ವಿಶ್ವ ವಿಖ್ಯಾತ ಮೈಸೂರು ದಸರಾ ಮೆರವಣಿಗೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಬಹುಮಾನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯು ಮೈಸೂರು ದಸರಾ ವಿಶ್ವ ವಿಖ್ಯಾತ ಮೈಸೂರು ದಸರಾ ಮೆರವಣಿಗೆಯಲ್ಲಿ ತನ್ನ ಸ್ತಬ್ಧಚಿತ್ರಕ್ಕೆ ದ್ವಿತೀಯ ಬಹುಮಾನ ಗಳಿಸಿದೆ. ಈ ಸ್ತಬ್ಧಚಿತ್ರವು ಜಿಲ್ಲೆಯ ಶ್ರೀಮಂತ ಕಲೆ, ಸಂಸ್ಕೃತಿ ಮತ್ತು ಸಾಂಪ್ರದಾಯಿಕ ಕ್ರೀಡೆಗಳನ್ನು ಸುಂದರವಾಗಿ ಪ್ರದರ್ಶಿಸಿತ್ತು.ಈ ಸ್ತಬ್ಧಚಿತ್ರದಲ್ಲಿ ದಕ್ಷಿಣ ಕನ್ನಡದ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿಬಿಂಬಿಸುವ ಯಕ್ಷಗಾನ, ಕಂಬಳ, ಹುಲಿವೇಷ ಮತ್ತು ಇತರ ಜನಪದ ಹಾಗೂ ಸಾಂಪ್ರದಾಯಿಕ ಕ್ರೀಡೆಗಳ ವರ್ಣರಂಜಿತ ಚಿತ್ರಣವಿತ್ತು. ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಮಾರ್ಗದರ್ಶನದಲ್ಲಿ ಈ ಸ್ತಬ್ಧಚಿತ್ರವನ್ನು ರಚಿಸಲಾಗಿತ್ತು. ಗ್ರಾಮೀಣ ಕೈಗಾರಿಕೆಗಳ ಇಲಾಖೆಯ…

Read More

‘ಹಸಿರು ಪಟಾಕಿ ಬಿಟ್ಟು ಬೇರೆ ಪಟಾಕಿ ಮಾರಾಟ ಮಾಡುವಂತಿಲ್ಲ , ಕಾನೂನು ಉಲ್ಲಂಘನೆಯಾದರೆ ಅಂಗಡಿ ಲೈಸೆನ್ಸ್ ರದ್ದು ‘- ಸಚಿವ ಈಶ್ವರ್ ಖಂಡ್ರೆ ಖಡಕ್ ಎಚ್ಚರಿಕೆ.

ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಹಸಿರು ಪಟಾಕಿ ಮಾತ್ರ ಬಳಕೆ ಮಾಡಬೇಕು. ಹಸಿರು ಪಟಾಕಿ ಬಿಟ್ಟು ಬೇರೆ ಪಟಾಕಿ ಮಾರಾಟ ಮಾಡಿದರೆ ಅಂತಹ ಅಂಗಡಿ ಲೈಸೆನ್ಸ್ ಕ್ಯಾನ್ಸಲ್ ಮಾಡುವುದಾಗಿ ಸಚಿವ ಈಶ್ವರ್ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ . ಈ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿದ ಅವರು, “ದೀಪಾವಳಿಯಲ್ಲಿ ಹಸಿರು ಪಟಾಕಿ ಮಾತ್ರ ಹಚ್ಚಬೇಕು. ಈ ಸಂಬಂಧ ಸುಪ್ರೀಂ ಕೋರ್ಟ್ ಆದೇಶ ಇದೆ. ಸುಪ್ರೀಂ ಕೋರ್ಟ್ ಆದೇಶ ಇದ್ದರೂ, ಭಾರ ಇರುವ, ಲೋಹ ಭರಿತ ಪಟಾಕಿ ಬಳಕೆ ಆಗುತ್ತಿದೆ. ಅಧಿಕಾರಿಗಳಿಗೆ ಸೂಚನೆ…

Read More

ಸಮೀಕ್ಷೆ:ಯಾವ ಜಾತಿಯನ್ನೂ ತುಳಿಯುವ ಪ್ರಶ್ನೆಯಿಲ್ಲ.ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಕೊಪ್ಪಳ : ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಮೇಲ್ಜಾತಿಗಳನ್ನು ತುಳಿಯಲು ಸಮೀಕ್ಷೆ ನಡೆಸಲಾಗುತ್ತಿದೆ ಎಂಬ ಕೇಂದ್ರ ಸಚಿವ ಸೋಮಣ್ಣ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು ನಡೆಸದಿದ್ದರೆ, ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ. ಈ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ ಪ್ರಶ್ನೆಯಿಲ್ಲ….

Read More

ಅಜೆಕಾರು: ತಲವಾರು ತೋರಿಸಿ ಕೊಟ್ಟಿಗೆಯಲ್ಲಿದ್ದ ದನ ಕಳವುಗೈದ ಪ್ರಕರಣ: ಮೂವರು ಆರೋಪಿಗಳ ಬಂಧನ.

ಕಾರ್ಕಳ: ಅಜೆಕಾರು ಪೊಲೀಸ್ ಠಾಣೆ ವ್ಯಾಪ್ತಿಯ ಶಿರ್ಲಾಲು ಎಂಬಲ್ಲಿ ಕೆಲವು ದಿನಗಳ ಹಿಂದೆ ತಲವಾರು ತೋರಿಸಿ ಬೆದರಿಸಿ ಕೊಟ್ಟಿಗೆಯಲ್ಲಿದ್ದ ದನಗಳನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂದಿಸಿದ್ದಾರೆ. ಕಾರ್ಕಳ ನಲ್ಲೂರು ಗ್ರಾಮದ ಬೋರ್ಕಟ್ಟೆಯ ಯೂನಿಸ್ ( 31), ಮೂಡಬಿದ್ರೆ ಕಲ್ಲಬೆಟ್ಡುವಿನ ನಾಸೀರ್ (28), ಮೂಡಬಿದ್ರೆ ಪುತ್ತಿಗೆ ಗ್ರಾಮದ ಮಿಜಾರಿನ ಇಕ್ಬಾಲ್ (29) ಬಂಧಿತ ಆರೋಪಿಗಳು. ಇವರಿಂದ ಕೃತ್ಯಕ್ಕೆ ಬಳಸಿದ್ದ 2 ತಲವಾರು, ಕಾರು, ಬೋಲೆರೋ ವಾಹನ, 5 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ…

Read More

ಪುತ್ತೂರು ತಾಲ್ಲೂಕು ಮುಂಡೂರು ಗ್ರಾಮ ಪಂಚಾಯತ್ ವಠಾರದಲ್ಲಿ ತ್ಯಾಜ್ಯರಾಶಿ.ಕಾಂಗ್ರೆಸ್ ಕಾರ್ಯಕರ್ತರಿಂದ ಪಂಚಾಯತಿಗೆ ದಿಢೀ‌ರ್ ಭೇಟಿ. ಮೂರು ದಿನದೊಳಗಾಗಿ ಸ್ವಚ್ಛತೆ ಮಾಡದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ.

ಪುತ್ತೂರು: ಪುತ್ತೂರು ತಾಲ್ಲೂಕು ಮುಂಡೂರು ಗ್ರಾಮ ಪಂಚಾಯತ್ ವಠಾರದಲ್ಲಿ ತ್ಯಾಜ್ಯ ರಾಶಿ ಹಾಗೂ ಗ್ರಾ.ಪಂ ವಠಾರದಲ್ಲಿ ಸ್ವಚ್ಛತೆ ಮಾಡದೇ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಪಂಚಾಯತಿಗೆ ದಿಢೀರ್ ಗ್ರಾ.ಪಂಗೆ ಭೇಟಿ ನೀಡಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.ಮುಂಡೂರು ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್‌ ಆಚಾರ್ಯ ಹಾಗೂ ಮಾಜಿ ಅಧ್ಯಕ್ಷ ಸುಪ್ರೀತ್ ಕಣ್ಣಾರಾಯ ನೇತೃತ್ವದಲ್ಲಿ ಗ್ರಾ.ಪಂಗೆ ಆಗಮಿಸಿದ ಕಾಂಗ್ರೆಸ್‌ ಕಾರ್ಯಕರ್ತರು ಪಿಡಿಓ ಮನ್ಮಥ ಅಜಿರಂಗಳ ಜೊತೆ ಹಾಗೂ ಗ್ರಾ.ಪಂ ಅಧ್ಯಕ್ಷ ಚಂದ್ರಶೇಖರ ಎನ್‌ಎಸ್‌ಡಿ ಜೊತೆ…

Read More

ಪ್ರಯಾಣಿಕರ ಲಗೇಜ್ ದುಬೈಯಲ್ಲೇ ಬಿಟ್ಟು ಬಂದ ಏರ್ ಇಂಡಿಯಾ ಎಕ್ಸ್ ಪ್ರೆಸ್. ಪ್ರಯಾಣಿಕರಿಗೆ ಆಘಾತ .

ಮಂಗಳೂರು: ಪ್ರಯಾಣಿಕರ ಲಗೇಜ್ ದುಬೈಯಲ್ಲೇ ಬಿಟ್ಟು ಬಂದು ಏರ್ ಇಂಡಿಯಾ ಎಕ್ಸ್ ಪ್ರೆಸ್ ಪ್ರಯಾಣಿಕರಿಗೆ ಆಘಾತ ನೀಡಿದೆ.ಶನಿವಾರ ಸಂಜೆ ದುಬೈಯಿಂದ ಮಂಗಳೂರಿಗೆ ಆಗಮಿಸಿದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ಹಲವು ಪ್ರಯಾಣಿಕರ ಲಗೇಜ್‌ಗಳನ್ನು ದುಬೈಯಲ್ಲೇ ಬಿಟ್ಟು ಬಂದಿರುವುದು ವರದಿಯಾಗಿದೆ. ವಿಮಾನ ಮಂಗಳೂರಿಗೆ ಬಂದು ಇಳಿದ ನಂತರ ಪ್ರಯಾಣಿಕರು ತಮ್ಮ ಲಗೇಜು ಪಡೆಯಲು ಬಂದಾಗಲೇ ಅವರಿಗೆ ನಿಮ್ಮ ಲಗೇಜು ದುಬೈಯಿಂದ ಲೋಡ್ ಆಗಿಲ್ವ ವಿಮಾನ ಫುಲ್ ಇದ್ದುದರಿಂದ ಕೆಲವು ಲಗೇಜ್‌ಗಳನ್ನು ಅಲ್ಲೇ ಬಿಡಲಾಗಿದೆ, ನಾಳೆ ಬೆಳಗ್ಗೆ 5 ಗಂಟೆಗೆ…

Read More

ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣದ ಆರೋಪಿಗಳ ಮೇಲೆ ಕೆ-ಕೋಕಾ ಕಾಯ್ದೆ ಅಡಿ ಪ್ರಕರಣ ದಾಖಲು.

ಮಂಗಳೂರು: ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣದ ಆರೋಪಿಗಳ ಮೇಲೆ ಕೆ-ಕೋಕಾ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಲಾಗಿದೆ.ಕೊಳತ್ತಮಜಲು ಅಬ್ದುಲ್ ರಹ್ಮಾನ್ ರನ್ನು‌ ಮೇ 27ರಂದು ಕೊಲೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ದೀಪಕ್, ಚಿಂತನ್, ಪೃಥ್ವಿರಾಜ್ ಜೋಗಿ, ಸುಮಿತ್ ಬಿ. ಆಚಾರ್ಯ, ವಿ.ರವಿರಾಜ ಮೂಲ್ಯ, ಅಭಿನ್ ರೈ, ತೇಜಾಕ್ಷ, ರವಿಸಂಜಯ್ ಜಿ.ಎಸ್., ಶಿವಪ್ರಸಾದ್ ತುಂಬೆ, ಪ್ರದೀಪ , ಶಾಹಿತ್, ಸಚಿನ್ ರೊಟ್ಟಿಗುಡ್ಡೆ, ರಂಜಿತ್ ಎಂಬವರನ್ನು ಬಂಧಿಸಿದ್ದರು. ಆರೋಪಿಗಳು ಇದೀಗ ನ್ಯಾಯಾಂಗ ಬಂಧನದಲ್ಲಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ…

Read More

ಕ್ಷುಲ್ಲಕ ನೆಪಒಡ್ಡಿ ರಾಜಕೀಯ ಪ್ರೇರಿತ ಪ್ರಕರಣ ದಾಖಲಾತಿ ಅಧಿಕಾರಿಗಳ ನಡೆ ಖಂಡನಿಯ :ಹರೀಶ್ ಆಚಾರ್ಯ

ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಸದಸ್ಯರೂ ಹಾಗೂ ಬಿಜೆಪಿ ಮುಖಂಡರಾಗಿರುವ ಪ್ರಭಾಕರ ಪ್ರಭುರವರು ಬಂಟ್ವಾಳ ತಾಲೂಕು ಪಂಚಾಯತ್ ಹೆಸರನ್ನು ತನ್ನ ಲೆಟರ್ ಹೆಡ್ ನಲ್ಲಿ ಬಳಸಿಕೊಂಡು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಕುರಿತು ಗ್ರಾಮ ಪಂಚಾಯತ್ ಸಿಬ್ಬಂದಿಗಳಿಗೆ ಜ್ಞಾಪನ ಪತ್ರ ಮೂಲಕ ಒತ್ತಡ ಹೇರದಂತೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಿಗೆ ಮನವಿ ಮಾಡಿರುವುದರ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳ ಸೂಚನೆಯಂತೆ ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪೊಲೀಸ್ ದೂರು ನೀಡಿ ಪ್ರಕರಣ ದಾಖಲಿಸಿರುವ…

Read More

ರಸ್ತೆ ದಾಟುತ್ತಿದ್ದ ಮಹಿಳೆಗೆ ಡಿಕ್ಕಿ ತಪ್ಪಿಸಲು ಟೆಂಪೋ ಟ್ರಾವೆಲರ್ ನಡುರಸ್ತೆಯಲ್ಲೇ ಪಲ್ಟಿ.

ಬೆಳ್ತಂಗಡಿ: ರಸ್ತೆ ದಾಟುತ್ತಿದ್ದ ಮಹಿಳೆಗೆ ಡಿಕ್ಕಿ ತಪ್ಪಿಸಲು ಟೆಂಪೋ ಟ್ರಾವೆಲರ್ ನಡುರಸ್ತೆಯಲ್ಲೇ ಪಲ್ಟಿಯಾದ ಘಟನೆ ದ.ಕ. ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಅಳದಂಗಡಿಯಲ್ಲಿ ನಡೆದಿದೆ. ಅಪಘಾತದ ಭೀಕರ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಗುರುವಾಯನಕೆರೆಯಿಂದ ಅಳದಂಗಡಿ ಕಡೆಗೆ ಟೆಂಪೋ ಟ್ರಾವೆಲರ್ ವೇಗವಾಗಿ ಬರುತ್ತಿತ್ತು‌. ಈ ವೇಳೆ ಏಕಾಏಕಿ ರಸ್ತೆದಾಟಲು ಮಹಿಳೆಯೊಬ್ಬರು ಯತ್ನಿಸಿದ್ದಾರೆ‌‌. ಆಗ ಮಹಿಳೆಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಟೆಂಪೋ ಟ್ರಾವೆಲರ್ ಡ್ರೈವರ್ ಯತ್ನಿಸಿದ್ದಾರೆ. ಆದರೂ ಮಹಿಳೆಗೆ ಟೆಂಪೊ ಟ್ರಾವಲರ್ ತಾಗಿ ಮಹಿಳೆ ಬಿದ್ದಿದ್ದಾರೆ. ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ….

Read More

ಯಕ್ಷಧ್ರುವ ಪಟ್ಲ ಫೌಂಡೇಶನ್ ದೆಹಲಿ ಘಟಕದ ದಶಮ ಸಂಭ್ರಮ.

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ನ ದೆಹಲಿ ಘಟಕದ ದಶಮ ಸಂಭ್ರಮ ದೆಹಲಿಯ ಕರ್ನಾಟಕ ಸಂಘದ ಸಭಾಂಗಣದಲ್ಲಿ ನೆರವೇರಿತು. ದೆಹಲಿಯ ಸಂಸದರಾದ ಭಾನ್ಸುರಿ ಸ್ವರಾಜ್ ಸಮಾರಂಭವನ್ನು ಉದ್ಘಾಟಿಸಿ ಯಕ್ಷಧ್ರುವ ಪಟ್ಲ ಫೌಂಡೇಶನ್ನಿನ ಕಾರ್ಯ ಯೋಜನೆಗಳನ್ನು ಮತ್ತು ಪಟ್ಲ ಸತೀಶ್ ಶೆಟ್ಟಿಯವರಿಗೆ ಕಲಾವಿದರ ಮೇಲಿರುವ ಕಾಳಜಿಯನ್ನು ಮುಕ್ತ ಕಂಠದಿಂದ ಪ್ರಶಂಸಿಸಿ ತನ್ನ ಅಧಿಕಾರ ವ್ಯಾಪ್ತಿಯಲ್ಲಿ ಪಟ್ಲ ಟ್ರಸ್ಟ್ ಫೌಂಡೇಶನ್ ಗೆ ಪೂರ್ಣ ಪ್ರಮಾಣದ ಸಹಕಾರದ ಭರವಸೆಯನ್ನು ನೀಡಿದರು. ಪಟ್ಲ ಫೌಂಡೇಶನ್ ನ ದೆಹಲಿ ಘಟಕದ ಅಧ್ಯಕ್ಷರಾದ ವಸಂತ ಶೆಟ್ಟಿ…

Read More
error: Content is protected !!