ನಿವೃತ್ತ ಶಿಕ್ಷಕ ಗೋಪಾಲ ಮಾಸ್ಟರ್ ನಿಧನ; ಶಿಕ್ಷಣ ಕ್ಷೇತ್ರಕ್ಕೆ ಅಪಾರ ನಷ್ಟ

ಬಂಟ್ವಾಳ: ಉಳ್ಳಾಲ ತಾಲೂಕು ಇರಾ ಕುಂಡಾವು ನಿವಾಸಿ ನಿವೃತ್ತ ಶಿಕ್ಷಕ ಗೋಪಾಲ ಮಾಸ್ಟರ್ (77) ಅವರು ಜು.10 ರಂದು ನಿಧನ ಹೊಂದಿದರು.ಮೃತರು ಪತ್ನಿ, ಮೂವರು ಪುತ್ರಿಯರನ್ನು ಅಗಲಿದ್ದಾರೆ. 1968 ರಲ್ಲಿ ಶಿಕ್ಷಕ ವೃತ್ತಿ ಆರಂಭಿಸಿದ ಅವರು ಸುಳ್ಯ, ನರಿಂಗಾನ, ಇರಾ, ಸುರಿಬೈಲ್, ಮುದುಂಗಾರುಕಟ್ಟೆ ಸರಕಾರಿ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. ಶಾಲಾ ಮುಖ್ಯೋಪಧ್ಯಾಯರಾಗಿ ಹಾಗೂ ಕ್ಷೇತ್ರ ಸಂಪನ್ಮೂಲ ವ್ಯಕ್ತಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಇರಾ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ದಿಗಾಗಿ ಅವರು ವಿಶೇಷವಾಗಿ ಶ್ರಮಿಸಿದ್ದರು. ಶಿಸ್ತು ಹಾಗೂ…

Read More

ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ ! ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ

ಉಡುಪಿ: ರಾಜ್ಯ ಸರ್ಕಾರ ರಚಿಸಿರುವ ಸ್ಪೆಷಲ್ ಆಕ್ಷನ್ ಫೋರ್ಸ್ (SAF) ಕುರಿತು ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಕೆಲವು ಪ್ರಶ್ನೆಗಳನ್ನು ಎತ್ತಿದ್ದಾರೆ.ಉಡುಪಿಯಲ್ಲಿ ಮಾತನಾಡಿದ ಅವರು, “ಎಸ್‌ಎಎಫ್ ವಿಶೇಷ ಕಾರ್ಯಪಡೆ ಯಾಕೆ? ಈ ವಿಶೇಷ ಪೊಲೀಸ್ ಕಾರ್ಯಪಡೆಗೆ ಕಾನೂನಿನಲ್ಲಿ ಯಾವ ಮಾನ್ಯತೆ ಇದೆ?” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಪ್ರಶ್ನಿಸಿದರು. ಕಳೆದ ವರ್ಷದ ಜೂನ್ ತಿಂಗಳಲ್ಲಿ ಸರ್ಕಾರ ಸ್ಪೆಷಲ್ ಆಕ್ಷನ್ ಫೋರ್ಸ್ (SAF) ಅನ್ನು ರಚಿಸಿತ್ತು. ನಕ್ಸಲ್ ನಿಗ್ರಹಕ್ಕಾಗಿ ಕಾರ್ಯನಿರ್ವಹಿಸುತ್ತಿದ್ದ ಎಎನ್‌ಎಫ್ (Anti Naxal Force) ಅಗತ್ಯವಿಲ್ಲ…

Read More

ಲ್ಯಾಟರೈಟ್ ಹೆಸರಿನಲ್ಲಿ ಬಾಕ್ಸೈಟ್ ಅಕ್ರಮ ಗಣಿಗಾರಿಕೆ: ಬೆನೆಡಿಕ್ಟ್ ಫೆರ್ನಾಂಡಿಸ್ ಆರೋಪ

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ಮುಡಿಪು ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಲ್ಯಾಟರೈಟ್ ಗಣಿಗಾರಿಕೆ ಗುತ್ತಿಗೆಯ ಹೆಸರಿನಲ್ಲಿ ಬಾಕ್ಸೈಟ್ (ಅಲ್ಯೂಮಿನಸ್ ಲ್ಯಾಟರೈಟ್) ಅಕ್ರಮವಾಗಿ ಗಣಿಗಾರಿಕೆ ನಡೆಸಲಾಗುತ್ತಿದೆ ಎಂದು ಪರಿಸರ ಹೋರಾಟಗಾರ ಬೆನೆಡಿಕ್ಟ್ ಫೆರ್ನಾಂಡಿಸ್ ಆರೋಪಿಸಿದರು. ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶೇ.30ಕ್ಕಿಂತ ಹೆಚ್ಚು ಅಲ್ಯೂಮಿನಾ ಅಂಶ ಹೊಂದಿರುವ ಖನಿಜವನ್ನು ಲ್ಯಾಟರೈಟ್ ಎಂದು ತೋರಿಸಿ ಗಣಿಗಾರಿಕೆ ನಡೆಸುವುದು ಪ್ರಮುಖ ಖನಿಜಗಳಿಗೆ ಸಂಬಂಧಿಸಿದ ಕಾನೂನುಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಹೇಳಿದರು. ಕರ್ನಾಟಕ ಹೈಕೋರ್ಟ್‌ನ WP No.14076/2026 ಪ್ರಕರಣದ ತೀರ್ಪನ್ನು ಉಲ್ಲೇಖಿಸಿದ ಅವರು,…

Read More

ಜನಸಂಖ್ಯೆಗೆ ಅನುಗುಣವಾಗಿ ಎಸ್‌ಸಿ, ಎಸ್‌ಟಿ, ಒಬಿಸಿ ಮೀಸಲಾತಿ ಜಾರಿಗೆ ವಿ.ಎಸ್. ಉಗ್ರಪ್ಪ ಆಗ್ರಹ

ಮಂಗಳೂರು: ರಾಜ್ಯದಲ್ಲಿ ಎಸ್‌ಸಿ, ಎಸ್‌ಟಿ ಹಾಗೂ ಹಿಂದುಳಿದ ವರ್ಗಗಳ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಜಾರಿಯಾಗಬೇಕು ಎಂದು ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಒತ್ತಾಯಿಸಿದರು. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಎಸ್‌ಸಿಗಳು ಶೇ.17, ಎಸ್‌ಟಿಗಳು ಶೇ.7 ಹಾಗೂ ಒಬಿಸಿಗಳು ಶೇ.42ರಷ್ಟು ಜನಸಂಖ್ಯೆ ಹೊಂದಿದ್ದು, ನಾಲ್ಕೂವರೆ ಕೋಟಿಗೂ ಹೆಚ್ಚು ಜನರ ಹಕ್ಕಿನ ಪ್ರಶ್ನೆಯಿದು ಎಂದು ಹೇಳಿದರು. ಸಂವಿಧಾನದ 340, 341 ಹಾಗೂ 342ನೇ ವಿಧಿಗಳು ಹಿಂದುಳಿದ ವರ್ಗಗಳು, ಎಸ್‌ಸಿ ಹಾಗೂ ಎಸ್‌ಟಿಗಳಿಗೆ ಮೀಸಲಾತಿ ಕಲ್ಪಿಸಲು ಅವಕಾಶ…

Read More

ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ 8 ಬಾಂಗ್ಲಾದೇಶಿಗರು ಸೆರೆ

ಮಂಗಳೂರು:ಭಾರತ-ಬಾಂಗ್ಲಾ ಗಡಿ ದಾಟಿ ಮಂಗಳೂರು ಪ್ರವೇಶಿಸಿದ್ದ ಬಾಂಗ್ಲಾದೇಶದ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ.ಎಂಟು ಮಂದಿ ಬಾಂಗ್ಲಾದೇಶದ ಪ್ರಜೆಗಳು ಸುರತ್ಕಲ್ ನಲ್ಲಿ ಅಕ್ರಮವಾಗಿ ನೆಲೆಸಿದ್ದರು.ಖಚಿತ ಮಾಹಿತಿಯ ಮೇರೆಗೆ ಸುರತ್ಕಲ್ ಪೊಲೀಸರು ದಾಳಿ ಮಾಡಿದ್ದರು.ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಮುಕ್ಕ ಎಂಬಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡದಲ್ಲಿ ಇವರು ಕೆಲಸ ಮಾಡುತ್ತಿದ್ದರು. ಕೆಲಸ ಮಾಡುತ್ತಿದ್ದ ಒಟ್ಟು 54 ಮಂದಿ ಕಾರ್ಮಿಕರ ದಾಖಲಾತಿಗಳ ತೀವ್ರ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಬಾಂಗ್ಲಾ ಪ್ರಜೆಗಳ ಅಕ್ರಮ ವಾಸ ಪತ್ತೆಯಾಗಿದೆ. ಈ ಎಂಟು ಜನ ಬಾಂಗ್ಲಾದೇಶದಿಂದ ಅಕ್ರಮವಾಗಿ ನುಸುಳಿ…

Read More

ಪಿಆರ್‌ಸಿ ಅಧಿಸೂಚನೆ ತಕ್ಷಣ ಹಿಂಪಡೆಯಿರಿ : ಬಿಜೆಪಿ ಆಗ್ರಹ

ಮಂಗಳೂರು:ಕರ್ನಾಟಕ ಸರ್ಕಾರ ಜಾರಿಗೊಳಿಸಿರುವ ಶಾಶ್ವತ ನಿವಾಸಿ ಪ್ರಮಾಣಪತ್ರ (PRC) ಅಧಿಸೂಚನೆಯನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಬಿಜೆಪಿ ಆಗ್ರಹಿಸಿದೆ. ಈ ನೀತಿ ಅಕ್ರಮ ವಲಸಿಗರಿಗೆ ಸರ್ಕಾರಿ ಸೌಲಭ್ಯ ಕಲ್ಪಿಸಿ, ಮತದಾರರ ಪಟ್ಟಿಗೆ ಸೇರಿಸುವ ಉದ್ದೇಶ ಹೊಂದಿದ್ದು, ಇದು ಸಂವಿಧಾನ ವಿರೋಧಿ ಹಾಗೂ ರಾಷ್ಟ್ರೀಯ ಭದ್ರತೆಗೆ ಅಪಾಯ ಉಂಟುಮಾಡಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಆತಂಕ ವ್ಯಕ್ತಪಡಿಸಿದರು. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಂದಾಯ ಇಲಾಖೆಯ ಮೂಲಕ ಪಿಆರ್‌ಸಿ ನೀಡುವ…

Read More

ಆಟೋ ದರ ಏರಿಕೆಗೆ ಒತ್ತಾಯ; ಕನಿಷ್ಠ ಬಾಡಿಗೆ ₹50ಕ್ಕೆ ಹೆಚ್ಚಳಕ್ಕೆ ಬೇಡಿಕೆ

ಮಂಗಳೂರು, ಜು.11: ಎಲ್‌ಪಿಜಿ, ಸಿಎನ್‌ಜಿ ಸೇರಿದಂತೆ ಇಂಧನ ದರ ಹಾಗೂ ಬಿಡಿಭಾಗಗಳ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಆಟೋರಿಕ್ಷಾ ಚಾಲಕರಿಗೆ ನೆರವಾಗಲು ಕನಿಷ್ಠ ಪ್ರಯಾಣ ದರವನ್ನು ₹35ರಿಂದ ₹50ಕ್ಕೆ, ನಂತರದ ಪ್ರತಿ ಕಿ.ಮೀ. ದರವನ್ನು ₹20ರಿಂದ ₹30ಕ್ಕೆ ಹೆಚ್ಚಳಗೊಳಿಸುವಂತೆ ವಿವಿಧ ಆಟೋರಿಕ್ಷಾ ಸಂಘಟನೆಗಳು ಒತ್ತಾಯಿಸಿವೆ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅಧ್ಯಕ್ಷತೆಯಲ್ಲಿ ನಡೆದ ಪ್ರಾದೇಶಿಕ ಸಾರಿಗೆ ಸಭೆಯಲ್ಲಿ, ನಗರ ಮತ್ತು ಗ್ರಾಮಾಂತರ ಆಟೋರಿಕ್ಷಾಗಳಿಗೆ ಪ್ರತ್ಯೇಕ ಕನಿಷ್ಠ ದರ ನಿಗದಿ ಮಾಡಬೇಕು, ಉಚಿತ ಕಾಯುವಿಕೆ ಅವಧಿಯನ್ನು 18 ನಿಮಿಷದಿಂದ 10 ನಿಮಿಷಕ್ಕೆ…

Read More

ಎಸ್.ಡಿ.ಟಿ.ಯು ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ಮಾಸಿಕ ಸಭೆ: ರಾಜ್ಯ ನಾಯಕರಿಗೆ ಸನ್ಮಾನ

ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (ಎಸ್.ಡಿ.ಟಿ.ಯು) ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ಮಾಸಿಕ ಸಭೆಯು ಜುಲೈ 9, 2026ರಂದು ಜಿಲ್ಲಾ ಕಚೇರಿಯಲ್ಲಿ ನಡೆಯಿತು. ಜಿಲ್ಲಾ ಉಪಾಧ್ಯಕ್ಷರಾದ ಹೆನ್ರಿ ಡಿ.ಸೋಜಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಂಘಟನೆಯ ಚಟುವಟಿಕೆಗಳು, ಅಸಂಘಟಿತ ಕಾರ್ಮಿಕರ ಸಮಸ್ಯೆಗಳು ಹಾಗೂ ಮುಂದಿನ ದಿನಗಳ ಕಾರ್ಯಯೋಜನೆ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಎಸ್.ಡಿ.ಟಿ.ಯು ಕರ್ನಾಟಕದ ರಾಜ್ಯಾಧ್ಯಕ್ಷರಾದ ಅಥಾವುಲ್ಲಾ ಜೋಕಟ್ಟೆ, ರಾಜ್ಯ ಪ್ರಧಾನ ಕಾರ್ಯದರ್ಶಿ ಸಲೀಂ ಜಿ.ಕೆ. ಗುರುವಾಯನಕೆರೆ, ರಾಜ್ಯ ಸಮಿತಿ ಸದಸ್ಯರಾದ ಅಬ್ದುಲ್…

Read More

ಕನ್ಯಾನ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಬಂಟ್ವಾಳ: ಕನ್ಯಾನ ಸಮೀಪದ ಕೊಣಲೆ ಮಳವೆಲು ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಮೃತರನ್ನು ಕೊಣಲೆ ಮಳವೆಲು ನಿವಾಸಿ ಈಶ್ವರ ನಾಯ್ಕ (51) ಎಂದು ಗುರುತಿಸಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸ್ ಠಾಣೆಯ ಉಪನಿರೀಕ್ಷಕ ರಾಮಕೃಷ್ಣ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಮಹಜರು ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆತ್ಮಹತ್ಯೆಗೆ ಕಾರಣವೇನು ಎಂಬ ಕುರಿತು ತನಿಖೆ ಮುಂದುವರಿಸಿದ್ದಾರೆ.

Read More

ಮಂಗಳೂರು ಮತ್ತು ಗೋವಾದ ಕೊಂಕಣಿ ಕವಯತ್ರಿಯರು ಚಾರೊಳಿ ರಾಷ್ಟ್ರೀಯ ಸನ್ಮಾನಕ್ಕೆ ಆಯ್ಕೆ: ರೇಮಂಡ್ ಡಿಕುನಾ ತಾಕೊಡೆ.

ಮಂಗಳೂರಿನಲ್ಲಿ ನಡೆಯುವ ಕೊಂಕಣಿ ೫ನೇ ರಾಷ್ಟ್ರೀಯ ಚಾರೊಳಿ ಸಾಹಿತ್ಯ ಸಮ್ಮೇಳನದಲ್ಲಿ ಖ್ಯಾತ ಹಿರಿಯ ಕವಯತ್ರಿಯರಾದ ಮಂಗಳೂರಿನ ಅರುಂಧತಿ ವಿ ರಾವ್ ಮತ್ತು ಗೋವಾದ ಆನ್ನಿ ದೆ ಕೊಲ್ವಾಲೆ ಆಯ್ಕೆ ಆಗಿದ್ದಾರೆ ಎಂದು ಸಮ್ಮೇಳನದ ಅಧ್ಯಕ್ಷರಾದ ರೇಮಂಡ್ ಡಿಕೂನಾ ತಾಕೊಡೆ ಮಾಹಿತಿ ನೀಡಿದರು.ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ,೧೯ ಜುಲೈ ಒಂದು ದಿನದ ಕೊಂಕಣಿ ಐದನೇ ಚಾರೊಳಿ ಸಾಹಿತ್ಯ ಸಮ್ಮೇಳನಕ್ಕೆ ದೆಹಲಿ, ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕಾರವಾರ, ಕೇರಳ ಮತ್ತು ದುಬೈನ ಕವಿಗಳು ನೊಂದಾವಣೆ ಮಾಡಿದ್ದಾರೆ. ಹಿಂದಿನ…

Read More
error: Content is protected !!