ಸರ್ಕಾರಿ ಆಸ್ಪತ್ರೆಗಳಲ್ಲಿನ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಅಗತ್ಯ: ಪವನ್ ಕುಮಾರ್ ಶಿರ್ವ

ವೈದ್ಯರ ಕೊರತೆ, ಮೂಲಸೌಕರ್ಯ, ಔಷಧಿ ಲಭ್ಯತೆ ಕುರಿತು ಸರ್ಕಾರ ಕ್ರಮ ಕೈಗೊಳ್ಳಲು ಆಗ್ರಹ ಬೆಂಗಳೂರು:, ಜುಲೈ 6: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿನ ವೈದ್ಯರ ಕೊರತೆ, ಮೂಲಸೌಕರ್ಯಗಳ ಅಭಾವ, ಔಷಧಿಗಳ ಲಭ್ಯತೆ, ಸ್ವಚ್ಛತೆ ಹಾಗೂ ಆಡಳಿತಾತ್ಮಕ ಸಮಸ್ಯೆಗಳಿಂದ ಸಾರ್ವಜನಿಕ ಆರೋಗ್ಯ ಸೇವೆಗಳ ಗುಣಮಟ್ಟ ಕುಸಿದಿದೆ ಎಂದು ಸಾಮಾಜಿಕ ಕಾರ್ಯಕರ್ತ ಪವನ್ ಕುಮಾರ್ ಶಿರ್ವ ಆರೋಪಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಬಡ ಹಾಗೂ ಮಧ್ಯಮ ವರ್ಗದ ಜನರು ಖಾಸಗಿ ಆಸ್ಪತ್ರೆಗಳ ದುಬಾರಿ ಚಿಕಿತ್ಸೆಯನ್ನು ಭರಿಸಲು ಸಾಧ್ಯವಾಗದೆ ಸರ್ಕಾರಿ…

Read More

ನರಹರಿ ಪರ್ವತದ ಬಳಿ ಭೀಕರ ಅಪಘಾತ: ಬೈಕ್ ಸವಾರ ಸಾವು

ರಾಂಗ್ ಸೈಡ್‌ನಲ್ಲಿ ಬಂದ ಬೈಕ್‌ಗೆ ಕಾರು ಡಿಕ್ಕಿ; ಪುತ್ತೂರಿನ ಅಶೋಕ್ ಮೃತ ಬಂಟ್ವಾಳ, ಜುಲೈ 6: ರಾಷ್ಟ್ರೀಯ ಹೆದ್ದಾರಿ 75ರ ಮೆಲ್ಕಾರ್–ಕಲ್ಲಡ್ಕ ನಡುವಿನ ನರಹರಿ ಪರ್ವತದ ಸಮೀಪ ಮಾರುತಿ ಸ್ವಿಫ್ಟ್ ಡಿಸೈರ್ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದಾರೆ. ಮೃತರನ್ನು ಪುತ್ತೂರು ನಿವಾಸಿ ಅಶೋಕ್ (34) ಎಂದು ಗುರುತಿಸಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಬಿ.ಸಿ.ರೋಡ್ ಕಡೆಗೆ ತೆರಳುತ್ತಿದ್ದ ಬಿಳಿ ಬಣ್ಣದ ಮಾರುತಿ ಸ್ವಿಫ್ಟ್ ಡಿಸೈರ್ ಕಾರಿಗೆ, ಎದುರು ದಿಕ್ಕಿನಿಂದ…

Read More

ಬಂಟ್ವಾಳದಲ್ಲಿ ಗಾಳಿ-ಮಳೆಗೆ ಮನೆ, ಅಡಿಕೆ ತೋಟಗಳಿಗೆ ಹಾನಿ

ಹಲವೆಡೆ ಮನೆಗಳ ಮೇಲೆ ಮರ ಬಿದ್ದು ಹಾನಿ; ಯಾವುದೇ ಪ್ರಾಣಾಪಾಯವಿಲ್ಲ ಬಂಟ್ವಾಳ, ಜುಲೈ 6: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಗಾಳಿ-ಮಳೆಯ ಪರಿಣಾಮ ಬಂಟ್ವಾಳ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಮನೆಗಳು ಹಾಗೂ ಅಡಿಕೆ ತೋಟಗಳಿಗೆ ಹಾನಿಯಾಗಿದೆ. ಹಲವೆಡೆ ಮನೆಗಳ ಮೇಲೆ ಮರಗಳು ಬಿದ್ದು ಭಾಗಶಃ ಹಾನಿಯಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ನರಿಕೊಂಬು ಗ್ರಾಮದ ಕಲ್ಯಾಣ ಅಗ್ರಾರದಲ್ಲಿ ಸಂಜೀವ ಪೂಜಾರಿ ಅವರ ಪಕ್ಕಾ ಮನೆಗೆ ಗಾಳಿ-ಮಳೆಯಿಂದ ತೀವ್ರ ಹಾನಿಯಾಗಿದೆ. ಇದೇ ಗ್ರಾಮದ ಪೊಯಿತ್ತಾಜೆಯಲ್ಲಿ ಫೆಲಿಕ್ಸ್ ಡಿಸಿಲ್ವ ಹಾಗೂ…

Read More

ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ಮಾನವ ಸರಪಳಿ ಪ್ರತಿಭಟನೆ

ಖಾಸಗಿ ವೈದ್ಯಕೀಯ ಸಂಸ್ಥೆಗಳಿಗೆ ಆಸ್ಪತ್ರೆ ಹಸ್ತಾಂತರ ಆದೇಶ ಹಿಂಪಡೆಯಲು ಆಗ್ರಹ ಮಂಗಳೂರು, ಜುಲೈ 6: ಸರ್ಕಾರಿ ಆಸ್ಪತ್ರೆಗಳನ್ನು ಖಾಸಗಿ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಿಗೆ ಹಸ್ತಾಂತರಿಸುವ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ಸಿಪಿಐಎಂ ಮಂಗಳೂರು ಉತ್ತರ ಸಮಿತಿ ವತಿಯಿಂದ ಬೋಂದೆಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗ ಮಾನವ ಸರಪಳಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನು ಉದ್ಘಾಟಿಸಿ ಮಾತನಾಡಿದ ಸಿಪಿಐಎಂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಡಾ. ಕೃಷ್ಣಪ್ಪ ಕೊಂಚಾಡಿ, ಕಾರ್ಪೊರೇಟ್ ಆಸ್ಪತ್ರೆಗಳ ಪ್ರವೇಶದ ಬಳಿಕ ಆರೋಗ್ಯ ಸೇವೆಗಳು…

Read More

ಮುಗುಳಿಗುಡ್ಡೆ ಶ್ರೀ ಕ್ಷೇತ್ರ ಸಂವರ್ಧನೆಗಾಗಿ 13 ಕಿ.ಮೀ. ಭಕ್ತಿಪೂರ್ಣ ಪಾದಯಾತ್ರೆ

ಕನ್ಯಾನ, ಜುಲೈ 6: ಮುಗುಳಿಗುಡ್ಡೆ ಶ್ರೀ ಕ್ಷೇತ್ರ ಸಂವರ್ಧನಾ ಸಮಿತಿ, ವಿಟ್ಲ ಅರಮನೆಯ ಶ್ರೀ ಬಂಗಾರು ಅರಸರ ಗೌರವಾಧ್ಯಕ್ಷತೆಯಲ್ಲಿ ಆಯೋಜಿಸಿದ್ದ ‘ವಿಟ್ಲ ಪಂಚಲಿಂಗೇಶ್ವರನ ನಡೆಗೆ ನಮ್ಮ ನಡೆ’ ಪಾದಯಾತ್ರೆ ಭಕ್ತಿ, ಶ್ರದ್ಧೆ ಹಾಗೂ ಧಾರ್ಮಿಕ ಉತ್ಸಾಹದೊಂದಿಗೆ ನೆರವೇರಿತು. ಕಾರ್ಯಕ್ರಮದಲ್ಲಿ ಸುಮಾರು 300ಕ್ಕೂ ಹೆಚ್ಚು ಭಕ್ತರು 13 ಕಿಲೋಮೀಟರ್‌ಗಳ ದೂರವನ್ನು ಬರಿಗಾಲಿನಲ್ಲಿ ಕ್ರಮಿಸಿ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ತಲುಪಿದರು. ಬಳಿಕ ಶ್ರೀ ಪಂಚಲಿಂಗೇಶ್ವರ ದೇವರಿಗೆ ಏಕಾದಶ ರುದ್ರಾಭಿಷೇಕ ನೆರವೇರಿಸಿ, ಮುಗುಳಿಗುಡ್ಡೆ ಶ್ರೀ ಕ್ಷೇತ್ರವು ತನ್ನ ಪುರಾತನ ವೈಭವದೊಂದಿಗೆ…

Read More

ಸಂಡೇ ಬಜಾರ್ ತೆರವು ಕಾರ್ಯಾಚರಣೆಗೆ ವ್ಯಾಪಾರಿಗಳ ಪ್ರತಿಭಟನೆ

ಪುರಭವನದ ಬಳಿ ರಸ್ತೆ ತಡೆ ನಡೆಸಿದ ಬೀದಿ ವ್ಯಾಪಾರಿಗಳು; ಜಿಲ್ಲಾಡಳಿತ ಮಧ್ಯಪ್ರವೇಶಕ್ಕೆ ಆಗ್ರಹ ಮಂಗಳೂರು, ಜುಲೈ 6: ನಗರದ ಪುರಭವನದ ಬಳಿ ಭಾನುವಾರದ ರಜಾದಿನ ನಡೆಯುವ ಸಂಡೇ ಬಜಾರ್ ವಿರುದ್ಧ ಮಂಗಳೂರು ಮಹಾನಗರ ಪಾಲಿಕೆ ಭಾನುವಾರವೂ ತೆರವು ಕಾರ್ಯಾಚರಣೆ ಮುಂದುವರಿಸಿದ್ದು, ಇದನ್ನು ವಿರೋಧಿಸಿ ಬೀದಿ ವ್ಯಾಪಾರಿಗಳು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಬೆಳಿಗ್ಗೆ ವ್ಯಾಪಾರಿಗಳು ಅಂಗಡಿ ಆರಂಭಿಸಲು ಮುಂದಾಗುತ್ತಿದ್ದಂತೆ ಪಾಲಿಕೆ ಆಯುಕ್ತರ ಸೂಚನೆಯಂತೆ ಅಧಿಕಾರಿಗಳು ತೆರವು ಕಾರ್ಯಾಚರಣೆ ಆರಂಭಿಸಿದರು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ವ್ಯಾಪಾರಿಗಳು,…

Read More

ಕುದ್ಮುಲ್ ರಂಗರಾವ್ ಸಮಾಧಿ ಅಭಿವೃದ್ಧಿಗೆ ಮುಡಾದಿಂದಲೇ 3 ಕೋಟಿ ರೂ. ಮೀಸಲಿಡಿ: ಶಾಸಕ ವೇದವ್ಯಾಸ ಕಾಮತ್ ಆಗ್ರಹ

ರಾಜ್ಯ ಸರ್ಕಾರ ಅನುದಾನ ರದ್ದುಪಡಿಸಿರುವುದು ಖಂಡನೀಯ; ಮುಡಾ ಅಧ್ಯಕ್ಷರು, ಆಯುಕ್ತರಿಗೆ ಪತ್ರ ಮಂಗಳೂರು, ಜುಲೈ 6: ನಗರದ ಅತ್ತಾವರ ಬಾಬುಗುಡ್ಡೆಯಲ್ಲಿರುವ ದಲಿತೋದ್ದಾರಕ ಪೂಜನೀಯ ಕುದ್ಮುಲ್ ರಂಗರಾವ್ ಅವರ ಸಮಾಧಿ ಅಭಿವೃದ್ಧಿಗಾಗಿ ಮುಡಾ ವತಿಯಿಂದಲೇ 3 ಕೋಟಿ ರೂ. ಅನುದಾನ ಮೀಸಲಿಟ್ಟು ಕಾಮಗಾರಿ ಕೈಗೊಳ್ಳುವಂತೆ ಶಾಸಕ ವೇದವ್ಯಾಸ ಕಾಮತ್ ಆಗ್ರಹಿಸಿದ್ದಾರೆ. ಈ ಸಂಬಂಧ ಮುಡಾ ಅಧ್ಯಕ್ಷರು ಹಾಗೂ ಆಯುಕ್ತರಿಗೆ ಪತ್ರ ಬರೆದಿರುವ ಅವರು, 2022ರಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ–1ರಡಿ ಕುದ್ಮುಲ್ ರಂಗರಾವ್…

Read More

ಕುದ್ಮುಲ್ ರಂಗರಾವ್ ಜಯಂತಿ: 500 ವಿದ್ಯಾರ್ಥಿಗಳಿಗೆ ಉಚಿತ ಕಾಲೇಜು ಬ್ಯಾಗ್ ವಿತರಿಸಿದ ಜಿಲ್ಲಾ ಕಾಂಗ್ರೆಸ್

ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ; ಸಾಧಕ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ ಮಂಗಳೂರು, ಜುಲೈ 6: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ (ಪರಿಶಿಷ್ಟ ಜಾತಿ ವಿಭಾಗ) ವತಿಯಿಂದ ಮಹಾನ್ ಸಮಾಜ ಸುಧಾರಕ, ಶಿಕ್ಷಣದ ಹರಿಕಾರ ಹಾಗೂ ದಲಿತೋದ್ಧಾರದ ಮುಂಚೂಣಿ ನಾಯಕ ಪೂಜನೀಯ ಕುದ್ಮುಲ್ ರಂಗರಾವ್ ಅವರ ಜಯಂತಿಯನ್ನು ಭಾನುವಾರ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಪರಿಶಿಷ್ಟ ಜಾತಿಯ ಕಾಲೇಜು ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ 500 ವಿದ್ಯಾರ್ಥಿಗಳಿಗೆ ಉಚಿತ ಕಾಲೇಜು…

Read More

ಪ್ರತಿಭಾ ಪುರಸ್ಕಾರ ವಿದ್ಯಾರ್ಥಿಗಳಿಗೆ ಮತ್ತಷ್ಟು ಸಾಧನೆಗೆ ಪ್ರೇರಣೆ: ಡಾ. ಎಂ.ಎನ್. ರಾಜೇಂದ್ರ ಕುಮಾರ್

ಮಂಗಳೂರು, ಜು. 4: “ಸಹಕಾರಿ ಪಿತಾಮಹ” ದಿ. ಮೊಳಹಳ್ಳಿ ಶಿವರಾವ್ ಅವರ ಸ್ಮರಣಾರ್ಥ ಎಸ್‌ಸಿಡಿಸಿಸಿ ಬ್ಯಾಂಕ್ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿವೇತನ ವಿತರಣಾ ಸಮಾರಂಭವು ಶನಿವಾರ ನಗರದ ಎಸ್‌ಸಿಡಿಸಿಸಿ ಬ್ಯಾಂಕ್ ಪ್ರಧಾನ ಕಚೇರಿಯ ಮೊಳಹಳ್ಳಿ ಶಿವರಾವ್ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್, ವಿದ್ಯಾರ್ಥಿಗಳು ಉತ್ತಮ ಶಿಕ್ಷಣದ ಮೂಲಕ ಸಮಾಜಸೇವೆಯಲ್ಲೂ ತೊಡಗಿಸಿಕೊಳ್ಳಬೇಕು ಎಂಬ ಉದ್ದೇಶದಿಂದ ಪ್ರತಿಭಾವಂತರನ್ನು ಪ್ರೋತ್ಸಾಹಿಸುವ ಕಾರ್ಯಕ್ರಮವನ್ನು ಬ್ಯಾಂಕ್ ನಿರಂತರವಾಗಿ…

Read More

ವಿದ್ವಾನ್ ದಿ. ರಮಾನಾಥ ಕೋಟೆಕಾರ್ ಜನ್ಮದಿನ ಪ್ರಯುಕ್ತ ರಾಜ್ಯಮಟ್ಟದ ಕಥೆ–ಕವನ ಆನ್‌ಲೈನ್ ಸ್ಪರ್ಧೆ

ಮಂಗಳೂರು: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವ ವಾಹಿನಿ ಸಂಸ್ಥೆಯ ಕೊಲ್ಯ ಘಟಕದ ಆಶ್ರಯದಲ್ಲಿ ಕರಾವಳಿ ತೀರದ ಹೆಮ್ಮೆಯ ಸಾಹಿತಿ, ಜನಪದ ವಿದ್ವಾಂಸ, ಲೇಖಕ ಹಾಗೂ ಅನರ್ಘ್ಯ ರತ್ನ ವಿದ್ವಾನ್ ದಿ. ರಮಾನಾಥ ಕೋಟೆಕಾರ್ ಅವರ ಜನ್ಮದಿನದ ಅಂಗವಾಗಿ ರಾಜ್ಯಮಟ್ಟದ ಆನ್‌ಲೈನ್ ಕಥೆ ಹಾಗೂ ಕವನ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಸ್ಪರ್ಧೆಯಲ್ಲಿ ಯಾವುದೇ ವಯೋಮಿತಿಯಿಲ್ಲ. ಆಸಕ್ತರು ಕನ್ನಡ ಭಾಷೆಯಲ್ಲಿ ಸ್ವ-ರಚಿತ ಕಥೆ ಅಥವಾ ಕವನವನ್ನು ಕಳುಹಿಸಬಹುದಾಗಿದೆ. ಕವನವು ಗರಿಷ್ಠ 16 ಸಾಲುಗಳ ಒಳಗಿದ್ದು, ಕಥೆಯು ಗರಿಷ್ಠ 1,500 ಪದಗಳ…

Read More
error: Content is protected !!