ಏರ್ ಪೋರ್ಟ್ ನಲ್ಲಿ ಚಿನ್ನ ಕಳ್ಳತನ – 4 ಮಂದಿ ಸಿಬ್ಬಂದಿ ಸೇರಿ ಐವರನ್ನು ಬಂಧಿಸಿದ ಬಜ್ಪೆ ಪೊಲೀಸರು
ಮಂಗಳೂರು: ಮಂಗಳೂರು ಏರ್ ಪೋರ್ಟ್ ನಲ್ಲಿ ಪ್ರಯಾಣಿಕರೊಬ್ಬರ ಟ್ರೋಲಿ ಬ್ಯಾಗ್ ತೆರೆದು 4.5 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಕಳ್ಳತನ ಪ್ರಕರಣದಲ್ಲಿ 4 ಮಂದಿ ಸಿಬ್ಬಂದಿ ಸೇರಿ ಐವರನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಏರ್ ಇಂಡಿಯಾ ಎಕ್ಸ್ ಪ್ರೆಸ್ ನ ಲೋಡಿಂಗ್ – ಅನ್ ಲೋಡಿಂಗ್ ಮಾಡುವ ಸಾಟ್ಸ್ ನೌಕರರಾದ ನಿತಿನ್, ಮೂಡುಪೆರಾರದ ನಿವಾಸಿಗಳಾದ ಸದಾನಂದ, ರಾಜೇಶ್, ಬಜ್ಪೆ ನಿವಾಸಿ ಪ್ರವೀಣ್ ಫೆರ್ನಾಂಡಿಸ್ ಮತ್ತು ಚಿನ್ನಾಭರಣ ಪಡೆದುಕೊಂಡು ಚಿನ್ನದ ಗಟ್ಟಿಯಾಗಿಸಿದ್ದ ಬಜ್ಪೆ ಮೂಡುಪೆರಾರ ನಿವಾಸಿ ರವಿರಾಜ್…
