ಹಿಂದೂ ವಿರೋಧಿ ಭ್ರಷ್ಟ, ಭಂಡ ಕಾಂಗ್ರೆಸ್ ಸರಕಾರದಿಂದ ರಾಜ್ಯಕ್ಕೆ ಅಧೋಗತಿ: ರಾಜಗೋಪಾಲ್ ರೈ
ಮಂಗಳೂರು: ಕಾಂಗ್ರೆಸ್ ಸರಕಾರದ ಎರಡೂವರೆ ವರ್ಷದ ಆಡಳಿತದಲ್ಲಿ ರಾಜ್ಯವು ಸಂಪೂರ್ಣ ಅಧೋಗತಿಗೆ ಇಳಿದಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಹಿಂದೂ ವಿರೋಧಿ ಮಾನಸಿಕತೆ, ಪಾಕ್ ಪರ ಘೋಷಣೆಗಳು, ದೇಶದ್ರೋಹಿ ಶಕ್ತಿಗಳು ವಿಜೃಂಭಿಸುತ್ತಿವೆ ಎಂದು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ವಕ್ತಾರರಾದ ರಾಜಗೋಪಾಲ್ ರೈ ತೀವ್ರ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಸರಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಮುಸ್ಲಿಂ ಓಲೈಕೆ ರಾಜಕಾರಣ ಮಿತಿಮೀರಿ ನಡೆಯುತ್ತಿದ್ದು, ನಾಡಹಬ್ಬ ದಸರಾದ ಉದ್ಘಾಟನೆಗೆ ಹಿಂದೂ ವಿರೋಧಿ ಮಾನಸಿಕತೆಯ ಬಾನು ಮುಷ್ತಾಕ್‌ಗೆ ಆಹ್ವಾನ ನೀಡಲಾಗಿದೆ. ರಾಜ್ಯಾದ್ಯಂತ ಜನರು…
