ತುಳು ಅಕಾಡೆಮಿಯಿಂದ ತುಳು ನೋಟ್ ಪುಸ್ತಕ ಬಿಡುಗಡೆ
ಮಂಗಳೂರು : ಶಾಲೆಗಳಲ್ಲಿ ತೃತೀಯ ಭಾಷೆಯಾಗಿ ತುಳು ಪಠ್ಯ ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ ಉಚಿತವಾಗಿ ವಿತರಿಸುವ ಸಲುವಾಗಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹೊರ ತಂದ ತುಳು ನೋಟ್ ಪುಸ್ತಕವನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಶನಿವಾರ ಬಿಡುಗಡೆ ಮಾಡಿದರು. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಸರಕಾರಿ, ಅನುದಾನಿತ , ಖಾಸಗಿ, ಕನ್ನಡ ಮಾಧ್ಯಮ ಹಾಗೂ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಸುಮಾರು 2,000 ವಿದ್ಯಾರ್ಥಿಗಳು ತೃತೀಯ ಭಾಷೆಯಾಗಿ ತುಳು ಪಠ್ಯವನ್ನು ಅಧ್ಯಯನ ಮಾಡುತ್ತಿದ್ದಾರೆ. ರಾಜ್ಯ…
