ಫಾದರ್ ಮುಲ್ಲರ್ ಹೋಮಿಯೋಪತಿ ವೈದ್ಯಕೀಯ ಕಾಲೇಜಿನ ಅಂತರಾಷ್ಟ್ರೀಯ ಹೋಮಿಯೋಪತಿ ಸಮ್ಮೇಳನ.ಎಕ್ಸ್‌ಪ್ಲೋರಾ 2025

ಫಾದರ್ ಮಲ್ಲರ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜ್ (FMHMC) ಮತ್ತು ಗ್ಲೋಬಲ್ ಹೋಮಿಯೋಪಥಿ ಫೌಂಡೇಶನ್ (GHF) ಹಾಗೂ ನವದೆಹಲಿಯ ಸೆಂಟ್ರಲ್  ಕೌನ್ಸಿಲ್ ಫಾರ್ ರಿಸರ್ಚ್ ಇನ್ ಹೋಮಿಯೋಪಥಿ (CCRH) ಯ ಸಹಯೋಗದಲ್ಲಿ, ಎಕ್ಸ್‌ಪ್ಲೋರಾ 2025 – ಹೋಮಿಯೋಪಥಿಕ್ ಶಿಕ್ಷಣ, ಅಭ್ಯಾಸ ಮತ್ತು ಸಂಶೋಧನೆಗಳ ಏಕೀಕರಣ ಎಂಬ ಅಂತರಾಷ್ಟ್ರೀಯ ಹೋಮಿಯೋಪಥಿ ಸಮ್ಮೇಳನದ ಉದ್ಘಾಟನಾ ಕಾರ್ಯಕ್ರಮವು 2025ರ ನವೆಂಬರ್ 14ರಂದು ಬೆಳಿಗ್ಗೆ 11.30ಕ್ಕೆ ಕಂಕನಾಡಿಯ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಿತು. ಕರ್ನಾಟಕ ಸರ್ಕಾರದ ಆಯುಷ್ ಇಲಾಖೆಯ ಮುಖ್ಯ ಆಡಳಿತಾಧಿಕಾರಿ ಶ್ರೀಮತಿ…

Read More

ನಾಳೆ ಕರ್ನಾಟಕ ರಾಜ್ಯ ಮರಾಟಿ ಒಕ್ಕೂಟ ಉದ್ಘಾಟನೆ

ಕರ್ನಾಟಕ ರಾಜ್ಯ ಮರಾಟ ಒಕ್ಕೂಟ ಮಂಗಳೂರು ಇದರ ಉದ್ಘಾಟನೆ ಮತ್ತು ಅಭಿನಂದನಾ ಸಮಾರಂಭವು ನ.16ರಂದು ಪುತ್ತೂರಿನ ಕೊಂಬೆಟ್ಟು ಮರಾಟಿ ಸಮಾಜ ಮಂದಿರದಲ್ಲಿ ನಡೆಯಲಿದೆ ಎಂದು ಒಕ್ಕೂಟದ ಅಧ್ಯಕ್ಷ ಡಾ.ಕೆ.ಸುಂದರ್ ನಾಯಕ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.ನೂತನ ಒಕ್ಕೂಟವನ್ನು ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟಿಸಲಿದ್ದಾರೆ. ಒಕ್ಕೂಟದ ಅಧ್ಯಕ್ಷ ಡಾ.ಕೆ.ಸುಂದರ್ ನಾಯಕ್ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಸಂದರ್ಭ ರಾಜ್ಯ ಮರಾಟಿ ಒಕ್ಕೂಟದ ಗೌರವಾಧ್ಯಕ್ಷ, ಭಾರತ ಸರಕಾರದ ಕೇಂದ್ರಾ ಡಳಿತ ಪ್ರದೇಶ ಮತ್ತು ಚಂಡೀಗಡದ ಮುಖ್ಯ ಕಾರ್ಯದರ್ಶಿ ಎಚ್.ರಾಜೇಶ್ ಪ್ರಸಾದ್‌ರನ್ನು ಅಭಿನಂದಿಸಿ ಗೌರವಿಸಲಾಗುವುದು….

Read More

ನಾಳೆ ಮಂಗಳೂರಿನಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹ, ‘ಸಹಕಾರ ಮಾಣಿಕ್ಯ’ ಪ್ರಶಸ್ತಿ ವಿತರಣೆ …. !

ಮಂಗಳೂರು: ಅವಿಭಜಿತ ದ.ಕ. ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಉತ್ತಮ ಸಹಕಾರಿ ಸಂಘಗಳನ್ನು ಗುರುತಿಸುವ ಉದ್ಧೇಶದಿಂದ ನ.16ರಂದು ನಡೆಯುವ 2025ನೇ ಸಾಲಿನ ಅಖಿಲ ಭಾರತ ಸಹಕಾರ ಸಪ್ತಾಹದ ಸಂಭ್ರಮ ಆಚರಣೆಯ ಸಂದರ್ಭದಲ್ಲಿ ‘ಸಹಕಾರ ಮಾಣಿಕ್ಯ’ ಪ್ರಶಸ್ತಿಯನ್ನು ನೀಡಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯುವ 72ನೇ ಸಹಕಾರ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು…

Read More

ವ್ಯಕ್ತಿಯೊಬ್ಬರ ಮೃತದೇಹ ರಕ್ತಸಿಕ್ತ ರೀತಿಯಲ್ಲಿ ಪತ್ತೆ-ನಾಯಿ ದಾಳಿಯಿಂದ ವ್ಯಕ್ತಿ ಮೃತಪಟ್ಟಿದ್ದಾರೆಂಬ ಶಂಕೆ

ವ್ಯಕ್ತಿಯೊಬ್ಬರ ಮೃತದೇಹ ರಕ್ತಸಿಕ್ತ ರೀತಿಯಲ್ಲಿ ಪತ್ತೆಯಾದ ಘಟನೆ ಮಂಗಳೂರಿನ ಕುಂಪಲ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ದಯಾನಂದ ಎಂದು ಗುರುತಿಸಲಾಗಿದೆ. ಉಳ್ಳಾಲ ಠಾಣೆಯ ಕುಂಪಲ ಬೈಪಾಸ್ ಎಂಬಲ್ಲಿನ ಮನೆಯೊಂದರ ಅಂಗಳದಲ್ಲಿ ಇವ್ರ ಮೃತದೇಹ ಸಿಕ್ಕಿದ್ದು, ನಾಯಿ ದಾಳಿಯಿಂದ ವ್ಯಕ್ತಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇಲ್ಲಿರೋ ಲಾಂಡ್ರಿ ಎದುರಲ್ಲೇ ದಯಾನಂದ್ ಮೇಲೆ ದಾಳಿ ನಡೆದಿರಬಹುದು ಎಂದು ಶಂಕಿಸಲಾಗಿದೆ. ಪಕ್ಕದಲ್ಲೇ ಮುಖಕ್ಕೆ ರಕ್ತ ಲೇಪಿಸಿದ್ದ ಬೀದಿ ನಾಯಿಯೊಂದು ಇದ್ದು ಜನರನ್ನು ಕಂಡು ಓಡಿ ಹೋಗಿದೆ. ಸ್ಥಳೀಯರು ಘಟನೆ ಬಗ್ಗೆ ಉಳ್ಳಾಲ ಪೊಲೀಸರಿಗೆ ಮಾಹಿತಿ…

Read More

ಮಾರುಕಟ್ಟೆಗೆ “ನಂದಿನಿ” ಸೀಡ್ ಡಿಲೈಟ್ ಮತ್ತು “ನಂದಿನಿ” ಗುವಾ ಚಿಲ್ಲಿ ಲಸ್ಸಿ ಶೀಘ್ರವೇ ಮಾರುಕಟ್ಟೆಗೆ ಬಿಡುಗಡೆ….!

ಮಂಗಳೂರು: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ವತಿಯಿಂದ ನವೆಂಬರ್ 16 ರಂದು ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ಜರುಗಲಿರುವ 72ನೇ ಅಖಿಲ ಭಾರತ ಸಹಕಾರಿ ಸಪ್ತಾಹದ ಆಚರಣೆಯ ಸುಸಂದರ್ಭದಲ್ಲಿ “ನಂದಿನಿ”. ಉತ್ಪನ್ನಗಳ ಶ್ರೇಣಿಗೆ ಸೀಡ್ಸ್ ಡಿಲೈಟ್ ಮತ್ತು ಗುವಾ ಚಿಲ್ಲಿ ಲಸ್ಸಿ ಉತ್ಪನ್ನವು ನೂತನವಾಗಿ ಬಿಡುಗಡೆಗೊಳ್ಳಲಿದೆ ಎಂದು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷರಾದ ರವಿರಾಜ ಹೆಗ್ಡೆ ತಿಳಿಸಿದರು. ಅವರು ಕುಲಶೇಖರದ ಕೆ ಎಂ ಎಫ್ ಡೈರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಂದಿನಿ…

Read More

ಭಾರತ ಸೇವಾದಳ ವತಿಯಿಂದ ನೆಹರೂ ಜಯಂತಿ, ಮಕ್ಕಳ ದಿನಾಚರಣೆ

ಭಾರತ ಸೇವಾದಳ ವತಿಯಿಂದ ತಾ 14.11.2025ರಂದು ನಗರದ ಪಾಂಡೇಶ್ವರದಲ್ಲಿರುವ ನೆಹರೂ ಪ್ರತಿಮೆ ಬಳಿ ದೇಶದ ಮೊದಲ ಪ್ರಧಾನ ಮಂತ್ರಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಜಯಂತಿ ಹಾಗೂ ಮಕ್ಕಳ ದಿನಾಚರಣೆಯ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿ ಮಾತನಾಡಿದ ಭಾರತ ಸೇವಾದಳದ ಕೇಂದ್ರ ಸಮಿತಿ ಸದಸ್ಯ ಬಶೀರ್ ಬೈಕಂಪಾಡಿಯವರು, ಜವಾಹರಲಾಲ್ ನೆಹರೂರವರು ಆಧುನಿಕ ಭಾರತದ ಶಿಲ್ಪಿಯಾಗಿದ್ದರು. ಅವರು ಪ್ರಧಾನಿಯಾಗಿದ್ದಾಗ ಹಾಕಿದ ಪಂಚ ವಾರ್ಷಿಕ ಯೋಜನೆಗಳು ದೇಶವನ್ನು ಅಭಿವೃದ್ಧಿ ಪಡಿಸುವಲ್ಲಿ ಸಹಕಾರಿಯಾಯಿತು. ಅವರ ಅವಧಿಯಲ್ಲಿ ಅನೇಕ ಬೃಹತ್ ಕೈಗಾರಿಕೆಗಳು, ಬ್ಯಾಂಕ್…

Read More

ಜನವರಿ 3 ರಿಂದ 11ರ ತನಕ ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದಲ್ಲಿ ಅಂತರ್ ಕಾಲೇಜು ಕ್ರೀಡಾ ಉತ್ಸವ ‘ಅಲೋಶಿಯನ್ ಗೇಮ್ಸ್ 2026’

ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯವು, ಕರ್ನಾಟಕದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿದೆ, ಇದು ಶೈಕ್ಷಣಿಕ, ಕ್ರೀಡೆ ಮತ್ತು ಸಮಗ್ರ ವಿದ್ಯಾರ್ಥಿ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದೆ . ಯುವಜನರಲ್ಲಿ ನಾಯಕತ್ವ, ಶಿಸ್ತು, ಮತ್ತು ಸಮುದಾಯ ಮನೋಭಾವವನ್ನು ಬೆಳೆಸುವಲ್ಲಿ ಯಶಸ್ವಿಯಾಗಿದೆ . ಈ ಭಾರಿ ವಿದ್ಯಾರ್ಥಿಗಳಿಗೆ , ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ದಕ್ಷಿಣ ಭಾರತದ ಅತಿದೊಡ್ಡ ಅಂತರ್ ಕಾಲೇಜು ಕ್ರೀಡಾ ಉತ್ಸವಗಳಲ್ಲಿ ಒಂದಾದ, ‘ಅಲೋಸಿಶಿಯನ್ ಗೇಮ್ 2026 ಕ್ರೀಡಾಕೂಟವನ್ನು ಸಂಸ್ಥೆಯು ಜನವರಿ 3 ರಿಂದ 11ರ…

Read More

ನಗರ ವ್ಯಾಪ್ತಿಯೊಳಗಿರುವ ವಿವಿಧ ರಸ್ತೆಗಳ ಸಮಸ್ಯೆಗೆ ಸಂಬಂಧಪಟ್ಟಂತೆ ಶಾಸಕ ವೇದವ್ಯಾಸ ಕಾಮತ್ ರವರು ಪಾಲಿಕೆ ಅಧಿಕಾರಿಗಳೊಂದಿಗೆ ಸಭೆ

ನಗರ ವ್ಯಾಪ್ತಿಯೊಳಗಿರುವ ವಿವಿಧ ರಸ್ತೆಗಳ ಸಮಸ್ಯೆಗೆ ಸಂಬಂಧಪಟ್ಟಂತೆ ಶಾಸಕ ವೇದವ್ಯಾಸ ಕಾಮತ್ ರವರು ಪಾಲಿಕೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಪಂಪ್ ವೆಲ್- ಉಜ್ಜೋಡಿ, ಜೆಪ್ಪು ಮಾರ್ಕೆಟ್ – ಲೀವೆಲ್, ಮುಳಿಹಿತ್ಲು ಮೊದಲಾದ ಪ್ರದೇಶಗಳ ರಸ್ತೆ ಅಗಲೀಕರಣ ಕಾಮಗಾರಿಯು ತ್ವರಿತವಾಗಿ ನಡೆಯಬೇಕು. ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿರುವ ಸರ್ವಿಸ್ ರಸ್ತೆಗಳ ಬಗ್ಗೆ ಎನ್.ಎಚ್ ಅಧಿಕಾರಿಗಳು ವಿಶೇಷ ಗಮನಹರಿಸಬೇಕು. ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಎಚ್ಚರವಹಿಸಿ ಕಾರ್ಯನಿರ್ವಹಿಸಬೇಕು ಎಂದರು. ಪಂಪ್ ವೆಲ್ ನಲ್ಲಿರುವ “ಮಹಾವೀರ ವೃತ್ತ”ದ ಹೆಸರನ್ನು ತುಳುವಿನಲ್ಲೂ ಬರೆಯುವ ಬಗ್ಗೆ…

Read More

ನವೆಂಬರ್ 16 ರಂದು ಗಣ್ಯರ ಸಮುಖದಲ್ಲಿ ಕಟೀಲು ಏಳನೆಯ ಯಕ್ಷಗಾನ ಮೇಳದ ಭವ್ಯ ಪಾದಾರ್ಪಣೆ …. ! ತಿರುಗಾಟ ಆರಂಭ

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಿಂದ ನಡೆಸಲ್ಪಡುವ ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ಈ ವರುಷದ ತಿರುಗಾಟದ ಆರಂಭೋತ್ಸವದಂದು ಏಳನೆಯ ಮೇಳದ ಪಾದಾರ್ಪಣೆಯು ನವೆಂಬರ್ 16ರ ಭಾನುವಾರದಂದು ನಡೆಯಲಿದ್ದು . ತಾ. 15ರ ಶನಿವಾರ ಮಧ್ಯಾಹ್ನ 3 ಗಂಟೆಗೆ ಎಂಟು ಸ್ತಬ್ಧಚಿತ್ರಗಳಲ್ಲಿ ಕಟೀಲಿನ ಏಳೂ ಮೇಳಗಳ ದೇವರು, ತೊಟ್ಟಿಲು. ಚಿನ್ನ ಬೆಳ್ಳಿಗಳ ಕಿರೀಟ ಇತ್ಯಾದಿ ಪರಿಕರಗಳನ್ನು ವೈಭವದ ಮೆರವಣಿಗೆಯಲ್ಲಿ ಬಜಪೆಯಿಂದ ಕಟೀಲಿಗೆ ತಂದು ದೇವರಿಗೆ ಒಪ್ಪಿಸಲಾಗುವುದೆಂದು ದೇವಾಲಯದ ಆನುವಂಶಿಕ ಅರ್ಚಕರಾದ ಹರಿನಾರಾಯಣದಾಸ ಆಸ್ರಣ್ಣ ತಿಳಿಸಿದರು…

Read More

ಬರಕಾ ಇಂಟರ್ನ್ಯಾಷನಲ್ ಶಾಲೆ ಮತ್ತು ಕಾಲೇಜು ವತಿಯಿಂದ “ಎಕ್ಸ್‌ಪ್ಲೋರಿಯಾ” ಶೈಕ್ಷಣಿಕ ಮಹೋತ್ಸವ.

ಮಂಗಳೂರು: ಬರಕಾ ಇಂಟರ್ನ್ಯಾಷನಲ್ ಶಾಲೆ ಮತ್ತು ಕಾಲೇಜು “ಎಕ್ಸ್‌ಪ್ಲೋರಿಯಾ” ಎಂಬ ಜ್ಞಾನ ಮತ್ತು ಸೃಜನಶೀಲತೆಯ ದಿನಾಚರಣೆಯು ನವೆಂಬರ್ 15 ರಂದು ಬೆಳಗ್ಗೆ 9:30 ರಿಂದ ಸಂಜೆ 4:30 ರ ತನಕ ಮಂಗಳೂರಿನ ಅಡ್ಯಾರ್‌ನಲ್ಲಿರುವ ಕಾಲೇಜು ಆವರಣದಲ್ಲಿ ನಡೆಯಲಿದೆ ಎಂದು ಪ್ರಾಂಶುಪಾಲರಾದ ಶರ್ಫುದ್ದೀನ್ ಬಿ ಎಸ್ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಇದು ವಿಜ್ಞಾನ, ಪರಿಸರ, ಇಸ್ಲಾಮಿಕ್ ಅಧ್ಯಯನ ಮತ್ತು ಇನ್ನೂ ಹಲವು ವಿಷಯಗಳನ್ನು ಪ್ರದರ್ಶಿಸುವ ಆಕರ್ಷಕ ಪ್ರದರ್ಶನಗಳು, ಚಟುವಟಿಕೆಗಳು ಮತ್ತು…

Read More
error: Content is protected !!