ಬುರ್ಖಾ ಧರಿಸಿ ತಲೆಮರೆಸಿಕೊಂಡಿದ್ದ ಸರಣಿ ಪ್ರಕರಣಗಳ ಆರೋಪಿ ಬಂಧನ

ಮಂಗಳೂರು, ಜುಲೈ 14: ಮಂಗಳೂರು ನಗರ ಹಾಗೂ ಉಡುಪಿ ಜಿಲ್ಲೆಯಲ್ಲಿ ದಾಖಲಾಗಿರುವ ಒಟ್ಟು 23 ಪ್ರಕರಣಗಳಲ್ಲಿ ಆರೋಪಿಯಾಗಿದ್ದ, ಹಲವು ಪ್ರಕರಣಗಳಲ್ಲಿ ನ್ಯಾಯಾಲಯದಿಂದ ವಾರಂಟ್ ಜಾರಿಯಾಗಿದ್ದರೂ ಪೊಲೀಸರಿಂದ ತಪ್ಪಿಸಿಕೊಳ್ಳಲು ಬುರ್ಖಾ ಧರಿಸಿ ತಲೆಮರೆಸಿಕೊಂಡು ಓಡಾಡುತ್ತಿದ್ದ ಇಮ್ರಾನ್ ಅಲಿಯಾಸ್ ‘ಸುರ್ಮೋ’ ಇಮ್ರಾನ್ನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿರುದ್ಧ ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಕಳವು ಸೇರಿದಂತೆ ಹಲವು ಅಪರಾಧ ಪ್ರಕರಣಗಳು ದಾಖಲಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಉಳ್ಳಾಲ ಪೊಲೀಸರು…

Read More

₹64 ಕೋಟಿ ವೆಚ್ಚದ ಸುಲ್ತಾನ್ ಬತ್ತೇರಿ–ತಣ್ಣೀರುಬಾವಿ ಬೋ ಸ್ಟಿಂಗ್ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಸಿದ್ಧ

ಮಂಗಳೂರು, ಜುಲೈ 14: ಮಂಗಳೂರಿನ ಸುಲ್ತಾನ್ ಬತ್ತೇರಿ ಮತ್ತು ತಣ್ಣೀರುಬಾವಿಯನ್ನು ಸಂಪರ್ಕಿಸುವ ₹64 ಕೋಟಿ ವೆಚ್ಚದ ಅತ್ಯಾಧುನಿಕ ಬೋ ಸ್ಟಿಂಗ್ ಮಾದರಿಯ ಸೇತುವೆ ಕಾಮಗಾರಿ ಅಂತಿಮ ಹಂತ ತಲುಪಿದ್ದು, ಎಲ್ಲವೂ ಯೋಜನೆಯಂತೆ ನಡೆದರೆ ಸೆಪ್ಟೆಂಬರ್ ಅಂತ್ಯದ ವೇಳೆಗೆ ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗುವ ನಿರೀಕ್ಷೆಯಿದೆ. ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ಫಲ್ಗುಣಿ ನದಿಗೆ ಅಡ್ಡಲಾಗಿ ನಿರ್ಮಾಣವಾಗುತ್ತಿರುವ ಈ ಸೇತುವೆ ನಗರದ ಹೊಸ ಆಕರ್ಷಣೆಯಾಗಿ ರೂಪುಗೊಂಡಿದೆ. ಕರ್ನಾಟಕದಲ್ಲೇ ಮೊದಲ ಬಾರಿಗೆ ನಿರ್ಮಾಣವಾಗುತ್ತಿರುವ ಬೋ ಸ್ಟಿಂಗ್ ಮಾದರಿಯ ವಾಹನ ಸಂಚಾರ…

Read More

ಮಂಜನಾಡಿ ಭೂಕುಸಿತ ಪ್ರಕರಣ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತುರ್ತು ನೋಟಿಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಜನಾಡಿ ಗ್ರಾಮದಲ್ಲಿ ಕಳೆದ ವರ್ಷ ಸಂಭವಿಸಿದ ಭೂಕುಸಿತ ಪ್ರಕರಣಕ್ಕೆ ಸಂಬಂಧಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಕೈಗೆತ್ತಿಕೊಂಡಿದೆ. ರಾಜ್ಯ ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆಗಳಿಗೆ ತುರ್ತು ನೋಟಿಸ್ ಜಾರಿಗೊಳಿಸಿ ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿದೆ. 2025ರ ಮೇ 30ರಂದು ಮುಂಜಾನೆ ಸಂಭವಿಸಿದ ಭೂಕುಸಿತದಲ್ಲಿ ಜೀವಹಾನಿ ಸಂಭವಿಸಿದ್ದು, ಅಶ್ವಿನಿ ಎಂಬವರು ಗಂಭೀರವಾಗಿ ಗಾಯಗೊಂಡು ಶಾಶ್ವತ ಅಂಗವೈಕಲ್ಯಕ್ಕೆ ಒಳಗಾಗಿದ್ದರು. ಈ ಘಟನೆಯ ಹಿನ್ನೆಲೆಯಲ್ಲಿ ರಸ್ತೆ ಕಾಮಗಾರಿ ಮತ್ತು ಭೂಕುಸಿತದ ನಡುವಿನ ಸಂಬಂಧವನ್ನು ಸ್ವತಂತ್ರವಾಗಿ…

Read More

ಶ್ರೀರಂಗಪಟ್ಟಣದ ಕಾವೇರಿಯಲ್ಲಿ ಗಾನಕೋಗಿಲೆ ಎಸ್. ಜಾನಕಿ ಅಸ್ಥಿ ವಿಸರ್ಜನೆ

ಮಂಡ್ಯ, ಜುಲೈ 14: ಭಾರತೀಯ ಚಿತ್ರರಂಗದ ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ದಿವಂಗತ ಎಸ್. ಜಾನಕಿ ಅವರ ಅಸ್ಥಿಗಳನ್ನು ಮಂಗಳವಾರ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಘೋಸಾಯಿ ಘಾಟ್ ಸಮೀಪದ ಪವಿತ್ರ ಕಾವೇರಿ ನದಿಯಲ್ಲಿ ವೈದಿಕ ವಿಧಿವಿಧಾನಗಳೊಂದಿಗೆ ವಿಸರ್ಜಿಸಲಾಯಿತು. ವೈದಿಕ ಅರ್ಚಕ ರಮೇಶ್ ಶರ್ಮಾ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು. ಎಸ್. ಜಾನಕಿ ಅವರ ಮೊಮ್ಮಗಳು ಅಪ್ಸರಾ ಅವರು ಕುಟುಂಬ ಸದಸ್ಯರ ಸಮ್ಮುಖದಲ್ಲಿ ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಅಪರ ಕ್ರಿಯೆಗಳನ್ನು ನೆರವೇರಿಸಿ ಅಸ್ಥಿ ವಿಸರ್ಜನೆ ಮಾಡಿದರು. ಈ…

Read More

14 ಬಾರಿ ವಾರಂಟ್ ಹೊರಡಿಸಿದ್ದರೂ ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಬಂಧನ

ಮಂಗಳೂರು: ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ, ನ್ಯಾಯಾಲಯದಿಂದ 14 ಬಾರಿ ದಸ್ತಗಿರಿ ವಾರೆಂಟ್ ಹೊರಡಿಸಿದ್ದರೂ, ವಿಳಾಸ ಬದಲಾಯಿಸಿ ಬಂಧನಕ್ಕೆ ಸಿಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಂಕನಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಭದ್ರಾವತಿಯ ಸಂತೆ ಮೈದಾನ ಬೋವಿ ಕಾಲನಿ ನಿವಾಸಿ ಚಂದ್ರಶೇಖರ್ ಲಿಂಗರಾಜ್ ಬೋವಿ (26) ಬಂಧಿತ ಆರೋಪಿ. ಕಂಕನಾಡಿ ನಗರ ಠಾಣೆಯಲ್ಲಿ 2024ರಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಈತ ನ್ಯಾಯಾಲಯದಿಂದ ಜಾಮೀನು ಪಡೆದು, ಒಂದೂವರೆ ವರ್ಷದಿಂದ ತಲೆ ಮರೆಸಿಕೊಂಡಿದ್ದ. ಪ್ರದಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರೋಪಿಗೆ 14 ಬಾರಿ ದಸ್ತಗಿರಿ…

Read More

ಎಸ್‌ಐಆರ್ ಪರಿಷ್ಕರಣೆ: ದಕ್ಷಿಣ ಕನ್ನಡದ ಮತದಾರರಿಗೆ ಜಿಲ್ಲಾಧಿಕಾರಿ ದರ್ಶನ್ ತುರ್ತು ಮನವಿ

ಮಂಗಳೂರ: ಚುನಾವಣಾ ಆಯೋಗದ ನಿರ್ದೇಶನದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (Special Intensive Revision – SIR) ಕಾರ್ಯದಲ್ಲಿ ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸುವಂತೆ ದ. ಕ ಜಿಲ್ಲಾಧಿಕಾರಿ ದರ್ಶನ್ ಮನವಿ ಮಾಡಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 18,03,766 ಮತದಾರರಿದ್ದು, ಅವರ ಪೈಕಿ 17,75,811 (98.45%) ಮಂದಿಗೆ ಬೂತ್ ಮಟ್ಟದ ಅಧಿಕಾರಿಗಳು (BLO) ಮನೆ-ಮನೆಗೆ ತೆರಳಿ ಎನ್ಯೂಮರೇಷನ್ ಫಾರಂಗಳನ್ನು ವಿತರಿಸಿದ್ದಾರೆ. ಆದರೆ, ಇದುವರೆಗೆ ಕೇವಲ 2,13,939 (11.86%) ಮತದಾರರು ಮಾತ್ರ ಭರ್ತಿ ಮಾಡಿದ ಫಾರಂಗಳನ್ನು ಹಿಂತಿರುಗಿಸಿದ್ದಾರೆ…

Read More

ಲಯನ್ಸ್ ಜಿಲ್ಲೆ 317D ವತಿಯಿಂದ 10 ಮಂದಿಗೆ ಕೃತಕ ಕಾಲು ವಿತರಣೆ

ಮಂಗಳೂರು: ಲಯನ್ಸ್ ಜಿಲ್ಲೆ 317D ವತಿಯಿಂದ ಹತ್ತು ಫಲಾನುಭವಿಗಳಿಗೆ ಸುಮಾರು ₹3 ಲಕ್ಷ ಮೌಲ್ಯದ ಕೃತಕ ಕಾಲುಗಳನ್ನು ವಿತರಿಸಲಾಯಿತು. ಲಯನ್ಸ್ ಜಿಲ್ಲಾ ಗವರ್ನರ್ ಕುಡ್ಪಿ ಅರವಿಂದ್ ಶೆಣೈ ಅವರು ಫಲಾನುಭವಿಗಳಿಗೆ ಕೃತಕ ಕಾಲುಗಳನ್ನು ವಿತರಿಸಿ ಶುಭ ಹಾರೈಸಿದರು. ಸಮಾಜಸೇವೆಯ ಅಂಗವಾಗಿ ಲಯನ್ಸ್ ಸಂಸ್ಥೆ ಅಗತ್ಯವಿರುವವರಿಗೆ ಕೃತಕ ಅಂಗಗಳನ್ನು ಒದಗಿಸುವ ಮೂಲಕ ಅವರ ಬದುಕಿಗೆ ಹೊಸ ಆಶಾಕಿರಣ ಮೂಡಿಸುವ ಕಾರ್ಯವನ್ನು ನಿರಂತರವಾಗಿ ಕೈಗೊಳ್ಳುತ್ತಿದೆ ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಲಯನ್ಸ್ ಲಿಂಬ್ ಸೆಂಟರ್‌ನ ನಿರ್ದೇಶಕರೂ ಖ್ಯಾತ ಎಲುಬು ತಜ್ಞರೂ…

Read More

ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ಶಾಖೆಯಲ್ಲಿ ಕಳ್ಳತನಕ್ಕೆ ಯತ್ನ; ಸ್ಲ್ಯಾಬ್‌ಗೆ ತೂತು ಕೊರೆದ ಕಳ್ಳರು

ಬಂಟ್ವಾಳ: ಇಲ್ಲಿನ ತಾಲೂಕಿನ ಫರಂಗಿಪೇಟೆಯ ಮಿನೇಜಸ್ ಪ್ಲಾಜಾದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ಕಳ್ಳತನದ ಯತ್ನ ನಡೆದಿರುವ ಶಂಕಾಸ್ಪದ ಘಟನೆ ಬೆಳಕಿಗೆ ಬಂದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಬ್ಯಾಂಕ್ ಶಾಖೆಯ ಮೇಲ್ಭಾಗದಲ್ಲಿರುವ ಕೊಠಡಿಯ ಸ್ಲ್ಯಾಬ್‌ಗೆ ತೂತು (ರಂಧ್ರ) ಕೊರೆದು ಒಳಗಡೆ ನುಗ್ಗಲು ದುಷ್ಕರ್ಮಿಗಳು ಯತ್ನಿಸಿರುವುದು ಪತ್ತೆಯಾಗಿದೆ. ಆದರೆ, ಬ್ಯಾಂಕ್‌ನಿಂದ ಯಾವುದೇ ನಗದು ಅಥವಾ ಇತರೆ ಬೆಲೆಬಾಳುವ ವಸ್ತುಗಳು ಕಳವಾಗಿರುವ ಬಗ್ಗೆ ಈವರೆಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳ ಭೇಟಿ:ವಿಷಯ ತಿಳಿಯುತ್ತಿದ್ದಂತೆ ದಕ್ಷಿಣ…

Read More

ಸೇವಾ ಸಪ್ತಾಹ ಅಂಗವಾಗಿ ಗೋಶಾಲೆಗೆ ಹಸಿ ಹುಲ್ಲು ವಿತರಣೆ

ಬಂಟ್ವಾಳ: ವಿಶ್ವಹಿಂದೂ ಪರಿಷದ್ ಹಾಗೂ ಭಜರಂಗದಳದ ಸೇವಾ ಸಪ್ತಾಹದ ಅಂಗವಾಗಿ ವಿಶ್ವಹಿಂದೂ ಪರಿಷದ್–ಭಜರಂಗದಳ ಕುಂಟಲಪಲ್ಕೆ ಘಟಕ, ಬಂಟ್ವಾಳ ಪ್ರಖಂಡದ ವತಿಯಿಂದ ಗೋಸಂರಕ್ಷಣೆಗೆ ಉತ್ತೇಜನ ನೀಡುವ ಉದ್ದೇಶದಿಂದ ವಿಶೇಷ “ಗೋವಿಗಾಗಿ ಮೇವು” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಭಾಗವಾಗಿ ಒಂದು ಪಿಕಪ್ ತುಂಬ ಹಸಿ ಹುಲ್ಲನ್ನು ಪಜೀರು ಗೋಶಾಲೆಗೆ ಹಸ್ತಾಂತರಿಸಲಾಯಿತು. ಗೋಸೇವೆಯನ್ನು ಸಮಾಜದ ಪ್ರತಿಯೊಬ್ಬರೂ ತಮ್ಮ ಕರ್ತವ್ಯವೆಂದು ಪರಿಗಣಿಸಬೇಕು ಎಂಬ ಸಂದೇಶದೊಂದಿಗೆ ಈ ಸೇವಾ ಕಾರ್ಯವನ್ನು ಆಯೋಜಿಸಲಾಗಿದ್ದು, ಕಾರ್ಯಕರ್ತರು ಉತ್ಸಾಹದಿಂದ ಭಾಗವಹಿಸಿದರು. ಈ ಸಂದರ್ಭದಲ್ಲಿ ಬಂಟ್ವಾಳ ಪ್ರಖಂಡದ ಅಧ್ಯಕ್ಷ ಪ್ರಸಾದ್…

Read More

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಭೇಟಿ: ಪಂಚಾಮೃತ ಮಹಾಭಿಷೇಕ ಸೇವೆ ಸಲ್ಲಿಕೆ

ಸುಬ್ರಹ್ಮಣ್ಯ: ರಾಜ್ಯ ಸರ್ಕಾರದ ಮಾಜಿ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ರೇವಣ್ಣ ಅವರು ಸೋಮವಾರ (ಜುಲೈ 13) ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಕ್ಷೇತ್ರಕ್ಕೆ ಆಗಮಿಸಿದ ಮಾಜಿ ಸಚಿವರನ್ನು ದೇವಸ್ಥಾನದ ವತಿಯಿಂದ ಶಿಷ್ಟಾಚಾರ ವಿಭಾಗದ ಪ್ರಮೋದ್ ಕುಮಾರ್ ಅವರು ಆತ್ಮೀಯವಾಗಿ ಬರಮಾಡಿಕೊಂಡರು. ಬಳಿಕ ದೇವರ ದರ್ಶನ ಪಡೆದ ರೇವಣ್ಣ ಅವರು, ಸ್ವಾಮಿಗೆ ನಡೆದ ಪಂಚಾಮೃತ ಮಹಾಭಿಷೇಕ ಸೇವೆಯಲ್ಲಿ ಪಾಲ್ಗೊಂಡರು. ಮಹಾಮಂಗಳಾರತಿ ವೀಕ್ಷಿಸಿ, ತೀರ್ಥಪ್ರಸಾದ ಸ್ವೀಕರಿಸಿದ ನಂತರ…

Read More
error: Content is protected !!