5.ಲಕ್ಷ ವೆಚ್ಚದಲ್ಲಿ ರಸ್ತೆ ಕಾಂಕ್ರೀಟೀಕರಣ -ಶಾಸಕ ವೇದವ್ಯಾಸ ಕಾಮತ್ ಉದ್ಘಾಟನೆ
ಮಂಗಳೂರು ಮಹಾನಗರ ಪಾಲಿಕೆಯ 29 ನೇ ಕಂಬ್ಳ ವಾರ್ಡ್ ನ ಪಿ.ವಿ.ಎಸ್ ವೃತ್ತದಿಂದ ಲಕ್ಷ್ಮೀ ನಗರ ವಸತಿ ಸಂಕೀರ್ಣ ಸಂಪರ್ಕ ರಸ್ತೆಯು ರೂ 5.ಲಕ್ಷ ವೆಚ್ಚದಲ್ಲಿ ಕಾಂಕ್ರೀಟೀಕರಣಗೊಂಡಿದ್ದು ಶಾಸಕ ವೇದವ್ಯಾಸ ಕಾಮತ್ ರವರು ಉದ್ಘಾಟನೆಗೊಳಿಸಿದರು. ನಂತರ ಮಾತನಾಡಿದ ಶಾಸಕರು, ಸ್ಥಳೀಯ ನಿಕಟ ಪೂರ್ವ ಪಾಲಿಕೆ ಸದಸ್ಯೆ ಶ್ರೀಮತಿ ಲೀಲಾವತಿ ಪ್ರಕಾಶ್ ರವರು ವಿಶೇಷ ಮುತುವರ್ಜಿ ವಹಿಸಿದ್ದರ ಪರಿಣಾಮ ಈ ರಸ್ತೆಯು ಕಾಂಕ್ರೀಟೀಕರಣಗೊಂಡಿದ್ದು ವಿಶೇಷವಾಗಿ ಲಕ್ಷ್ಮೀನಗರ ಅಪಾರ್ಟ್ಮೆಂಟ್ ನಿವಾಸಿಗಳಿಗೆ ಅನುಕೂಲವಾಗಿರುವುದು ಸಂತಸದ ಸಂಗತಿ ಎಂದರು. ಇದೇ ಸಂದರ್ಭದಲ್ಲಿ ದ.ಕ…
