ರಜೆ ಘೋಷಣೆ ಉಲ್ಲಂಘಿಸಿ ತರಗತಿ ನಡೆಸಿದ ಶಿಕ್ಷಣ ಸಂಸ್ಥೆಗಳಿಗೆ ನೋಟಿಸ್

ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಸ್ಪಷ್ಟನೆಗೆ ಸೂಚನೆ; ಆದೇಶ ಉಲ್ಲಂಘಿಸಿದರೆ ಕ್ರಮದ ಎಚ್ಚರಿಕೆ ಮಂಗಳೂರು, ಜು. 10: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಿಸಿದ್ದರೂ, ಕೆಲವು ಶಿಕ್ಷಣ ಸಂಸ್ಥೆಗಳು ತರಗತಿಗಳನ್ನು ನಡೆಸಿರುವ ಕುರಿತು ದೂರುಗಳು ಬಂದ ಹಿನ್ನೆಲೆಯಲ್ಲಿ ಸಂಬಂಧಿತ ಸಂಸ್ಥೆಗಳಿಗೆ ಜಿಲ್ಲಾಡಳಿತವು ನೋಟಿಸ್ ಜಾರಿಗೊಳಿಸಿ, ಘಟನೆಯ ಕುರಿತು ಸ್ಪಷ್ಟನೆ ನೀಡುವಂತೆ ಸೂಚಿಸಿದೆ. ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ರಜೆ ಘೋಷಿಸಲಾಗಿದ್ದು, ಜಿಲ್ಲಾಡಳಿತದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಎಲ್ಲ ಶಿಕ್ಷಣ ಸಂಸ್ಥೆಗಳ…

Read More

ಕರ್ನಾಟಕ ರಾಜ್ಯ ವಕೀಲರ ಪರಿಷತ್ ಚುನಾವಣೆಯಲ್ಲಿ ಶ್ಯಾಮಲಾ ಭಂಡಾರಿ ಕುಂದಾಪುರಗೆ ಜಯ

ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯ ಇತಿಹಾಸ ದಲ್ಲೇ ಮಹಿಳಿಯೊಬ್ಬರು ರಾಜ್ಯ ವಕೀಲರ ಪರಿಷತ್ತಿಗೆ ಚುನಾಯಿತರಾಗಿ ಆಯ್ಕೆಯಾದದ್ದು ಇದೆ ಮೊದಲು. ಹಿರಿಯ ವಕೀಲರಾಗಿ ಸಾಮಾಜಿಕ ಹೋರಾಟಗಳ ಮೂಲಕ ಮಹಿಳಾ ರಾಜಕಾರಣದಲ್ಲಿ ವಿಸಿಷ್ಟ್ ವಾಗಿ ಸಾಮಾಜಿಕ ಶೈಕ್ಷಣಿಕ ಕಾನೂನು ಕ್ಷೇತ್ರಗಳು ಸೇರಿದಂತೆ ಹಲವಾರು ಸಂಘ ಸಂಸ್ಥೆ ಗಳಲ್ಲಿ ಗುರುತಿಸಿಕೊಂಡಿದ್ದಾರೆ. ಅಲ್ಲದೆ ಕರ್ನಾಟಕ ರಾಜ್ಯ ನೋಟರಿ ವಕೀಲರ ಸಂಘ ದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

Read More

ಲಯನ್ಸ್ ಕ್ಲಬ್ ವಿಟ್ಲ ಸಿಟಿ ನೂತನ ಪದಾಧಿಕಾರಿಗಳ ಪದಗ್ರಹಣ ಜು. 12ರಂದು

ವಿಟ್ಲ, ಜು. 10: ಲಯನ್ಸ್ ಕ್ಲಬ್ ವಿಟ್ಲ ಸಿಟಿಯ 2026–27ನೇ ಸಾಲಿನ ನೂತನ ಅಧ್ಯಕ್ಷರಾಗಿ ಶಿಕ್ಷಕಿ ಶ್ವೇತಾ ರವಿಕುಮಾರ್, ಕಾರ್ಯದರ್ಶಿಯಾಗಿ ಉದ್ಯಮಿ ದಿನಕರ ಆಳ್ವ, ಹಾಗೂ ಕೋಶಾಧಿಕಾರಿಯಾಗಿ ಭಾರತ್ ಪೆಟ್ರೋಲ್ ಬಂಕ್‌ನ ಮಾಲಕರಾದ ಕೃಷ್ಣ ಆಯ್ಕೆಯಾಗಿದ್ದಾರೆ. ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜುಲೈ 12ರಂದು (ಭಾನುವಾರ) ಸಂಜೆ 7 ಗಂಟೆಗೆ ವಿಟ್ಲ ಪದವಿ ಪೂರ್ವ ಕಾಲೇಜಿನ ಸುವರ್ಣ ರಂಗಮಂದಿರದಲ್ಲಿ ನಡೆಯಲಿದೆ. ಜಿಲ್ಲೆಯ ಜಿಇಟಿ ಕೋ-ಆರ್ಡಿನೇಟರ್ ಜಗದೀಶ್ ಎಡಪಡಿತಾಯ ಹಾಗೂ ಚಿತ್ರಾ ಎಡಪಡಿತಾಯ ಅವರು ಪದಗ್ರಹಣ ಅಧಿಕಾರಿಗಳಾಗಿ ಕಾರ್ಯಕ್ರಮ…

Read More

ಶಾಸಕ ವೇದವ್ಯಾಸ ಕಾಮತ್ ವಿರುದ್ಧದ ಎಫ್ಐಆರ್ ರದ್ದುಗೊಳಿಸಿದ ಹೈಕೋರ್ಟ್ :-

ಶಕ್ತಿನಗರದ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಧಾರ್ಮಿಕ ಕಾರ್ಯಕ್ರಮದ ವೇಳೆ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣದ ಆರೋಪಕ್ಕೆ ಸಂಬಂಧಿಸಿದಂತೆ ಶಾಸಕ ವೇದವ್ಯಾಸ ಕಾಮತ್ ಹಾಗೂ ಇತರರ ವಿರುದ್ಧದ ಎಫ್ಐಆರ್ ನ್ನು ಹೈಕೋರ್ಟ್ ರದ್ದುಗೊಳಿಸಿತು. ಕಳೆದ ವರ್ಷ ಮಾರ್ಚ್ ನಲ್ಲಿ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಪ್ರತಿಕ್ರಿಯಿಸಿದ ಶಾಸಕರು, ಇದೊಂದು ರಾಜಕೀಯ ಪ್ರೇರಿತ ದುರುದ್ದೇಶದ ಪ್ರಕರಣವಾಗಿತ್ತು. ಮಾನ್ಯ ಹೈಕೋರ್ಟ್ ನೀಡಿರುವ ತೀರ್ಪು ನ್ಯಾಯಕ್ಕೆ ಸಂದ ಜಯವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನನ್ನ…

Read More

ಸಂಡೇ ಬಜಾರ್‌ಗೆ ಅವಕಾಶ ನೀಡುವಂತೆ ಆಗ್ರಹ: ಮನಪಾ ಎದುರು ಬೀದಿಬದಿ ವ್ಯಾಪಾರಿಗಳ ಅಹೋ ರಾತ್ರಿ ಧರಣಿ

ಮಂಗಳೂರು | ಜು. 9: ಬೀದಿಬದಿ ವ್ಯಾಪಾರಿಗಳ ಮೇಲಿನ ತೆರವು ಕಾರ್ಯಾಚರಣೆ ಖಂಡಿಸಿ ಹಾಗೂ ಸಂಡೇ ಬಜಾರ್ ವ್ಯಾಪಾರಕ್ಕೆ ಮುಕ್ತ ಅವಕಾಶ ಕಲ್ಪಿಸುವಂತೆ ಒತ್ತಾಯಿಸಿ, ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ (ಸಿಐಟಿಯು) ನೇತೃತ್ವದಲ್ಲಿ ನಗರದ ಮಹಾನಗರ ಪಾಲಿಕೆ ಕಚೇರಿ ಎದುರು ಅಹೋ ರಾತ್ರಿ ಧರಣಿ ಸತ್ಯಾಗ್ರಹ ಬುಧವಾರ ಆರಂಭವಾಯಿತು. ಧರಣಿಯ ವೇಳೆ ಮಹಿಳಾ ಬೀದಿಬದಿ ವ್ಯಾಪಾರಿಯೊಬ್ಬರು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿ, ಚುನಾವಣೆ ವೇಳೆ ಬಡವರ ಮತ ಬೇಕಾಗುತ್ತದೆ. ಆದರೆ ವಾರದಲ್ಲಿ ಒಂದು ದಿನ ವ್ಯಾಪಾರ…

Read More

ಪತಿ ವಿರುದ್ಧ ಆಸ್ತಿ ಹಾಗೂ ಚಿನ್ನ ಕಬಳಿಕೆ ಆರೋಪ: ನ್ಯಾಯಕ್ಕಾಗಿ ಪತ್ನಿಯ ಮನವಿ

ಸುಳ್ಯ: ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಹೀದ್ ತೆಕ್ಕಿಲ್ ಅವರು ಮದುವೆ ಸಂದರ್ಭದಲ್ಲಿ ತಂದೆ ನೀಡಿದ್ದ ಚಿನ್ನಾಭರಣ ಹಾಗೂ ಆಸ್ತಿಯನ್ನು ಕಬಳಿಸಿ ತನಗೂ ಮಕ್ಕಳಿಗೂ ಅನ್ಯಾಯ ಮಾಡಿದ್ದಾರೆ ಎಂದು ಅವರ ಪತ್ನಿ ಶಮಾ ಶಹೀದ್ ಆರೋಪಿಸಿದ್ದಾರೆ. ಸುಳ್ಯದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮದುವೆ ವೇಳೆ ತಂದೆ ನೀಡಿದ್ದ 110 ಪವನ್ ಚಿನ್ನ ಹಾಗೂ ತಮ್ಮ ಹೆಸರಿನ ಆಸ್ತಿಯನ್ನು ಪತಿ ದುರುಪಯೋಗಪಡಿಸಿಕೊಂಡಿದ್ದಾರೆ. ಈ ಕುರಿತು ಪ್ರಶ್ನಿಸಿದಾಗ, “ನೀನು ಸಿಎಂ ಅಥವಾ ಪಿಎಂ…

Read More

ಬೀದಿಬದಿ ವ್ಯಾಪಾರಿಗಳ ಮೇಲಿನ ದಬ್ಬಾಳಿಕೆ ಸಂವಿಧಾನ ವಿರೋಧಿ: ಮುನೀರ್ ಕಾಟಿಪಳ್ಳ ಆಕ್ರೋಶ

ಮಂಗಳೂರು, ಜು. 10: ಬಡವರ ಜೀವನೋಪಾಯದ ಬಗ್ಗೆ ಕಾಳಜಿ ವಹಿಸದೆ ಬೀದಿಬದಿ ವ್ಯಾಪಾರಿಗಳ ಮೇಲೆ ದಬ್ಬಾಳಿಕೆ ನಡೆಸುತ್ತಿರುವುದು ಸಂವಿಧಾನ ವಿರೋಧಿ ಕೃತ್ಯ ಎಂದು ಸಿಪಿಐ(ಎಂ) ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಆರೋಪಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ (ಸಿಐಟಿಯು) ನೇತೃತ್ವದಲ್ಲಿ ಸಂಡೆ ಬಜಾರ್ ವ್ಯಾಪಾರಕ್ಕೆ ಮುಕ್ತ ಅವಕಾಶ ಕಲ್ಪಿಸುವಂತೆ ಆಗ್ರಹಿಸಿ ಆರಂಭಗೊಂಡ ಹಗಲು-ರಾತ್ರಿ ಧರಣಿ ಸತ್ಯಾಗ್ರಹವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಯುರೋಪ್ ಮಾದರಿಯ ರಸ್ತೆಗಳು ಮತ್ತು ಪಾದಚಾರಿ ಮಾರ್ಗಗಳ ಬಗ್ಗೆ ಮಾತನಾಡುವ…

Read More

ಮರದ ಗೆಲ್ಲು ಕಡಿಯುವ ವೇಳೆ ವಿದ್ಯುತ್ ಸ್ಪರ್ಶ: ಕೂಲಿ ಕಾರ್ಮಿಕ ಸಾವು

ಬಂಟ್ವಾಳ | ಜು. 9: ತಾಲೂಕಿನ ಪೆರ್ನೆ ಗ್ರಾಮದ ನೂಜಿನಡ್ಕದಲ್ಲಿ ಮರದ ಗೆಲ್ಲು ಕಡಿಯುವ ವೇಳೆ ವಿದ್ಯುತ್ ಸ್ಪರ್ಶಿಸಿ ಕೂಲಿ ಕಾರ್ಮಿಕರೊಬ್ಬರು ಮೃತಪಟ್ಟಿರುವ ದುರ್ಘಟನೆ ಸಂಭವಿಸಿದೆ. ಮೃತರನ್ನು ಚಂದಪ್ಪ ಪೂಜಾರಿ ಎಂದು ಗುರುತಿಸಲಾಗಿದೆ. ಅವರು ನೂಜಿನಡ್ಕ ಪ್ರದೇಶದಲ್ಲಿ ಕೂಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಮರದ ಗೆಲ್ಲುಗಳನ್ನು ಕತ್ತರಿಸುವ ಕಾರ್ಯದಲ್ಲಿ ತೊಡಗಿದ್ದರು. ಈ ವೇಳೆ ಮರದ ಗೆಲ್ಲು ಸಮೀಪದಲ್ಲಿದ್ದ ವಿದ್ಯುತ್ ತಂತಿಗೆ ತಗುಲಿದ ಪರಿಣಾಮ ವಿದ್ಯುತ್ ಪ್ರವಹಿಸಿ ಅವರಿಗೆ ತೀವ್ರ ವಿದ್ಯುತ್ ಆಘಾತ ಉಂಟಾಗಿದೆ ಎಂದು ತಿಳಿದುಬಂದಿದೆ. ಘಟನೆಯನ್ನು…

Read More

ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನ: ಹೊರಾಂಗಣ ಮೇಲ್ಛಾವಣಿ ನಿರ್ಮಾಣಕ್ಕೆ ಶಿಲಾನ್ಯಾಸ

ಬಂಟ್ವಾಳ | ಜು. 9: ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಹೊರಾಂಗಣದ ಮುಂಭಾಗದಲ್ಲಿ ನಿರ್ಮಾಣಗೊಳ್ಳಲಿರುವ ಮೇಲ್ಛಾವಣಿ ಕಾಮಗಾರಿಗೆ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಶಿಲಾನ್ಯಾಸ ನೆರವೇರಿತು. ದೇವಸ್ಥಾನದ ಪ್ರಧಾನ ಅರ್ಚಕ ಶಂಕರನಾರಾಯಣ ಹೊಳ್ಳ ಅವರು ಪೂಜಾ ವಿಧಿ ನೆರವೇರಿಸಿದರು. ಬಳಿಕ ಮಾತನಾಡಿದ ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಹಾಗೂ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಜಗನ್ನಾಥ ಚೌಟ ಬದಿಗುಡ್ಡೆ, ಕ್ಷೇತ್ರದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಯಶಸ್ವಿಯಾಗಿ ನಡೆದಿದ್ದು, ಇದೀಗ ಅಭಿವೃದ್ಧಿ ಕಾಮಗಾರಿಗಳು ನಿರಂತರವಾಗಿ ನಡೆಯುತ್ತಿವೆ. ಕ್ಷೇತ್ರದ ಸೇವೆಯಲ್ಲಿ ತೊಡಗಿರುವ ಪ್ರತಿಯೊಬ್ಬರ ಮೇಲೂ…

Read More

ಉಡುಪಿ ವಿಷನ್-2035’ಗೆ ಚಾಲನೆ: ಜು.12ರಂದು ಸಮಾಲೋಚನಾ ಸಭೆ

ಉಡುಪಿ | ಜು. 9: ಮುಂದಿನ ಹತ್ತು ವರ್ಷಗಳ ಅವಧಿಗೆ ಉಡುಪಿಯ ಸಮಗ್ರ ಅಭಿವೃದ್ಧಿಯ ನೀಲನಕ್ಷೆ ರೂಪಿಸುವ ಉದ್ದೇಶದಿಂದ ‘ಉಡುಪಿ ವಿಷನ್-2035’ ಸಮಾಲೋಚನಾ ಸಭೆಯನ್ನು ಜುಲೈ 12ರಂದು ಸಂಜೆ 5.30ಕ್ಕೆ ಉಡುಪಿಯ ಹೊಟೇಲ್ ಕಿದಿಯೂರಿನ ಶೇಷಶಯನ್ ಹಾಲ್‌ನಲ್ಲಿ ಆಯೋಜಿಸಲಾಗಿದೆ ಎಂದು ಉಡುಪಿ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್ ಅಧ್ಯಕ್ಷ ಅಮ್ಮುಂಜೆ ಪ್ರಭಾಕರ ನಾಯಕ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿವಿಧ ಸಂಘಟನೆಗಳು, ಜನಪ್ರತಿನಿಧಿಗಳು ಹಾಗೂ ವಿವಿಧ ಕ್ಷೇತ್ರಗಳ ಪರಿಣಿತರು ಸಭೆಯಲ್ಲಿ ಭಾಗವಹಿಸಿ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ…

Read More
error: Content is protected !!