ಖಾಸಗಿ ಸುದ್ದಿ ವಾಹಿನಿಯ ವರದಿಗಾರನ ಮೇಲೆ ಹಲ್ಲೆ ಆರೋಪ : ತಿಮರೋಡಿ, ಮಟ್ಟಣ್ಣನವರ್ ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು
ಉಜಿರೆ: ಖಾಸಗಿ ಸುದ್ದಿ ವಾಹಿನಿಯ ವರದಿಗಾರನ ಮೇಲೆ ನಡೆದ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಸಹಿತ ಹಲವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸುವರ್ಣ ಸುದ್ದಿ ವಾಹಿನಿಯ ವರದಿಗಾರ ಹರೀಶ್ ಅವರು ನೀಡಿರುವ ದೂರಿನಂತೆ ಪ್ರಕರಣ ದಾಖಲಿಸಲಾಗಿದೆ. ಉಜಿರೆಯ ಖಾಸಗಿ ಆಸ್ಪತ್ರೆಗೆ ವರದಿ ಮಾಡಲೆಂದು ತೆರಳಿದ ವೇಳೆ ಚಾನೆಲ್ ನ ಲೋಗೊ ನೋಡಿ ತಡೆದ ತಂಡ ತನ್ನ ಮೇಲೆ ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ. ಅದರಂತೆ ಬೆಳ್ತಂಗಡಿ…
