ಜನವರಿ 31 ಹಾಗೂ ಫೆಬ್ರವರಿ 1 ರಂದು ವಿಶ್ವ ಕೊಂಕಣಿ ನಾಟಕ ಮಹೋತ್ಸವ ಹಾಗೂ ವಿಶ್ವ ಕೊಂಕಣಿ ಪ್ರಶಸ್ತಿ ಪದಾನ ಸಮಾರಂಭ-2026

ಮಂಗಳೂರು:ಜನವರಿ 31 ಹಾಗೂ ಫೆಬ್ರವರಿ 1 ರಂದು ವಿಶ್ವ ಕೊಂಕಣಿ ನಾಟಕ ಮಹೋತ್ಸವ ಹಾಗೂ ಪ್ರತಿಷ್ಠಿತ ಡಾ ಪಿ ದಯಾನಂದ ಪೈ ವಿಶ್ವ ಕೊಂಕಣಿ ರಂಗಶ್ರೇಷ್ಠ ಹಾಗೂ ಅನುವಾದ ಪ್ರಶಸ್ತಿ ಪದಾನ ಸಮಾರಂಭವು ನಗರದ ಟಿವಿ ರಮಣ ಪೈ ಸಭಾಂಗಣ, ಕೊಡಿಯಾಲ್-ಬೈಲ್ ನಲ್ಲಿ ಆಯೋಜಿಸಲಾಗಿದೆ ಎಂದು ವಿಶ್ವ ಕೊಂಕಣಿ ಕೇಂದ್ರದ ಅಧ್ಯಕ್ಷರಾದ ಸಿ ಎ ನಂದಗೋಪಾಲ ಶೆಣೈ ತಿಳಿಸಿದರು. ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ವಿಶ್ವ ಕೊಂಕಣಿ ನಾಟಕ ಮಹೋತ್ಸವದ ಅಂಗವಾಗಿ ನಾಲ್ಕು…

Read More

ದೈವಗಳ ಮೂರ್ತಿ ಕಳ್ಳತನ; ಇಬ್ಬರ ಬಂಧನ

ಮನೆಯಲ್ಲಿದ್ದ ದೈವಗಳ ಮೂರ್ತಿಗಳನ್ನು ಕಳ್ಳತನ ಮಾಡಿದ ಆರೋಪಿಗಳನ್ನು ಮಂಗಳೂರಿನ ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.ಅಮಿತಾ ಎಂಬುವವರ ತಾಯಿ ಮನೆಯಲ್ಲಿ ದೈವಗಳ ಮೂರ್ತಿಗಳು ಹಾಗೂ ಅದಕ್ಕೆ ಸಂಬಂಧಪಟ್ಟ ಪೂಜಾ ಪರಿಕರಗಳು ಇತ್ತು. ಈ ಮನೆಯಲ್ಲಿ ಯಾರೂ ವಾಸವಿರದ ಕಾರಣ ಕೇವಲ ಪೂಜೆ ಮಾಡಿ ದೀಪ ಹಚ್ಚಿ ನಂತರ ಬೀಗ ಹಾಕಲಾಗುತ್ತಿತ್ತು. ದಿನಾಂಕ: 26-12-2025 ರಂದು ರಾತ್ರಿ ಸಮಯ ಯಾರೋ ಅಪರಿಚಿತರು ಮನೆಯ ಮೇಲ್ಚಾವಣಿಯ ಹಂಚು ತೆಗೆದು ಮನೆಯೊಳಗೆ ಪ್ರವೇಶಿಸಿ ಸುಮಾರು 1,00,000 ಮೌಲ್ಯದ 1 ಪಸಪ್ಪ ದೈವದ ತಾಮ್ರದ ಮೂರ್ತಿ,…

Read More

ಬೆಂಗಳೂರು: ಕುಡಿದು ಕಾರು ಚಲಾಯಿಸಿ ಸರಣಿ ಅಪಘಾತ – ನಟ ಮಯೂರ್ ಪಟೇಲ್ ವಿರುದ್ಧ ಎಫ್‌ಐಆರ್, ಕಾರು ವಶ

ಬೆಂಗಳೂರು : ತಡರಾತ್ರಿ ಕುಡಿದು ವಾಹನ ಚಲಾಯಿಸಿ ಸರಣಿ ಅಪಘಾತಕ್ಕೆ ಕಾರಣರಾಗಿದ್ದ ನಟ ಮಯೂರ್ ಪಟೇಲ್ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಕಾರನ್ನು ವಶಕ್ಕೆ ಪಡೆಯಲಾಗಿದೆ. ನಿನ್ನೆ ತಡರಾತ್ರಿ ನಟ ಮಯೂರ್ ಪಟೇಲ್ ಕುಡಿದು ತಮ್ಮ ಫಾರ್ಚೂರನರ್ ಕಾರನ್ನು ವೇಗವಾಗಿ ಚಲಾಯಿಸಿ ರಸ್ತೆ ಬದಿಯಲ್ಲಿ ನಿಂತಿದ್ದ ಕಾರುಗಳಿಗೆ ಡಿಕ್ಕಿ ಹೊಡೆದ್ದಾರೆ. ಈ ಸಂಬಂಧ ಮಯೂರ್ ಪಟೇಲ್ ಮೇಲೆ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ದೊಮ್ಮಲೂರು ಬಳಿಯ ಕಮಾಂಡೋ ಆಸ್ಪತ್ರೆ ಬಳಿ ಈ ಸರಣಿ ಅಪಘಾತ ನಡೆದಿದೆ. ಮಯೂರ್ ಪಟೇಲ್ ವಿಪರೀತ…

Read More

ನೆಲ್ಲಿಕಾರು: ಕಾರು–ಗೂಡ್ಸ್ ಟೆಂಪೋ ಮುಖಾಮುಖಿ ಢಿಕ್ಕಿ, ಮೂವರಿಗೆ ಗಾಯ

ಉಡುಪಿ: ನೆಲ್ಲಿಕಾರು-ಕಾರ್ಕಳ ಮುಖ್ಯ ರಸ್ತೆಯಲ್ಲಿ ಹೊಸ್ಮಾರು ಕಡೆಗೆ ಸಾಗುತ್ತಿದ್ದ ಗೂಡ್ಸ್ ಟೆಂಪೋ ಮತ್ತು ಎದುರಿನಿಂದ ಬರುತ್ತಿದ್ದ ಕಾರು ಮುಖಾಮುಖಿ ಢಿಕ್ಕಿ ಹೊಡೆದು ಮೂವರು ಗಾಯಗೊಂಡಿದ್ದಾರೆ. ಟೆಂಪೋ ಚಾಲಕ ಕೃಷ್ಣರಾಜ್, ಕಾರು ಚಾಲಕ ಲಲಿತೇಶ್ ಗೌಡ ಹಾಗೂ ಬಾಲಕ ಪ್ರವೀಣ್ ಗಾಯಗೊಂಡವರು. ಕಾರು ಹಾಗೂ ಟೆಂಪೋ ಎರಡೂ ಜಖಂಗೊಂಡಿವೆ. ಗೂಡ್ಸ್ ಟೆಂಪೋದಲ್ಲಿ ಕಾರ್ಕಳ ಕಡೆಯಿಂದ ಮನೆ ಖಾಲಿ ಮಾಡಿ ಸಾಮಗ್ರಿಗಳನ್ನು ಸ್ಥಳಾಂತರಿಸಲು ತೆರಳುತ್ತಿದ್ದ ಕುಟುಂಬ ಪ್ರಯಾಣಿಸುತ್ತಿತ್ತು. ಗಾಯಾಳುಗಳನ್ನು ಉಡುಪಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Read More

ಸುಮಂತ್ ಸಾವು: ಗೃಹಸಚಿವರಿಗೆ ಹರೀಶ್ ಪೂಂಜಾ ಮನವಿ

ಬೆಳ್ತಂಗಡಿ – ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣದ ಬಗ್ಗೆ ಕೂಲಂಕುಷ ತನಿಖೆಗೆ ಶಾಸಕ ಹರೀಶ್ ಪೂಂಜಾ ಅವರು ಗೃಹಸಚಿವರಿಗೆ ಮನವಿ ಮಾಡಿದ್ದಾರೆ. ಧನುರ್ಮಾಸದ ಕೊನೆಯ ಪೂಜೆಗೆಂದು ಹೋಗಿದ್ದ ಬಾಲಕ ಸುಮಂತ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ಪ್ರಕರಣದ ಕೂಲಂಕುಷವಾಗಿ ತನಿಖೆ ಮಾಡುವಂತೆ ಶಾಸಕ ಹರೀಶ್ ಪೂಂಜಾ ಅವರು ಗೃಹ ಸಚಿವ ಪರಮೇಶ್ವರ್ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ. ಜನವರಿ 14 ರಂದು ಧನುರ್ಮಾಸ ಹಿನ್ನೆಲೆ ದೇಗುಲಕ್ಕೆಂದು ಮುಜಾನೆಯೇ ಮನೆಯಿಂದ ಹೊರಟಿದ್ದ ಸುಮುಂತ್ ನಿಗೂಢವಾಗಿ ನಾಪತ್ತೆಯಾಗಿದ್ದ, ಬಳಿಕ ಮನೆ…

Read More

ಮಂಗಳೂರು ನಗರದಲ್ಲಿ ಒಳಚರಂಡಿ ಸಮಸ್ಯೆ ಗಂಭೀರ – ಡಿಸಿ ಫೋನ್ ಇನ್‌ನಲ್ಲಿ ಬಹಿರಂಗ

ಮಂಗಳೂರು :ಮಳೆನೀರು ಚರಂಡಿಗೆ ಕೊಳಚೆ ನೀರು ಸೇರುವ ಬಗ್ಗೆ, ನಗರದ ಒಳಚರಂಡಿ ಅವ್ಯವಸ್ಥೆ ಬಗ್ಗೆ ಸರಣಿ ದೂರುಗಳು ಬುಧವಾರ ನಡೆದ ಮಂಗಳೂರಿನಲ್ಲಿ‌ ನಡೆದ ಜಿಲ್ಲಾಧಿಕಾರಿ ಫೋನ್ ಇನ್ ಕಾರ್ಯಕ್ರಮದಲ್ಲಿ‌‌ ಪ್ರಮುಖವಾಗಿ ಕೇಳಿ ಬಂದವು. ಜಿಲ್ಲಾಧಿಕಾರಿ ಅಧ್ಯಕ್ಷತೆಯ ೧ ಗಂಟೆಯ ಫೋನ್ ಇನ್ ಕಾರ್ಯಕ್ರಮದಲ್ಲಿ ಮಳೆ ನೀರು ಚರಂಡಿಯಲ್ಲಿ ಫ್ಲಾಟ್, ಅಪಾರ್ಟ್ಮೆಂಟ್‌ಗಳ ಕೊಳಚೆ ನೀರು (ಒಳಚರಂಡಿ) ಹರಿದು ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಬಗ್ಗೆ ಹಲವು ದೂರುಗಳು ಸಲ್ಲಿಕೆಯಾಗಿವೆ.ಪಾಲಿಕೆಯ ಆಡಳಿತಾಧಿಕಾರಿಯೂ ಆಗಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅಧ್ಯಕ್ಷತೆಯಲ್ಲಿ ಬುಧವಾರ…

Read More

ಬಜೆಟ್ ನಲ್ಲಿ ಮಂಗಳೂರು ದಸರಾಗೆ 5 ಕೋಟಿ :- ಮುಖ್ಯಮಂತ್ರಿಗಳಿಗೆ ಶಾಸಕ ಕಾಮತ್ ಮನವಿ

ಮಂಗಳೂರು ದಸರಾ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಸಂಕೇತವಾಗಿದ್ದು ಪ್ರತೀ ವರ್ಷ ದೇಶ-ವಿದೇಶಗಳ ಲಕ್ಷಾಂತರ ಭಕ್ತರನ್ನು ಆಕರ್ಷಿಸುತ್ತಿದ್ದು ಇಂತಹ ವೈಭವದ ಹಬ್ಬಕ್ಕೆ ರಾಜ್ಯ ಸರ್ಕಾರವು ಈ ಬಾರಿಯ 2026-27 ನೇ ಸಾಲಿನ ಬಜೆಟ್ ನಲ್ಲಿ ರೂ.5 ಕೋಟಿ ಅನುದಾನ ಘೋಷಣೆ ಮಾಡುವಂತೆ ಶಾಸಕ ಡಿ.ವೇದವ್ಯಾಸ ಕಾಮತ್ ರವರು ಮುಖ್ಯಮಂತ್ರಿ ಸಿದ್ದರಾಮಯ್ಯ ನವರನ್ನು ಭೇಟಿ ಮಾಡಿ ಮನವಿ ಮಾಡಿದರು. ಮೈಸೂರು ನಂತರ ರಾಜ್ಯದಲ್ಲೇ ಅತೀ ಹೆಚ್ಚು ಜನ ಸೇರುವ ಹಬ್ಬ ಮಂಗಳೂರು ದಸರಾ. ನವರಾತ್ರಿಯ ಸಂದರ್ಭದಲ್ಲಿ ಇಲ್ಲಿನ ಪ್ರಸಿದ್ಧ…

Read More

ಮಾಣೂರು: ಫೆ. 2ರಿಂದ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಮಂಗಳೂರು: ನೀರುಮಾರ್ಗ ಗ್ರಾಮದ ಮಾಣೂರು ಶ್ರೀ ಸುಬ್ರಾಯ ದೇವಸ್ಥಾನದ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ ಫೆ.2ರಿಂದ ಫೆ.11ರವರೆಗೆ ಸಡಗರ ಸಂಭ್ರಮದಿಂದ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ಮಾಣೂರು ಕ್ಷೇತ್ರದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿ ಯಲ್ಲಿ ಅವರು ಮಾತನಾಡಿ, ಫೆ.2ರಂದು ಬೆಳಗ್ಗೆ 8.00ಕ್ಕೆ ಆಚಾರ್ಯರ ಸ್ವಾಗತ, ಸಾಮೂಹಿಕ ಪ್ರಾರ್ಥನೆ, ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಹಾಗೂ ನಾನಾ ಧಾರ್ಮಿಕ ಕಾರ್ಯಕ್ರಮ. ರಾತ್ರಿ 7.00ರಿಂದ : ಸ್ಥಳಿಯ ಪ್ರತಿಭೆಗಳಿಂದ ಹಾಗೂ ನಾನಾ ಸಂಘ ಸಂಸ್ಥೆಗಳಿಂದ ಸಾಂಸ್ಕೃತಿಕ…

Read More

ವೆನ್ ಲಾಕ್ ಆಸ್ಪತ್ರೆ ನೂತನ OPD ಬ್ಲಾಕ್ ಕಟ್ಟಡ ನಿರ್ಮಾಣ ಸದ್ಯದಲ್ಲಿಯೇ ಪ್ರಾರಂಭ: ದಿನೇಶ್ ಗುಂಡೂರಾವ್

ಬಡ ಮಧ್ಯಮ ವರ್ಗದ ಜನರಿಗೆ ಅನುಕೂಲ ಆಗಬೇಕೆಂಬ ನೆಲೆಯಲ್ಲಿ ವೆನ್ಲಾಕ್ ಆಸ್ಪತ್ರೆಯನ್ನು 70 ಕೋಟಿ ರೂಗಳ ವೆಚ್ಚದಲ್ಲಿ ಎರಡು ಹಂತದಲ್ಲಿ ವಿಸ್ತರಿಸಲಾಗುವುದು. ಮೊದಲನೇ ಹಂತದಲ್ಲಿ 35 ಕೋಟಿ ವೆಚ್ಚದಲ್ಲಿ ನೂತನ ಎರಡು ಅಂತಸ್ತಿನ OPD ವಿಭಾಗವನ್ನು ನಿರ್ಮಾಣ ಮಾಡಲು ಸದ್ಯದಲ್ಲಿಯೇ ಟೆಂಡರ್ ಗೆ ಆಹ್ವಾನ ನೀಡಲಾಗುವುದು. ಈ ಕಟ್ಟಡದಲ್ಲಿ ಸೌರವಿದ್ಯುತ್ ಘಟಕವೂ ಇರಲಿದ್ದು, ಸಿಸಿ ಟಿವಿ ಅಳವಡಿಸಲಾಗುವುದು. ವೆನ್ಲಾಕ್ ಆಸ್ಪತ್ರೆಯನ್ನು ಒಂದು ರೀತಿಯ ಮಾದರಿ ಆಸ್ಪತ್ರೆಯಾಗಿ ನಿರ್ಮಾಣ ಮಾಡುವುದು ಆರೋಗ್ಯ ಇಲಾಖೆಯ ಗುರಿಯಾಗಿದ್ದು, ಎಲ್ಲ ರೀತಿಯ ಸೌಲಭ್ಯ…

Read More

ಮಾದಕ ವ್ಯಸನದ ವಿರುದ್ಧ ವಿದ್ಯಾರ್ಥಿಗಳ ಜನಜಾಗೃತಿ

ದಕ್ಷಿಣ ಕನ್ನಡ ಬಸ್ಸು ಮಾಲಕರ ಸಂಘ (ರಿ.) ಮಂಗಳೂರು, ಮಂಗಳೂರು ನಗರ ಪೊಲೀಸ್ ಹಾಗೂ ರೋಶಿನಿ ನಿಲಯ ವಿದ್ಯಾಸಂಸ್ಥೆ ಮಂಗಳೂರು ಇದರ ಸಹಯೋಗದಲ್ಲಿ ಮಾದಕ ದ್ರವ್ಯ ವ್ಯಸನಗಳ ವಿರುದ್ಧ ಜನ ಜಾಗೃತಿ ಕಾರ್ಯಕ್ರಮವು ಮಂಗಳೂರಿನ ಕೇಂದ್ರ ಬಸ್ಸು ನಿಲ್ದಾಣ ಸ್ಟೇಟ್ ಬ್ಯಾಂಕ್ ಬಳಿ ನಡೆಯಿತು. ರೋಶನಿ ನಿಲಯ ವಿದ್ಯಾಸಂಸ್ಥೆಯ ಅಪರಾಧ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಸಾರಿಕ್ ಅಂಕಿತ ಹಾಗೂ ಅವರ ವಿದ್ಯಾರ್ಥಿಗಳಿಂದ ‘ಜನ ಜಾಗೃತಿ’ ಬೀದಿ ನಾಟಕ ಕಾರ್ಯಕ್ರಮ ನಡೀತು.

Read More
error: Content is protected !!