ಎಸ್‌ಸಿಡಿಸಿಸಿ ಬ್ಯಾಂಕ್ ಗೆ ಸತತ ನಾಲ್ಕನೇ ಬಾರಿ ಅಟಲ್ ಪಿಂಚಣಿ ಯೋಜನೆಯ ರಾಷ್ಟ್ರೀಯ ಪ್ರಶಸ್ತಿ ಪುರಸ್ಕಾರ.
ಮಂಗಳೂರು : ಭಾರತ ಸರ್ಕಾರದ ಮಹತ್ವಾಕಾಂಕ್ಷೆಯ ಅಟಲ್ ಪಿಂಚಣಿ ಯೋಜನೆಯನ್ನು ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಮರ್ಪಕವಾಗಿ ಅನುಷ್ಠಾನಕ್ಕೆ ತಂದಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ( ಎಸ್ ಸಿಡಿಸಿಸಿ ಬ್ಯಾಂಕ್) 2024-25ನೇ ಸಾಲಿನಲ್ಲೂ ರಾಷ್ಟ್ರೀಯ ಪ್ರಶಸ್ತಿಗೆ ಪಾತ್ರವಾಗಿದ್ದು, ಈ ಪ್ರಶಸ್ತಿಯನ್ನು ಬ್ಯಾಂಕ್ ಸತತ ನಾಲ್ಕನೇ ಬಾರಿಗೆ ಮುಡಿಗೇರಿಸಿಕೊಂಡಿದೆ.ಅಟಲ್ ಪಿಂಚಣಿ ಯೋಜನೆ ಅಡಿಯಲ್ಲಿ 2024-25ನೇ ಸಾಲಿಗೆ ಎಸ್ ಸಿಡಿಸಿಸಿ ಬ್ಯಾಂಕ್ ಚಂದಾದಾರರ ದಾಖಲಾತಿಯಲ್ಲಿ 3179 ಚಂದಾದಾರರನ್ನು ನೋಂದಾಯಿಸುವ ಮೂಲಕ ಗುರಿ ಮೀರಿದ ಸಾಧನೆ ಮಾಡಿದೆ. ಬ್ಯಾಂಕಿನ…
