ಮನೆಯ ಆವರಣ ಗೋಡೆಗೆ ನಿಯಂತ್ರಣ ತಪ್ಪಿ ಢಿಕ್ಕಿ ಹೊಡೆದ ಸ್ಕೂಟರ್ -ಸವಾರ ಸಾವು

ಉಳ್ಳಾಲ, ಆ. 13 : ಸ್ಕಿಡ್ ಆಗಿ ನಿಯಂತ್ರಣ ತಪ್ಪಿದ ಸ್ಕೂಟರೊಂದು ರಸ್ತೆ ಬದಿಯ ಮನೆಯ ಆವರಣ ಗೋಡೆಗೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಸವಾರ ಸಾವನ್ನಪ್ಪಿದ ಘಟನೆ ಆಗಸ್ಟ್ 12ರ ರಾತ್ರಿ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಅಂಬಿಕಾ ರಸ್ತೆ ಎಂಬಲ್ಲಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಮಹಾಲಕ್ಷ್ಮೀ ಮಂದಿರ ಬಳಿಯ ನಿವಾಸಿ ರಾಘವೇಂದ್ರ ಸಾಲ್ಯಾನ್ ಯಾನೆ ರಘು (44) ಎಂದು ಗುರುತಿಸಲಾಗಿದೆ.ಖಾಸಗಿ ಕಂಪನಿಯೊಂದರಲ್ಲಿ ಇಲೆಕ್ಟಿಕಲ್ ಗುತ್ತಿಗೆದಾರರಾಗಿದ್ದ ರಾಘವೇಂದ್ರ ರಾಘವೇಂದ್ರ ಅವರು ಆ.12ರ…

Read More

ದ.ಕ ಜಿಲ್ಲೆಯಲ್ಲಿ ಹಿಂದೂ ವಿರೋಧಿ ಕಾರ್ಯಪಡೆ ವ್ಯಾಪಕ . ಶಾಸಕ ವೇದವ್ಯಾಸ ಕಾಮತ್ ಆರೋಪ.

ದ.ಕ ಜಿಲ್ಲೆಯನ್ನು ಕೇಂದ್ರವಾಗಿರಿಸಿಕೊಂಡು ರಾಜ್ಯ ಕಾಂಗ್ರೆಸ್ ಸರ್ಕಾರ ಮಂಗಳೂರಿನಲ್ಲಿ ಅಸ್ಥಿತ್ವಕ್ಕೆ ತಂದಿರುವ ಕೋಮು ವಿರೋಧಿ ಕಾರ್ಯಪಡೆಯು ಹಿಂದೂ ವಿರೋಧಿ ಕಾರ್ಯಪಡೆಯಾಗಿ ಕಾರ್ಯನಿರ್ವಹಿಸುತ್ತಿರುವಂತೆ ಭಾಸವಾಗುತ್ತಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ಅಧಿವೇಶನದಲ್ಲಿ ಪ್ರಸ್ತಾಪಿಸಿದರು. ಕರಾವಳಿ ಭಾಗದಲ್ಲಿ ಗೋಕಳ್ಳರು ರಾಜಾರೋಷವಾಗಿ ತಲವಾರು ಸಹಿತ ಹಟ್ಟಿಗೆ ನುಗ್ಗಿ ಗೋವುಗಳನ್ನು ಕದ್ದುಕೊಂಡು ಹೋಗಿ ಹತ್ಯೆ ಮಾಡುತ್ತಿದ್ದಾರೆ. ಲವ್ ಜಿಹಾದ್ ಪ್ರಕರಣಗಳು ಹೆಚ್ಚುತ್ತಿವೆ. ಅತೀ ಹೆಚ್ಚು ಶಿಕ್ಷಣ ಸಂಸ್ಥೆಯಿರುವ ಮಂಗಳೂರು, ಕೇರಳದ ಗಡಿಭಾಗವಾದ್ದರಿಂದ ವ್ಯಾಪಕವಾಗಿ ಡ್ರಗ್ಸ್ ಪ್ರಕರಣಗಳು ಕಂಡು ಬರುತ್ತಿವೆ. ಇವುಗಳೇ ಇಲ್ಲಿನ…

Read More

ಪಿಲಿಕುಳ ಜೈವಿಕ ಉದ್ಯಾನವನದ ಪ್ರಾಣಿಗಳಿಗೆ ಪೂರೈಸುವ ಮಾಂಸಕ್ಕೆ ಕೊಳೆತ ಮತ್ತು ವಿಷಪೂರಿತ ಮಾಂಸ ಪೂರೈಕೆಯ ಆರೋಪ .ದೂರು ದಾಖಲು.

ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದ ಪ್ರಾಣಿಗಳಿಗೆ ಪೂರೈಸುವ ಮಾಂಸಕ್ಕೆ ಕೊಳೆತ ಮತ್ತು ವಿಷಪೂರಿತ ಮಾಂಸವನ್ನು ಬೆರೆಸಿ ಪ್ರಾಣಿಗಳನ್ನು ಕೊಲ್ಲುವ ಹುನ್ನಾರ ನಡೆದಿದೆ ಎಂದು ಆರೋಪಿಸಿ ಪಿಲಿಕುಳ ಜೈವಿಕ ಉದ್ಯಾನದ ನಿರ್ದೇಶಕ ಡಾ.ಪ್ರಶಾಂತ್ ಪೈಯವರು ಕಾವೂರು ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಹೊಸ ಗುತ್ತಿಗೆದಾರರೊಬ್ಬರು ಉದ್ಯಾನವನದ ಪ್ರಾಣಿಗಳಿಗೆ ಮಾಂಸ ಪೂರೈಕೆಯ ಗುತ್ತಿಗೆ ಪಡೆದಿದ್ದಾರೆ. ಮಾಂಸಕ್ಕೆ ಕೊಳೆತ ಅಥವಾ ವಿಷಪೂರಿತ ಮಾಂಸ ಬೆರೆಸಿ ಹೊಸ ಟೆಂಡರುದಾರರ ಮಾಂಸವನ್ನು ತಿರಸ್ಕರಿಸುವಂತೆ ಮಾಡುವ ಹುನ್ನಾರವನ್ನು ಹಿಂದಿನ ಟೆಂಡರುದಾರ ಮಾಡಿದ್ದಾನೆಂದು ಆತನ ನೌಕರನೊಬ್ಬ…

Read More

ಪುತ್ತೂರು : ಅತ್ಯಾಚಾರ ,ವಂಚನೆ ಪ್ರಕರಣ- ಐಜಿ ಪಿ ಕಚೇರಿ ಮೆಟ್ಟಿಲೇರಿದ ಸಂತ್ರಸ್ತೆ

ಪುತ್ತೂರು, ಆ. 12 : ಪುತ್ತೂರು ಬಿಜೆಪಿ ನಾಯಕ ಪಿ.ಜಿ. ಜಗನ್ನಿವಾಸ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್ ಅವರಿಂದ ಅತ್ಯಾಚಾರ ಮತ್ತು ವಂಚನೆಗೊಳಗಾಗಿ ತಾಯಿಯಾಗಿರುವ ವಿದ್ಯಾರ್ಥಿನಿಯೊಬ್ಬಳು, ತನಗೆ ಬೆದರಿಕೆ ಇದೆ ಎಂದು ಪೊಲೀಸ್ ರಕ್ಷಣೆ ಕೋರಿ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಅವರನ್ನು ಭೇಟಿ ಮಾಡಿ ಮಾನವಿ ನೀಡಿದ್ದಾರೆ. ಆಗಸ್ಟ್ 11 ರಂದು, ಸಂತ್ರಸ್ತೆ ಮಂಗಳೂರಿನಲ್ಲಿರುವ ಪಶ್ಚಿಮ ವಲಯ ಐಜಿಪಿ ಕಚೇರಿಗೆ ಭೇಟಿ ನೀಡಿ ಮನವಿ ಪತ್ರವನ್ನು ಸಲ್ಲಿಸಿದರು.ಇತ್ತೀಚೆಗೆ, ಕೆಲವು ಅಪರಿಚಿತ ವ್ಯಕ್ತಿಗಳು ನನ್ನ…

Read More

ಮಂಗಳೂರು : ಹಬ್ಬಗಳ ಸಂದರ್ಭದಲ್ಲಿ ಫ್ಲೆಕ್ಸ್ ಬೋರ್ಡ್‌ಗಳಿಗೆ ನಿಷೇಧ -ನಿಗಮದಿಂದ ಕಟ್ಟುನಿಟ್ಟಿನ ನಿರ್ದೇಶನ

ಮಂಗಳೂರು, ಆ. 12 : ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ನಗರವನ್ನು “ಫ್ಲೆಕ್ಸ್-ಮುಕ್ತ”ವನ್ನಾಗಿ ಮಾಡುವ ತನ್ನ ನಿರಂತರ ಅಭಿಯಾನದ ಭಾಗವಾಗಿ, ಮುಂಬರುವ ಧಾರ್ಮಿಕ ಅಥವಾ ಇತರ ಹಬ್ಬಗಳಿಗೆ ಫ್ಲೆಕ್ಸ್ ಬೋರ್ಡ್‌ಗಳು ಮತ್ತು ಬ್ಯಾನರ್‌ಗಳನ್ನು ಅಳವಡಿಸುವುದನ್ನು ನಿಷೇಧಿಸಿ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಹಬ್ಬದ ಋತುಗಳಲ್ಲಿ ಇಂತಹ ಪ್ರದರ್ಶನಗಳಲ್ಲಿ ಹೆಚ್ಚಳವಾಗುವ ನಿರೀಕ್ಷೆಯಿರುವ ಎಂಸಿಸಿ, “ಫ್ಲೆಕ್ಸ್-ಮುಕ್ತ ಹಬ್ಬಗಳು, ಸ್ವಚ್ಛ ಪರಿಸರ-ಎಲ್ಲರ ಜವಾಬ್ದಾರಿ” ಎಂಬ ಘೋಷಣೆಯಡಿಯಲ್ಲಿ ಸಾರ್ವಜನಿಕರ ಸಹಕಾರವನ್ನು ಕೋರಿದೆ. ಈ ತಿಂಗಳು ಸ್ವಾತಂತ್ರ್ಯ ದಿನಾಚರಣೆ, ಶ್ರೀ ಕೃಷ್ಣ ಜನ್ಮಾಷ್ಟಮಿ, ಗಣೇಶ ಚತುರ್ಥಿ, ದಸರಾ…

Read More

ಕೆಂಪುಕಲ್ಲು ಹಾಗೂ ಮರಳಿನ ತೀವ್ರ ಸಮಸ್ಯೆ. ಸದನದಲ್ಲಿ ಸರಕಾರದ ಗಮನ ಸೆಳೆದ ಶಾಸಕ ವೇದವ್ಯಾಸ ಕಾಮತ್.

ಬಿಜೆಪಿ ಹಿರಿಯ ಶಾಸಕ ಸುನಿಲ್ ಕುಮಾರ್ ಅವರ ಮಾತಿಗೆ ಧ್ವನಿಗೂಡಿಸಿದ ಶಾಸಕರು, ಗಣಿ ಇಲಾಖೆಯ ಅಧಿಕಾರಿಗಳು ಮಂಗಳೂರಿನ ವಸ್ತುಸ್ಥಿತಿ ಅರಿಯದೇ ಬೆಂಗಳೂರಿನಲ್ಲಿ ಕೂತು ಕಾನೂನು ರೂಪಿಸಿದರೆ ಇನ್ನಷ್ಟು ಗೊಂದಲಗಳೇ ಹೆಚ್ಚುವುದಲ್ಲದೇ ಪರಿಹಾರ ಸಿಗುವುದಿಲ್ಲ. ಎಲ್ಲಾ ಅಧಿಕಾರಿಗಳು ಮಂಗಳೂರಿಗೆ ಬಂದು ವಾಸ್ತವ ಅಂಶಗಳನ್ನು ತಿಳಿದುಕೊಂಡು ನೀತಿ ನಿಯಮ ರೂಪಿಸುವಂತಾಗಲಿ. ಜನಪ್ರತಿನಿಧಿಗಳಾದ ನಮ್ಮನ್ನು ಆಹ್ವಾನಿಸದೇ ಈ ಬಗ್ಗೆ ಎರಡು ಮೂರು ಸಭೆಗಳನ್ನು ನಡೆಸಲಾಗಿದೆ. ಕಲ್ಲುಗಳನ್ನು ತೆಗೆಯುವಾಗ ಎಷ್ಟು ಜಾಗಗಳನ್ನು ಲೀಸ್ ಗೆ ಪಡೆಯಲಾಗುತ್ತದೆ, ಅದರಿಂದ ಎಷ್ಟು ಕಲ್ಲು ಉತ್ಪಾದಿಸಲಾಗುತ್ತದೆ, ಅಲ್ಲಿರುವ…

Read More

ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಅಗತ್ಯ – ವಿಧಾನ ಪರಿಷತ್ ಸದಸ್ಯ (ಶಾಸಕ) ಕಿಶೋರ್ ಕುಮಾರ್ ಪುತ್ತೂರು

ವಿಧಾನಪರಿಷತ್ತಿನ ಮುಂಗಾರು ಅಧಿವೇಶನದಲ್ಲಿ ಶಾಸಕ ಶ್ರೀ ಕಿಶೋರ್ ಕುಮಾರ್ ಅವರು ತಮ್ಮ ಚುಕ್ಕೆ ಗುರುತಿನ ಪ್ರಶ್ನೆಯಲ್ಲಿ ಮಾನ್ಯ ಅರಣ್ಯ ಸಚಿವ ಶ್ರೀ ಈಶ್ವರ್ ಖಂಡ್ರೆ ಅವರಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಮಾನವ – ಕಾಡು ಪ್ರಾಣಿ ಸಂಘರ್ಷದ ಕುರಿತು ಸೂಕ್ತವಾದ ಕ್ರಮವನ್ನು ಕೈಗೊಂಡು ಈ ಭಾಗದ ಜನರ ಬಹುಮುಖ್ಯ ಸಮಸ್ಯೆಯ ಬಗ್ಗೆ ಬೆಳಕು ಚೆಲ್ಲಿದ್ದಾರೆ. ಪುತ್ತೂರು, ಸುಳ್ಯ, ಕಡಬ ಹಾಗೂ ಬೆಳ್ತಂಗಡಿ ತಾಲೂಕುಗಳಲ್ಲಿ ಕಾಡಾನೆಗಳು ನಾಡಿಗೆ ನುಗ್ಗಿ ಬೆಳೆ ಹಾನಿ ಮಾಡುವ ಘಟನೆಗಳು…

Read More

ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಅಖಿಲ ಭಾರತ ದೈವಾರಾಧಕ ಒಕ್ಕೂಟ. ಕರ್ನಾಟಕ ವಿಧಾನ ಸಭಾ ಅಧ್ಯಕ್ಷರಿಗೆ ಮನವಿ ಸಲ್ಲಿಕೆ.

ಅಖಿಲ ಭಾರತ ದೈವಾರಾಧಾಕರ ಒಕ್ಕೂಟ (ರಿ) ಕೇಂದ್ರೀಯ ಉಡುಪಿ ವತಿಯಿಂದ ಮಂಗಳೂರಿನಲ್ಲಿ ಕರ್ನಾಟಕ ಸರ್ಕಾರದ ವಿಧಾನ ಸಭಾಧ್ಯಕ್ಷರಾದ ಹಾಗೂ ಕ್ಷೇತ್ರದ ಶಾಸಕರಾದ ಯು ಟಿ ಖಾದರ್ ಅವರನ್ನು ಒಕ್ಕೂಟದ ಸದಸ್ಯರು ಭೇಟಿಯಾಗಿ ಮಂಗಳೂರು ಹಾಗೂ ಉಡುಪಿ ಜಿಲ್ಲೆಯಲ್ಲಿ ಸಾವಿರಾರು ವರ್ಷಗಳ ಇತಿಹಾಸ ಇರುವ ದೈವಾರಾಧನೆ ಕ್ಷೇತ್ರದಲ್ಲಿ ಚಾಕ್ರಿ ಮಾಡುವ ಸುಮಾರು 16 ವರ್ಗಗಳಿವೆ ಹಾಗೂ ಸುಮಾರು 20 ಸಾವಿರದ ಜನ ದೈವಚಕ್ರಿಯನ್ನು ಕುಲ ಕಸುಬು ವಾಗಿ ಅವಲಂಬಿಸಿದ್ದಾರೆ ದೈವಚಾಕ್ರಿ ವರ್ಗವನ್ನು ಸರ್ಕಾರಕ್ಕೆ ಸಂಬಂಧಪಟ್ಟ ಇಲಾಖೆಗೆ ಸೇರ್ಪಡಿಸುವುದು. 60…

Read More

ಧರ್ಮಸ್ಥಳ: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣದಲ್ಲಿ ಆರೋಪಿಗಳ ದಸ್ತಗಿರಿ

ಮಂಗಳೂರು : ಧರ್ಮಸ್ಥಳ ಪಾಂಗಳ ಕ್ರಾಸ್ ಬಳಿ ನಡೆದ ಅಹಿತಕರ ಘಟನೆಯ ವೇಳೆ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ:47/2025 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತದೆ . ಧರ್ಮಸ್ಥಳ ನಿವಾಸಿಗಳಾದ ಪದ್ಮಪ್ರಸಾದ್ (32),ಸುಹಾಸ್ (22),ಶಶಿಧರ್(30),ಉಜಿರೆ ನಿವಾಸಿ ಖಲಂದರ್ ಪುತ್ತುಮೋನು (42),ಕಳೆಂಜ ನಿವಾಸಿ ಚೇತನ್ (21),ಕಳ್ಮಂಜ ನಿವಾಸಿ ಗುರುಪ್ರಸಾದ್ (19) ಎಂಬವರುಗಳನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರಾಪಡಿಸಲಾಗಿದೆ.ನ್ಯಾಯಾಲಯವು ಆರೋಪಿಗಳಿಗೆ ಮಧ್ಯಂತರ ಜಾಮೀನು ನೀಡಿ ಬಿಡುಗಡೆಗೊಳಿಸಿರುತ್ತದೆ ಎಂದು ಪೊಲೀಸ್ ಮೂಲಗಳು ತಿಳಿಸಿದೆ.

Read More

ಬಂಟ್ವಾಳ: ರೆಹಮಾನ್ ಕೊಲೆ ಪ್ರಕರಣ 13ನೇ ಆರೋಪಿ ಬಂಧನ …. ! ?

ಬಂಟ್ವಾಳ, : ಮೇ 27ರಂದು ನಡೆದ ಕೊಳ್ತಮಜಲು ನಿವಾಸಿ ಅಬ್ದುಲ್ ರೆಹಮಾನ್ ಹತ್ಯೆ ಮತ್ತು ಕಲಂದರ್ ಶಾಫಿ ಎಂಬಾತನ ಮೇಲಿನ ಹಲ್ಲೆ ಕರಾವಳಿಯ ಶಾಂತಿಯನ್ನೇ ಕದಡಿತ್ತು . ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 13ನೇ ಆರೋಪಿಯನ್ನು ಬಂಧಿಸಿದ್ದಾರೆ.ರಂಜಿತ್ ಅಲಿಯಾಸ್ ರಂಜು (35) ಎಂಬಾತನನ್ನು ಆಗಸ್ಟ್ 10 ರಂದು ಪೊಲೀಸರು ವಶಕ್ಕೆ ಪಡೆದಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ.ಪ್ರಕರಣದ ತನಿಖೆ ನಡೆಯುತ್ತಿದ್ದು, ತಲೆಮರೆಸಿಕೊಂಡಿರುವ ಇತರ ಆರೋಪಿಗಳನ್ನು ಪತ್ತೆಹಚ್ಚಲು ಪ್ರಯತ್ನಗಳು ನಡೆಯುತ್ತಿವೆ…

Read More
error: Content is protected !!