ಪುತ್ತೂರು ಬಿಜೆಪಿಯ ಪ್ರತಿಭಟನೆ ಮೂರ್ಖತನದ್ದು-ಕಾಂಗ್ರೆಸ್

ವಿಟ್ಲ: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಯವರ ಜನಪ್ರಿಯತೆಯನ್ನು ಸಹಿಸದೇ ದಲಿತ ಸಂಘಟನೆಯ ಹೆಸರಿನಲ್ಲಿ ಹಲವರಿಗೆ ವಂಚಿಸಿ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಮುಂದಿಟ್ಟುಕೊಂಡು ಬಿಜೆಪಿ ಮಾಡಿದ ಪ್ರತಿಭಟನೆ ಮೂರ್ಖತನದ್ದಾಗಿದೆ ಎಂದು ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಧ್ಮನಾಭ ಪೂಜಾರಿ ಸಣ್ಣಗುತ್ತು ಹೇಳಿದರು.ಶುಕ್ರವಾರ ವಿಟ್ಲ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಶಾಸಕರನ್ನು ನಿಂದಿಸುವ ಭರದಲ್ಲಿ ಅವಾಚ್ಯ ಪದಗಳನ್ನೂ ಬಳಕೆ ಮಾಡಿರುವುದು ತಪ್ಪು ಎಂದರು. ಪುಣಚ ಗ್ರಾಮಕ್ಕೆ ಕಳೆದ ಮೂರು ವರ್ಷಗಳಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗಾಗಿ…

Read More

ಉಡುಪಿ: ಬಾವಿಯ ಮಣ್ಣು ಕುಸಿದು ಓರ್ವ ಕಾರ್ಮಿಕ ಮೃತ್ಯು, ಇನ್ನೋರ್ವ ಮಣ್ಣಿನಡಿಯಲ್ಲಿ ಸಿಲುಕಿರುವ ಶಂಕೆ!

ಉಡುಪಿ: ಬಾವಿ ತೊಡುತ್ತಿರುವಾಗ ಮಣ್ಣು ಕುಸಿದು ಓರ್ವ ಕಾರ್ಮಿಕ ಮೃತಪಟ್ಟಿದ್ದು, ಇನ್ನೋರ್ವ ಕುಸಿದ ಮಣ್ಣಿನಡಿ ಸಿಲುಕಿರುವ ಘಟನೆ ಕೊಡವೂರಿನ ಗರಡಿಮಜಲಿನಲ್ಲಿ ಶುಕ್ರವಾರ ಸಂಜೆ ನಡೆದಿದೆ.ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಮತ್ತು ಪೊಲೀಸರು ದೌಡಾಯಿದ್ದಾರೆ. ಓರ್ವ ಕಾರ್ಮಿಕನ ಮೃತ ದೇಹ ಮಣ್ಣಿನಡಿಯಿಂದ ಹೊರಕ್ಕೆ ತೆಗೆಯಲಾಗಿದೆ. ಮತ್ತೋರ್ವ ಕುಸಿದ ಮಣ್ಣಿನಡಿ ಸಿಲುಕಿದ್ದು ರಕ್ಷಣಾ ಕಾರ್ಯಾಚರಣೆ ಮುಂದುವರಿದೆ.

Read More

ಮಂಗಳೂರಿನ ಇನ್ಟಾಮಾರ್ಟ್ ಸಂಸ್ಥೆಯಲ್ಲಿ ನಡೆದ ಲಿಫ್ಟ್ ಅವಘಡದಲ್ಲಿ ಕಾರ್ಮಿಕ ಸಾವು : ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರನ್ನು ಭೇಟಿ ಮಾಡಿದ ಎಸ್.ಡಿ.ಟಿ.ಯು ಜಿಲ್ಲಾ ನಿಯೋಗ

ಮಂಗಳೂರು ಮೇ 22: ಮಂಗಳೂರಿನ ಎಜೆ ಆಸ್ಪತ್ರೆಯ ಮುಂಭಾಗದಲ್ಲಿರುವ ಇನ್ಟಾಮಾರ್ಟ್ ಸಂಸ್ಥೆಯಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಕಾರ್ಮಿಕನೊಬ್ಬ ಲಿಫ್ಟ್ ಅವಘಡಕ್ಕೆ ಬಲಿಯಾದ ಘಟನೆ ಅತ್ಯಂತ ದುಃಖಕರವಾಗಿದ್ದು, ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಂಬಂಧಪಟ್ಟ ಸಂಸ್ಥೆಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಎಸ್.ಡಿ.ಟಿ.ಯು ಮಂಗಳೂರು ನಗರ ಜಿಲ್ಲಾ ಸಮಿತಿ ಆಗ್ರಹಿಸಿದೆ. ಈ ಹಿನ್ನೆಲೆಯಲ್ಲಿ ಎಸ್.ಡಿ.ಟಿ.ಯು ಜಿಲ್ಲಾ ನಿಯೋಗವು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಾದ ರವಿಚಂದ್ರ ನಾಯಕ್ ರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಅಪಘಾತ ಸಂಭವಿಸಿದ ಲಿಫ್ಟ್…

Read More

ಖಾಸಗಿ ಶಾಲೆಗಳ ಶುಲ್ಕ ನಿಯಂತ್ರಣಕ್ಕೆ ಸರ್ಕಾರ ಮಧ್ಯಪ್ರವೇಶಿಸಲಿ:ಆಮ್ ಆದ್ಮಿ ಪಾರ್ಟಿ ಆಗ್ರಹ

ಮಂಗಳೂರು, ಮೇ 22: ಪ್ರಾಥಮಿಕ ಶಿಕ್ಷಣದ ವ್ಯಾಪಾರೀಕರಣ ಹಾಗೂ ಸರ್ಕಾರಿ ಶಾಲೆಗಳ ವ್ಯವಸ್ಥಿತ ಕುಸಿತದ ಬಗ್ಗೆ ಆಮ್‌ ಆದ್ಮಿ ಪಾರ್ಟಿ (ಆಪ್‌) ದಕ್ಷಿಣ ಕನ್ನಡ ಜಿಲ್ಲಾ ಘಟಕ ತೀವ್ರ ಕಳವಳ ವ್ಯಕ್ತಪಡಿಸಿದೆ. ಖಾಸಗಿ ಶಾಲೆಗಳ ಗಗನಚುಂಬಿ ಶುಲ್ಕ ನಿಯಂತ್ರಣಕ್ಕೆ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಬೇಕೆಂದು ಆಗ್ರಹಿಸಿದೆ. ನಗರದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆಪ್‌ ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಸಾಲಿನ್ಸ್‌, 2026-27ನೇ ಶೈಕ್ಷಣಿಕ ವರ್ಷದ ಪ್ರವೇಶ ಪ್ರಕ್ರಿಯೆ ನಡೆಯುತ್ತಿರುವ ಸಂದರ್ಭದಲ್ಲಿ ಖಾಸಗಿ ಶಾಲೆಗಳು ವಿವಿಧ ರೀತಿಯ ಶುಲ್ಕಗಳ ಹೆಸರಿನಲ್ಲಿ…

Read More

ಕಾಂಗ್ರೆಸ್ ನ ಮೂರು ರಾಜ್ಯಸಭಾ ಸ್ಥಾನಗಳಲ್ಲಿ ಒಂದು ಸ್ಥಾನ ಕ್ರಿಶ್ಚಿಯನ್ ಅಲ್ಪಸಂಖ್ಯಾತರಿಗೆ ಮೀಸಲು ಸಂಭವ. ನವೀನ್ ಡಿಸೋಜ ಹೆಸರು ಮುಂಚೂಣಿಯಲ್ಲಿ

ಬೆಂಗಳೂರು: ಕಾಂಗ್ರೆಸ್ ನ ಮೂರು ರಾಜ್ಯಸಭಾ ಸ್ಥಾನಗಳು ಮುಂದಿನ ತಿಂಗಳು ತೆರವಾಗಲಿದೆ. ಈ ಪೈಕಿ ಒಂದು ಸ್ಥಾನ ಮತ್ತೊಮ್ಮೆ ಕಾಂಗ್ರೆಸ್ನ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮತ್ತೊಮ್ಮೆ ಸಿಗಲಿದೆ ಎಂಬುದು ಗ್ಯಾರಂಟಿಯಾಗಿದೆ. ಒಂದು ಸ್ಥಾನ ಕ್ರಿಶ್ಚಿಯನ್ ಅಲ್ಪಸಂಖ್ಯಾತರಿಗೆ ಈ ಬಾರಿ ಮೀಸಲಿರಿಸುವ ಸಂಭವ ಹೆಚ್ಚಿದೆ ಎಂದು ಕಾಂಗ್ರೆಸ್ ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಕಳೆದ ಬಾರಿ ಮುಸ್ಲಿಂ ಅಲ್ಪಸಂಖ್ಯಾತರಿಗೆ ಒಂದು ರಾಜ್ಯಸಭಾ ಸದಸ್ಯ ಸ್ಥಾನ ಒಲಿದು ಬಂದಿತ್ತು. ಈ ಬಾರಿ ಕ್ರಿಶ್ಚಿಯನ್ ಅಲ್ಪಸಂಖ್ಯಾತರಿಗೆ ಒಲಿದು ಬರಲಿದೆ ಎಂದು…

Read More

ಜಿಪ್ಪು ಕಡೆಕಾರಿನಲ್ಲಿ ನಾಲ್ಕು ಅತ್ಯಾಧುನಿಕ ಸಭಾಭವನಗಳಿಗೆ ಚಾಲನೆ

ಮಂಗಳೂರು, ಮೇ 22: ಮಂಗಳೂರು ಮಹಾನಗರದ ಜಿಪ್ಪು ಕಡೆಕಾರು ಪ್ರದೇಶದಲ್ಲಿರುವ ನೇತ್ರಾವತಿ ನದಿಯ ಕಿನಾರೆಯ ಇತಿಹಾಸ ಪ್ರಸಿದ್ಧ ಶ್ರೀ ಮಲ್ಲಿಕಾರ್ಜುನ ದೇವರ ಸನ್ನಿಧಾನದಲ್ಲಿ ಹಾಗೂ ಪರಮಪೂಜ್ಯ ಶ್ರೀ ಶ್ರೀ ನರೇಂದ್ರನಾಥ ಯೋಗೇಶ್ವರೇಶ್ವರ ಮಹಾಸ್ವಾಮಿಗಳ ಆಶೀರ್ವಾದದೊಂದಿಗೆ ಮಾಜಿ ಸಚಿವ ಕೃಷ್ಣ ಜೆ. ಪಾಲೇಮಾರ್ ಅವರ ನೇತೃತ್ವದಲ್ಲಿ ನಿರ್ಮಾಣಗೊಂಡ ನಾಲ್ಕು ಅತ್ಯಾಧುನಿಕ ಸಭಾಭವನಗಳ ಲೋಕಾರ್ಪಣೆಯ ಚಾಲನಾ ಕಾರ್ಯಕ್ರಮ ಶುಕ್ರವಾರ ಗುರುವನ ಶ್ರೀ ದುರ್ಗಾ ಕ್ಷೇತ್ರದಲ್ಲಿ ಜರುಗಿತು. ನೇತ್ರಾವತಿ ಸಭಾಭವನ, ಪಾಲೇಮಾರ್ ಫಾರ್ಮ್ಸ್, ಪಾಲೇಮಾರ್ ಕನ್ವೆನ್ಷನ್ ಸೆಂಟರ್ ಹಾಗೂ ಪಾಲೇಮಾರ್ ಗಾರ್ಡನ್…

Read More

ಪಂಜರಕೋಡಿಯಲ್ಲಿ ಅಕ್ರಮ ಗೋಸಾಗಾಟ ಪತ್ತೆ: ಚಾಲಕ ವಶ, ಪೊಲೀಸರ ಮೇಲೆ ಕಾರು ಹತ್ತಿಸಲು ಯತ್ನ

ವಿಟ್ಲ: ಪಿಕಪ್ ವಾಹನದಲ್ಲಿ ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ವಿಟ್ಲ ಪೊಲೀಸರು ಪತ್ತೆಹಚ್ಚಿ ವಾಹನ ಚಾಲಕನನ್ನು ವಶಕ್ಕೆ ಪಡೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಪಂಜರಕೋಡಿ ಎಂಬಲ್ಲಿ ನಡೆದಿದೆ. ಅಕ್ರಮ ಗೋಸಾಗಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ನಿನ್ನೆ ವಿಟ್ಲ ಪೊಲೀಸರು ಸ್ಥಳಕ್ಕೆ ತೆರಳಿ KA-19-D-1496 ನೋಂದಣಿಯ ಪಿಕಪ್ ವಾಹನವನ್ನು ತಡೆದು ನಿಲ್ಲಿಸಿ ಪರಿಶೀಲನೆ ನಡೆಸಿದರು. ಈ ವೇಳೆ ಪಿಕಪ್ ವಾಹನಕ್ಕೆ ಬೆಂಗಾವಲಾಗಿ ಬಂದಿದ್ದ KA-21-MA-0801 ನೋಂದಣಿಯ ಸ್ವಿಫ್ಟ್ ಕಾರಿನಲ್ಲಿದ್ದ…

Read More

ಮಂಗಳೂರಿನಲ್ಲಿ ಮೇ 23ರಂದು ನಾಲ್ಕು ಭವ್ಯ ಸಭಾಭವನಗಳ ಲೋಕಾರ್ಪಣೆ

ಮಂಗಳೂರು: ಕರಾವಳಿ ಇತಿಹಾಸದಲ್ಲೇ ಮೊದಲ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಪ್ರದೇಶಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಹಾಗೂ ಅದ್ದೂರಿ ಸಭಾಭವನಗಳನ್ನು ಲೋಕಾರ್ಪಣೆ ಮಾಡಲಾಗುತ್ತಿದೆ ಎಂದು ಮಾಜಿ ಸಚಿವ ಹಾಗೂ ವಿಕಾಸ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಕೃಷ್ಣ ಜೆ. ಪಾಲೆಮಾರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲ್ಯಾಂಡ್ ಲಿಂಕ್ಸ್ ಸಂಸ್ಥೆಯ 45 ವರ್ಷಗಳ ಯಶಸ್ವಿ ಪಯಣದ ಸವಿನೆನಪಾಗಿ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆಯಾಗಿ ನಾಲ್ಕು ಭವ್ಯ ಸಭಾಂಗಣಗಳನ್ನು ನಿರ್ಮಿಸಲಾಗಿದ್ದು, ಮೇ 23ರಂದು ಅವುಗಳನ್ನು ಸಾರ್ವಜನಿಕ ಬಳಕೆಗೆ ಸಮರ್ಪಿಸಲಾಗುವುದು…

Read More

ಸಾಲೆತ್ತೂರಿನಲ್ಲಿ ಅಕ್ರಮ ಗೋಸಾಗಾಟ ಪತ್ತೆ: ಪೊಲೀಸರ ಮೇಲೆ ಕಾರು ಹತ್ತಿಸಲು ಯತ್ನ, ಪ್ರಕರಣ ದಾಖಲು

ವಿಟ್ಲ: ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವನ್ನು ವಶಕ್ಕೆ ಪಡೆದು ಎರಡು ಜಾನುವಾರುಗಳನ್ನು ರಕ್ಷಿಸಿದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ಪಂಜರಕೋಡಿ ಎಂಬಲ್ಲಿ ನಡೆದಿದೆ. ಇದೇ ವೇಳೆ ಜಾನುವಾರು ಸಾಗಾಟ ವಾಹನಕ್ಕೆ ಬೆಂಗಾವಲಾಗಿ ಬಂದಿದ್ದ ಕಾರು ಚಾಲಕ ಪೊಲೀಸರ ಮೇಲೆಯೇ ವಾಹನ ಹತ್ತಿಸಲು ಯತ್ನಿಸಿದ ಘಟನೆ ಕೂಡ ನಡೆದಿದೆ. ಈ ಸಂಬಂಧ ಬಂಟ್ವಾಳ ತಾಲೂಕು ಬಾಳೆಪುಣಿ ನಿವಾಸಿ ಮೊಹಮ್ಮದ್ ಹನೀಪ್ ಹಾಗೂ ಸ್ವಿಫ್ಟ್ ಕಾರು ಚಾಲಕ ಬಶೀರ್ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ…

Read More

ಯೆನೆಪೊಯ ಆಸ್ಪತ್ರೆ ಎದುರು ಪಾರ್ಕಿಂಗ್ ಸಮಸ್ಯೆ: ತಕ್ಷಣ ಕ್ರಮಕ್ಕೆ ಸಾರ್ವಜನಿಕರ ಆಗ್ರಹ

ಮಂಗಳೂರು: ನಗರದ ಯೆನೆಪೊಯ ಆಸ್ಪತ್ರೆ ಕಟ್ಟಡದ ಎದುರು ಪಾರ್ಕಿಂಗ್ ಸಮಸ್ಯೆ ತೀವ್ರಗೊಂಡಿದ್ದು, ಸಾರ್ವಜನಿಕರು ಪೊಲೀಸ್ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ತಕ್ಷಣದ ಹಸ್ತಕ್ಷೇಪಕ್ಕೆ ಆಗ್ರಹಿಸಿದ್ದಾರೆ. ಆಸ್ಪತ್ರೆಯ ಎದುರು ವಾಹನ ನಿಲುಗಡೆಗಾಗಿ ಬಳಸಲಾಗುತ್ತಿದ್ದ ಜಾಗದಲ್ಲಿ ಅಂಗಡಿಗಳನ್ನು ನಿರ್ಮಿಸಿ ಬಾಡಿಗೆ ಹಾಗೂ ಮಾರಾಟಕ್ಕೆ ನೀಡಲಾಗಿರುವ ಪರಿಣಾಮ, ಇದೀಗ ವಾಹನಗಳನ್ನು ರಸ್ತೆಯ ಬದಿಯಲ್ಲೇ ನಿಲ್ಲಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಥಳೀಯರು ದೂರಿದ್ದಾರೆ. ಇದರ ನಡುವೆ ಪಾರ್ಕಿಂಗ್‌ಗೆ ಮೀಸಲಿಟ್ಟ ಜಾಗ ಮತ್ತು ರಸ್ತೆ ಬದಿಯಲ್ಲಿ ಹಗ್ಗ ಕಟ್ಟಿ ವಾಹನಗಳನ್ನು ಮತ್ತಷ್ಟು ಮಧ್ಯ ರಸ್ತೆಯತ್ತ…

Read More
error: Content is protected !!