ಗೋಮಾತೆಗೆ ರಾಷ್ಟ್ರಮಾತೆ ಸ್ಥಾನಮಾನಕ್ಕೆ ಆಗ್ರಹ: ಜು.27ರಂದು ಉಡುಪಿ ಜಿಲ್ಲಾಧಿಕಾರಿಗೆ ಮನವಿ

ಉಡುಪಿ: ಗೋಮಾತೆಗೆ ರಾಷ್ಟ್ರಮಾತೆ, ರಾಷ್ಟ್ರೀಯ ದೇವತೆ, ರಾಷ್ಟ್ರೀಯ ಪರಂಪರೆ ಹಾಗೂ ರಾಷ್ಟ್ರೀಯ ಗೌರವದ ಸ್ಥಾನಮಾನ ನೀಡಬೇಕು. ಗೋಸೇವೆಗಾಗಿ ಕೇಂದ್ರ ಕಾನೂನು ಜಾರಿಗೊಳಿಸಿ, ದೇಶಾದ್ಯಂತ ಗೋಹತ್ಯೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಆಗ್ರಹಿಸಿ ರಾಷ್ಟ್ರಮಟ್ಟದ ನಾಲ್ಕು ಹಂತದ ‘ಗೋ ಸಮ್ಮಾನ್ ಆಹ್ವಾನ ಅಭಿಯಾನ’ ಹಮ್ಮಿಕೊಳ್ಳಲಾಗಿದೆ ಎಂದು ಶಂಕರಪುರದ ದ್ವಾರಕಾಮಾಯಿ ಮಠದ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ತಿಳಿಸಿದರು. ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಾದ್ಯಂತ ಆಚಾರ್ಯರು, ಸಾಧು–ಸಂತರು, ಗೋಸೇವಾ ಸಂಸ್ಥೆಗಳು, ಗೋಪಾಲಕರು ಹಾಗೂ ಗೋಭಕ್ತರ ಸಹಭಾಗಿತ್ವದಲ್ಲಿ ಈ…

Read More

ಜು. 15ರಂದು ಅಭಿಸರಣ್ ಆಕ್ವೇಟಿಕ್ ಸೆಂಟರ್ ಲೋಕಾರ್ಪಣೆ

ಮಂಗಳೂರು, ಜು. 13: ನಗರದ ಬಂಗ್ರ ಕೂಳೂರು ಸಮೀಪ ತ್ರಿಶಾ ಕಾಲೇಜು ಬಳಿಯ ಕೊಟ್ಟಾರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಅಭಿಸರಣ್ ಆಕ್ವೇಟಿಕ್ ಸೆಂಟರ್‌ನ ಲೋಕಾರ್ಪಣೆ ಸಮಾರಂಭ ಜುಲೈ 15ರಂದು ಸಂಜೆ 4.30ಕ್ಕೆ ನಡೆಯಲಿದೆ ಎಂದು ಸಂಸ್ಥೆಯ ಮುಖ್ಯ ತರಬೇತುದಾರ ಸಂಕೇತ್ ಬೆಂಗ್ರೆ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾರಂಭವನ್ನು ರಾಜ್ಯ ಆರೋಗ್ಯ ಸಚಿವ ಯು.ಟಿ. ಖಾದರ್ ಉದ್ಘಾಟಿಸಲಿದ್ದು, ನಾಡೋಜ ಡಾ. ಜಿ. ಶಂಕರ್ ಅಧ್ಯಕ್ಷತೆ ವಹಿಸಲಿದ್ದಾರೆ. ವಿಶೇಷ ಅತಿಥಿಯಾಗಿ ಒಲಿಂಪಿಕ್ ಈಜುಪಟು ಶಿವಾನಿ…

Read More

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆಗೆ ಬೆಂಬಲ: ಇದು ರಾಜ್ಯದ ಹೆಮ್ಮೆಯ ಕ್ರೀಡೆ – ದೇವಿಪ್ರಸಾದ್ ಶೆಟ್ಟಿ

ಉಡುಪಿ:ಮೈಸೂರು ದಸರಾ ಉತ್ಸವದಲ್ಲಿ ಕಂಬಳ ಆಯೋಜನೆಗೆ ವ್ಯಕ್ತವಾಗಿರುವ ವಿರೋಧದ ನಡುವೆ, ರಾಜ್ಯ ಕಂಬಳ ಸಮಿತಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಕಂಬಳದ ಪರವಾಗಿ ಸ್ಪಷ್ಟ ನಿಲುವು ವ್ಯಕ್ತಪಡಿಸಿದ್ದು, “ದಸರಾ ರಾಜ್ಯದ ನಾಡಹಬ್ಬ. ಅಂತಹ ನಾಡಹಬ್ಬದಲ್ಲಿ ಕಂಬಳ ಆಯೋಜಿಸಿದರೆ ತಪ್ಪೇನಿಲ್ಲ. ಇದು ರಾಜ್ಯದ ಘನತೆ ಮತ್ತು ಗೌರವವನ್ನು ಹೆಚ್ಚಿಸುವ ಸಾಂಪ್ರದಾಯಿಕ ಕ್ರೀಡೆ” ಎಂದು ಹೇಳಿದ್ದಾರೆ. ಕರಾವಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಂಬಳಕ್ಕೆ ರಾಜ್ಯ ಸರ್ಕಾರ ಈಗಾಗಲೇ ಅಧಿಕೃತ ಕ್ರೀಡೆಯ ಮಾನ್ಯತೆ ನೀಡಿದ್ದು, ರಾಜ್ಯ ಕಂಬಳ ಅಸೋಸಿಯೇಷನ್ ಕೂಡ ಕಾರ್ಯನಿರ್ವಹಿಸುತ್ತಿದೆ. ರಾಜ್ಯದ…

Read More

ಮಣಿಪಾಲ: ಈಶ್ವರ ನಗರದ ಕುಡಿಯುವ ನೀರಿನ ಘಟಕಕ್ಕೆ ನುಗ್ಗಿದ ಕಾರು : ವಿದ್ಯಾರ್ಥಿಗಳಿಗೆ ಗಾಯ

ಉಡುಪಿ: ಮಣಿಪಾಲದ ಈಶ್ವರ ನಗರದಲ್ಲಿರುವ ನಗರಸಭೆಯ ಶುದ್ಧ ಕುಡಿಯುವ ನೀರಿನ ಘಟಕದ ಆವರಣಕ್ಕೆ ಮಧ್ಯರಾತ್ರಿ ಕಾರೊಂದು ನುಗ್ಗಿ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದವರು ಗಾಯಗೊಂಡಿದ್ದಾರೆ. ಮಣಿಪಾಲದಿಂದ ಆತ್ರಾಡಿ ಕಡೆಗೆ ರಾಷ್ಟ್ರೀಯ ಹೆದ್ದಾರಿ 169A ಮೂಲಕ ಸಾಗುತ್ತಿದ್ದ ಕಾರು ದಾರಿ ತಪ್ಪಿ ಹೆದ್ದಾರಿಯಿಂದ ಹೊರಬಂದು ನೇರವಾಗಿ ಕುಡಿಯುವ ನೀರಿನ ಘಟಕದೊಳಗೆ ನುಗ್ಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಏರ್‌ಬ್ಯಾಗ್‌ಗಳು ತೆರೆದಿದ್ದು, ಕಾರಿನಲ್ಲಿದ್ದವರಿಗೆ ತಲೆಗೆ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.ಸ್ಥಳೀಯರ ಪ್ರಕಾರ, ಇದೇ ಸ್ಥಳದಲ್ಲಿ ಪದೇ…

Read More

ಜು. 16ರಂದು ಮಂಗಳೂರಿನಲ್ಲಿ ಇಸ್ಕಾನ್ ವತಿಯಿಂದ ಶ್ರೀ ಜಗನ್ನಾಥ ರಥಯಾತ್ರೆ …. !

ಮಂಗಳೂರು:ವಿಶ್ವಪ್ರಸಿದ್ಧ ಶ್ರೀ ಜಗನ್ನಾಥ ರಥಯಾತ್ರೆ ಉತ್ಸವದ ಅಂಗವಾಗಿ ಮಂಗಳೂರಿನ ಕುಡುಪು ಕಟ್ಟೆಯ ಇಸ್ಕಾನ್ ಶ್ರೀ ಜಗನ್ನಾಥ ಮಂದಿರದ ಆಶ್ರಯದಲ್ಲಿ ಜುಲೈ 16ರಂದು (ಗುರುವಾರ) ಶ್ರೀ ಜಗನ್ನಾಥ ರಥಯಾತ್ರೆ ವಿಜೃಂಭಣೆಯಿಂದ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ಸದಸ್ಯ ಪ್ರೇಮ ಭಕ್ತಿ ದಾಸ್ ತಿಳಿಸಿದರು. ನಗರದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಸ್ಕಾನ್ ಸಂಸ್ಥಾಪಕ ಆಚಾರ್ಯರಾದ ಶ್ರೀಲ ಪ್ರಭುಪಾದರ ಪ್ರೇರಣೆಯಿಂದ ವಿಶ್ವದ ನ್ಯೂಯಾರ್ಕ್, ಲಂಡನ್, ಮಾಂಟ್ರಿಯಲ್, ಲಾಸ್ ಏಂಜಲೀಸ್, ಮೆಲ್ಬೋರ್ನ್ ಸೇರಿದಂತೆ ಭಾರತದ ನವದೆಹಲಿ, ಮುಂಬೈ, ಕೋಲ್ಕತ್ತಾ,…

Read More

ಚಿತ್ರದುರ್ಗದ ಭೋವಿ ಗುರುಪೀಠದಲ್ಲಿ ಜುಲೈ 18 ರಂದು ಅರ್ಥಪೂರ್ಣ “ಭೋವಿ ಜನೋತ್ಸವ”

​ಚಿತ್ರದುರ್ಗ:ನಗರದ ಹೊರವಲಯದಲ್ಲಿರುವ ಭೋವಿ ಗುರುಪೀಠದ ಆವರಣದಲ್ಲಿ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿರವರ 17ನೇ ಪಟ್ಟಾಭಿಷೇಕ ಮಹೋತ್ಸವ, 28ನೇ ಲಾಂಛನ ದೀಕ್ಷಾ ಮಹೋತ್ಸವ, 40ನೇ ಜನ್ಮ ವರ್ಧಂತ್ಯೋತ್ಸವದ ನಿಮಿತ್ತ ಪ್ರತಿ ವರ್ಷದಂತೆ ಈ ವರ್ಷವೂ ಜುಲೈ 18 ರಂದು ಬೃಹತ್ ಮಟ್ಟದಲ್ಲಿ “ರಾಷ್ಟ್ರೀಯ ಭೋವಿ ಜನೋತ್ಸವ” ನಡೆಯಲಿದೆ. ಭೋವಿ ಜನಾಂಗದ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಸಂಭ್ರಮದ ಆಚರಣೆಯಾದ ಈ ಉತ್ಸವಕ್ಕೆ ಸಂಘಟನೆ ಭರದಿಂದ ಸಾಗುತ್ತಿವೆ. ​ಈ ಬಾರಿಯ…

Read More

“ಸಾಮಾಜಿಕ ಜಾಲತಾಣಕ್ಕಿಂತ ಪುಸ್ತಕ ಓದಿನ ಸಂಸ್ಕೃತಿ ಬೆಳೆಸೋಣ: ದಯಾನಂದ ರೈ ಕಳ್ವಾಜೆ”

” ಸಾಮಾಜಿಕ ಜಾಲತಾಣದ ಓದಿಗಿಂತ ಯಥಾರ್ಥ ಪುಸ್ತಕಗಳನ್ನು ಕೈಗೆತ್ತಿಕೊಂಡು ಓದ ಬೇಕು.ಕವಿ ಕಯ್ಯಾರರಂತಹ ಮೇರು ವ್ಯಕ್ತಿತ್ವವನ್ನು ಅಧ್ಯಯನ ಮಾಡಬೇಕು.ಸರ್ವಕಾಲಕ್ಕು ಅನ್ವಯವಾಗುವ ಭಾಷಾ ಶೈಲಿ , ಪದ ಜೋಡಣೆ , ಜೀವನ ಸಂದೇಶಗಳು ಅವರ ಸಾಹಿತ್ಯ ಕೃತಿಗಳಲ್ಲಿ ಹೇರಳವಾಗಿದೆ.ಅವರದ್ದು ಕಾವ್ಯದ ರಸದಡುಗೆ.ಕನ್ನಡ , ತುಳು ಭಾಷೆಯಲ್ಲಿ ಅವರ ಪಾಂಡಿತ್ಯ ನಮಗೆಲ್ಲ ಸ್ಫೂರ್ತಿದಾಯಕ.ಹೆಸರಿನಲ್ಲಿ ಕಿಂಞಣ್ಣ ಎಂದಿದ್ದರೂ ಕನ್ನಡಿಗರಾದ ನಮಗೆ ಅವರು ದೊಡ್ಡಣ್ಣನಂತೆ ” ಎಂಬುದಾಗಿ ಕವಿ ಸಾಹಿತಿ ಶ್ರೀ ದಯಾನಂದ ರೈ ಕಳ್ವಾಜೆ ಏತಡ್ಕದ ಕುಂಬ್ಡಾಜೆ ಗ್ರಾಮ ಸೇವಾ ಸಂಘ…

Read More

ಜೋಡಿಗಳಿಗಾಗಿ ವಿಶೇಷ ರೀಲ್ಸ್ ಸ್ಪರ್ಧೆ ಆಯೋಜನೆ

ತುಳುನಾಡು ಜವನೆರ್ ಬೆಂಗಳೂರು (ರಿ) ವತಿಯಿಂದ ‘ಐಸಿರದ ಜೋಡಿ’ ಹೆಸರಿನ ವಿಶೇಷ ರೀಲ್ಸ್ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಪ್ರಾಯೋಜಕತ್ವದಲ್ಲಿ ನಡೆಯುತ್ತಿರುವ ಈ ಸ್ಪರ್ಧೆ, ತುಳುನಾಡಿನ ವಿವಿಧ ಜೋಡಿಗಳಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು ವೇದಿಕೆಯನ್ನು ಒದಗಿಸಿದೆ. ಗಂಡ-ಹೆಂಡತಿ, ಅಣ್ಣ-ತಂಗಿ, ತಂದೆ-ಮಗಳು, ತಾಯಿ-ಮಗ, ಗೆಳೆಯ-ಗೆಳತಿ ಸೇರಿದಂತೆ ಯಾವುದೇ ಜೋಡಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ. ಸ್ಪರ್ಧಾಳುಗಳು ತಮ್ಮದೇ ಆದ ಸೃಜನಶೀಲತೆಯೊಂದಿಗೆ ರೀಲ್ಸ್ ವಿಡಿಯೋ ಸಿದ್ಧಪಡಿಸಿ ಕಳುಹಿಸುವ ಮೂಲಕ ಸ್ಪರ್ಧೆಯಲ್ಲಿ ಪಾಲ್ಗೊಳ್ಳಬಹುದು ಎಂದು ಸಂಘಟಕರು ತಿಳಿಸಿದ್ದಾರೆ. ಆಕರ್ಷಕ ಬಹುಮಾನಗಳು…

Read More

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತನಿಖೆಯಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಮಹತ್ವದ ಯಶಸ್ಸು ಸಾಧಿಸಿದ್ದು, ಕಳೆದ ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದೆ. ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಕೆಗುಡ್ಡೆ ನಿವಾಸಿ ನೌಶಾದ್ (32) ಅವರನ್ನು ಬೆಂಗಳೂರಿನಲ್ಲಿ ಹಾಗೂ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಚೌಡ್ಲಿ ಕಾನ್ವೆಂಟ್ ರೋಡ್ ನಿವಾಸಿ ಅಬ್ದುಲ್ ನಾಸಿರ್ (41) ಅವರನ್ನು ಕೇರಳದ ಕೊಚ್ಚಿಯಲ್ಲಿ ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕೊಲೆ ಕೃತ್ಯ ಎಸಗಿದ್ದ…

Read More

ನೇತ್ರಾವತಿ ಲಯನ್ಸ್ ಕ್ಲಬ್‌ಗೆ ನೂತನ ಸಾರಥ್ಯ: ಪದಗ್ರಹಣದೊಂದಿಗೆ ₹3.5 ಲಕ್ಷ ಸೇವಾಕಾರ್ಯಗಳ ಹಸ್ತಾಂತರ

ಮಂಗಳೂರು: ನೇತ್ರಾವತಿ ಲಯನ್ಸ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜುಲೈ 6ರಂದು ಮಲ್ಲಿಕಟ್ಟೆಯ ಲಯನ್ಸ್ ಸೇವಾ ಮಂದಿರದಲ್ಲಿ ಜಿಲ್ಲಾ ಮಾಜಿ ಗವರ್ನರ್ (PDG) ಸಂಜಿತ್ ಶೆಟ್ಟಿ ಅವರ ನೇತೃತ್ವದಲ್ಲಿ ನೆರವೇರಿತು. ಸಮಾರಂಭದಲ್ಲಿ ಡಾ. ವಿದ್ಯಾಧರಿ ಶೆಟ್ಟಿ ಅಧ್ಯಕ್ಷೆಯಾಗಿ, ಲಯನ್ ಶೋಭಾ ಸುಬ್ರಮಣ್ಯ ಕಾರ್ಯದರ್ಶಿಯಾಗಿ ಹಾಗೂ ಲಯನ್ ಸುಪಲಾ ಗೋಪಾಲ್ ಖಜಾಂಜಿಯಾಗಿ ಅಧಿಕಾರ ಸ್ವೀಕರಿಸಿದರು. ಕಾರ್ಯಕ್ರಮದ ಅಂಗವಾಗಿ ನೂತನ ಅಧ್ಯಕ್ಷೆ ಡಾ. ವಿದ್ಯಾಧರಿ ಶೆಟ್ಟಿ ಅವರು ಫಲಾನುಭವಿಗಳಿಗೆ ಕೃತಕ ಕಾಲುಗಳನ್ನು ಹಸ್ತಾಂತರಿಸಿದರು. ಜೊತೆಗೆ ಸುಮಾರು ₹3.5 ಲಕ್ಷ…

Read More
error: Content is protected !!