ಬಂಟ್ವಾಳ: ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ.
ಬಂಟ್ವಾಳ: ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಬಂಟ್ವಾಳ ತಾಲೂಕಿನ ಕಡೇಶಿವಾಲಯ ನಿವಾಸಿ ಹೇಮಂತ್ ಆಚಾರ್ಯ ( 21) ಎಂಬಾತನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಕಂಕನಾಡಿ ಪೋಲೀಸ್ ಠಾಣಾ ವ್ಯಾಪ್ತಿಯ ಬಜಾಲ್ ಮುಗೇರು ಎಂಬಲ್ಲಿ ನೇತ್ರಾವತಿ ನದಿ ಮಧ್ಯ ಭಾಗದಲ್ಲಿ ತೇಲಾಡುವ ಸ್ಥಿತಿಯಲ್ಲಿ ಪತ್ತೆಯಾಗಿದೆ.ಜುಲೈ 27ರಂದು ಹೇಮಂತ್ ಮನೆಯಿಂದ ನಾಪತ್ತೆಯಾಗಿದ್ದ, ಈ ಬಗ್ಗೆ ಜುಲೈ 28 ರಂದು ಸೋಮವಾರ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಜುಲೈ 29 ರಂದು ಮಂಗಳವಾರ ಮಧ್ಯಾಹ್ನದ ವೇಳೆ ಬಂಟ್ವಾಳ…