ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: ಕರಾವಳಿ ಜಿಲ್ಲೆಗಳಿಗೂ ವಿಸ್ತರಿಸಲು ವಿಹಿಂಪ ಆಗ್ರಹ
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಸುರತ್ಕಲ್, ಉರ್ವ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶಿ ವಲಸಿಗರು ಪತ್ತೆಯಾದ ಹಿನ್ನೆಲೆಯಲ್ಲಿ, ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ವ್ಯಾಪಕ ತಪಾಸಣೆ ಮತ್ತು ಕಾರ್ಯಾಚರಣೆ ನಡೆಸುವಂತೆ ಆದೇಶಿಸಿರುವ ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರ ಕ್ರಮವನ್ನು ವಿಶ್ವ ಹಿಂದೂ ಪರಿಷತ್ (ವಿಹಿಂಪ) ಸ್ವಾಗತಿಸಿದೆ. ಈ ಕುರಿತು ಪ್ರಕಟಣೆ ನೀಡಿರುವ ವಿಹಿಂಪ ಕರ್ನಾಟಕ ದಕ್ಷಿಣ ಪ್ರಾಂತ ಸಹಕಾರ್ಯದರ್ಶಿ ಶರಣ್ ಕುಮಾರ್ ಪಂಪುವೆಲ್, ಕರಾವಳಿ ಭಾಗದಲ್ಲಿ…
