ಪಿಆರ್‌ಸಿ ಅಧಿಸೂಚನೆ ತಕ್ಷಣ ಹಿಂಪಡೆಯಿರಿ : ಬಿಜೆಪಿ ಆಗ್ರಹ
ಮಂಗಳೂರು:ಕರ್ನಾಟಕ ಸರ್ಕಾರ ಜಾರಿಗೊಳಿಸಿರುವ ಶಾಶ್ವತ ನಿವಾಸಿ ಪ್ರಮಾಣಪತ್ರ (PRC) ಅಧಿಸೂಚನೆಯನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಬಿಜೆಪಿ ಆಗ್ರಹಿಸಿದೆ. ಈ ನೀತಿ ಅಕ್ರಮ ವಲಸಿಗರಿಗೆ ಸರ್ಕಾರಿ ಸೌಲಭ್ಯ ಕಲ್ಪಿಸಿ, ಮತದಾರರ ಪಟ್ಟಿಗೆ ಸೇರಿಸುವ ಉದ್ದೇಶ ಹೊಂದಿದ್ದು, ಇದು ಸಂವಿಧಾನ ವಿರೋಧಿ ಹಾಗೂ ರಾಷ್ಟ್ರೀಯ ಭದ್ರತೆಗೆ ಅಪಾಯ ಉಂಟುಮಾಡಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಆತಂಕ ವ್ಯಕ್ತಪಡಿಸಿದರು. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಂದಾಯ ಇಲಾಖೆಯ ಮೂಲಕ ಪಿಆರ್‌ಸಿ ನೀಡುವ…
