ನರೇಗಾ ಮರುಸ್ಥಾಪನೆಗೆ ಒತ್ತಾಯ: ಕೊಳ್ನಾಡು ಗ್ರಾಮ ಪಂಚಾಯತ್ ಸಾಮನ್ಯ ಸಭೆಯಲ್ಲಿ ಬಹುಮತದ ತೀರ್ಮಾನ

ಕೊಳ್ನಾಡು ಗ್ರಾಮ ಪಂಚಾಯತ್ ಸಾಮನ್ಯ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಶ್ರಫ್ ಕೆ. ಸಾಲೆತ್ತೂರು ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಉಪಾಧ್ಯಕ್ಷರಾದ ಕೆ.ಎ. ಅಸ್ಮ ಹಸೈನಾರ್ ತಾಳಿತ್ತನೂಜಿ ಉಪಸ್ಥಿತರಿದ್ದರು. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆಯ ಹೆಸರನ್ನು ಬದಲಾಯಿಸಿ ‘ವಿಕಸಿತ ಭಾರತ ಉದ್ಯೋಗ ಖಾತರಿ ಅಜೀವಿಕ ಅಭಿಯಾನ’ ಎಂದು ಮರುನಾಮಕರಣ ಮಾಡಿರುವ ಕುರಿತು ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿ.ಡಿ.ಓ) ಸಭೆಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರೂ ಹಿರಿಯ ಸದಸ್ಯರಾದ…

Read More

ಕಲ್ಕೂರ ಪ್ರತಿಷ್ಠಾನದ ಆಶ್ರಯದಲ್ಲಿ ವಾದಿರಾಜ ಜಯಂತಿ ಆಚರಣೆ

ಮಂಗಳೂರು:ಕಲ್ಕೂರ ಪ್ರತಿಷ್ಠಾನದ ಆಶ್ರಯದಲ್ಲಿ ವಾದಿರಾಜ ಜಯಂತಿ ಕಾರ್ಯಕ್ರಮ ಶುಕ್ರವಾರ ಸಂಜೆ ಪ್ರತಿಷ್ಠಾನದ ಹಾಲ್ ನಲ್ಲಿ ಜರುಗಿತು.ಕಾರ್ಯಕ್ರಮವನ್ನು ವಾದಿರಾಜರಿಗೆ ದೀಪಾರ್ಚನೆಗೈದು ಕೀರ್ತನೆಯನ್ನು ಹಾಡುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ನಿತ್ಯಾನಂದ ಕಾರಂತ್ ಅವರು, “ವಾದಿರಾಜರ ಸ್ಮರಣೆಯನ್ನು ಇಂದಿನ ಪೀಳಿಗೆಯ ಮಕ್ಕಳಿಗೂ ತಲುಪಿಸುವಲ್ಲಿ ಇಂತಹ ಕಾರ್ಯಕ್ರಮ ಶ್ಲಾಘನೀಯ. ಪ್ರದೀಪ್ ಕುಮಾರ್ ಕಲ್ಕೂರ ಅವರು ಈ ಮೂಲಕ ಒಳ್ಳೆಯ ಕೆಲಸ ಮಾಡಿದ್ದಾರೆ. ವಾದಿರಾಜರ ಕೀರ್ತನೆಗಳು ಜನರನ್ನು ಇಂದಿಗೂ ಮುಂದಿಗೂ ತಲುಪಲಿ” ಎಂದರು. ವೇದಿಕೆಯಲ್ಲಿ ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ,…

Read More

“ಕೊರಗಜ್ಜ” ಚಿತ್ರದ ಪ್ರಮೋಷನ್ ಗೆ ನಟ ಮಮುಟ್ಟಿಯಿಂದ ಬ್ರೇಕ್?ಕಬೀರ್ ಬೇಡಿಗೆ ಅವಮಾನ!!

ಮಂಗಳೂರು: ಇನ್ನೇನು ಬಿಡುಗಡೆಗೆ ಸಿದ್ಧವಾಗಿರುವ ಪ್ಯಾನ್ ಇಂಡಿಯಾ ಫಿಲ್ಮ್ “ಕೊರಗಜ್ಜ” ಚಿತ್ರತಂಡ ಪ್ರಮೋಷನ್ ಸಲುವಾಗಿ ಕೊಚ್ಚಿಯ “ಹಾಲಿಡೇ ಇನ್” ಪಂಚತಾರ ಹೊಟೆಲ್ ನ ‘ಗ್ರ್ಯಾಂಡ್ ಬಾಲ್ ರೂಮಿ’ನಲ್ಲಿ ಇತ್ತೀಚೆಗೆ ಅದ್ದೂರಿ ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು. ಸುಮಾರು ಒಂದು ವಾರಗಳ ಮೊದಲೇ ಕೊಚ್ಚಿಯ ಪಿ ಆರ್ ಒ ಮುಖಾಂತರ ಎಲ್ಲಾ ಮಾಧ್ಯಮಗಳಿಗೆ ಪತ್ರಿಕಾ ಗೋಷ್ಟಿಯ ಆಮಂತ್ರಣ ಕೂಡಾ ರವಾನೆಯಾಗಿತ್ತು. ಆದರೆ ಪ್ರೆಸ್ ಮೀಟ್ ನ ಮುಂಚಿನ ದಿನ ತಡರಾತ್ರಿ ಚಿತ್ರತಂಡಕ್ಕೆ ಪಿಆರ್ ಒ ಕರೆ ಮಾಡಿ ಕಾರ್ಯಕ್ರಮವನ್ನು ರದ್ದುಗೊಳಿಸುವಂತೆ ಅಥವಾ…

Read More

ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು: ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು.ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ ಶೆಟ್ಟಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕರಾವಳಿ ಕರ್ನಾಟಕದ ಜನತೆಯ ಆಹಾರ ಅಭಿರುಚಿಯು ಬಹಳ ವಿಶಿಷ್ಟವಾಗಿದೆ. ತಿಂಡಿ ತಿನಿಸುಗಳ ಬಗ್ಗೆ ಇಲ್ಲಿನ ಜನರ ಪ್ರೀತಿಯು ಆಹಾರ ಸಂಸ್ಕೃತಿಯನ್ನು ಎತ್ತರಕ್ಕೆ ಕೊಂಡೊಯ್ದಿದೆ. ವೈವಿಧ್ಯಮಯ ಖಾದ್ಯಗಳಿಗೆ ಕರಾವಳಿಯು ಹೆಸರುವಾಸಿಯಾಗಿದೆ ಎಂದು ಹೇಳಿದರು. ಜಿಲ್ಲಾಧಿಕಾರಿ ದರ್ಶನ್ ಎಚ್…

Read More

ಗಾಂಧಿ ಹೆಸರಿನಲ್ಲಿ ಬಿಜೆಪಿ ರಾಜಕೀಯ, ಚಿಂತನೆಗಳನ್ನು ನಿತ್ಯ ಕೊಲ್ಲುತ್ತಿದೆ: ರಮಾನಾಥ ರೈ ಆರೋಪ

ಮಂಗಳೂರು: ಪ್ರಧಾನಿ ಮೋದಿ ಅವರು ವಿದೇಶಗಳಿಗೆ ಹೋದಾಗ ಮಹಾತ್ಮ ಗಾಂಧಿ ಅವರನ್ನು ಕೊಂಡಾಡುತ್ತಾರೆ. ಆದರೆ ತಮ್ಮದೇ ದೇಶದಲ್ಲಿ ಗಾಂಧಿ ಹೆಸರಿಗೆ ಅಪಚಾರ ಮಾಡುತ್ತಾರೆ. ಇದು ಹಿಪೊಕ್ರೆಸಿಯ ಒಂದು ಭಾಗ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.ಶುಕ್ರವಾರ ಮಂಗಳೂರಿನ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಆಯೋಜಿಸಿದ ರಾಷ್ಟ್ರಪಿತ ಮಹಾತ್ಮ ಗಾಂಧಿ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಬಳಿಕ ಅವರು ಮಾತನಾಡುತ್ತಿದ್ದರು. ಗಾಂಧೀಜಿಯವರು ಅಹಿಂಸಾ ಮಾರ್ಗದ ಮೂಲಕ ಬ್ರಿಟಿಷರ ವಿರುದ್ಧ ಹೋರಾಡಿದ ಫಲವಾಗಿ ದೇಶಕ್ಕೆ ಸ್ವಾತಂತ್ರ್ಯ…

Read More

ಬ್ಯಾಗ್ ಕಳ್ಳತನ: ಅಂತರ್ ಜಿಲ್ಲೆ ಕಳ್ಳನ ಬಂಧನ

ಮಂಗಳೂರು: ಬಸ್ ನಿಲ್ದಾಣಗಳಲ್ಲಿ ಒಟ್ಟು 11 ಬ್ಯಾಗ್ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾದ ಅಂತರ್ ಜಿಲ್ಲೆ ಕಳ್ಳನನ್ನು ಮಂಗಳೂರು ಬರ್ಕೆ ಪೊಲೀಸರು ಬಂಧಿಸಿದ್ದಾರೆ. ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಬಿಜೈ ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣದಲ್ಲಿ ದಿನಾಂಕ: 23-01-2026 ರಂದು ಸಂಜೆ ಸಮಯ ಸುಮಾರು 7-00 ಗಂಟೆಗೆ ಪ್ರಾಯಸ್ಥ ಇಬ್ಬರು ಮಹಿಳೆಯರು ಮತ್ತು ಹಿರಿಯ ನಾಗರಿಕರು ಬೆಂಗಳೂರಿಗೆ ಹೋಗುವ ಬಸ್ಸಿನಲ್ಲಿ ಸುಮಾರು 45 ಗ್ರಾಂ ಚಿನ್ನಾಭರಣ ಹಾಗೂ ರೂ.20,000 ನಗದು ಹಣ ಇರುವ ಟ್ರಾಯಲಿ ಬ್ಯಾಗ್ ನ್ನು ಇಟ್ಟು ಕುಳಿತುಕೊಂಡಿದ್ದ…

Read More

ಫೆ. 6ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಕಾಸರಗೋಡಿನ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಬೊಂಬೆಯಾಟ ಸಂಘದ ‘ಗಣ್ಯರೆಡೆಗೆ ಬೊಂಬೆ ನಡಿಗೆ’ ಪರಿಕಲ್ಪನೆಗೆ ಚಾಲನೆ

ತೊಕ್ಕೊಟ್ಟು:ಕಾಸರಗೋಡಿನ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಬೊಂಬೆಯಾಟ ಸಂಘದ ‘ಗಣ್ಯರೆಡೆಗೆ ಬೊಂಬೆ ನಡಿಗೆ’ ಪರಿಕಲ್ಪನೆಗೆ ಇದೇ ಫೆಬ್ರವರಿ 2ರಂದು ಸಂಜೆ 6 ಗಂಟೆಗೆ ಧರ್ಮಸ್ಥಳ ಶ್ರೀ ಕ್ಷೇತ್ರದ ಮುಂಭಾಗದಲ್ಲಿ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ವಿದ್ಯುಕ್ತ ಚಾಲನೆ ನೀಡಲಿದ್ದು ಅದೇ ಸಂದರ್ಭದಲ್ಲಿ ಯಕ್ಷಗಾನ ಬೊಂಬೆಯಾಟ ಪ್ರದರ್ಶನವನ್ನು ಆಯೋಜಿಸಿರುವುದಾಗಿ ಕಾಸರಗೋಡು ಶ್ರೀ ಗೋಪಾಲಕೃಷ್ಣ ಬೊಂಬೆಯಾಟ ಸಂಘದ ನಿರ್ದೇಶಕ, ಪ್ರಧಾನ ಸೂತ್ರಧಾರಿ ಕೆ. ವಿ. ರಮೇಶ ತಿಳಿಸಿದ್ದಾರೆ. ತೊಕ್ಕೊಟ್ಟು ಪತ್ರಿಕಾಭವನದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,ತೆಂಕುತಿಟ್ಟು ಯಕ್ಷಗಾನವನ್ನು ಬೊಂಬೆಯಾಟದ ಮೂಲಕ ಪ್ರದರ್ಶಿಸುತ್ತಿರುವ ಕಾಸರಗೋಡಿನ…

Read More

ಕುದ್ಮುಲ್ ರಂಗರಾವ್ ಪುಣ್ಯಸ್ಮರಣೆ: ಬಾಬುಗುಡ್ಡೆಯಲ್ಲಿ ಬಿಜೆಪಿ ಎಸ್‌ಸಿ ಮೋರ್ಚಾದಿಂದ ಪುಷ್ಪ ನಮನ

ದಲಿತೋದ್ಧಾರಕ, ಸಾಮಾಜಿಕ ಸುಧಾರಣೆಯ ಹರಿಕಾರ ಕುದ್ಮುಲ್ ರಂಗರಾವ್ ರವರ ಪುಣ್ಯಸ್ಮರಣೆಯ ಅಂಗವಾಗಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ಎಸ್ ಸಿ ಮೋರ್ಚಾ ವತಿಯಿಂದ ಬಾಬುಗುಡ್ಡೆಯಲ್ಲಿರುವ ಅವರ ಸಮಾಧಿಗೆ ಪುಷ್ಪ ನಮನಗಳನ್ನು ಸಲ್ಲಿಸಲಾಯಿತು. ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ದಕ್ಷಿಣ ಮಂಡಲದ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ಹಿರಿಯ ನಾಯಕರಾದ ಮೋನಪ್ಪ ಭಂಡಾರಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷರಾದ ನಂದನ್ ಮಲ್ಯ, ಮಂಡಲದ ಯುವ ಮೋರ್ಚಾ ಅಧ್ಯಕ್ಷರಾದ ಅಶ್ವಿತ್ ಕೊಟ್ಟಾರಿ, ನಿಕಟ ಪೂರ್ವ ಕಾರ್ಪೊರೇಟರ್ ಗಳಾದ ಭರತ್ ಕುಮಾರ್, ವೀಣಾ…

Read More

ಇಂದಿನಿಂದ ಕದ್ರಿ ಪಾರ್ಕ್‍ನಲ್ಲಿ ರುಚಿಕರ ತಿನಿಸುಗಳ ಘಮ ಘಮಿಸುವ ‘ಸ್ಟ್ರೀಟ್‍ಫುಡ್ ಫೆಸ್ಟಿವಲ್’*

ಮಂಗಳೂರು:ಕರಾವಳಿ ಉತ್ಸವದ ಅಂಗವಾಗಿ ಆಯೋಜಿಸಲಾಗಿರುವ ಆಹಾರ ಮೇಳವು ಜನವರಿ 30 ರಿಂದ ಫೆಬ್ರವರಿ 1 ರವರೆಗೆ ಮಂಗಳೂರು ನಗರದ ಕದ್ರಿ ಪಾರ್ಕ್‍ನಲ್ಲಿ ನಡೆಯಲಿದೆ.ಈ ಆಹಾರ ಮೇಳದಲ್ಲಿ ಕರಾವಳಿ ಪ್ರದೇಶದ ವೈವಿಧ್ಯಮಯ ಹಾಗೂ ಸಮೃದ್ಧ ಪಾಕ ಪರಂಪರೆಯನ್ನು ಪ್ರೋತ್ಸಾಹಿಸುವ ಉದ್ದೇಶ ಹೊಂದಿದ್ದು, ಸ್ಥಳೀಯ ಹಾಗೂ ಸಾಂಪ್ರದಾಯಿಕ ಆಹಾರ ಪದಾರ್ಥಗಳ ಪ್ರದರ್ಶನ ಮತ್ತು ಮಾರಾಟಕ್ಕೆ ವೇದಿಕೆ ಕಲ್ಪಿಸಲಿದೆ. ಆಹಾರ ಪ್ರಿಯ ನಾಗರಿಕರಿಗೆ ವಿಶೇಷ ಅನುಭವವನ್ನು ನೀಡುವ ಉದ್ದೇಶದಿಂದ ಆಯೋಜಿಸಲಾಗಿರುವ ಈ ಉತ್ಸವದಲ್ಲಿ ಎಲ್ಲ ವರ್ಗದ ಜನರಿಗೆ ರುಚಿಕರ ಹಾಗೂ ವೈವಿಧ್ಯಮಯ…

Read More

ಕಾರ್ಕಳ ಅತ್ತೂರು ಬಸಿಲಿಕಾ ಮಹೋತ್ಸವ-ಹರಿದು ಬಂದ ಜನಸಾಗರ!

ಉಡುಪಿ: ಇತಿಹಾಸ ಪ್ರಸಿದ್ದ ಕಾರ್ಕಳದ ಅತ್ತೂರು ಸಂತ ಲಾರೆನ್ಸ್ ಬಸಿಲಿಕಾ ವಾರ್ಷಿಕ ಮಹೋತ್ಸವ ವೈಭವದಿಂದ ನಡೆಯುತ್ತಿದೆ. ಅತ್ತೂರು ಜಾತ್ರೆಗೆ ಜನಸಾಗರವೇ ಹರಿದು ಬಂದಿದ್ದು, ನಾಲ್ಕನೇ ದಿನವೂ ಭಾರೀ ಸಂಖ್ಯೆಯ ಭಕ್ತಾದಿಗಳು ಆಗಮಿಸಿದ್ದಾರೆ. ಕಳೆದ ನಾಲ್ಕು ದಿನಗಳಿಂದ ರಾತ್ರಿ-ಹಗಲೆನ್ನದೆ ಜನತೆ ಆಗಮಿಸಿ ದೇವರ ದರ್ಶನ ಪಡೆಯುತ್ತಿದ್ದಾರೆ. ಅತ್ತೂರು ಜಾತ್ರೆಗೆ ರಾಜ್ಯದ ವಿವಿಧ ಭಾಗಗಳಿಂದ ಲಕ್ಷಾಂತರ ಮಂದಿ ಭಕ್ತರು ಜಾತಿ ಮತ ಭೇದಗಳನ್ನು ಮರೆತು ತಮ್ಮ ಇಷ್ಟಾರ್ಥ ಸಿದ್ದಿಗಾಗಿ ಬರುತ್ತಾರೆ. ನಾನು ನಿನ್ನನ್ನು ಪ್ರೀತಿಸುತ್ತಿದ್ದೇನೆ ಎಂಬುದು ಈ ವರ್ಷದ ಮಹೋತ್ಸವದ…

Read More
error: Content is protected !!