ಆಸನವೇ ಇಲ್ಲದ ಮಂಗಳೂರು ಸ್ಟೇಟ್ ಬ್ಯಾಂಕ್ ನ ಬಸ್ಸ್ ನಿಲ್ದಾಣ.ಸಂಕಷ್ಟದಲ್ಲಿ ಪ್ರಯಾಣಿಕರು

ಮಂಗಳೂರು :ಬಸ್ಸ್ ಸ್ಟಾಂಡ್ ಅಂದ ಕೂಡಲೇ ಅಲ್ಲಿ ಆಸನದ ವ್ಯವಸ್ಥೆ ಮುಖ್ಯವಾಗಿ ಬೇಕಾಗುತ್ತೆ . ಆದರೆ ಕುಳಿತುಕೊಳ್ಳಲು ಆಸದ ವ್ಯವಸ್ಥೆಯೇ ಇಲ್ಲದಿದ್ರೆ ಪ್ರಯಾಣಿಕರಿಗೆ ಸಲ್ಪ ಕಷ್ಟವೇ ಅಂತ ಹೇಳಬಹುದು . ಆಸನವೇ ಇಲ್ಲದ ಒಂದು ಬಸ್ಸ್ ನಿಲ್ದಾಣ ಇರುವುದು ನಗರದ ಹೃದಯ ಭಾಗವೆಂದು ಕರೆಸಿಕೊಳ್ಳುವ ಸ್ಟೇಟ್ ಬ್ಯಾಂಕ್ ನ ಬಸ್ಸ್ ನಿಲ್ದಾಣದಲ್ಲಿ . ದಿನವೊಂದಕ್ಕೆ ಸಾಕಷ್ಟು ಬಸ್ಸುಗಳು ಓಡಾಟ ನಡೆಸುವ ಈ ನಿಲ್ದಾಣದಲ್ಲಿ ಇನ್ನು ಕೂಡ ಆಸನದ ವ್ಯವಸ್ಥೆ ಇಲ್ಲದಿರುವುದು ವಿಪರ್ಯಾಸವೇ ಆಗಿದೆ .ಅಧಿಕ ಸಂಖ್ಯೆಯ ಪ್ಲಾಟ್ಫಾರ್ಮ್…

Read More

ರಾಜ್ಯದಲ್ಲಿ ವಿಐಪಿ ಸಂಚಾರದ ವೇಳೆ ಸೈರನ್ ಬಳಕೆಗೆ ಕಡಿವಾಣ

ಬೆಂಗಳೂರು : ರಾಜ್ಯದಲ್ಲಿ ವಿಐಪಿ ಸಂಚಾರದ ವೇಳೆ ಸೈರನ್ ಬಳಕೆಗೆ ಕಡಿವಾಣ ಹಾಕುವ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.ಸೈರನ್ಗಳನ್ನು ಕೇವಲ ತುರ್ತು ಸೇವಾ ವಾಹನಗಳಾದ ಅಂಬ್ಯುಲೆನ್ಸ್, ಪೊಲೀಸ್ ವಾಹನಗಳು ಮತ್ತು ಅಗ್ನಿಶಾಮಕ ವಾಹನಗಳು ಅನಿವಾರ್ಯ ಪರಿಸ್ಥಿತಿಗಳಲ್ಲಿ ಮಾತ್ರ ಬಳಸಬೇಕು. ಈ ಅದೇಶವನ್ನು ಘಟಕಾಧಿಕಾರಿಗಳು ಸಂಪೂರ್ಣವಾಗಿ ಪಾಲಿಸುವಂತೆ ತಮ್ಮ ಅಧೀನದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಸೂಚಿಸುವುದು ಎಂದು ಸೂಚನೆ ನೀಡಲಾಗಿದೆ. ಗಣ್ಯ ವ್ಯಕ್ತಿಗಳ ಸಂಚರಣೆ ಸಮಯದಲ್ಲಿ ಅನವಶ್ಯಕವಾಗಿ ಸೈರನ್ ಬಳಕೆ ಮಾಡುವುದರಿಂದ ಗಣ್ಯ ವ್ಯಕ್ತಿಗಳು ಯಾವ ರಸ್ತೆಯಲ್ಲಿ ಚಲಿಸುತ್ತಿದ್ದಾರೆ…

Read More

ಬಿಹಾರ ಮೂಲದ ವ್ಯಕ್ತಿಗೆ 10 ಕೋಟಿ ವಂಚಿಸಿದ ರೋಶನ್ ಸಲ್ದಾನಾ – ಪ್ರಕರಣ ಸಿಐಡಿಗೆ

ದೇಶದ ವಿವಿದೆಡೆ ನೂರಾರು ಜನರಿಗೆ ಸಾಲಕೊಡಿಸುವ ನೆಪದಲ್ಲಿ ಕೊಟ್ಯಾಂತರ ರೂಪಾಯಿ ವಂಚಿಸಿ ಮಂಗಳೂರಿನಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದ ರೋಶನ್ ಸಲ್ದಾನಾ ವಂಚನೆ ಪ್ರಕರಣದಲ್ಲಿ ಒಂದು ಪ್ರಕರಣವನ್ನು ಇದೀಗ ಸಿಐಡಿ ತನಿಖೆ ನಡೆಸಲಿದೆ.ದೇಶಾದ್ಯಂತ ಉದ್ಯಮಿಗಳನ್ನು ಗುರಿಯಾಗಿಸಿ ಮೋಸದ ಜಾಲದಲ್ಲಿ ಸಿಲುಕಿಸುತ್ತಿದ್ದ ರೋಶನ್ ಸಲ್ಮಾನ ವಿರುದ್ಧ ಬಿಹಾರ ಮೂಲದ ಉದ್ಯಮಿಯೊಬ್ಬರು ಮಂಗಳೂರಿನಲ್ಲಿ ಕೇಸು ದಾಖಲಿಸಿದ್ದಾರೆ. ತನಗೆ ಹತ್ತು ಕೋಟಿಗೂ ಮಿಕ್ಕಿ ಮೋಸ ಮಾಡಿದ್ದಾಗಿ ದೂರು ನೀಡಿದ್ದಾರೆ. ಹತ್ತು ಕೋಟಿಯಷ್ಟು ಮೊತ್ತದ ವಂಚನೆ ಪ್ರಕರಣ ದಾಖಲಾದರೆ, ಸಿಐಡಿಗೆ ಕೊಡಬೇಕೆಂಬ ಕಾನೂನಿನಂತೆ ಸದ್ರಿ…

Read More

‘ಭಾರತೀಯ ರೆಡ್ ಕ್ರಾಸ್ ಸೊಸೈಟಿ ಶತಮಾನೋತ್ಸವ ಕಟ್ಟಡ’ದ ಉಧ್ಘಾಟನೆ: ಜು.26ರಂದು

ಮಂಗಳೂರು :ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಮಂಗಳೂರು ನಗರದ ಹಳೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸುಮಾರು 6 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ‘ಭಾರತೀಯ ರೆಡ್ ಕ್ರಾಸ್ ಸೊಸೈಟಿ ಶತಮಾನೋತ್ಸವ ಕಟ್ಟಡ’ದ ಉದ್ಘಾಟನಾ ಸಮಾರಂಭ ಜು.26ರಂದು ಮಧ್ಯಾಹ್ನ 12ಕ್ಕೆ ನಡೆಯಲಿದೆ ಎಂದು ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ತಿಳಿಸಿದರು . ಅವರು ಮಂಗಳೂರಿನ ಪಾಂಡೇಶ್ವರದಲ್ಲಿರುವ ರೆಡ್ ಕ್ರಾಸ್ ಪ್ರೇರಣ ಹಾಲ್‌ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, . ಕರ್ನಾಟಕದ…

Read More

ಜನಾರ್ದನ ಚೆಂಡ್ತಿಮಾರ್ ನಿಧನಕ್ಕೆ ಜಿಲ್ಲಾ ಕಾಂಗ್ರೆಸ್ ಸಂತಾಪ

ಮಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ಮುಂದಾಳು, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಬಂಟ್ವಾಳ ಪುರಸಭೆ ಸದಸ್ಯ ಜನಾರ್ದನ ಚೆಂಡ್ತಿಮಾರ್ ಅವರ ನಿಧನಕ್ಕೆ ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ತೀವ್ರ ಸಂತಾಪ ಸೂಚಿಸಿದೆ. ಜನಾರ್ದನ ಚೆಂಡ್ತಿಮಾರ್ ಅವರ ನಿಧನದಿಂದ ಜಿಲ್ಲಾ ಕಾಂಗ್ರೆಸ್ ಆಘಾತಕ್ಕೊಳಗಾಗಿದೆ. ಅವರ ದೂರದರ್ಶಿತ್ವ, ಶಿಸ್ತುಬದ್ಧ ಜೀವನ, ಸಜ್ಜನಿಕೆಯ ನಡವಳಿಕೆ ಮತ್ತು ಅಧ್ಯಯನಶೀಲ ಪ್ರವೃತ್ತಿ ಉದಯೋನ್ಮುಖ ರಾಜಕಾರಣಿಗಳಿಗೆ ಮಾದರಿಯಾಗಿದ್ದರು. ಜನಪರ, ಜೀವಪರ ಚಳವಳಿಗಳಲ್ಲಿ ಭಾಗಿಯಾಗುತ್ತಾ ಜನಸಾಮಾನ್ಯರ ಧ್ವನಿಯಾಗಿದ್ದರು. ರಾಜಕೀಯದ ಜೊತೆಗೆ ಸಾಮಾಜಿಕ ಸೇವೆಯೂ ಅನುಪಮವಾದುದು. ಭ್ರಷ್ಟಾಚಾರ ರಹಿತ ನಾಯಕರಾಗಿದ್ದ…

Read More

ಮಂಗಳೂರು : ಮಣ್ಣಗುಡ್ಡೆ ಅಂಗನವಾಡಿ ಕೇಂದ್ರದ ಕೊಠಡಿಯ ನಿರ್ಮಾಣಕ್ಕೆಶಾಸಕ ವೇದವ್ಯಾಸ ಕಾಮತ್ ಶಿಲಾನ್ಯಾಸ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 28ನೇ ಮಣ್ಣಗುಡ್ಡ ವಾರ್ಡಿನ ಗಾಂಧಿನಗರದ ದ.ಕ.ಜಿ.ಪಂ.ಹಿ.ಪ್ರಾ. ಶಾಲೆಯ ಆವರಣದಲ್ಲಿ ಅಂಗನವಾಡಿ ಕೇಂದ್ರದ ಕೊಠಡಿಯ ಶಿಲನ್ಯಾಸವು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಡೆಯಿತು. ಈ ವೇಳೆ ಮಾತನಾಡಿದ ಶಾಸಕರು, ಸತತ ಪ್ರಯತ್ನದ ಫಲವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೂಲಕ 20 ಲಕ್ಷ ರೂ ವಿಶೇಷ ಅನುದಾನದಲ್ಲಿ ಮಂಗಳೂರು ನಗರ ದಕ್ಷಿಣಕ್ಕೆ ಗಾಂಧಿನಗರ ಹಾಗೂ ಕಸಬಾ ಬೆಂಗ್ರೆಯಲ್ಲಿ ಎರಡು ಅಂಗನವಾಡಿ ಕೊಠಡಿಗಳಿಗೆ ಮಂಜೂರಾತಿ ದೊರೆತಿದೆ. ಶೀಘ್ರದಲ್ಲಿಯೇ ಕಸಬಾ ಬೆಂಗ್ರೆಯಲ್ಲೂ ಶಿಲನ್ಯಾಸ…

Read More

ಮುಡಾ ಪ್ರಕರಣ: ಸಿ ಎಂ ಸಿದ್ದರಾಮಯ್ಯ ಪತ್ನಿಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂ ಕೋರ್ಟ್

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ- ಮುಡಾ ಅಕ್ರಮ ನಿವೇಶನ ಹಂಚಿಕೆ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ವಿರುದ್ಧ ಆರಂಭಿಸಲಾದ ಹಣ ವರ್ಗಾವಣೆ ಪ್ರಕರಣವನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ಧ ಜಾರಿ ನಿರ್ದೇಶನಾಲಯದ ಅರ್ಜಿ ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಅಕ್ರಮವಾಗಿ ನಿವೇಶನಗಳನ್ನು ಪಡೆದ ಆರೋಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ನೀಡಿದ್ದ ಸಮನ್ಸ್​ ಅನ್ನು…

Read More

ಡಾ. ಬಾಲಕೃಷ್ಣ ಎಸ್ ಮದ್ದೋಡಿ ಅವರಿಗೆ ಪ್ರತಿಷ್ಠಿತ ರಾಷ್ಟ್ರ ಕವಿ ಗೋವಿಂದ ಪೈ ರಾಷ್ಟ್ರೀಯ ಪ್ರಶಸ್ತಿ

ಮಣಿಪಾಲ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MIT), ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE) ನಲ್ಲಿ ಸಿವಿಲ್ ಎಂಜಿನಿಯರಿಂಗ್ ವಿಭಾಗದಲ್ಲಿ ಗೌರವಾನ್ವಿತ ಅಸೋಸಿಯೇಟ್ ಪ್ರೊಫೆಸರ್ ಆಗಿರುವ ಡಾ. ಬಾಲಕೃಷ್ಣ ಎಸ್ ಮದ್ದೋಡಿ ಅವರಿಗೆ ಪ್ರತಿಷ್ಠಿತ ರಾಷ್ಟ್ರ ಕವಿ ಗೋವಿಂದ ಪೈ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಈ ಮನ್ನಣೆಯು ಪರಿಸರ ಉಸ್ತುವಾರಿ, ಶೈಕ್ಷಣಿಕ ಶ್ರೇಷ್ಠತೆ ಮತ್ತು ಸಾಮಾಜಿಕ ಸೇವೆಗೆ, ವಿಶೇಷವಾಗಿ ಆರೋಗ್ಯ ಕ್ಷೇತ್ರದಲ್ಲಿ ಅವರ ಅವಿಶ್ರಾಂತ ಸಮರ್ಪಣೆಗೆ ಸಾಕ್ಷಿಯಾಗಿದೆ. MIT ಯಲ್ಲಿ ಪ್ರೊಫೆಸರ್ಆಗಿ NSS ಕಾರ್ಯಕ್ರಮ ಅಧಿಕಾರಿಯಾಗಿ,…

Read More

ಮಳೆಯಿಂದಾಗಿ ಹಲವೆಡೆ ಅನಾಹುತ-ತೀವ್ರ ಹಾನಿಯಾದ ಸ್ಥಳಕ್ಕೆ ಶಾಸಕ ವೇದವ್ಯಾಸ ಕಾಮತ್ ಭೇಟಿ

ಮಂಗಳೂರು ನಗರದಲ್ಲಿ ಎಡೆ ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ಅನಾಹುತಗಳು ಸಂಭವಿಸಿದ್ದು ಮಂಗಳೂರು ನಗರ ದಕ್ಷಿಣ ಕ್ಷೇತ್ರ ವ್ಯಾಪ್ತಿಯ ಪಾಂಡೇಶ್ವರದ ಪೋರ್ಟ್ ವಾರ್ಡ್ ಸಂಖ್ಯೆ 45 ರಲ್ಲಿ ಮನೆಯೊಂದಕ್ಕೆ ತೀವ್ರ ಹಾನಿಯಾದ ಸ್ಥಳಕ್ಕೆ ಶಾಸಕ ವೇದವ್ಯಾಸ ಕಾಮತ್ ರವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸತತ ಮಳೆಯಿಂದಾಗಿ ಸೇಸಪ್ಪ ಎಂಬುವವರ ಮನೆಗೆ ತೀವ್ರ ಹಾನಿಯುಂಟಾಗಿದೆ. ಗೋಡೆಗಳು ಸಂಪೂರ್ಣ ಜರಿದಿದ್ದರೂ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಕೂಡಲೇ ಈ ಮನೆಯವರಿಗೆ ಗರಿಷ್ಠ ಮಟ್ಟದ ಪರಿಹಾರ ದೊರಕಿಸಿಕೊಡುವ ನಿಟ್ಟಿನಲ್ಲಿ ಯಾವುದೇ…

Read More

ಕರ್ನಾಟಕ: ಮುಂಗಾರು ಅಧಿವೇಶನ ಆಗಸ್ಟ್ 11 ರಿಂದ-ಧರ್ಮಸ್ಥಳದ ಸಮಗ್ರ ತನಿಖೆಗೆ ಸರಕಾರ ಸಂಪೂರ್ಣ ಸಹಕಾರ ನೀಡುತ್ತದೆ -ಸಭಾಧ್ಯಕ್ಷರಾದ ಯು ಟಿ ಖಾದರ್

ಕರ್ನಾಟಕದಲ್ಲಿ ಮುಂಗಾರು ಅಧಿವೇಶನ ಆಗಸ್ಟ್ 11 ರಿಂದ 20 ರ ತನಕ ನಡೆಯಲಿದೆ ಎಂದು ನಗರದ ಸರ್ಕ್ಯೂಟ್ ಹೌಸ್ ನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಸಭಾಧ್ಯಕ್ಷರಾದ ಯು ಟಿ ಖಾದರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಬಜೆಟ್ ನಲ್ಲಿ ಘೋಷಣೆ ಆದಂತೆ ಉಳ್ಳಾಲ ಗ್ರಾಮಾಂತರ ಭಾಗದಲ್ಲಿ ಬಾಲಕಿಯರಿಗೆ ಶಿಕ್ಷಣ ಸಂಸ್ಥೆಯನ್ನು ತೆರೆಯಲಾಗುವುದು. ವಸತಿ ಶಾಲಾ ಕಾಲೇಜು ಇದಾಗಿದ್ದು ಈ ಶಿಕ್ಷಣ ಸಂಸ್ಥೆಯನ್ನು ಕೊಣಾಜೆ ಅಥವಾ ಫಜೀರು ಭಾಗದಲ್ಲಿ ನಿರ್ಮಾಣ ಮಾಡುವ ಸಾಧ್ಯತೆ ಇದೆ. ಬಜೆಟ್ ನಲ್ಲಿ…

Read More
error: Content is protected !!