ರಾಷ್ಟ್ರೀಯ ಹೆದ್ದಾರಿ 75 ರ ಪಾಣೆಮಂಗಳೂರು ಸಮೀಪದ ನೆಹರುನಗರ ಎಂಬಲ್ಲಿ ಘನಗಾತ್ರದ ಲಾರಿ ,ದ್ವಿಚಕ್ರ ವಾಹನಕ್ಕೆ ಡಿಕ್ಕಿ
ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ 75 ರ ಪಾಣೆಮಂಗಳೂರು ಸಮೀಪದ ನೆಹರುನಗರ ಎಂಬಲ್ಲಿ ಘನಗಾತ್ರದ ಲಾರಿ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾದ ಪರಿಣಾಮ ದ್ವಿಚಕ್ರವಾಹನ ಸವಾರನಿಗೆ ಗಂಭೀರವಾಗಿ ಗಾಯಗೊಂಡಿದ್ದು,ಈತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ ಘಟನೆ ನಡೆದಿದೆ.ಕಲ್ಲಡ್ಕ ನಿವಾಸಿ ಸುಶಾಂತ್ ಕುಮಾರ್ ಎಂಬಾತನಿಗೆ ಲಾರಿ ಡಿಕ್ಕಿಯಾಗಿದೆ. ಚತುಷ್ಪತ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಗುತ್ತಿಗೆ ವಹಿಸಿಕೊಂಡಿರುವ ಕೆ.ಎನ್.ಆರ್ .ಸಿ.ಕಂಪೆನಿಗೆ ಸೇರಿದ ಲಾರಿ ಇದಾಗಿದ್ದು, ಚಾಲಕ ಅಬ್ದುಲ್ ನೂರ್ ಖಾಜಿ ಎಂಬಾತ ನೆಹರುನಗರದಲ್ಲಿರುವ ಅನಧಿಕೃತ ಕ್ರಾಸ್ ನಲ್ಲಿ ಬಂದಿದ್ದಲ್ಲದೆ ರಾಂಗ್ ಸೈಡ್ ನಲ್ಲಿ ಚಲಾಯಿಸಿಕೊಂಡು…
