ಖುರ್ಚಿ ಗೊಂದಲದ ಸಮಸ್ಯೆ ಬಗೆಹರಿಸಲು ಕಾಂಗ್ರೆಸ್ ಹೈಕಮಾಂಡ್‌ಗೆ ಏಕೆ ಸಾಧ್ಯವಾಗುತ್ತಿಲ್ಲ : ಪ್ರಹ್ಲಾದ್ ಜೋಶಿ
ಬೆಂಗಳೂರು : ರಾಜ್ಯ ಸರ್ಕಾರದಲ್ಲಿ ಉದ್ಭವಿಸಿರುವ ಮುಖ್ಯಮಂತ್ರಿ ಕುರ್ಚಿ ಗೊಂದಲದ ಸಮಸ್ಯೆ ಬಗೆಹರಿಸಲು ಕಾಂಗ್ರೆಸ್ ಹೈಕಮಾಂಡ್‌ಗೆ ಏಕೆ ಸಾಧ್ಯವಾಗುತ್ತಿಲ್ಲ ಎಂಬ ಪ್ರಶ್ನೆ ಮೂಡಿದೆ. ಪವರ್ ಶೇರಿಂಗ್ ಗೊಂದಲದಿಂದಾಗಿ ಇಡೀ ರಾಜ್ಯದಲ್ಲಿ ಅಸ್ಥಿರತೆ, ಅರಾಜಕತೆ ನಿರ್ಮಾಣವಾಗಿದೆ ಎಂದು ಕೇಂದ್ರ ಸಚಿವ ಪಲ್ಲಾದ್ ಜೋಶಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಎಂದರೆ ಭ್ರಷ್ಟಾಚಾರ, ಭ್ರಷ್ಟಾಚಾರ ಎಂದರೆ ಕಾಂಗ್ರೆಸ್ ಎನ್ನುವ ಸ್ಥಿತಿಯಿದೆ. ರಾಜ್ಯದಲ್ಲಿ ಅರಾಜಕತೆ, ಅಸ್ಥಿರತೆಯಿಂದ ಆಡಳಿತ ಯಂತ್ರದ ನಿಯಂತ್ರಣ ಕಳೆದುಕೊಂಡ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು. ಕಾಂಗ್ರೆಸ್ ಹೈಕಮಾಂಡ್ ರಾಜ್ಯದ ನಾಯಕರ…
