ಉಡುಪಿ ವಿಷನ್-2035’ಗೆ ಚಾಲನೆ: ಜು.12ರಂದು ಸಮಾಲೋಚನಾ ಸಭೆ

ಉಡುಪಿ | ಜು. 9: ಮುಂದಿನ ಹತ್ತು ವರ್ಷಗಳ ಅವಧಿಗೆ ಉಡುಪಿಯ ಸಮಗ್ರ ಅಭಿವೃದ್ಧಿಯ ನೀಲನಕ್ಷೆ ರೂಪಿಸುವ ಉದ್ದೇಶದಿಂದ ‘ಉಡುಪಿ ವಿಷನ್-2035’ ಸಮಾಲೋಚನಾ ಸಭೆಯನ್ನು ಜುಲೈ 12ರಂದು ಸಂಜೆ 5.30ಕ್ಕೆ ಉಡುಪಿಯ ಹೊಟೇಲ್ ಕಿದಿಯೂರಿನ ಶೇಷಶಯನ್ ಹಾಲ್‌ನಲ್ಲಿ ಆಯೋಜಿಸಲಾಗಿದೆ ಎಂದು ಉಡುಪಿ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್ ಅಧ್ಯಕ್ಷ ಅಮ್ಮುಂಜೆ ಪ್ರಭಾಕರ ನಾಯಕ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿವಿಧ ಸಂಘಟನೆಗಳು, ಜನಪ್ರತಿನಿಧಿಗಳು ಹಾಗೂ ವಿವಿಧ ಕ್ಷೇತ್ರಗಳ ಪರಿಣಿತರು ಸಭೆಯಲ್ಲಿ ಭಾಗವಹಿಸಿ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ…

Read More

ಕೆಪಿಟಿ ಬಳಿ ಭೀಕರ ಅಪಘಾತ: ಜಮ್ಮುವಿನಲ್ಲಿ ಸೇವೆಯಲ್ಲಿದ್ದ ಸಿಐಎಸ್‌ಎಫ್ ಹೆಡ್ ಕಾನ್‌ಸ್ಟೆಬಲ್ ಸ್ಥಳದಲ್ಲೇ ಸಾವು

ಮಂಗಳೂರು | ಜು. 9: ರಾಷ್ಟ್ರೀಯ ಹೆದ್ದಾರಿ 66ರ ಕೆಪಿಟಿ ಸಮೀಪ ಬುಧವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಸಿಐಎಸ್‌ಎಫ್ ಹೆಡ್ ಕಾನ್‌ಸ್ಟೆಬಲ್ ಸೀತಾರಾಮ ಗೌಡ (47) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂಲತಃ ಉಪ್ಪಿನಂಗಡಿ ನಿವಾಸಿಯಾಗಿರುವ ಸೀತಾರಾಮ ಗೌಡ ಅವರು ಸ್ಕೂಟರ್‌ನಲ್ಲಿ ಕೆಪಿಟಿಯಿಂದ ಕೊಟ್ಟಾರಚೌಕಿ ಕಡೆಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಸ್ಕೂಟರ್ ಮೊದಲು ಡಿವೈಡರ್‌ಗೆ ಢಿಕ್ಕಿ ಹೊಡೆದು ಬಳಿಕ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅವರು ಗಂಭೀರ ಗಾಯಗೊಂಡು ಸ್ಥಳದಲ್ಲೇ…

Read More

17 ವರ್ಷಗಳಿಂದ ಅಕ್ರಮ ಸ್ಫೋಟಕ ಬಳಕೆ ಆರೋಪ: ಪಲ್ಲಮಜಲು ಕಲ್ಲುಕೋರೆಗೆ ಗಣಿ ಇಲಾಖೆ ಮರು ಪರಿಶೀಲನೆ

ಬಂಟ್ವಾಳ | ಜು. 9: ತಾಲೂಕಿನ ಬಿ.ಮೂಡ ಗ್ರಾಮದ ಪಲ್ಲಮಜಲು ಪ್ರದೇಶದಲ್ಲಿರುವ ಕಲ್ಲುಕೋರೆಗೆ ಸಂಬಂಧಿಸಿದಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಮತ್ತೊಮ್ಮೆ ಸ್ಥಳ ಪರಿಶೀಲನೆ ನಡೆಸಿದರು. ಹೋರಾಟಗಾರರು ಸಲ್ಲಿಸಿದ್ದ ಹೊಸ ದೂರಿನ ಹಿನ್ನೆಲೆಯಲ್ಲಿ ಈ ಪರಿಶೀಲನೆ ನಡೆದಿದ್ದು, ಗ್ರಾಮಸ್ಥರು ಮತ್ತು ಹೋರಾಟಗಾರರು ಅಧಿಕಾರಿಗಳಿಗೆ ಹಲವು ಅಹವಾಲುಗಳನ್ನು ಸಲ್ಲಿಸಿದರು. ಕಲ್ಲು ಸಿಡಿಸಲು ಅಗತ್ಯ ಅನುಮತಿ ಇಲ್ಲದಿದ್ದರೂ ಕಳೆದ ಸುಮಾರು 17 ವರ್ಷಗಳಿಂದ ಸ್ಫೋಟಕಗಳನ್ನು ಬಳಸಿ ಕಲ್ಲು ಒಡೆದು ಸಾಗಾಟ ನಡೆಸಲಾಗುತ್ತಿದೆ ಎಂದು ಹೋರಾಟಗಾರರು ಆರೋಪಿಸಿದರು. ಈ ಕುರಿತು…

Read More

ಪುತ್ತೂರಿನಲ್ಲಿ ವಿದ್ಯುತ್ ಸಮಸ್ಯೆ: ಮೆಸ್ಕಾಂ ಅಧಿಕಾರಿಗಳಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮನವಿ

ಪುತ್ತೂರು | ಜು. 9: ಪುತ್ತೂರು ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಕಳೆದ ಕೆಲವು ದಿನಗಳಿಂದ ವಿದ್ಯುತ್ ಪೂರೈಕೆಯಲ್ಲಿ ಉಂಟಾಗಿರುವ ವ್ಯತ್ಯಯ ಮತ್ತು ಲೋ-ವೋಲ್ಟೇಜ್ ಸಮಸ್ಯೆಯಿಂದ ಸಾರ್ವಜನಿಕರು ತೀವ್ರ ಸಂಕಷ್ಟ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ, ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಮೆಸ್ಕಾಂ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಟ್ರಸ್ಟ್‌ನ ಪದಾಧಿಕಾರಿಗಳು ಮೆಸ್ಕಾಂ ಓ&ಎಂ-1 ಶಾಖಾಧಿಕಾರಿ ಹಾಗೂ ಕಾರ್ಯನಿರ್ವಾಹಕ ಇಂಜಿನಿಯರ್ (ವಿ) ಅವರನ್ನು ಭೇಟಿ ಮಾಡಿ, ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಿ ಮನವಿ ಪತ್ರ ಸಲ್ಲಿಸಿದರು. ಮನವಿಯಲ್ಲಿ, ನಗರದ…

Read More

ಜು.11ರಂದು ಸಿಐಐ ಮಂಗಳೂರು ಆರೋಗ್ಯ ಶೃಂಗಸಭೆ

ಮಂಗಳೂರು: ಭಾರತೀಯ ಕೈಗಾರಿಕಾ ಮಹಾಸಂಘ (ಸಿಐಐ) ಮಂಗಳೂರು ವಲಯದ ವತಿಯಿಂದ ಪ್ರಥಮ ಸಿಐಐ ಮಂಗಳೂರು ಆರೋಗ್ಯ ಶೃಂಗಸಭೆ-2026 ಜುಲೈ 11ರಂದು ಬೆಳಿಗ್ಗೆ 10 ಗಂಟೆಗೆ ನಗರದ ಅವತಾರ್ ಖಾಸಗಿ ಹೋಟೆಲ್‌ನಲ್ಲಿ ನಡೆಯಲಿದೆ ಎಂದು ಸಿಐಐ ಮಂಗಳೂರು ಅಧ್ಯಕ್ಷ ಅಭಿನವ್ ತಿಳಿಸಿದ್ದಾರೆ. ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಕರಾವಳಿ ಕರ್ನಾಟಕವನ್ನು ಜಾಗತಿಕ ಆರೋಗ್ಯ ಸೇವಾ ಗಮ್ಯಸ್ಥಾನವಾಗಿ ರೂಪಿಸುವುದು” ಎಂಬ ಧ್ಯೇಯದೊಂದಿಗೆ ಶೃಂಗಸಭೆ ಆಯೋಜಿಸಲಾಗಿದೆ. ಆರೋಗ್ಯ ಕ್ಷೇತ್ರದ ತಜ್ಞರು, ಆಸ್ಪತ್ರೆಗಳ ಆಡಳಿತ ಮಂಡಳಿಗಳು, ನೀತಿ ನಿರ್ಧಾರಕರು, ವೈದ್ಯರು, ವೈದ್ಯಕೀಯ…

Read More

‘ಕನ್ನಡ ಪಯಸ್ವಿನಿ ಸೇವಾ ರತ್ನ’ ಪ್ರಶಸ್ತಿಗೆ ನಾಗರಾಜ್ ಟಿ. ಆಯ್ಕೆ

ಮಂಗಳೂರು: ತುಮಕೂರಿನ ಸಮಾಜಸೇವಕ ನಾಗರಾಜ್ ಟಿ. ಅವರು ಕನ್ನಡ ಭವನ ನೀಡುವ ಪ್ರತಿಷ್ಠಿತ ಅಂತರ್‌ರಾಜ್ಯ ‘ಕನ್ನಡ ಪಯಸ್ವಿನಿ ಸೇವಾ ರತ್ನ’ ಅಚೀವ್‌ಮೆಂಟ್ ಅವಾರ್ಡ್–2026ಕ್ಕೆ ಆಯ್ಕೆಯಾಗಿದ್ದಾರೆ. ಜುಲೈ 26ರಂದು ಕನ್ನಡ ಭವನದ ರಜತ ಸಂಭ್ರಮ ಸಮಾರೋಪ ಸಮಾರಂಭದ ಅಂಗವಾಗಿ ನಡೆಯಲಿರುವ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ಕೆ. ವಾಮನ್ ರಾವ್ ಬೇಕಲ್ ಪತ್ರಿಕಾ ಪ್ರಕಟಣೆಯಲ್ಲಿ…

Read More

ಆ.2ರಿಂದ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ಶಿಪ್ : ಡಾ. ಅಮರ ಶ್ರೀ ಅಮರನಾಥ ಶೆಟ್ಟಿ

ಮಂಗಳೂರು: ದಕ್ಷಿಣ ಕನ್ನಡ ಚೆಸ್ ಅಸೋಸಿಯೇಷನ್ (ರಿ.) ವತಿಯಿಂದ ರಾಷ್ಟ್ರೀಯ 11 ವರ್ಷದೊಳಗಿನ ಮುಕ್ತ ಹಾಗೂ ಬಾಲಕಿಯರ ಚೆಸ್ ಚಾಂಪಿಯನ್‌ಶಿಪ್-2026 ಆಗಸ್ಟ್ 2ರಿಂದ 8ರವರೆಗೆ ನಗರದ ಉರ್ವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಅಸೋಸಿಯೇಷನ್ ಅಧ್ಯಕ್ಷರಾದ ಡಾ. ಅಮರ ಶ್ರೀ ಅಮರನಾಥ ಶೆಟ್ಟಿ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ವಿವಿಧ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಂದ 600ಕ್ಕೂ ಅಧಿಕ ಆಟಗಾರರು, ತರಬೇತುದಾರರು ಮತ್ತು ಪೋಷಕರು ಭಾಗವಹಿಸುವ ನಿರೀಕ್ಷೆಯಿದ್ದು, ಈ ರಾಷ್ಟ್ರೀಯ…

Read More

ಜು.12ರಂದು ಜಿಎಸ್‌ಬಿ ಸೇವಾ ಸಂಘದಿಂದ ಕೊಂಕಣಿ ಸಾಹಿತ್ಯ ಸ್ಪರ್ಧೆಗಳು

ಮಂಗಳೂರು: ಗೌಡ ಸಾರಸ್ವತ ಬ್ರಾಹ್ಮಣ (ಜಿಎಸ್‌ಬಿ) ಸೇವಾ ಸಂಘದ ವತಿಯಿಂದ ದಿ. ಮಂದರ್ಕೆ ಮಾಧವ್ ಪೈ ಸ್ಮರಣಾರ್ಥ ‘ಸೋಬಿತ್ ಪಾನ್ಸಾಡಿ’ ಕೊಂಕಣಿ ಸಾಹಿತ್ಯ ಹಾಗೂ ವಿವಿಧ ಸ್ಪರ್ಧೆಗಳು ಜುಲೈ 12ರಂದು ಬೆಳಗ್ಗೆ 9.30ರಿಂದ ಮಧ್ಯಾಹ್ನ 1ರವರೆಗೆ ನಗರದ ಸುಜೀರ್ ಸಿ.ವಿ. ನಾಯಕ್ ಸಭಾಂಗಣದಲ್ಲಿ ನಡೆಯಲಿವೆ. ನಗರದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಂಘಟನಾ ಸಮಿತಿ ಅಧ್ಯಕ್ಷ ಡಾ. ಎ. ರಮೇಶ್ ಪೈ, ಕೊಂಕಣಿ ಭಾಷೆಯ ಬೆಳವಣಿಗೆಗೆ ಉತ್ತೇಜನ ನೀಡುವ ಹಾಗೂ ವಿವಿಧ ವಯೋಮಾನದ…

Read More

ರಾಮ ಮಂದಿರ ದೇಣಿಗೆ, ಹುಂಡಿ ಕಳವು ಆರೋಪ: ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ವಿನಯಕುಮಾರ್ ಸೊರಕೆ ಆಗ್ರಹ

ಉಡುಪಿ | ಜು. 9: ರಾಮ ಮಂದಿರದ ದೇಣಿಗೆ, ಹುಂಡಿ ಕಳವು ಹಾಗೂ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕೇಳಿಬರುತ್ತಿರುವ ಆರೋಪಗಳ ಕುರಿತು ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಿ ಸತ್ಯಾಂಶವನ್ನು ಬಹಿರಂಗಪಡಿಸಬೇಕು ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಆಗ್ರಹಿಸಿದರು. ಉಡುಪಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಮನ ಹೆಸರನ್ನು ಬಳಸಿಕೊಂಡು ಬಿಜೆಪಿ ಚುನಾವಣೆಗಳನ್ನು ಎದುರಿಸಿದ್ದು, ಮನೆ ಮನೆಗೆ ಇಟ್ಟಿಗೆ ನೀಡಿ ಪೂಜೆ ಮಾಡಿಸಿ ಮತ ಯಾಚನೆ ನಡೆಸಲಾಗಿತ್ತು ಎಂದು ಆರೋಪಿಸಿದರು. ರಾಮ ಮಂದಿರಕ್ಕಾಗಿ ದಶಕಗಳಿಂದ…

Read More

ಆಗುಂಬೆಯಲ್ಲಿ ಮೊದಲ ಬಾರಿಗೆ ಅಪರೂಪದ ‘ಕನಿ ಮರಏಡಿ’ ಪತ್ತೆ

ಉಡುಪಿ, ಜು. 9: ಭಾರತದ ಏಕೈಕ ನೈಜ ಮರವಾಸಿ ಸಿಹಿನೀರಿನ ಏಡಿ ಎಂದು ಗುರುತಿಸಲ್ಪಟ್ಟಿರುವ ಅಪರೂಪದ ‘ಕನಿ ಮರನಂಡು’ (Kani Maranjandu) ಮೊದಲ ಬಾರಿಗೆ ಆಗುಂಬೆಯಲ್ಲಿ ಪತ್ತೆಯಾಗಿದ್ದು, ಪಶ್ಚಿಮ ಘಟ್ಟದ ಜೀವವೈವಿಧ್ಯ ಅಧ್ಯಯನದಲ್ಲಿ ಮಹತ್ವದ ಬೆಳವಣಿಗೆಯಾಗಿ ಪರಿಣಮಿಸಿದೆ. ಇದುವರೆಗೆ ಈ ಅಪರೂಪದ ಏಡಿ ಕೇವಲ ಕೇರಳದ ಆಗಸ್ತ್ಯಮಲೆ ಜೈವಿಕ ವಲಯದಲ್ಲಿ ಮಾತ್ರ ದಾಖಲಾಗಿತ್ತು. ಇದೀಗ ಸುಮಾರು 566 ಕಿ.ಮೀ. ದೂರದಲ್ಲಿರುವ ಆಗುಂಬೆಯಲ್ಲಿ ಇದೇ ಪ್ರಭೇದ ಪತ್ತೆಯಾಗಿರುವುದು ಇದರ ವಿತರಣಾ ವ್ಯಾಪ್ತಿಯ ಕುರಿತು ಹೊಸ ಮಾಹಿತಿಯನ್ನು ಒದಗಿಸಿದೆ. ಸಂಶೋಧಕರಾದ…

Read More
error: Content is protected !!