ವೆನ್‌ಲಾಕ್ ಆಸ್ಪತ್ರೆಯ ಒಪಿಡಿ ನವೀಕರಣ ಶಿಲನ್ಯಾಸ ಶೀಘ್ರ – ಸಚಿವ ದಿನೇಶ್ ಗುಂಡೂರಾವ್
ಮಂಗಳೂರು : ವೆನ್‌ಲಾಕ್ ಆಸ್ಪತ್ರೆಯ ಹೊರರೋಗಿ ವಿಭಾಗವನ್ನು ಅಮೂಲಾಗ್ರ ಬದಲಾವಣೆಯೊಂದಿಗೆ ನವೀಕರಣಗೊಳಿಸಲಾಗುತ್ತಿದ್ದು, ನವೆಂಬರ್‌ನಲ್ಲಿ ಶಿಲಾನ್ಯಾಸ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯದ ಆರೋಗ್ಯ ಸಚಿವರೂ ಆಗಿರುವ ದಿನೇಶ್ ಗುಂಡೂರಾವ್ ಹೇಳಿದರು. ವೆನ್‌ಲಾಕ್‌ನ ಆರ್‌ಎಪಿಸಿಸಿ ಸಭಾಂಗಣದಲ್ಲಿ ಶುಕ್ರವಾರ ಆರೋಗ್ಯ ರಕ್ಷಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ವೆನ್‌ಲಾಕ್‌ನ ಒಪಿಡಿ ಬ್ಲಾಕ್ ನವೀಕರಣಕ್ಕೆ ಸರಕಾರದಿಂದ ಈಗಾಗಲೇ 70 ಕೋಟಿ ರೂ. ಒದಗಿಸಲಾಗಿದ್ದು, ಆಸ್ಪತ್ರೆಯ ಅಮೂಲಾಗ್ರ ಬದಲಾವಣೆಯೊಂದಿಗೆ ಸುಸಜ್ಜಿತ ರೀತಿಯಲ್ಲಿ ನವೀಕರಣಗೊಳಿಸುವ ಅಗತ್ಯ ರೂಪುರೇಷೆಗಳನ್ನು ಒದಗಿಸುವಂತೆ ಅವರು ಸಭೆಯಲ್ಲಿ…
