ಬದುಕಿ ಬಾಳ ಬೇಕಾದ 13ರ ಹರೆಯದ ಬಾಲಕನ ಎದುರು ಯಮ ಸ್ವರೂಪಿಯಾಗಿ ಬಂದ ಕಾರು ಢಿಕ್ಕಿ ಹೊಡೆದು ಧಾರುಣ ಅಂತ್ಯ …. !

ಮಂಗಳೂರು :ಚಾಲಕನ ಅಜಾಗರೂಕತೆಯಿಂದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ 13 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಬುಧವಾರ ಮಧ್ಯಾಹ್ನ ಮಾರೂರು ಹೊಸಂಗಡಿ ಬಳಿ ಸಂಭವಿಸಿದೆ. ಹೊಸಂಗಡಿ ನಿವಾಸಿ ನಝೀರ್ ಅವರ ಪುತ್ರ ಝಾಹಿರ್ (13) ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ. ಝಾಹಿರ್ ಸ್ಥಳೀಯ ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿಯಾಗಿದ್ದನು. ಬುಧವಾರ ಮಧ್ಯಾಹ್ನ ತಾಯಿಯೊಂದಿಗೆ ಅಂಗಡಿಗೆಂದು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಎದುರಿನಿಂದ ಬಂದ ಕಾರು ಢಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಬಾಲಕನನ್ನು…

Read More

ಜನವರಿ 3 ಮತ್ತು 4 ರಂದು ಪಿಲಿಕುಳ ನಿಸರ್ಗಧಾಮದ ಸೌಟ್ಸ್ ಮತ್ತು ಗೈಡ್ಸ್ ಸಭಾ ಭವನದಲ್ಲಿ ರಾಜ್ಯ ಮಟ್ಟದ ಜಿನ ಭಜನಾ ಸೆಮಿ ಫೈನಲ್ ಮತ್ತು ಫೈನಲ್ ಸ್ಪರ್ಧೆ … !

ಮಂಗಳೂರು: ರಾಜ್ಯ ಮಟ್ಟದ ಜಿನ ಭಜನಾ ಸ್ಪರ್ಧೆ ಸೀಸನ್ 9ರ ಪ್ರಯುಕ್ತ ಭಾರತೀಯ ಜೈನ್ ಮಿಲನ್, ವಲಯ-8ರ ಆಶ್ರಯದಲ್ಲಿ ಈ ಬಾರಿ ಮಂಗಳೂರು ಜೈನ್ ಮಿಲನ್‌ನ ಅತಿಥೇಯದಲ್ಲಿ ಪಿಲಿಕುಳ ನಿಸರ್ಗಧಾಮದ ಸೌಟ್ಸ್ ಮತ್ತು ಗೈಡ್ಸ್ ಸಭಾ ಭವನದಲ್ಲಿ ಜನವರಿ 3 ರಂದು ಸೆಮಿಫೈನಲ್ ಹಾಗೂ ಜನವರಿ 4 ರಂದು ಫೈನಲ್ ಜಿನ ಭಜನಾ ಸ್ಪರ್ಧೆ ನಡೆಯಲಿದೆ ಎಂದು ಜೈನ್ ಮಿಲನ್, ವಲಯ-8ರ ನಿಕಟಪೂರ್ವ ಅಧ್ಯಕ್ಷರಾದ ಪುಷ್ಪರಾಜ್ ಜೈನ್ ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು . ಈ…

Read More

ಎನ್.ವಿನಯ ಹೆಗ್ಡೆಯವರ ನಿಧನಕ್ಕೆ ಬಿ.ವೈ.ವಿಜಯೇಂದ್ರ ಸಂತಾಪ

ಬೆಂಗಳೂರು: ದೂರದೃಷ್ಟಿಯ ನಾಯಕ ಮತ್ತು ಶಿಕ್ಷಣ ತಜ್ಞ, ನಿಟ್ಟೆಯ ಎನ್. ವಿನಯ ಹೆಗ್ಡೆಯವರ ನಿಧನದಿಂದ ಶಿಕ್ಷಣ ಮತ್ತು ಸಾಮಾಜಿಕ ಕ್ಷೇತ್ರಕ್ಕೆ ದೊಡ್ಡ ನಷ್ಟವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಮ್ಮ ಸಂತಾಪ ಸೂಚನಾ ಸಂದೇಶದಲ್ಲಿ ತಿಳಿಸಿದ್ದಾರೆ.ಎನ್.ವಿನಯ ಹೆಗ್ಡೆ ಅವರು ತಮ್ಮ ದೂರದೃಷ್ಟಿ ಮತ್ತು ಸಾಮಾಜಿಕ ಕಳಕಳಿಯೊಂದಿಗೆ ನಿಟ್ಟೆ ಡೀಮ್ಡ್ ಟು ಬೀ ಯೂನಿವರ್ಸಿಟಿ ಸೇರಿದಂತೆ ಹಲವು ಸಂಸ್ಥೆಗಳನ್ನು ಬೆಳೆಸಿದವರು. ಬಡ ವಿದ್ಯಾರ್ಥಿಗಳಿಗೆ, ಮಹಿಳೆಯರ ಸಬಲೀಕರಣಕ್ಕೆ ಹಾಗೂ ಗ್ರಾಮೀಣಾಭಿವೃದ್ಧಿಗೆ ಶ್ರಮಿಸಿದರು. 24 ಗ್ರಾಮೀಣ ಆಸ್ಪತ್ರೆಗಳನ್ನು…

Read More

ಪುತ್ತೂರು : ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ್ಳತನ ಯತ್ನ – ದಂಪತಿ ಬಂಧನ, ಬೈಕ್ ವಶ

ಪುತ್ತೂರು: ಪುತ್ತೂರು ಕಸಬಾದಲ್ಲಿ 84 ವರ್ಷದ ನಿವೃತ್ತ ಪ್ರಾಂಶುಪಾಲ ಎ.ವಿ. ನಾರಾಯಣ ಅವರ ಮನೆಗೆ ಮಧ್ಯರಾತ್ರಿ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ ಆರೋಪದ ಮೇಲೆ ಕಾರ್ತಿಕ್ ರಾವ್ (31) ಹಾಗೂ ಅವರ ಪತ್ನಿ ಕೆ.ಎಸ್. ಸ್ವಾತಿ ರಾವ್ (25) ಅವರನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ. ಅಪರಾಧಕ್ಕೆ ಬಳಸಲಾಗಿದೆ ಎನ್ನಲಾದ ಬೈಕ್‌ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪಿರ್ಯಾದಿದಾರ ನಾರಾಯಣ ಅವರ ದೂರಿನಂತೆ, ಡಿಸೆಂಬರ್ 17ರ ಮಧ್ಯರಾತ್ರಿ ಈ ಘಟನೆ ನಡೆದಿದೆ. ಹೆಲ್ಮೆಟ್ ಧರಿಸಿ ಮುಖವನ್ನು ಮರೆಮಾಚಿಕೊಂಡಿದ್ದ ಇಬ್ಬರು ಅಪರಿಚಿತರು ಮನೆಯ…

Read More

ವಿಟ್ಲ : ಆಕಸ್ಮಿಕ ಬೆಂಕಿ – ಕರಚಿದ ಇಲೆಕ್ಟ್ರಾನಿಕ್ಸ್ ಅಂಗಡಿ,ಹೋಟೆಲ್, ಡ್ರೈವಿಂಗ್ ಸ್ಕೂಲ್

ವಿಟ್ಲ: ವಿಟ್ಲ ಕಲ್ಲಡ್ಕ ರಸ್ತೆಯಲ್ಲಿರುವ ಇಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಭಸ್ಮಗೊಂಡ ಘಟನೆ ಬುಧವಾರ ರಾತ್ರಿ ನಡೆದಿದೆ. ಶ್ರೀ ಇಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆ ಬೆಂಕಿ ಧಗಧಗನೇ ಸಂಪೂರ್ಣ ಅಂಗಡಿಯನ್ನು ಆಹುತಿ ಪಡೆದುಕೊಂಡಿದ್ದು, ಹತ್ತಿರದ ಅಮಿತ್ ಹೋಟೆಲ್, ಗಣೇಶ್ ಡ್ರೈವಿಂಗ್ ಸ್ಕೂಲ್ ಅಂಗಡಿ ಕಟ್ಟಡಗಳೂ ಬೆಂಕಿಗಾಹುತಿಯಾಗಿದೆ. ಶಾರ್ಟ್ ಸರ್ಕ್ಯೂಟ್ ಕಾರಣದಿಂದ ಬೆಂಕಿ ಹತ್ತಿಕೊಂಡಿದೆನ್ನಲಾಗಿದೆ. ಅಗ್ನಿಶಾಮಕ ದಳದ ವಾಹನ ಬೆಂಕಿ ಆರಿಸುವ ಕಾರ್ಯಾಚರಣೆ ಮಾಡಿದೆ.

Read More

ಮನೆಯ ಮಹಡಿಯಿಂದ ಬಿದ್ದು ಯುವಕ ಸಾವು

ಬಂಟ್ವಾಳ: ಮನೆಯ ಮಹಡಿಯ ಮೇಲಿಂದ ಬಿದ್ದು ಸಾವನ್ನಪ್ಪಿದ ಘಟನೆ ಅವಿವಾಹಿತ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಮೂಡುನಡುಗೋಡು ಗ್ರಾಮದಲ್ಲಿ ನಡೆದಿದೆ. ಮೂಡುನಡುಗೋಡು ಗ್ರಾಮದ ನಡುದಂಡೆ ನಿವಾಸಿ ಪ್ರವೀಣ್ ( 26) ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಬಾರ್ ಒಂದರಲ್ಲಿ ಸಪ್ಲೈಯರ್ ಆಗಿದ್ದ ಈತ ಊಟ ಮುಗಿಸಿದ ಬಳಿಕ ಮನೆಯ ಮಹಡಿ ಮೇಲೆ ಹೋಗಿ ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯ ತಪ್ಪಿ ಕೆಳಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದೆ.ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದ ಈತನನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು ,ಗಂಭೀರವಾಗಿ ಗಾಯಗೊಂಡಿದ್ದ…

Read More

ನಿಟ್ಟೆ ವಿಶ್ವವಿದ್ಯಾಲಯದ ಕುಲಾಧಿಪತಿ ,ಕರಾವಳಿಯ ಶಿಕ್ಷಣ ಹಾಗೂ ಕೈಗಾರಿಕಾ ಕ್ರಾಂತಿಯ ರೂವಾರಿ ಎನ್‌. ವಿನಯ್ ಹೆಗ್ಡೆ ಅಸ್ತಂಗತ . ಹೊಸ ವರ್ಷದಂದೇ ಕನ್ನಡಿಗರಿಗೆ ಬರ ಸಿಡಿಲು .. !

ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಿಕ್ಷಣ ಹಾಗೂ ಕೈಗಾರಿಕಾ ಕ್ರಾಂತಿಯ ಮೂಲಕ ಹೆಸರು ಗಳಿಸಿದ್ದ ನಿಟ್ಟೆ ವಿಶ್ವವಿದ್ಯಾಲಯದ ಕುಲಾಧಿಪತಿ ಎನ್ ವಿನಯ್ ಹೆಗ್ಡೆ ಅವರು ಜನವರಿ 1ರಂದು ಬೆಳಗ್ಗೆ ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ಪತ್ನಿ, ಪುತ್ರ, ಪುತ್ರಿ ಸಹಿತ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಅವರ ಪಾರ್ಥಿವ ಶರೀರವನ್ನು ಜನವರಿ 1ರ ಬೆಳಿಗ್ಗೆ 8.30 ರಿಂದ ಮಧ್ಯಾಹ್ನ 3.00 ರವರೆಗೆ ಮಂಗಳೂರಿನ ಶಿವಭಾಗ್‌ನಲ್ಲಿರುವ ಸದಾನಂದ ನಿವಾಸದಲ್ಲಿ ಮತ್ತು ಸಂಜೆ 4.30 ರಿಂದ ಸಂಜೆ 6.00…

Read More

ಜನವರಿ 2 ರಂದು : ಯುನಿವೆಫ್ ಕರ್ನಾಟಕ ವತಿಯಿಂದ “ಅರಿಯಿರಿ ಮನುಕುಲದ ಪ್ರವಾದಿಯನ್ನು “ಅಭಿಯಾನದ ಸಮಾರೋಪ ಸಮಾರಂಭ

ಮಂಗಳೂರು : ಯುನಿವೆಫ್ ಕರ್ನಾಟಕ ವತಿಯಿಂದ ಸೆಪ್ಟೆಂಬರ್ 19 ರಿಂದ ಜನವರಿ 2ರ ತನಕ ನಡೆಯಲಿರುವ  “ಅರಿಯಿರಿ ಮನುಕುಲದ ಪ್ರವಾದಿಯನ್ನು”ಎಂಬ ಪ್ರವಾದಿ ಸಂದೇಶ ಪ್ರಚಾರ ಅಭಿಯಾನದ ಸಮಾರೋಪ ಸಮಾರಂಭವು ಜನವರಿ 2ರ ಶುಕ್ರವಾರ ಸಂಜೆ 6.45 ಕ್ಕೆ ನಗರದ ಪುರಭವನದಲ್ಲಿ ಜರಗಲಿದೆ‌ ಎಂದು ಪ್ರವಾದಿ ಅಭಿಯಾನ ಕಾರ್ಯಕ್ರಮದ ಸಂಚಾಲಕರಾದ ಯು. ಕೆ. ಖಾಲಿದ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.“ಶೋಷಿತ ಸಮಾಜ ಹಾಗೂ ಮಾನವ ಘನತೆ ಮತ್ತು ಪ್ರವಾದಿ ಮುಹಮ್ಮದ್ (ಸ)” ಎಂಬ ಕೇಂದ್ರೀಯ ವಿಷಯದಲ್ಲಿ ನಡೆಯಲಿರುವ ಈ ಸಮಾರಂಭದಲ್ಲಿ ಚಿಕ್ಕಮಗಳೂರಿನ ವಿಶ್ವಧರ್ಮಪೀಠ,…

Read More

ಮಾನವ ಹಕ್ಕುಗಳ ಭಾರತೀಯ ಮಹಾಮೈತ್ರಿ ಸಂಸ್ಥೆಯ ಜಿಲ್ಲಾ ಸಮಿತಿಯ ವಾರ್ಷಿಕೋತ್ಸವ

ಮಂಗಳೂರು: ಮಾನವ ಹಕ್ಕುಗಳ ಭಾರತೀಯ ಮಹಾಮೈತ್ರಿ ಸಂಸ್ಥೆಯ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವಾರ್ಷಿಕೋತ್ಸವ ಮತ್ತು ಸಾಧಕರಿಗೆ ಗೌರವ ಸನ್ಮಾನ ಕಾರ್ಯಕ್ರಮವು ನಗರದ ಅತ್ತಾವರ ವೈದ್ಯನಾಥ ನಗರ ಮೇನಕುಲಂಜಿ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿರುವ ಸಿಇಒ ಶಿವರಾಜ್ ವಹಿಸಿಕೊಂಡರು. ಸೇರಿದ ಅತಿಥಿಗಳನ್ನು ವೇದಿಕೆಗೆ ಬರಮಾಡಿಕೊಳ್ಳಲಾಯಿತು ಮತ್ತು ನಿರ್ದೇಶಕರಾದ ಸದಾಶಿವ ಇವರು ಅತಿಥಿಗಳನ್ನು ಸ್ವಾಗತಿಸಿದರು ಕಾರ್ಯಕ್ರಮಗಳನ್ನು ಡಾ. ಶಿವಪ್ರಕಾಶ್ ಜಿಲ್ಲಾ ಶಾಸ್ತ್ರಕರು ಮತ್ತು ಅಧೀಕ್ಷಕರು ಬೆಲ್ಲ ಜಿಲ್ಲಾ ಆಸ್ಪತ್ರೆ ಮಂಗಳೂರು ಇವರು ದೀಪ ಪ್ರಜ್ವಲಿಸುವ…

Read More

ದ್ವಿಚಕ್ರ ವಾಹನ ಕಳವು ಪ್ರಕರಣ: ಮಾಸ್ಟರ್ ಮೈಂಡ್ ಕಳ್ಳನ ಬಂಧನ

ಉಡುಪಿ: ಶಿರ್ವ ಸಹಿತ ಕಾಪು, ಬೆಂಗಳೂರು ನಗರ ಠಾಣಾ ವ್ಯಾಪ್ತಿಯಲ್ಲಿ ಐದು ದ್ವಿಚಕ್ರ ವಾಹನಗಳನ್ನು ಕದ್ದ ಆರೋಪಿಯನ್ನು ಶಿರ್ವ ಪೋಲಿಸರು ಬಂಧಿಸಿದ್ದಾರೆ. ಡಿ.5ರಂದು ಬಂಟಕಲು ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಪಾರ್ಕಿಂಗ್ ಮಾಡಿದ್ದ ವಾಹನ ಕಳವಾದ ಬಗ್ಗೆ ಮಹಿಳೆಯೋರ್ವರು ನೀಡಿದ ದೂರಿನಂತೆ ಶಿರ್ವ ಪೋಲಿಸರು ತನಿಖೆ ಆರಂಭಿಸಿದ್ದರು.ಶಿರ್ವ ಪೊಲೀಸರಿಂದ ಆರೋಪಿ ಪತ್ತೆಗಾಗಿ ವಿಶೇಷ ತಂಡ ರಚಿಸಲಾಗಿತ್ತು. ಈ ತಂಡವು ಉಡುಪಿ, ಮಲ್ಪೆ ಕಾರ್ಕಳ, ಧರ್ಮಸ್ಥಳ ಕಡೆಗಳಲ್ಲಿ ಸಂಚರಿಸಿ ಆರೋಪಿ ಓಂ ಕೋಲಾರ ಎಂಬಾತನನ್ನು ಬಂಧಿಸಿದೆ. ಬಂಧಿತ ಆರೋಪಿಯಿಂದ ಶಿರ್ವ…

Read More
error: Content is protected !!