ಒಮಾನ್ ಕರಾವಳಿ ದಾಳಿ: ಬಂಟ್ವಾಳದ ಯುವಕ ಅಪಾಯದಿಂದ ಪಾರು

ಬಂಟ್ವಾಳ: ಒಮಾನ್ ಕರಾವಳಿ ಸಮೀಪ ಸಂಚರಿಸುತ್ತಿದ್ದ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಯುವಕರೊಬ್ಬರು ಅಪಾಯದಿಂದ ಪಾರಾಗಿದ್ದು, ಸುರಕ್ಷಿತರಾಗಿದ್ದಾರೆ. ಈ ಮಾಹಿತಿ ಕುಟುಂಬಕ್ಕೆ ತಲುಪುತ್ತಿದ್ದಂತೆ ಆತಂಕದ ವಾತಾವರಣ ನಿವಾರಣೆಯಾಗಿ ನೆಮ್ಮದಿ ಮೂಡಿದೆ. ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ ಬಿಳಿಯೂರು ನಿವಾಸಿ ರಚನ್ ಕಳೆದ ಹಲವು ವರ್ಷಗಳಿಂದ ವಾಣಿಜ್ಯ ಹಡಗಿನಲ್ಲಿ ಉದ್ಯೋಗ ನಿರ್ವಹಿಸುತ್ತಿದ್ದಾರೆ. ಅವರು ಕರ್ತವ್ಯದಲ್ಲಿದ್ದ ಹಡಗು ಒಮಾನ್ ಕರಾವಳಿ ಸಮೀಪ ಸಾಗುತ್ತಿದ್ದ ವೇಳೆ ದಾಳಿ ಸಂಭವಿಸಿದೆ ಎಂದು ಕುಟುಂಬದ…

Read More

ಸುಜೀರು: ಎಚ್‌ಪಿವಿ ಲಸಿಕಾ ಶಿಬಿರ – ಗರ್ಭಕಂಠದ ಕ್ಯಾನ್ಸರ್ ತಡೆಗೆ ಪೋಷಕರಲ್ಲಿ ಜಾಗೃತಿ

ಸುಜೀರು: ಸರಕಾರಿ ಪ್ರೌಢಶಾಲೆ ಸುಜೀರು, ಮೌಲಾನ ಆಜಾದ್ ಪದವಿ ಪೂರ್ವ ಕಾಲೇಜು ಪುದು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಸುಜೀರುಗಳ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ (ಜುಲೈ 14) ಎಚ್‌ಪಿವಿ (HPV) ಲಸಿಕಾ ಶಿಬಿರ ಹಾಗೂ ಜಾಗೃತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಸರಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಲೋಕನಾಯಕ ಸ್ವಾಗತಿಸಿದರು. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಕಾರ್ಯಾಧ್ಯಕ್ಷ ಹಾಗೂ ಟುಡೇ ಫೌಂಡೇಶನ್ ಅಧ್ಯಕ್ಷ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಉಮರ್ ಫಾರೂಕ್ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ…

Read More

ವಿದ್ಯುತ್ ಸ್ಪರ್ಶಿಸಿ ದಂಪತಿ ದುರ್ಮರಣ

ಬೆಳಗಾವಿ: ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ದಂಪತಿಗಳಿಬ್ಬರು ಮೃತಪಟ್ಟಿರುವ ದುರ್ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ನಾಗನೂರ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಮೃತರನ್ನು ನಾಗನೂರ ಗ್ರಾಮದ ಮುತ್ತಪ್ಪ ಶ್ರೀಶೈಲ ಮುಗೋಳಖೋಡ (42) ಹಾಗೂ ಅವರ ಪತ್ನಿ ರಾಜಶ್ರೀ ಮುಗೋಳಖೋಡ (36) ಎಂದು ಗುರುತಿಸಲಾಗಿದೆ. ಹೊಲದಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಮೂಡಲಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ…

Read More

ಇಷ್ಟದೇವರಂತೆ ಆರಾಧಿಸಲ್ಪಡುವ ಕುಟುಂಬ ಪಿ.ವಿ. ಐತಾಳರದ್ದು: ಶ್ರೀ ಕಮಲಾದೇವಿ ಪ್ರಸಾದ ಆಸ್ರಣ್ಣ

ಮಂಗಳೂರು, ಜು. 15:“ನಾವು ನಮ್ಮ ಕುಲದೇವರು, ಗ್ರಾಮದೇವರು ಹಾಗೂ ಇಷ್ಟದೇವರನ್ನು ಹೇಗೆ ಭಕ್ತಿ-ಶ್ರದ್ಧೆಯಿಂದ ಆರಾಧಿಸುತ್ತೇವೆಯೋ, ಅದೇ ರೀತಿಯಲ್ಲಿ ಸಮಾಜದಿಂದ ಆರಾಧಿಸಲ್ಪಡುವ ಅಪರೂಪದ ಕುಟುಂಬ ಪಣಂಬೂರಿನ ಪಿ.ವಿ. ಐತಾಳರದ್ದು. ಭಾಷೆಯ ಎಲ್ಲೆಗಳನ್ನು ಮೀರಿ ಆಂಗ್ಲ ಭಾಷೆಯ ಯಕ್ಷಗಾನವನ್ನು ಬೆಳೆಸಿದ ಈ ಕುಟುಂಬದ ಸೇವೆ ಅನನ್ಯವಾಗಿದೆ” ಎಂದು ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ಕಮಲಾದೇವಿ ಪ್ರಸಾದ ಆಸ್ರಣ್ಣ ಹೇಳಿದರು. ಪಣಂಬೂರು ಶ್ರೀ ನಂದನೇಶ್ವರ ದೇವಸ್ಥಾನದ ರಾಮರಮಣ ವೇದಿಕೆಯಲ್ಲಿ ನಡೆದ ಯಕ್ಷನಂದನದ 45ನೇ ವರ್ಷದ ಸಂಭ್ರಮಾಚರಣೆ…

Read More

ಲಯನ್ಸ್ ಕ್ಲಬ್ ಪಂಪ್‌ವೆಲ್ ಕಲ್ಪವೃಕ್ಷದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಮಂಗಳೂರು: ಲಯನ್ಸ್ ಕ್ಲಬ್ ಪಂಪ್‌ವೆಲ್ ಕಲ್ಪವೃಕ್ಷದ 2026–27ನೇ ಲಯನ್ಸ್ ವರ್ಷದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜುಲೈ 9ರಂದು ಕದ್ರಿಯ ಅಶೋಕ್ ಸೇವಾ ಭವನದಲ್ಲಿ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದಲ್ಲಿ ಮಾಜಿ ಜಿಲ್ಲಾ ಗವರ್ನರ್ ಲಯನ್ ಅರುಣ್ ಶೆಟ್ಟಿ ಅವರು ಪದಗ್ರಹಣ ಅಧಿಕಾರಿಯಾಗಿ ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿ ಅಧಿಕಾರ ಹಸ್ತಾಂತರ ಮಾಡಿದರು. 2026–27ನೇ ಸಾಲಿನ ಕ್ಲಬ್‌ನ ನೂತನ ಅಧ್ಯಕ್ಷರಾಗಿ ಲಯನ್ ಸನ್ಮತ್ ಹೆಗ್ಡೆ, ಕಾರ್ಯದರ್ಶಿಯಾಗಿ ಲಯನ್ ಮಹಾಬಲ ಆಳ್ವ ಹಾಗೂ ಖಜಾಂಚಿಯಾಗಿ ಲಯನ್ ಪ್ರಶಾಂತ್ ಆಳ್ವ…

Read More

ಸರಕಾರಿ ಆಸ್ಪತ್ರೆಗಳನ್ನು ಉಳಿಸಿ: ಸಿಪಿಐ(ಎಂ) ಶಕ್ತಿನಗರ ಶಾಖೆ ನೇತೃತ್ವದಲ್ಲಿ ಮಾನವ ಸರಪಳಿ

ಸರಕಾರಿ ಆಸ್ಪತ್ರೆಗಳನ್ನು ಖಾಸಗೀಕರಣಗೊಳಿಸುವ ಸರ್ಕಾರದ ಪ್ರಯತ್ನವನ್ನು ವಿರೋಧಿಸಿ ಹಾಗೂ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸುವಂತೆ ಆಗ್ರಹಿಸಿ, ಸಿಪಿಐ(ಎಂ) ಶಕ್ತಿನಗರ ಶಾಖೆಯ ನೇತೃತ್ವದಲ್ಲಿ ಶಕ್ತಿನಗರದ ನಗರ ಆರೋಗ್ಯ ಕೇಂದ್ರದ ಎದುರು ಮಾನವ ಸರಪಳಿ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಿಪಿಐ(ಎಂ) ಮಂಗಳೂರು ನಗರ ಕಾರ್ಯದರ್ಶಿ ಯೋಗೀಶ್ ಜಪ್ಪಿನಮೊಗರು, ಆರೋಗ್ಯವು ಜನರ ಮೂಲಭೂತ ಹಕ್ಕಾಗಿದ್ದು, ಸರಕಾರಿ ಆಸ್ಪತ್ರೆಗಳನ್ನು ಖಾಸಗಿಕರಣಗೊಳಿಸುವ ಯಾವುದೇ ಪ್ರಯತ್ನವನ್ನು ಜನರು ಒಗ್ಗಟ್ಟಿನಿಂದ ತಡೆಯಬೇಕಾಗಿದೆ. ಸರ್ಕಾರವು ಖಾಸಗೀಕರಣದ ನೀತಿಯನ್ನು ಕೈಬಿಟ್ಟು ಸರಕಾರಿ ಆಸ್ಪತ್ರೆಗಳಿಗೆ ಅಗತ್ಯ ವೈದ್ಯರು, ಸಿಬ್ಬಂದಿ,…

Read More

ಬೆಂಗಳೂರಿನ ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ ಎಂ.ಸಿ.ಎ (MCA) ಮತ್ತು ಎಂ.ಎಸ್ಸಿ (MSc) ವಿದ್ಯಾರ್ಥಿಗಳಿಗಾಗಿ ಕೃತಕ ಬುದ್ಧಿಮತ್ತೆ (Artificial Intelligence) ವಿಷಯದಲ್ಲಿ ಇಂಟರ್ನ್‌ಶಿಪ್‌

ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ (SJU) ವಿದ್ಯಾರ್ಥಿಗಳಿಗಾಗಿ ಮೈಸೂರು ರಸ್ತೆಯ ಕೃಪಾನಿಧಿ ಕಾಮೆಡ್‌ಕೇರ್ಸ್ ಇನ್ನೋವೇಶನ್ ಹಬ್‌ನಲ್ಲಿ (Comedkares Innovation Hub) ನಡೆಸಲಾದ ಎಐ/ಎಮ್‌ಎಲ್ (AI/ML) ಇಂಟರ್ನ್‌ಶಿಪ್‌, ಶೈಕ್ಷಣಿಕ ಬೋಧನೆ ಮತ್ತು ಉದ್ಯಮಕ್ಕೆ ಪೂರಕವಾದ ತಾಂತ್ರಿಕ ಅನ್ವಯಿಕತೆಯ ನಡುವಿನ ಅಂತರವನ್ನು ಕಡಿಮೆ ಮಾಡುವಲ್ಲಿ ಒಂದು ಪ್ರಮುಖ ಮೈಲಿಗಲ್ಲಾಗಿದೆ. ಜೂನ್ ಮತ್ತು ಜುಲೈ ತಿಂಗಳಲ್ಲಿ ಒಂದು ತಿಂಗಳ ಕಾಲ ನಡೆದ ಈ ಕಾರ್ಯಕ್ರಮವು, ಮಾನವ-ಕೇಂದ್ರಿತ ವಿನ್ಯಾಸ ಚಿಂತನೆ (human-centred design thinking), ವರ್ಚುವಲ್ ಪ್ರೊಟೊಟೈಪಿಂಗ್ ಮತ್ತು ಡಿಜಿಟಲ್ ಸ್ಕೆಚಿಂಗ್ ಅನ್ನು ಕೃತಕ…

Read More

ಕರ್ನಾಟಕ ರಾಜ್ಯ ಬಿಜೆಪಿಯ ಹಿರಿಯ ನಾಯಕ ನಿಧನ ಮಾಜಿ ಸಚಿವ ರಾಮಚಂದ್ರೇಗೌಡ ಇನ್ನಿಲ್ಲ

ಬೆಂಗಳೂರು, ಜು. 14: ರಾಜ್ಯ ಬಿಜೆಪಿಯ ಹಿರಿಯ ನಾಯಕ, ಮಾಜಿ ಸಚಿವ ಹಾಗೂ ಐದು ಬಾರಿ ವಿಧಾನ ಪರಿಷತ್ (ಎಂಎಲ್‌ಸಿ) ಸದಸ್ಯರಾಗಿದ್ದ ರಾಮಚಂದ್ರೇಗೌಡ ಅವರು ಇಂದು ಮುಂಜಾನೆ ನಿಧನರಾದರು. ಅವರಿಗೆ ವಯೋಸಹಜ ಅನಾರೋಗ್ಯ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳು ಕಾಡುತ್ತಿದ್ದು, ಕಳೆದ ಒಂದು ತಿಂಗಳಿನಿಂದ ಬೆಂಗಳೂರಿನ ರಾಜಾಜಿನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು. ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿ ಬೆಳೆಸುವಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಹೆಗಲಿಗೆ…

Read More

ತೌಡುಗೋಳಿ ಶ್ರೀ ದುರ್ಗಾದೇವಿ ಕ್ಷೇತ್ರ, ಶ್ರೀ ಅಯ್ಯಪ್ಪ ಸ್ವಾಮಿ ಮಂದಿರ ದ ಜೀರ್ಣೋದ್ಧಾರದ ವಿಜ್ಞಾಪನ ಪತ್ರ ಬಿಡುಗಡೆ

ಮಂಗಳೂರು : ಶ್ರೀ ದುರ್ಗಾದೇವಿ ಕ್ಷೇತ್ರ, ಶ್ರೀ ಅಯ್ಯಪ್ಪ ಸ್ವಾಮಿ ಮಂದಿರ ಹಾಗೂ ಪರಿವಾರ ದೈವಗಳ ಸಾನಿಧ್ಯ ತೌಡುಗೋಳಿ ಇದರ ಜೀರ್ಣೋದ್ದಾರದ ವಿಜ್ಞಾಪನ ಪತ್ರವನ್ನು ಶ್ರೀ ಕ್ಷೇತ್ರದಲ್ಲಿ ಗಣ್ಯರ ಸಮ್ಮುಖದಲ್ಲಿ ಬಿಡುಗಡೆ ಮಾಡಲಾಯಿತು. ವಿಜ್ಞಾಪನ ಪತ್ರ ಬಿಡುಗಡೆ ಬಳಿಕ ಮಾತನಾಡಿದ ಶ್ರೀ ಕ್ಷೇತ್ರದ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾದ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಮಾತನಾಡಿ ನಾವೆಲ್ಲರೂ ಒಂದೇ ತಾಯಿ ಮಕ್ಕಳಂತೆ ಈ ಒಂದು ದೇವತಾ ಕಾರ್ಯದಲ್ಲಿ ನಮ್ಮನ್ನು ತೊಡಗಿಸಿಕೊಳ್ಳೋಣ ಎಂದು ಹೇಳಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಕ್ಷೇತ್ರದ ಅನುವಂಶಿಕ…

Read More

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ: ಡಿಸಿ ದರ್ಶನ್ ಎಚ್.ವಿ

ಮಂಗಳೂರು: ಮತದಾನವು ಪ್ರತಿಯೊಬ್ಬ ನಾಗರಿಕನ ಪವಿತ್ರ ಹಕ್ಕಾಗಿದ್ದು, ಈ ಹಕ್ಕು ಯಾವುದೇ ತೊಂದರೆಯಾಗದಂತೆ ಎಲ್ಲ ಅರ್ಹ ಮತದಾರರಿಗೆ ತಲುಪಿಸಲು ಚುನಾವಣಾ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಳೆದ ಹಲವು ದಿನಗಳಿಂದ ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಯಶಸ್ವಿಯಾಗಲು ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದೆ. ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ)ಗಳು ಮನೆಗಳಿಗೆ ಭೇಟಿ ನೀಡಿದಾಗ…

Read More
error: Content is protected !!