ನಿಗೂಢವಾಗಿ ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆ
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಕಳಿಯ ದೇವಸ್ಥಾನಕ್ಕೆ ಇಂದು ಮುಂಜಾನೆ ಧನುಪೂಜೆಗೆ ಮನೆಯಿಂದ ಹೋಗಿದ್ದ ಬಾಲಕನೋರ್ವ ನಿಗೂಢವಾಗಿ ನಾಪತ್ತೆಯಾಗಿದ್ದು ಬಾಲಕನ ಮೃತದೇಹ ಮನೆಯ ಸಮೀಪದ ಕೆರೆಯಲ್ಲಿ ಪತ್ತೆಯಾಗಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಬಾಲಕನ ಅಸಹಜ ಸಾವಿನ ಬಗ್ಗೆ ಹಲವಾರು ಅನುಮಾನಗಳು ಮೂಡುತ್ತಿದ್ದು ಪೊಲೀಸರು ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಕುವೆಟ್ಟು ಗ್ರಾಮದ ಸಂಬೋಳ್ಯ ಬರಮೇಲು ಸುಬ್ರಹ್ಮಣ್ಯ ನಾಯಕ್ ಅವರ ಪುತ್ರ ಗೇರುಕಟ್ಟೆ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಸುಮಂತ್, ನಾಪತ್ತೆಯಾಗಿ ಮೃತಪಟ್ಟ ಬಾಲಕ. ನಾಳ ದೇವಸ್ಥಾನಕ್ಕೆ…
