ಉಡುಪಿ ವಲಯ ಮಟ್ಟದ ಕ್ರೈಸ್ತ ಐಕ್ಯತಾ ಸಪ್ತಾಹದ ಪ್ರಾರ್ಥನಾ ಸಭೆ

ಉಡುಪಿ: ನಮ್ಮ ವೈಯುಕ್ತಿಕ ಸಿದ್ದಾಂತಗಳನ್ನು ಬದಿಗಿರಿಸಿ ಪ್ರತಿಯೊಬ್ಬ ವ್ಯಕ್ತಿ ನಮ್ಮವರು ಎಂಬ ಭಾವನೆಯಲ್ಲಿ ಕಂಡಾಗ ದೇಶದಲ್ಲಿ ಐಕ್ಯತೆಯನ್ನು ಕಾಣಲು ಸಾಧ್ಯ ಎಂದು ತೀರ್ಥಹಳ್ಳಿ ಚರ್ಚಿನ ಧರ್ಮಗುರು ವಂ|ವಿರೇಶ್ ಮೋರಾಸ್ ಅಭಿಪ್ರಾಯಪಟ್ಟರು.ಅವರು ಸೋಮವಾರ ಸಂಜೆ ಉಡುಪಿ ವಲಯ ಮಟ್ಟದ ಕ್ರೈಸ್ತ ಐಕ್ಯತಾ ಸಪ್ತಾಹದ ಪ್ರಾರ್ಥನಾ ಸಭೆಯಲ್ಲಿ ಭಾಗವಹಿಸಿ ಸಂದೇಶ ನೀಡಿದರು.ಭಾರತ ದೇಶ ಸರ್ವ ಜನಾಂಗದ ಶಾಂತಿಯ ತೋಟ ಎಂದು ಕವಿಗಳು ಹಾಡಿ ಹೊಗಳಿದ್ದು ಅದರಂತೆ ಬಾಳಲು ಪ್ರತಿಯೊಬ್ಬರು ಒಗ್ಗಟ್ಟಿನಿಂದ ಬದುಕಿದಾಗ ಮಾತ್ರ ಸಾಧ್ಯವಾಗುತ್ತದೆ. ವಿವಿಧ ಕ್ರೈಸ್ತ ಸಭೆಗಳು ಒಂದಾಗಿ…

Read More

ಉಡುಪಿ: ಪ್ರೌಢಶಾಲಾ ವಿದ್ಯಾರ್ಥಿನಿ ನೇಣಿಗೆ ಶರಣು

ಉಡುಪಿ: ವಿದ್ಯಾರ್ಥಿನಿಯೊಬ್ಬಳು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೀಡಿನಗುಡ್ಡೆಯಲ್ಲಿ ನಡೆದಿದೆ.ಮೃತ ಬಾಲಕಿಯನ್ನು ಬರ್ಮವ್ವ (15) ಎಂದು ಗುರುತಿಸಲಾಗಿದೆ. ಈಕೆ ಬೋರ್ಡ್ ಹೈಸ್ಕೂಲಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಹೆತ್ತವರೊಂದಿಗೆ ಗೀತಾ ಶೆಟ್ಟಿ ಎಂಬವರ ನಿವೇಶನದಲ್ಲಿದ್ದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಳು. ಮನೆ ಮಂದಿ ಬೆಳಿಗ್ಗೆ ಕೆಲಸಕ್ಕೆ ಹೋದ ಸಂದರ್ಭದಲ್ಲಿ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ‌. ನಗರ ಪೋಲಿಸ್ ಠಾಣೆಯ ಎಸ್ ಐ, ಗಂಗಪ್ಪ,‌ಮುಖ್ಯ ಆರಕ್ಷಕಿಯರಾದ ಆಶಾ ಲತಾ, ಜಾಸ್ವ ಘಟನಾ ಸ್ಥಳದಲ್ಲಿದ್ದು ಕಾನೂನು ಪ್ರಕ್ರಿಯೆ ನಡೆಸಿದ್ದಾರೆ. ಸಮಾಜಸೇವಕ ನಿತ್ಯಾನಂದ‌ ಒಳಕಾಡುವರು ಮೃತ…

Read More

ಕೊಂಕಣಿ ಲೇಖಕ್ ಸಂಘ್ ಸಾಹಿತ್ಯ ಪ್ರಶಸ್ತಿಗೆ ಖ್ಯಾತ ಕೊಂಕಣಿ ಲೇಖಕ ಪೆಟ್ರಿಕ್ ಕಾಮಿಲ್ ಮೊರಾಸ್ ಆಯ್ಕೆ …. !

ಮಂಗಳೂರು:ಕೊಂಕಣಿ ಲೇಖಕ್ ಸಂಘ್ ಕರ್ನಾಟಕ, ಕೊಂಕಣಿ ಭಾಷೆ ಮತ್ತು ಸಾಹಿತ್ಯವನ್ನು ಉತ್ತೇಜಿಸಲು ಹುಟ್ಟಿಕೊಂಡ ಸಂಘಟನೆಯಾಗಿದ್ದು ವಿವಿಧ ಸಾಹಿತ್ಯ ಕಾರ್ಯಕ್ರಮ, ಪ್ರಶಸ್ತಿ ಪ್ರಧಾನ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದೆ . 2026ನೇ ಸಾಲಿನ ಕೊಂಕಣಿ ಲೇಖಕ್ ಸಂಘ್ ಸಾಹಿತ್ಯ ಪ್ರಶಸ್ತಿಗೆ ಖ್ಯಾತ ಕೊಂಕಣಿ ಲೇಖಕ ಪೆಟ್ರಿಕ್ ಕಾಮಿಲ್ ಮೊರಾಸ್ ಇವರನ್ನು ಆಯ್ಕೆ ಮಾಡಲಾಗಿದ್ದು ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ನಗರದ ಬಜ್ಜೋಡಿಯ ಸಂದೇಶ ಪ್ರತಿಷ್ಠಾನದಲ್ಲಿ ಫೆಬ್ರವರಿ 07 ಸಂಜೆ 6.30 ಕ್ಕೆ ನಡೆಯಲಿದೆ ಎಂದು ಸಮಿತಿಯ ಸಂಚಾಲಕರಾದ ರಿಚರ್ಡ್ ಮೊರಾಸ್ ತಿಳಿಸಿದರು…

Read More

ಮುಲ್ಕಿ ಜೋಡಿಕೊಲೆ ಪ್ರಕರಣ: ಆರೋಪಿ ಅಲ್ಫೋನ್ಸ್ ಸಲ್ದಾನಗೆ ಜೀವಾವಧಿ ಶಿಕ್ಷೆ, 2 ಲಕ್ಷ ರೂ. ದಂಡ

ಮಂಗಳೂರು:ಮುಲ್ಕಿ ಜೋಡಿಕೊಲೆ ಪ್ರಕರಣದಲ್ಲಿ ಆರೋಪಿ ಅಲ್ಫೋನ್ಸ್ ಸಲ್ದಾನಗೆ ಜೀವಾವಧಿ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.ಮುಲ್ಕಿ ತಾಲೂಕಿನ ಏಳಿಂಜೆ ಗ್ರಾಮದ ಮುತ್ತಯ್ಯಕೆರೆ ಎಂಬಲ್ಲಿ ನಡೆದ ಜೋಡಿಕೊಲೆ ಪ್ರಕರಣದ ಆರೋಪಿ ಅಲ್ಲೋನ್ಸ್ ಸಲ್ದಾನ ಎಂಬಾತನಿಗೆ 2ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ಜೀವಾವಧಿ ಶಿಕ್ಷೆ ವಿಧಿಸಿ ಸೋಮವಾರ ತೀರ್ಪು ನೀಡಿದ್ದಾರೆ. 2020ರ ಎಪ್ರಿಲ್ 29ರಂದು ಆರೋಪಿಯು ಮನೆ ಸಮೀಪದ ವಿನ್ನಿ ಯಾನೆ ವಿನ್ಸೆಂಟ್ ಡಿಸೋಜ ಮತ್ತವರ ಪತ್ನಿ ಹೆಲೆನ್ ಡಿಸೋಜ ಯಾನೆ ಹೆಲೆನ್ ರೋಸಿ ರೋಡ್ರಿಗಸ್‌…

Read More

ಇಲ್ಲಿ ಕಸ ತಂದು ಹಾಕುವ ದಿವ್ಯ ಆತ್ಮಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ , ಏನೂ ಈ ಬ್ಯಾನರ್ ಹಿಂದಿನ ಅಸಲಿ ಸತ್ಯ … !

ಬಂಟ್ವಾಳ:ಇಲ್ಲಿ ಕಸ ತಂದು ಹಾಕುವ ದಿವ್ಯ ಆತ್ಮಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ ,ಈ ಕಸದಂತೆಯೇ ನಿಮ್ಮ ಜೀವನವೂ ಆದಷ್ಟು ಬೇಗನೇ ಕೊಳೆತು ಹೋಗಲಿ ಎನ್ನುವ ಬ್ಯಾನರ್ ಇದೀಗ ಎಲ್ಲೆಡೆ ವೈರಲ್ ಅಗ್ತಾ ಇದೆ ಅಸಲಿಗೆ ಈ ಬ್ಯಾನರ್ ನ ದರ್ಶನವಾಗುವುದು ಕಲ್ಲಡ್ಕ ಪೇಟೆಯಲ್ಲಿ.ಹೌದು ಕಲ್ಲಡ್ಕ ಜಂಕ್ಷನ್ ನ ಕಮಲಾ ಕಾಂಪ್ಲೆಕ್ಸ್ ನ ಮುಂಭಾಗದಲ್ಲಿ ಇರುವ ವಿದ್ಯುತ್ ಕಂಬಕ್ಕೆ ಬ್ಯಾನರ್ ನ್ನು ಹಾಕಲಾಗಿದೆ.ಜನನಿಬಿಡ ಪ್ರದೇಶವಾಗಿರುವ ಕಲ್ಲಡ್ಕ ಕಮಲಾ ಕಾಂಪ್ಲೆಕ್ಸ್ ನಲ್ಲಿರುವ ಕೆ.ಟಿ.ಹೋಟೆಲ್ ನ ಮುಂಭಾಗದಲ್ಲಿ ಕಸವನ್ನು ತಂದು ಹಾಕಿ ಹೋಗುತ್ತಿದ್ದರು.ಕಮಲಾ…

Read More

ಕಟಪಾಡಿ ಹೆದ್ದಾರಿ ಅಂಡರ್‌ಪಾಸ್ ವೀಕ್ಷಣೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಂದ ಶೀಘ್ರ ಪೂರ್ಣಗೊಳಿಸುವ ಭರವಸೆ

ಉಡುಪಿ:ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66ರ ಅಂಡರ್ ಪಾಸ್ ಆಗಬೇಕೆಂಬುದು ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿದ್ದು ಕಾಮಗಾರಿಯನ್ನು ಉಡುಪಿ -ಚಿಕ್ಕಮಗಳೂರು ಸಂಸದರು ಇಂದು ವೀಕ್ಷಿಸಿದರು.ಸದ್ಯ ಕಾಮಗಾರಿ ಆರಂಭಗೊಂಡಿದ್ದು, ಕಾಮಗಾರಿ ವೇಗ ಪಡೆದುಕೊಳ್ಳುತ್ತಿದೆ. ಮಳೆಗಾಲ ಆರಂಭವಾಗುವ ಮೊದಲು ಬಹುತೇಕ ಕಾಮಗಾರಿ ಮುಗಿಸಬೇಕೆಂಬುದು ಇಂಜಿನಿಯರ್ ತಯಾರಿ ನಡೆಸಿದ್ದಾರೆ.ಸದ್ಯ ಕಾಮಗಾರಿ ಆಗುತ್ತಿರುವುದರಿಂದ ಕೆಲವೊಂದು ಮಾರ್ಗಸೂಚಿಗಳನ್ನು ನೀಡಲಾಗಿದೆ.ಆದರೆ ಮಾರ್ಗಸೂಚಿಗಳನ್ನು ಸರಿಯಾಗಿ ಪಾಲನೆ ಮಾಡದೆ ವಾಹನ ಚಲಾವಣೆ ಮಾಡುತ್ತಾರೆ ಮತ್ತು ಜನರು ಅಡ್ಡಾದಿಡ್ಡಿ ಓಡಾಟ ಈ ಬಗ್ಗೆ ಪೊಲೀಸ್ ಇಲಾಖೆ ಮತ್ತು ಹೈವೇ ಅಧಿಕಾರಿಗಳಿಗೆ ಸೂಚನೆ ನೀಡಬೇಕು…

Read More

ಮೂಡುಬಾಳಿಕೆ ಪ್ರದೇಶದ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಇರುವ ಏಕೈಕ ರಸ್ತೆಯನ್ನು ಹೊರತುಪಡಿಸಿ ಕೋಸ್ಟ್ ಗಾರ್ಡ್ ಕಂಪೌಂಡ್ ನಿರ್ಮಾಣ ಮಾಡುವಂತೆ ಆಗ್ರಹ

ಮಂಗಳೂರು:ಬಜ್ಪೆ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕೆಂಜಾರು 3ನೇ ವಾರ್ಡ್ ಮೂಡುಬಾಳಿಕೆ ಪ್ರದೇಶದಲ್ಲಿ ವಾಸವಾಗಿರುವ ಪರಿಶಿಷ್ಟ ಜಾತಿಯ 10 ಕುಟುಂಬಗಳ ಏಕೈಕ ರಸ್ತೆ ಸಂಪರ್ಕವನ್ನು ಭಾರತೀಯ ಕೋಸ್ಟ್ ಗಾರ್ಡ್ ಕಂಪೌಂಡ್ ನಿರ್ಮಾಣದಿಂದ ಸಂಪರ್ಕ ಕಡಿತವಾಗುವ ಭೀತಿಯಲಿದ್ದು ಇದರಿಂದ ಆ ಭಾಗದಲ್ಲಿ ವಾಸಿಸುವ ಜನರ ಪರಿಸ್ಥಿತಿ ಅತಂತ್ರವಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ.)ಯ ಜಿಲ್ಲಾ ಸಂಘಟನಾ ಸಂಚಾಲಕ ರಘು ಕೆ. ಎಕ್ಕಾರು ಆರೋಪಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಕಿಡಿಕಾರಿದ ಅವರು , ಸುಮಾರು…

Read More

ಪುತ್ತೂರಿನಲ್ಲಿ ಭಾರಿ ಗಾಂಜಾ ವಶ: 106 ಕಿಲೋ ಗಾಂಜಾ ಜಪ್ತಿ, ಇಬ್ಬರ ಬಂಧನ

ದಿನಾಂಕ:19-01-2026 ರಂದು ಸಂಜೆ, ಒಂದು ಕಾರು ಮತ್ತು ಒಂದು ಅಶೋಕ್‌ ಲೈಲ್ಯಾಂಡ್‌ ವಾಹನದಲ್ಲಿ ಗಾಂಜಾ ಸಾಗಾಟ ಮಾಡುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರು ಸಿಬ್ಬಂದಿಗಳೊಂದಿಗೆ ಪುತ್ತೂರು ತಾಲೂಕು ಪಡುವನ್ನೂರು ಗ್ರಾಮದ ಸಜಂಕಾಡಿ ಎಂಬಲ್ಲಿ, ಸದ್ರಿ ಕಾರು ಹಾಗೂ ಗೂಡ್ಸ್ ವಾಹವನ್ನು ತಪಾಸಣೆಗಾಗಿ ನಿಲ್ಲಿಸಲಾಗಿರುತ್ತದೆ. ಕಾರಿನ ಚಾಲಕನಲ್ಲಿ ವಿಚಾರಿಸಲಾಗಿ ಆತನು ಬೆಳ್ತಂಗಡಿ, ಚಾರ್ಮಾಡಿ ಗ್ರಾಮದ ನಿವಾಸಿ ರಫೀಕ್‌ ಪಿ(37) ಎಂಬುದಾಗಿ ತಿಳಿಸಿದ್ದು ಆತನ ವರ್ತನೆಯಿಂದ ಸಂಶಯಗೊಂಡು ಕಾರನ್ನು ತಪಾಸಣೆ ನಡೆಸಿದಾಗ…

Read More

ಸುಬ್ರಹ್ಮಣ್ಯ ಕುಮಾರಧಾರ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

ಸುಳ್ಯ: ಸುಳ್ಯದ ಕುಲ್ಕುಂದದಲ್ಲಿ ಇಂದು ಮಧ್ಯಾಹ್ನ ಇಬ್ಬರು ಯುವಕರು ಸುಬ್ರಹ್ಮಣ್ಯ ಕುಮಾರಧಾರ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ದುರಂತ ಘಟನೆ ಸಂಭವಿಸಿದೆ.ಮೃತರನ್ನು ಸುಬ್ರಹ್ಮಣ್ಯ ಮೂಲದ ಉದ್ಯಮಿ ಹರಿಪ್ರಸಾದ್ ಕೊಲ್ಲಮೊಗರು ಮತ್ತು ಮತ್ತೊಬ್ಬ ಯುವಕ ಸುಜೀತ್ ಕೊಲ್ಲಮೊಗರು ಎಂದು ಗುರುತಿಸಲಾಗಿದೆ. ಸ್ಥಳೀಯ ಮೂಲಗಳ ಪ್ರಕಾರ, “ಇಬ್ಬರು ಈಜಲು ನದಿಗೆ ಹೋಗಿದ್ದಾಗ ಇದ್ದಕ್ಕಿದ್ದಂತೆ ನೀರಿನಲ್ಲಿ ಸಿಲುಕಿ ಮುಳುಗಿ ಸಾವನ್ನಪ್ಪಿದ್ದಾರೆ.”ಈ ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸಾವಿನ ಬಗ್ಗೆ ತನಿಖೆ ಆರಂಭಿಸಿದ್ದಾರೆ. ನದಿ ದಂಡೆಗಳ ಬಳಿ,…

Read More

ಜೋಡಿ ಕೊಲೆ ಕೇಸ್: ಆರೋಪಿಗೆ ಜೀವಾವಧಿ ಶಿಕ್ಷೆಜೋಡಿ ಕೊಲೆ ಕೇಸ್: ಆರೋಪಿಗೆ ಜೀವಾವಧಿ ಶಿಕ್ಷೆ

ಮಂಗಳೂರು ಹೊರವಲಯದ ಮೂಲ್ಕಿ ತಾಲೂಕಿನ ಏಳಿಂಜೆ ಗ್ರಾಮದ ಮುತ್ತಯ್ಯಕೆರೆ ಆಗಿಂದಕಾಡು ಎಂಬಲ್ಲಿ ನಡೆದ ಜೋಡಿಕೊಲೆ ಪ್ರಕರಣದ ಆರೋಪಿ ಅಲ್ಫೋನ್ಸ್ ಸಲ್ದಾನ ಎಂಬುವವರಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ಜೀವಾವಧಿ ಶಿಕ್ಷೆ ವಿಧಿಸಿ ಸೋಮವಾರ ತೀರ್ಪು ನೀಡಿದ್ದಾರೆ. ಮುಲ್ಕಿ ತಾಲೂಕು ಏಳಿಂಜೆ ಗ್ರಾಮದ ಮುತ್ತಯ್ಯಕೆರೆ ಆಗಿಂದಕಾಡು ಎಂಬಲ್ಲಿ 29-04-2020ರಂದು ಆರೋಪಿ ಆಲ್ಫೋನ್ಸ್ ಸಲ್ದಾಣ, ತನ್ನ ನೆರೆಕರೆ ಮನೆಯ ವಿನ್ಸಿ ಯಾನೆ ವಿನ್ಸೆಂಟ್ ಡಿಸೋಜಾನನ್ನು ಮರದ ಗೆಲ್ಲು ಕಡಿಯುವ ವಿಚಾರಕ್ಕೆ ಸಂಬಂಧಿಸಿದಂತೆ ವಿನ್ಸಿ ಯಾನೆ…

Read More
error: Content is protected !!