ರಿಷಬ್ ಶೆಟ್ಟಿ ಹುಟ್ಟುಹಬ್ಬ: ಅಭಯ ಆಶ್ರಮದ 90 ಮಂದಿಗೆ ಅನ್ನದಾನ

ಮಂಗಳೂರು | ಜು. 9: ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರ ಹುಟ್ಟುಹಬ್ಬದ ಅಂಗವಾಗಿ ರಿಷಬ್ ಶೆಟ್ಟಿ ಫ್ಯಾನ್ಸ್ ಕುಡ್ಲ ವತಿಯಿಂದ ಸಮಾಜಮುಖಿ ಕಾರ್ಯಕ್ರಮವೊಂದು ನಡೆಯಿತು. ಕದ್ರಿ ಇವೆಂಟ್ಸ್‌ನ ಮಾಲಕರಾದ ಜಗದೀಶ್ ಕದ್ರಿ ಅವರ ಮುಂದಾಳತ್ವದಲ್ಲಿ, ಕೊಣಾಜೆ ಸಮೀಪದ ಅಸೈಗೋಳಿಯಲ್ಲಿರುವ ಅಭಯ ಆಶ್ರಮದ 90 ಮಂದಿ ಆಶ್ರಮವಾಸಿಗಳಿಗೆ ಅನ್ನದಾನದ ವ್ಯವಸ್ಥೆ ಮಾಡಲಾಯಿತು. ರಿಷಬ್ ಶೆಟ್ಟಿ ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ಆಶ್ರಮವಾಸಿಗಳಿಗೆ ಊಟವನ್ನು ವಿತರಿಸಿ ಶುಭ ಹಾರೈಸಲಾಯಿತು. ಈ ಸಂದರ್ಭದಲ್ಲಿ ಕಿಶೋರ್…

Read More

ಯಕ್ಷನಂದನ 45ನೇ ವರ್ಷಾಚರಣೆ ಜು.10ರಂದು; ಅಪರೂಪದ ಇಂಗ್ಲಿಷ್ ಯಕ್ಷಗಾನ ಪ್ರದರ್ಶನ

ಮಂಗಳೂರು: ಯಕ್ಷಗಾನವನ್ನು ಭಾಷೆಯ ಗಡಿಗಳನ್ನು ಮೀರಿ ಜಾಗತಿಕ ಮಟ್ಟಕ್ಕೆ ಪರಿಚಯಿಸಿದ “ಯಕ್ಷನಂದನ” ಸಂಸ್ಥೆಯ 45ನೇ ವರ್ಷಾಚರಣೆ ಕಾರ್ಯಕ್ರಮವು ಜುಲೈ 10ರಂದು ಪಣಂಬೂರು ಶ್ರೀ ನಂದನೇಶ್ವರ ದೇವಸ್ಥಾನದ “ರಾಮರಮಣ” ಮಂಟಪದಲ್ಲಿ ನಡೆಯಲಿದೆ ಎಂದು ಯಕ್ಷನಂದನದ ಸಂಚಾಲಕ ಪಿ. ಸಂತೋಷ್ ಐತಾಳ ತಿಳಿಸಿದರು. ನಗರದ ಪತ್ರಿಕಾಭವನದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಸ್ಥೆಯ ಸಂಸ್ಥಾಪಕರಾದ ದಿವಂಗತ ಪಿ.ವಿ. ಐತಾಳರ ತಿಥಿಯ ಅಂಗವಾಗಿ ಮಧ್ಯಾಹ್ನ 2.15ರಿಂದ ಸಂಜೆ 5 ಗಂಟೆಯವರೆಗೆ ಅವರು ರಚಿಸಿದ ‘ನರಕಾಸುರ ಮೋಕ್ಷ’ ಹಾಗೂ ‘ಬ್ರಹ್ಮಕಪಾಲ’ ಪ್ರಸಂಗಗಳ…

Read More

ಗುರುಪುರ ಹೋಬಳಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸಿಪಿಎಂ ನಿಯೋಗ ಬೇಟಿ

ಗುರುಪುರ ಹೋಬಳಿಯಲ್ಲಿರುವ ನಾಲ್ಕು ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಮತ್ತು ಸಿಬ್ಬಂದಿಗಳ ಕೊರತೆ, ಆರೋಗ್ಯ ಕೇಂದ್ರಗಳ ಔಷಧಿ ಮೂಲಭೂತ ಸೌಕರ್ಯಗಳ ಕೊರತೆಗೆ ಸಂಬಂಧಿಸಿದ ಅಧ್ಯಯನಕ್ಕಾಗಿ ಭಾರತ ಕಮ್ಯುನಿಸ್ಟ್ ಪಕ್ಷ ಮಾರ್ಕ್ಸ್ ವಾದಿ ಗುರುಪುರ ವಲಯ ಸಮಿತಿಯು ಸಮಿತಿಯನ್ನು ರಚಿಸಿದ್ದು ಈ ನಿಯೋಗವು ಗುರುಪುರ ಹೋಬಳಿಯಲ್ಲಿರುವ ಕುಪ್ಪೆಪದವು,ಗಂಜಿಮಠ, ಕೊಂಪದವು,ಕುಡುಪು ಪ್ರಾರ್ಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳ ಕುರಿತು ಮಾಹಿತಿ ಸಂಗ್ರಹಿಸಿತು. ಗುರುಪುರ ಹೋಬಳಿಯಲ್ಲಿರುವ ನಾಲ್ಕು ಆರೋಗ್ಯ ಕೇಂದ್ರಗಳ ಪೈಕಿ ಕುಡುಪು ಮತ್ತು ಗಂಜಿಮಠ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು…

Read More

ದೇವರ ಹೆಸರಿನಲ್ಲಿ ದೇಣಿಗೆ ದುರುಪಯೋಗ ಆರೋಪ: ಪ್ರಶ್ನೆ ಮಾಡಬಾರದೆನ್ನುವ ಬಿಜೆಪಿ ಹೇಳಿಕೆಗೆ ರಮಾನಾಥ್ ರೈ ತಿರುಗೇಟು

ಮಂಗಳೂರು: ದೇವರ ಹೆಸರಿನಲ್ಲಿ ದೇಣಿಗೆ ಸಂಗ್ರಹಿಸಿ ಹಣದ ದುರುಪಯೋಗ ನಡೆಯುತ್ತಿದೆ ಎಂಬ ಗಂಭೀರ ಆರೋಪವನ್ನು ಕಾಂಗ್ರೆಸ್ ಪ್ರಶ್ನಿಸಬಾರದು ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಮಾಜಿ ಸಚಿವ ಬಿ. ರಮಾನಾಥ್ ರೈ ತಿರುಗೇಟು ನೀಡಿದ್ದಾರೆ. ನಗರದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿಕಾರ ಬದಲಾದ ಬಳಿಕ ದೇಣಿಗೆ ಸಂಗ್ರಹದಲ್ಲಿ ದಿನಕ್ಕೆ ಸುಮಾರು ₹8 ಲಕ್ಷ ವ್ಯತ್ಯಾಸವಾಗುತ್ತಿದೆ ಎಂದು ಕೆಲವರು ಹೇಳುತ್ತಿದ್ದಾರೆ. ಇಂತಹ ವಿಚಾರವನ್ನು ಸಾಮಾನ್ಯವೆಂದು ಬಿಂಬಿಸುವುದು ಸರಿಯಲ್ಲ. ದೇವರ ಹೆಸರಿನಲ್ಲಿ ಹಣಕಾಸಿನ ವ್ಯವಹಾರಗಳು…

Read More

ಜು. 13ರಂದು ಮಂಗಳೂರಿನಲ್ಲಿ ಮೂಲ ಸೋಮನಾಥ ಜ್ಯೋತಿರ್ಲಿಂಗದ ಪವಿತ್ರ ಅವಶೇಷಗಳ ದರ್ಶನ

ಮಂಗಳೂರು ಐತಿಹಾಸಿಕ ಹಾಗೂ ಆಧ್ಯಾತ್ಮಿಕ ಮಹತ್ವ ಹೊಂದಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ಪವಿತ್ರ ಅವಶೇಷಗಳ ಸಾರ್ವಜನಿಕ ದರ್ಶನ ಕಾರ್ಯಕ್ರಮವು ಜುಲೈ 13ರಂದು ಮಂಗಳೂರಿನಲ್ಲಿ ನಡೆಯಲಿದೆ ಎಂದು ದಿ ಆರ್ಟ್ ಆಫ್ ಲಿವಿಂಗ್ ಮಂಗಳೂರು ಜಿಲ್ಲಾ ಸಂಯೋಜಕ ಸತೀಶ್ ಕಾಮತ್ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀ ಮಂಗಳಾದೇವಿ ದೇವಸ್ಥಾನದ ಸಮೀಪದ ರಮಾ ಲಕ್ಷ್ಮಿನಾರಾಯಣ ಕನ್ವೆಂಷನ್ ಹಾಲ್‌ನಲ್ಲಿ ಬೆಳಿಗ್ಗೆ 9.30ರಿಂದ ಸಂಜೆ 6 ಗಂಟೆಯವರೆಗೆ ಭಕ್ತರಿಗೆ ದರ್ಶನದ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು….

Read More

ಅರ್ಹ ಮತದಾರರ ಹೆಸರು ಪಟ್ಟಿಯಿಂದ ಕೈಬಿಡದಂತೆ ಎಚ್ಚರ ವಹಿಸಿ: ಬಿ. ರಮಾನಾಥ ರೈ

ಎಸ್‌ಐಆರ್ ಪ್ರಕ್ರಿಯೆ ಪಾರದರ್ಶಕವಾಗಿರಲಿ; ಬಿಎಲ್‌ಒಗಳು ಪಕ್ಷಾತೀತವಾಗಿ ಕಾರ್ಯನಿರ್ವಹಿಸಲಿ ಎಂದು ಆಗ್ರಹ ಮಂಗಳೂರು, ಜು. 8: ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಡದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದು ಮಾಜಿ ಸಚಿವ B. Ramanath Rai ಆಗ್ರಹಿಸಿದರು. ನಗರದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆ ವಿದ್ಯಾವಂತರು ಹಾಗೂ ಜಾಗೃತ ಮತದಾರರನ್ನು ಹೊಂದಿರುವ ಜಿಲ್ಲೆಯಾಗಿದ್ದು, ಮತದಾನವು ಪ್ರತಿಯೊಬ್ಬ ಪ್ರಜೆಯ…

Read More

ಬೆಂಗಳೂರು ವಸತಿ ಶಾಲೆಯಲ್ಲಿ 6ನೇ ತರಗತಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು; ಶಿಕ್ಷಕನ ವಿರುದ್ಧ ಗಂಭೀರ ಆರೋಪ

ಬೆಂಗಳೂರು, (ಜುಲೈ 08): ಬೆಂಗಳೂರು ಉತ್ತರ ತಾಲೂಕಿನ ಕಾಡಯರಪ್ಪನಹಳ್ಳಿಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಯೋರ್ವ  ಅನುಮಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಕಾಡಯರಪ್ಪನಹಳ್ಳಿಯ ಸ್ಟ್ರಲಿಂಗ್ ಇಂಗ್ಲೀಷ್ ವಸತಿ ಶಾಲೆಯಲ್ಲಿ 6ನೇ ತರಗತಿ ಓದುತ್ತಿದ್ದ ಗುರು ಕಿರಣ್​ ಎಂಬ ವಿದ್ಯಾರ್ಥಿ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾನೆ. ಹುಷಾರಿಲ್ಲ ಎಂದು ಆಸ್ಪತ್ರೆಗೆ ಸೇರಿಸಿರೋದಾಗಿ ವಿದ್ಯಾರ್ಥಿ ಪೋಷಕರಿಗೆ ಕರೆ ಮಾಡಿ ತಿಳಿಸಿದ್ದಾರೆ. ಆದ್ರೆ, ಪೋಷಕರು ಬರುವಷ್ಟರಲ್ಲೇ ವಿದ್ಯಾರ್ಥಿ ಸಾವನ್ನಪ್ಪಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ದೈಹಿಕ ಶಿಕ್ಷಕ ನಾರಾಯಣ ಹಲ್ಲೆ ಮಾಡಿದ್ದಕ್ಕೆ ಗುರುಕಿರಣ್​ ಸಾವನ್ನಪ್ಪಿದ್ದಾನೆ ಎನ್ನುವ ಆರೋಪ ಕೇಳಿಬಂದಿದೆ. ಇದರಿಂದ ಆಕ್ರೋಶಗೊಂಡಿರುವ…

Read More

ಪಾಲಿಕೆಯಲ್ಲಿ ಜನನ-ಮರಣ ಅರ್ಜಿ ಸ್ವೀಕಾರ, ಭೂಪರಿವರ್ತನೆ ಪ್ರಕ್ರಿಯೆ ಅವ್ಯವಸ್ಥೆ: ಶಾಸಕ ವೇದವ್ಯಾಸ ಕಾಮತ್ ಆರೋಪ

ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಜನನ ಮತ್ತು ಮರಣ ಪ್ರಮಾಣಪತ್ರ ಅರ್ಜಿ ಸ್ವೀಕಾರ ಸ್ಥಗಿತಗೊಳಿಸಿರುವುದು ಹಾಗೂ ನಗರ ವ್ಯಾಪ್ತಿಯ ಭೂಪರಿವರ್ತನೆ (ಕನ್ವರ್ಷನ್) ಪ್ರಕ್ರಿಯೆಯಲ್ಲಿ ಉಂಟಾಗಿರುವ ಗೊಂದಲದಿಂದ ಸಾರ್ವಜನಿಕರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಆರೋಪಿಸಿದರು. ನಗರದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್‌ಐಆರ್ ಕರ್ತವ್ಯಕ್ಕೆ ಪಾಲಿಕೆಯ ಸಿಬ್ಬಂದಿ ಹಾಗೂ ಅಧಿಕಾರಿಗಳನ್ನು ನಿಯೋಜಿಸಿರುವ ಕಾರಣ ಒಂದು ತಿಂಗಳ ಕಾಲ ಜನನ ಮತ್ತು ಮರಣ ನೋಂದಣಿ ವಿಭಾಗದಲ್ಲಿ ಅರ್ಜಿ ಸ್ವೀಕಾರ ಸ್ಥಗಿತಗೊಳಿಸಲಾಗಿದೆ…

Read More

ಶಾಸಕರ ಭವನದ ಸರ್ಕಾರಿ ವಾಹನ ದುರ್ಬಳಕೆಗೆ ಬ್ರೇಕ್; ಹೊಸ ಕಠಿಣ ನಿಯಮ ಜಾರಿ

ಬೆಂಗಳೂರು, ಜು.8: ಬೆಂಗಳೂರಿನ ಶಾಸಕರ ಭವನದಲ್ಲಿ ಜನಪ್ರತಿನಿಧಿಗಳಿಗಾಗಿ ಮೀಸಲಿಟ್ಟಿರುವ ಸರ್ಕಾರಿ ವಾಹನಗಳು ದುರ್ಬಳಕೆಯಾಗುತ್ತಿರುವುದನ್ನು ತಡೆಯಲು ಕರ್ನಾಟಕ ವಿಧಾನಸಭೆ ಸಚಿವಾಲಯವು ಕಠಿಣ ಕ್ರಮ ಕೈಗೊಂಡಿದೆ. ಇನ್ಮುಂದೆ ಶಾಸಕರು ತಮ್ಮ ಆಪ್ತ ಸಹಾಯಕರು (PAs), ಅತಿಥಿಗಳು ಅಥವಾ ಪರಿಚಯಸ್ಥರಿಗೆ ಈ ವಾಹನಗಳನ್ನು ಶಿಫಾರಸು ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅವರು ಈ ಸಂಬಂಧ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದ್ದಾರೆ. ಶಾಸಕರ ಭವನದ ವಾಹನಗಳನ್ನು ಕೇವಲ ‘ಗ್ರೇಟರ್ ಬೆಂಗಳೂರು ಅಥಾರಿಟಿ’ (GBA) ಅಂದರೆ ಬೆಂಗಳೂರು ನಗರದ ಗಡಿಯೊಳಗೆ ಮಾತ್ರ…

Read More

ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆಯ ಮುಖ್ಯಮಂತ್ರಿಗಳ ಭರವಸೆ ಸ್ವಾಗತಾರ್ಹ; ಸರ್ಕಾರ ತಕ್ಷಣ ಆದೇಶ ಹೊರಡಿಸಲಿ – ಎಸ್.ಡಿ.ಟಿ.ಯು ಎಚ್ಚರಿಕೆ

ಬೆಂಗಳೂರು: ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿ ನೀಡಿರುವ ಭರವಸೆಯನ್ನು ಎಸ್.ಡಿ.ಟಿ.ಯು ಕರ್ನಾಟಕ ಸ್ವಾಗತಿಸುತ್ತದೆ. ಆದರೆ, ಈ ಭರವಸೆ ಕೇವಲ ಮಾಧ್ಯಮಗಳಲ್ಲಿನ ಹೇಳಿಕೆಯಾಗಿಯೇ ಉಳಿಯಬಾರದು. ತಕ್ಷಣವೇ ಅಧಿಕೃತ ಆದೇಶ ಹೊರಡಿಸಿ ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆಗಳು ಹಾಗೂ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಬೇಕು ಎಂದು ಎಸ್.ಡಿ.ಟಿ.ಯು ಕರ್ನಾಟಕ ರಾಜ್ಯಾಧ್ಯಕ್ಷರಾದ ಅಥಾವುಲ್ಲಾ ಜೋಕಟ್ಟೆ ಆಗ್ರಹಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಸಚಿವರ ಹೇಳಿಕೆಯನ್ನು ನೆಪ ಮಾಡಿಕೊಂಡು ರಾಜ್ಯದ ವಿವಿಧ ನಗರಗಳಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಬೆದರಿಕೆ ಹಾಕುವುದು,…

Read More
error: Content is protected !!