ನ್ಯಾಷನಲ್ ಹೆರಾಲ್ಡ್‌ ಕೇಸ್: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ರಾಹುಲ್ ವಿರುದ್ಧ ದೆಹಲಿ ನ್ಯಾಯಾಲಯ ತೀರ್ಪು ಸ್ವಾಗತಾರ್ಹ -ಮಂಜುನಾಥ ಭಂಡಾರಿ

ಮಂಗಳೂರು: ನ್ಯಾಷನಲ್ ಹೆರಾಲ್ಡ್‌ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ.) ಸಲ್ಲಿಸಿದ್ದ ಚಾರ್ಜ್‌ಶೀಟ್ ಅನ್ನು ಪರಿಗಣಿಸಲು ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯ ನಿರಾಕರಿಸಿರುವುದನ್ನು ವಿಧಾನ ಪರಿಷತ್ ಶಾಸಕ ಹಾಗೂ ಕೆಪಿಸಿಸಿ ಕಾರ್ಯಧ್ಯಕ್ಷರಾದ ಮಂಜುನಾಥ ಭಂಡಾರಿ ಅವರು ಸ್ವಾಗತಿಸಿದ್ದಾರೆ. ನ್ಯಾಯಾಲಯದ ತೀರ್ಪು ಸತ್ಯಕ್ಕೆ ಸಂದ ಜಯ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ. ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ನ್ಯಾಯಮೂರ್ತಿ ವಿಶಾಲ್…

Read More

ಕೋಳಿಮೊಟ್ಟೆ ಸೇವನೆಯ ಬಗ್ಗೆ ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ : ಆರೋಗ್ಯ ಸಚಿವ ದಿನೇಶ ಗುಂಡೂರಾವ್

ವಿಧಾನ ಪರಿಷತ್ತು: ಕೋಳಿಮೊಟ್ಟೆ ಸೇವನೆಯ ಬಗ್ಗೆ ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ತಿಳಿಸಿದರು. ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಮಂಗಳವಾರ ಮೇಲ್ಮನೆಯಲ್ಲಿ ಸದಸ್ಯ ರಮೇಶ ಬಾಬು ಅವರು ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ ಕೋಳಿ ಮೊಟ್ಟೆ ಸೇವನೆ ಕ್ಯಾನ್ಸರ್ ಗೆ ಕಾರಣವಾಗಲಿದೆ ಎಂಬ ವಿಷಯಕ್ಕೆ ಉತ್ತರಿಸಿದ ಸಚಿವರು, ಕಳೆದ ವರ್ಷ ನಾವು 124 ಮೊಟ್ಟೆಗಳ ಮಾದರಿ ಸಂಗ್ರಹಿಸಿ ಪರೀಕ್ಷೆಗೊಳಪಡಿಸಲಾಗಿತ್ತು. ಅದರಲ್ಲಿ 123 ಮೊಟ್ಟೆಗಳ ಫಲಿತಾಂಶ ಉತ್ತಮವಾಗಿದೆ. ಖಾಸಗಿ ಕಂಪನಿಯ ಮೊಟ್ಟೆಯನ್ನೂ ಲ್ಯಾಬ್…

Read More

ಕೆಲಸಕ್ಕೆಂದು ಮನೆಯಿಂದ ತೆರಳಿದ್ದ ರಾಝಿಮ್ ನಾಪತ್ತೆ … !

ಬಂಟ್ವಾಳ: ಕೆಲಸಕ್ಕೆಂದು ಮನೆಯಿಂದ ತೆರಳಿದ್ದ ಹದಿಹರೆಯದ ಯುವಕನೋರ್ವ ಕಾಣೆಯಾಗಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಪುಳಿತಪಡ್ಪು ನಿವಾಸಿ ಇದಿನಬ್ಬ ಅವರ ಮಗ ಮಹಮ್ಮದ್ ರಾಝಿಮ್ ( 23) ಎಂಬಾತ ಕಾಣೆಯಾಗಿರುವ ಯುವಕನಾಗಿದ್ದಾನೆ. ರಾಝಿಮ್ ಕಾರ್ಕಳದ ಕಂಪನಿಯ ಲಾರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಈತ ಪ್ರತಿದಿನ ಮನೆಗೆ ಬಂದು ಹೋಗುತ್ತಿದ್ದ. ಆದರೆ ಡಿ.5 ರಂದು ಮನೆಯಿಂದ ಕಾರ್ಕಳಕ್ಕೆ ಕೆಲಸಕ್ಕೆಂದು ಹೋದ ಈತ ಸಂಜೆ ಮನೆಗೆ ಬಾರದೆ ಕಾಣೆಯಾಗಿದ್ದಾನೆ. ಮೊಬೈಲ್ ಸ್ವಿಚ್ ಆಪ್…

Read More

ಪಾಣೆಮಂಗಳೂರು ಪೇಟೆಯಿಂದ ಆಲಡ್ಕವಾಗಿ ಮೆಲ್ಕಾರ್ ವರೆಗಿನ‌ ರಸ್ತೆಗೆ ತೇಪೆ ಭಾಗ್ಯ .. !

ಬಂಟ್ವಾಳ: ಬಂಟ್ವಾಳ ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಪೇಟೆಯಿಂದ ಆಲಡ್ಕವಾಗಿ ಮೆಲ್ಕಾರ್ ವರೆಗಿನ‌ ರಸ್ತೆಯ ಗುಂಡಿಯನ್ನು ಮುಚ್ಚಿ ತೇಪೆ ಕಾರ್ಯ ಆರಂಭಗೊಂಡಿದೆ. ಮೆಲ್ಕಾರ್ ನಿಂದ ಪಾಣೆಮಂಗಳೂರುವರೆಗೆ ರಸ್ತೆಯಲ್ಲಿ ಹೊಂಡಗುಂಡಿಗಳಿಂದ ತುಂಬಿದ್ದು, ಸಂಚಾರ ಮಾಡಲು ಅಸಾಧ್ಯವಾದ ಪರಿಸ್ಥಿತಿ ನಿರ್ಮಾಣವಾಗಿದೆ,ಹಾಗಾಗಿ ಈ ರಸ್ತೆಗೆ ಡಾಮರೀಕರಣ ಮಾಡುವಂತೆ ಇಲ್ಲಿನ ಪುರಸಭಾ ಸದಸ್ಯರಾಗಿದ್ದ ಅಬುಬಕ್ಕರ್ ಸಿದ್ದೀಕ್ ಗುಡ್ಡೆಯಂಗಡಿ ಅವರು ಮನವಿ ಮಾಡಿದ್ದರು. ಡಾಮರು ಕಾಣದೆ ಹತ್ತಾರು ವರ್ಷಗಳನ್ನು ಕಂಡಿರುವ ಈ ರಸ್ತೆಗೆ ಪೂರ್ತಿ ಮರುಡಾಮರೀಕರಣ ಹಾಗೂ ಎರಡು ಬದಿಯ ಚರಂಡಿಯ ಹೊಳೆತ್ತುವಂತೆ ಮತ್ತು ದುರಸ್ತಿ…

Read More

ಮಂಗಳೂರಿನ ಸಂತ ಆಗ್ನೇಸ್ ಕಾಲೇಜಿನಲ್ಲಿ ‘ನಶೆ ಮುಕ್ತ ಮಂಗಳೂರು’ ಅಭಿಯಾನದ ಅಂಗವಾಗಿ ಕಾರ್ನರ್ ಮೀಟ್ ‘… !

ಮಂಗಳೂರು:ಮೇಕ್ ಆ ಚೇಂಜ್ ಫೌಂಡೇಶನ್ ಹಾಗೂ ಮಂಗಳೂರು ನಗರ ಪೊಲೀಸ್ ಇಲಾಖೆಯ ಸಹಯೋಗದಲ್ಲಿ ‘ನಶೆ ಮುಕ್ತ ಮಂಗಳೂರು’ ಅಭಿಯಾನದ ಅಂಗವಾಗಿ ಕಾರ್ನರ್ ಮೀಟ್ ಕಾರ್ಯಕ್ರಮ ಮಂಗಳೂರಿನ ಸಂತ ಆಗ್ನೇಸ್ ಕಾಲೇಜಿನಲ್ಲಿ ಜರುಗಿತು.ಈ ಸಂದರ್ಭ ಮೇಕ್ ಆ ಚೇಂಜ್ ಫೌಂಡೇಶನ್ ಸಂಸ್ಥಾಪಕ ಸುಹೈಲ್ ಕಂದಕ್ ಮಾತನಾಡಿ, ಮಂಗಳೂರು ನಗರವು ಸಮೃದ್ಧ ಇತಿಹಾಸ ಹಾಗೂ ಶಿಕ್ಷಣ, ಆರೋಗ್ಯ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಹೆಸರು ಮಾಡಿರುವ ನಗರವಾಗಿದೆ. ಆದರೆ ಇತ್ತೀಚಿನ ಕೆಲ ದುರ್ಘಟನೆಗಳಿಂದ ಮಂಗಳೂರಿನ ಹೆಸರು ಋಣಾತ್ಮಕ ವಿಚಾರಗಳೊಂದಿಗೆ ಹೆಚ್ಚು ಕೇಳಿಬರುತ್ತಿರುವುದು…

Read More

ತೊಕ್ಕೊಟ್ಟುವಿನ ಕಲ್ಲಾಪು ಸೇವಂತಿಗುತ್ತು ಬಳಿ ನಿರ್ಮಾಣ ಕಾರ್ಯದ ಸಮಯದಲ್ಲಿ ಗುಡ್ಡ ಕುಸಿದು ಕಾರ್ಮಿಕನೊಬ್ಬನ ದುರ್ಮರಣ… !

ಮಂಗಳೂರು: ನಗರದ ಹೊರವಲಯದ ತೊಕ್ಕೊಟ್ಟುವಿನ ಕಲ್ಲಾಪು ಸೇವಂತಿಗುತ್ತು ಬಳಿ ನಿರ್ಮಾಣ ಕಾರ್ಯದ ಸಮಯದಲ್ಲಿ ಗುಡ್ಡ ಕುಸಿದು ಕಾರ್ಮಿಕನೊಬ್ಬ ಸಾವನ್ನಪ್ಪಿದ್ದಾನೆ . ಮೃತರನ್ನು ಹುನಗುಂದ ತಾಲೂಕಿನ ನಿವಾಸಿ ಬಾಳಪ್ಪ (45) ಎಂದು ಗುರುತಿಸಲಾಗಿದೆ. ಖಾಸಗಿ ಆಸ್ತಿಯಲ್ಲಿ ಐವರು ಕಾರ್ಮಿಕರು ತಡೆಗೋಡೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದಾಗ ಈ ಘಟನೆ ಸಂಭವಿಸಿದೆ. ಕೆಲಸದ ಸಮಯದಲ್ಲಿ, ದಿಬ್ಬವನ್ನು ಅಗೆಯಲು ಜೆಸಿಬಿ ಬಳಸುತ್ತಿದ್ದಾಗ ಅದು ಇದ್ದಕ್ಕಿದ್ದಂತೆ ಕುಸಿದಿದೆ. ಸ್ಥಳದಲ್ಲಿ ಗಾರೆ ಹಿಡಿದು ಕೆಲಸ ನಿರ್ವಹಿಸುತ್ತಿದ್ದ ಬಾಳಪ್ಪ ದಿಡೀರ್‌ ಕುಸಿತಗೊಂಡ ಮಣ್ಣಿನಡಿಯಲ್ಲಿ ಹೂತುಹೋದರು. ಅವರು ತೀವ್ರವಾಗಿ…

Read More

ಬಾವಿಯಿಂದ ನೀರು ಸೇದುವ ವೇಳೆ ಬಾವಿಗೆ ಬಿದ್ದು ಒಂದೂವರೆ ವರ್ಷದ ಕಂದಮ್ಮ ದಾರುಣ ಸಾವು … !

ಉಡುಪಿ:ತಾಯಿ ಬಾವಿಯಿಂದ ನೀರು ಸೇದುತ್ತಿದ್ದ ವೇಳೆ ಬಾವಿಗೆ ಬಿದ್ದು ಒಂದೂವರೆ ವರ್ಷದ ಕಂದಮ್ಮ ದಾರುಣವಾಗಿ ಸಾವನ್ನಪ್ಪಿದ ಘಟನೆ ಉಡುಪಿ ತಾಲೂಕಿನ ಕಿನ್ನಿಮೂಲ್ಕಿಯಲ್ಲಿ ನಡೆದಿದೆ.ಮಗುವಿನ ತಾಯಿ ಮಗುವನ್ನು ಎತ್ತಿಕೊಂಡು ಮನೆ ಸಮೀಪದ ಬಾವಿಯಿಂದ ನೀರು ಸೇದುತ್ತಿದ್ದರು. ಈ ವೇಳೆ ಮಗು ಆಯತಪ್ಪಿ ಬಾವಿಗೆ ಬಿದ್ದಿದೆ. ಈ ವೇಳೆ ತಾಯಿ ತಕ್ಷಣವೇ ಹಗ್ಗದ ಸಹಾಯದಿಂದ ಬಾವಿಗೆ ಇಳಿದು ಮಗುವನ್ನು ರಕ್ಷಿಸಲು ಯತ್ನಿಸಿದರೂ, ಅಷ್ಟರಲ್ಲೇ ಮಗು ಮೃತಪಟ್ಟಿದೆ. ಘಟನೆಯ ಮಾಹಿತಿ ತಿಳಿದ ಕೂಡಲೇ ಉಡುಪಿ ನಗರ ಪೊಲೀಸ್ ಠಾಣೆಯ ಪಿಎಸ್‌ಐ ಭರತೇಶ್…

Read More

ಡಿ 19 ರಿಂದ 21 ರ ತನಕ ಸುರತ್ಕಲ್ ಬಂಟರ ಭವನದ ಆವರಣದಲ್ಲಿ “ಪರ್ವ 2025” ಸೀರೆ ಮೇಳ, ಲೈಫ್ ಸ್ಟೈಲ್ ಮತ್ತು ಫುಡ್ ಫೆಸ್ಟಿವೆಲ್ …. !

ಮಂಗಳೂರು: ಮಹಿಳಾ ವೇದಿಕೆ ಬಂಟರ ಸಂಘ ಸುರತ್ಕಲ್ ಇದರ ಆಶ್ರಯದಲ್ಲಿ ಡಿಸೆಂಬರ್ 19, 20 ಮತ್ತು 21 ರಂದು ಸುರತ್ಕಲ್ ಬಂಟರ ಭವನದ ಆವರಣದಲ್ಲಿ “ಪರ್ವ 2025” ಸೀರೆ ಮೇಳ, ಲೈಫ್ ಸ್ಟೈಲ್ ಮತ್ತು ಫುಡ್ ಫೆಸ್ಟಿವೆಲ್ ನಡೆಯಲಿದೆ ಎಂದು ಮಹಿಳಾ ವೇದಿಕೆ ಬಂಟರ ಸಂಘ ಸುರತ್ಕಲ್ ಇದರ ಅಧ್ಯಕ್ಷರಾದ ಸರೋಜಾ ಟಿ ಶೆಟ್ಟಿ ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು . ಈ ಬಗ್ಗೆ ಸಂಘದ ಕಾರ್ಯದರ್ಶಿಗಳಾದ ರಾಜೇಶ್ವರಿ ಡಿ ಶೆಟ್ಟಿ ಹೆಚ್ಚಿನ ಮಾಹಿತಿಯನ್ನು ನೀಡಿ,…

Read More

ಮಣೇಲ್ ಗ್ರಾಮದಲ್ಲಿ ಅಬ್ಬಕ್ಕ ರಾಣಿ ಗ್ರಾಮೋತ್ಸವ ನಡೆಯಲಿ : ಡಾ.ಚಿನ್ನಪ್ಪ ಗೌಡ’ಮಣೇಲ್‌ದ ಪೆರ್ಮೆ ರಾಣಿ ಅಬ್ಬಕ್ಕ’ ವಿಚಾರಗೋಷ್ಠಿ

ಮಂಗಳೂರು: ರಾಣಿ ಅಬ್ಬಕ್ಕನ ಅರಮನೆ ಇದ್ದಂತಹ ಹಾಗೂ ವಿದೇಶಿ ಪ್ರವಾಸಿ ಅಬ್ಬಕ್ಕನನ್ನು ಭೇಟಿ ಮಾಡಿದ ಗಂಜೀಮಠ ಗ್ರಾಂ.ಪಂ ವ್ಯಾಪ್ತಿಯ ಮಣೇಲಿನಲ್ಲಿ ಅಬ್ಬಕ್ಕ ರಾಣಿಯ ಉತ್ಸವ ಗ್ರಾಮೋತ್ಸವದ ರೂಪದಲ್ಲಿ ಆರಂಭಗೊಳ್ಳಬೇಕು, ಸಹಬಾಳ್ವೆ, ಕೋಮು ಸಾಮರಸ್ಯ, ಬಹುತ್ವದ ಜೀವನ ಮೌಲ್ಯಗಳನ್ನು ಕಟ್ಟಿಕೊಡುವ ಜತೆಗೆ ಅಬ್ಬಕ್ಕ ರಾಣಿಯ ಐತಿಹ್ಯದ ದಿನಗಳನ್ನು ಸ್ಮರಿಸಿಕೊಳ್ಳುವಂತಹ ‘ಅಬ್ಬಕ್ಕ’ ಸಾಂಸ್ಕೃತಿಕ ಗ್ರಾಮವನ್ನು ಕಟ್ಟುವ ಕಾರ್ಯ ನಡೆಯಬೇಕು ಎಂದು ಜಾನಪದ ವಿದ್ವಾಂಸ, ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ. ಕೆ. ಚಿನ್ನಪ್ಪ ಗೌಡ ಹೇಳಿದರು. ಅವರು ಕರ್ನಾಟಕ…

Read More

ಸರಕು ವಾಹನದಲ್ಲಿ ಕಾರ್ಮಿಕರ ಸಾಗಾಟ: 10ಸಾವಿರ ದಂಡ ಹಾಕಿದ ಕೋರ್ಟ್ … !

ಉಡುಪಿ:ಪೋಲೀಸರ ಎಚ್ಚರಿಕೆಯನ್ನು ಲೆಕ್ಕಿಸದೆ ಗೂಡ್ಸ್ ವಾಹನದಲ್ಲಿ ಸೆಂಟ್ರಿಂಗ್ ಮಷೀನ್ ಗಳೊಂದಿಗೆ ಕೂಲಿ ಕಾರ್ಮಿಕರನ್ನು ಸಾಗಿಸುವ ಕೆಲಸ ನಿರಂತರ ಹಾಗೂ ನಿರಾತಂಕವಾಗಿ ನಡೆಯುತ್ತಿದ್ದು ಪೊಲೀಸರು ವಾಹನವನ್ನು ಬೆನ್ನಟ್ಟಿ ಹಿಡಿದು ನ್ಯಾಯಾಲಯಕ್ಕೆ ಹಾಜರುಪಡಿಸಿ ಕಾರ್ಕಳ ನ್ಯಾಯಾಲಯವು ವಾಹನದ ಮಾಲಕ ನಾಗಪ್ಪ ಎಂಬವರಿಗೆ 10 ಸಾವಿರ ದಂಡವಿಧಿಸಿದೆ. ಕಾರ್ಕಳ ಪರಿಸರದಲ್ಲಿ ಮಾತ್ರವಲ್ಲ ಜಿಲ್ಲೆಯದ್ಯಂತ ಬೆಳಿಗ್ಗೆ ಕೆಲಸಕ್ಕೆ ಕರೆದುಕೊಂಡು ಮತ್ತು ಕೆಲಸ ಮುಗಿಸಿ ಹಿಂದಿರುಗುವ ಸಂದರ್ಭದಲ್ಲಿ ಕೂಲಿ ಕಾರ್ಮಿಕರನ್ನು ಸಿಮೆಂಟ್ ಕಾಂಕ್ರೀಟ್ ಮಷೀನ್ ನೊಟ್ಟಿಗೆ ತುಂಬಿಕೊಂಡು ಹೋಗುತ್ತಿರುವುದು ಸರ್ವೇ ಸಾಮಾನ್ಯವಾಗಿದೆ. ಪೊಲೀಸರು ಈ…

Read More
error: Content is protected !!