈದ್ಯಕೀಯ ಶಿಕ್ಷಣ, ಆರೋಗ್ಯ ಸೇವೆ ಮತ್ತು ಸಂಶೋಧನೆಯನ್ನು ಸಮನ್ವಯಗೊಳಿಸುವ ಉದ್ದೇಶದಿಂದ ಕಾಲೇಜು ಕಾರ್ಯನಿರ್ವಹಿಸಲಿದೆ. ಈ ಅನುಮೋದನೆಯೊಂದಿಗೆ…

Read More

ಬಸ್ ಟೈಮಿಂಗ್ಸ್ ಜಗಳ: ಕಬ್ಬಿಣದ ರಾಡ್‌ನಿಂದ ಕಂಡಕ್ಟರ್‌ಗಳ ಮಾರಾಮಾರಿ

ಖಾಸಗಿ ಬಸ್ಸುಗಳ ಟೈಮಿಂಗ್ಸ್ ವಿಚಾರದಲ್ಲಿ ಉಂಟಾದ ವಾಗ್ವಾದ ಹಾಡಹಗಲೇ ಕಬ್ಬಿಣದ ರಾಡ್‍ನೊಂದಿಗೆ ಪ್ರಯಾಣಿಕರ ಸಮ್ಮುಖದಲ್ಲೇ ಮಾರಾಮಾರಿ ನಡೆಸಿದ ಇಬ್ಬರು ಬಸ್ ಕಂಡಕ್ಟರ್ ಮೇಲೆ ಉಪ್ಪಿನಂಗಡಿ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿದ್ದಾರೆ. ಮಂಗಳೂರು-ಉಪ್ಪಿನಂಗಡಿ ಮಧ್ಯೆ ಸಂಚರಿಸುವ ಅರಫಾ ಬಸ್ ನ ಕಂಡಕ್ಟರ್ ನೌಶಾದ್ ಹಾಗೂ ಅದೇ ಮಾರ್ಗದಲ್ಲಿ ಸಂಚರಿಸುವ ‘ಲಕ್ಷ್ಮೀ’ ಬಸ್ ನ ಕಂಡಕ್ಟರ್ ಖಲಂದರ ಯಾನೆ ಶಾಹೀದ್ ಎಂಬುವವರ ನಡುವೆ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಬಸ್ ಟೈಮಿಂಗ್ಸ್ ವಿಚಾರವಾಗಿ ಪರಸ್ಪರ ಜಗಳ ನಡೆದಿದೆ ಅಲ್ಲದೇ ಬಸ್ ನಿಲ್ದಾಣದಲ್ಲಿದ್ದ…

Read More

ಧರ್ಮಸ್ಥಳ ಪ್ರಕರಣ: 7,005 ಪುಟಗಳ ಅಂತಿಮ ವರದಿ ಬೆಳ್ತಂಗಡಿ ಕೋರ್ಟ್‌ಗೆ ಸಲ್ಲಿಸಿದ ಎಸ್‌ಐಟಿ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ಕೋರ್ಟ್ ಗೆ ಅಂತಿಮ ವರದಿಯನ್ನು ಸಲ್ಲಿಸಿದ್ದಾರೆ. ಬೆಳ್ತಂಗಡಿ ಎಸ್ಐಟಿ ಅಧಿಕಾರಿಗಳು ಧರ್ಮಸ್ಥಳ ಪ್ರಕರಣದಲ್ಲಿ 20-11-2025ರಂದು BNS (u/s-215) ಅಡಿಯಲ್ಲಿ ಸಿ.ಎನ್.ಚಿನ್ನಯ್ಯ, ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ., ವಿಠಲ್ ಗೌಡ ಹಾಗೂ ಸುಜಾತಾ ಭಟ್ ವಿರುದ್ಧ 3,923 ಪುಟಗಳ ‘ಸುಳ್ಳು ಸಾಕ್ಷ್ಯ’ (Perjury Report) ವರದಿಯನ್ನು ಸಲ್ಲಿಕೆ ಮಾಡಿದ್ದರು. ಈ ವರದಿಯನ್ನು ಒಪ್ಪಲು ನ್ಯಾಯಾಲಯ ನಿರಾಕರಿಸಿ ಅಂತಿಮ ವರದಿ ನೀಡುವಂತೆ ಸೂಚಿಸಿತ್ತು. ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ನ್ಯಾಯಾಲಯದ…

Read More

ಕೊಲೆ ಆರೋಪಿಯ ಬಾಯಲ್ಲಿ ಕಾನೂನು ಪಾಠ; ಪೊಲೀಸ್ ಇಲಾಖೆಗೆ ಬಹಿರಂಗ ಸವಾಲ್ – ಸಮುದಾಯದ ವಿರುದ್ಧ ದ್ವೇಷ ಹರಡುವ ಹೇಳಿಕೆ ಎಸ್.ಡಿ.ಪಿ.ಐ ಖಂಡನೆ.

ಮಂಗಳೂರು: ಮಂಗಳೂರು ನಗರದಲ್ಲಿ ಬಾಂಗ್ಲಾದೇಶಿ ಪ್ರಜೆಗಳ ಅಕ್ರಮ ವಾಸದ ಹೆಸರಿನಲ್ಲಿ, “ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳದಿದ್ದರೆ ಬೆಂಗಳೂರಿನ ಮಾದರಿಯಲ್ಲೇ ನಾವು ಕಾರ್ಯಾಚರಣೆ ನಡೆಸುತ್ತೇವೆ” ಎಂದು ಕೊಲೆ ಪ್ರಕರಣದ ಆರೋಪಿ ಪುನೀತ್ ಕೆರೆಹಳ್ಳಿ ಬಹಿರಂಗವಾಗಿ ನೀಡಿರುವ ಹೇಳಿಕೆ ಕಾನೂನಿನ ಆಡಳಿತಕ್ಕೆ ಎಸೆದ ಸವಾಲು ಮಾತ್ರವಲ್ಲ, ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ದ್ವೇಷ ಮತ್ತು ಉದ್ವಿಗ್ನತೆ ಸೃಷ್ಟಿಸುವ ಅತ್ಯಂತ ಅಪಾಯಕಾರಿ ಹೇಳಿಕೆಯಾಗಿದೆ ಎಂದು ಎಸ್.ಡಿ.ಪಿ.ಐ ಮಂಗಳೂರು ನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಮಾಲ್ ಜೋಕಟ್ಟೆ ಅವರು ತೀವ್ರವಾಗಿ ಖಂಡಿಸಿದ್ದಾರೆ. ಕೊಲೆ…

Read More

ಮಂಗಳೂರು: ಬಾಂಗ್ಲಾದೇಶಿ ಅಕ್ರಮ ವಲಸಿಗರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ ಪುನೀತ್ ಕೆರೆಹಳ್ಳಿ

ಮಂಗಳೂರು: ಬೆಂಗಳೂರಿನ ಲಾರಿಪಾಳ್ಯದಲ್ಲಿ ಗೋ ರಕ್ಷಣೆ ವೇಳೆ ನೀಡಿದ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿ ಪುನೀತ್ ಕೆರೆಹಳ್ಳಿ ಅವರು ಮಂಗಳೂರಿನ ಉರ್ವ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರಿನಲ್ಲಿ 19 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಪತ್ತೆಯಾಗಿರುವ ವಿಚಾರವನ್ನು ಉಲ್ಲೇಖಿಸಿ, ಅಕ್ರಮ ವಲಸಿಗರ ವಿರುದ್ಧ ಕಾನೂನುಬದ್ಧವಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಅಕ್ರಮವಾಗಿ ನೆಲೆಸಿರುವವರ ವಿರುದ್ಧ ಸಮರ್ಪಕ ಕ್ರಮ ಕೈಗೊಳ್ಳದಿದ್ದರೆ, ಬೆಂಗಳೂರಿನಲ್ಲಿ ನಡೆಸಿದ ರೀತಿಯ ಕಾರ್ಯಾಚರಣೆಯನ್ನು ಮಂಗಳೂರಿನಲ್ಲಿಯೂ ನಡೆಸುವುದಾಗಿ ಅವರು ಹೇಳಿದರು….

Read More

ಸರಕಾರವು ಕರಾವಳಿಯಲ್ಲಿ ಪಡಿತರ ಮೂಲಕ ಕುಚ್ಚಲು ಅಕ್ಕಿಯನ್ನು ವಿತರಿಸಲು ಒತ್ತಾಯಿಸಿ ಪಡಿತರ ಅಂಗಡಿಗಳ ಮುಂದೆ ಉಚಿತವಾಗಿ ಅಕ್ಕಿ ವಿತರಿಸಿ ಪ್ರತಿಭಟಿಸಿದ SDPI

ಬೆಳ್ತಂಗಡಿ : ಸರಕಾರವು ಅನ್ನಭಾಗ್ಯ ಯೋಜನೆಯಡಿ ವಿತರಿಸುತ್ತಿರುವ ಬಿಳಿ ಅಕ್ಕಿಯ ಬದಲು ಕರಾವಳಿ ಜಿಲ್ಲೆಯ ಜನರ ಸಾಂಪ್ರದಾಯಿಕ ಆಹಾರವಾದ ಕುಚ್ಚಲು ಆಕ್ಕಿಯನ್ನು ಕರಾವಳಿಯ ಪಡಿತರ ಅಂಗಡಿಯ ಮೂಲಕ ಗ್ರಾಹಕರಿಗೆ ವಿತರಿಸಬೇಕೆಂದು ಒತ್ತಾಯಿಸಿ ”ಕರಾವಳಿಯ ತಟ್ಟೆಗೆ ಕುಚ್ಚಲು ನೀಡಿ” “ನಮ್ಮ ಆಹಾರ ನಮ್ಮ ಹಕ್ಕು” ಎಂಬ ಘೋಷನೆಯೊಂದಿಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯು ಕರೆ ನೀಡಿದ ಸಾಂಕೇತಿಕ ಪ್ರತಿಭಟನೆ ಅಂಗವಾಗಿ ಬೆಳ್ತಂಗಡಿ, ಬಂಟ್ವಾಳ,ಸುಳ್ಯ,ಕಡಬ ತಾಲೂಕು ವ್ಯಾಪ್ತಿಯ ಆಯ್ದ ಪಡಿತರ ಅಂಗಡಿಗಳ ಮುಂದೆ…

Read More

ಪೊಲೀಸ್ ಠಾಣೆಯ ಸಿಸಿಟಿವಿ ಪರಿಶೀಲಿಸಿ ಕ್ರಮ ಕೈಗೊಳ್ಳಿ: ಪತ್ರಿಕಾಗೋಷ್ಠಿಯಲ್ಲಿ ಒತ್ತಾಯ

ಮಂಗಳೂರು, ಜು.16: ಮುಲ್ಕಿ ಪೊಲೀಸ್ ಠಾಣೆಯೊಳಗೆ ವ್ಯಕ್ತಿಯೊಬ್ಬರು ಪೊಲೀಸರಿಗೆ ಬೆದರಿಕೆ ಒಡ್ಡಿ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿರುವ ಘಟನೆ ನಡೆದಿದ್ದು, ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಾಮಾಜಿಕ ಕಾರ್ಯಕರ್ತ ರಾಬರ್ಟ್ ರೊಜಾರಿಯೋ ಆಗ್ರಹಿಸಿದರು. ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜುಲೈ 12ರಂದು ತಾಳಿಪಾಡಿ ಗ್ರಾಮದ ದಾಮಸ್ಕಟ್ಟೆಯ ಗುಡ್ಡು ಪಂಡಿತ್ ಪ್ರದೇಶದಲ್ಲಿ ಸುಮಾ ಎಂಬವರ ಮನೆಗೆ ಕೆಲವರು ನುಗ್ಗಿ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದರು. ಘಟನೆಯ ಬಳಿಕ 112ಕ್ಕೆ…

Read More

ರಾಮಮಂದಿರ ಹುಂಡಿ ಕಳವು ಪ್ರಕರಣಕ್ಕೂ ಪ್ರಧಾನಿ ಕಚೇರಿಗೂ ನೇರ ಸಂಬಂಧ: ಕಾಂಗ್ರೆಸ್ ಆರೋಪ

ಮಂಗಳೂರು : ಹುಂಡಿ ಕಳವು ಪ್ರಕರಣಕ್ಕೂ ಪ್ರಧಾನಿ ಕಚೇರಿಗೂ ನೇರ ಸಂಬಂಧವಿದೆ ಎಂದು ಕಾಂಗ್ರೆಸ್ ಪ್ರಚಾರ ಸಮಿತಿಯ ಉಪಾಧ್ಯಕ್ಷ ಸುಧೀರ್ ಕುಮಾರ್ ಮರೋಳಿ ಆಪಾದಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಟ್ರಸ್ಟ್ ನಲ್ಲಿದ್ದವರೆಲ್ಲರೂ ಆರ್ ಎಸ್ ಎಸ್ ಮತ್ತು ಬಿಜೆಪಿಯ ಪದಾಧಿಕಾರಿಗಳು, ಕಾರ್ಯಕರ್ತರು. ಈ ತಂಡ ದೇವರ ಹಣ, ಬಂಗಾರ, ಬೆಳ್ಳಿ, ನಗದನ್ನು ಢಕಾಯಿತಿ ಮಾಡಿದೆ. ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಯಾಗಿದ್ದ ಚಂಪತ್ ರಾಯ್ ಪ್ರಧಾನಿ ನರೇಂದ್ರ ಮೋದಿಯವರನ್ನು ದೇವರಿಗೆ ಹೋಲಿಸಿದ್ದರು. ಉತ್ತರ ಪ್ರದೇಶ ಸರಕಾರ ರಚಿಸಿರುವ…

Read More

ರಾಮಮಂದಿರ ಹುಂಡಿ ಕಳವು: ಕೋಟ್ಯಂತರ ಭಕ್ತರ ನಂಬಿಕೆಗೆ ಬಿಜೆಪಿ-ಆರ್‌ಎಸ್‌ಎಸ್‌ ಆಘಾತ — ವಿನಯ್ ಕುಮಾರ್ ಸೊರಕೆ

ಮಂಗಳೂರು: ರಾಮಮಂದಿರದ ಹುಂಡಿ ಕಳವು ಪ್ರಕರಣಕ್ಕೆ ಸಂಬಂಧಿಸಿ ಆರೆಸ್ಸೆಸ್, ವಿಎಚ್ ಪಿ ಮತ್ತು ಬಿಜೆಪಿಯವರು ಕೋಟ್ಯಂತರ ರಾಮ ಭಕ್ತರ ನಂಬಿಕೆಗೆ ಆಘಾತವನ್ನುಂಟು ಮಾಡಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಹೇಳಿದ್ದಾರೆ. ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಬುಧವಾರ ಆಯೋಜಿಸಿದ ದ.ಕ.ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಪ್ರಕರಣದ ಬಗ್ಗೆ ಐಟಿ, ಇಡಿ, ಸಿಬಿಐ ಮೌನವಾಗಿವೆ. ತಾನೋರ್ವ ಚೌಕಿದಾರ್ ಎನ್ನುವ ಪ್ರಧಾನಿ ಮೋದಿಯವರು ನೇಮಿಸಿದ ಉಪಚೌಕಿದಾರ ಟ್ರಸ್ಟಿಗಳಿಂದಲೇ ಕಳವು…

Read More
error: Content is protected !!