ಬಂಗ್ರಕೂಳೂರಿನಲ್ಲಿ ಭೀಕರ ಅಪಘಾತ: ಕಂಟೈನರ್ ಲಾರಿ ಚಕ್ರಕ್ಕೆ ಸಿಲುಕಿ ಇವಿ ಸ್ಕೂಟರ್ ಸವಾರ ಸಾವು

ಮಂಗಳೂರು: ಬಂಗ್ರಕೂಳೂರು ವಿಅರ್ಎಲ್ ಮುಂಭಾಗ ಸ್ಕೂಟರ್ ಗೆ ಹಿಂಭಾಗದಿಂದ ಕಂಟೈನರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ನವಾರ ರಸ್ತೆಗೆ ಬಿದ್ದು ಮೃತಪಟ್ಟಿದ್ದಾರೆ. ಸವಾರ ರಸ್ತೆಗೆ ಬಿದ್ದಾಕ್ಷಣವೇ ಲಾರಿ ಚಕ್ರ ಸವಾರನ ಮೇಲೆಯೇ ಚಲಿಸಿದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ದುರ್ಘಟನೆ ಶುಕ್ರವಾರ ಸಂಜೆ ನಡೆದಿದೆ. ಮೃತರನ್ನು ಹಳೆಯಂಗಡಿ ತೋಕೂರು ನಿವಾಸಿ ಸದಾನಂದ ಶೆಟ್ಟಿಗಾರ್ ಎಂದು ಗುರುತಿಸಲಾಗಿದೆ. ಸದಾನಂದ ಅವರು ತಮ್ಮ ಇವಿ ಸ್ಕೂಟರ್ ನಲ್ಲಿ ಕೂಳೂರಿನಲ್ಲಿ ಬರುತ್ತಿದ್ದಾಗ ದುರಂತ ಸಂಭವಿಸಿದೆ.

Read More

ಮತದಾರರ ಮ್ಯಾಪಿಂಗ್ ಪ್ರಕ್ರಿಯೆ ತ್ವರಿತಗೊಳಿಸಿ: ಐವನ್ ಡಿ’ಸೋಜಾ

ಮಂಗಳೂರು: ಜಿಲ್ಲೆಯಾದ್ಯಂತ ನಡೆಯುತ್ತಿರುವ ಮತದಾರರ ಮ್ಯಾಪಿಂಗ್ (ಎನ್ಯುಮರೇಷನ್) ಪ್ರಕ್ರಿಯೆಯಲ್ಲಿ ತಾಂತ್ರಿಕ ಹಾಗೂ ಕಾರ್ಯನಿರ್ವಹಣಾ ಸಮಸ್ಯೆಗಳು ಎದುರಾಗುತ್ತಿದ್ದು, ಸರ್ಕಾರ ಮತ್ತು ಚುನಾವಣಾ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ಆಗ್ರಹಿಸಿದರು. ಮನಪಾ ಕಚೇರಿಯಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಒಟ್ಟು 18,04,476 ಮತದಾರರಿದ್ದು, ಸುಮಾರು 16 ಲಕ್ಷ ಮಂದಿಯ ಮ್ಯಾಪಿಂಗ್ ಪೂರ್ಣಗೊಂಡಿದ್ದು, 1,92,284 ಮತದಾರರ ಮ್ಯಾಪಿಂಗ್ ಬಾಕಿಯಿದೆ ಎಂದು ಹೇಳಿದರು. ಮ್ಯಾಪಿಂಗ್ ಆಗದಿದ್ದರೂ ಮತದಾರರ…

Read More

ಮಂಗಳೂರು: ಸಮಗ್ರ ಒಳಚರಂಡಿ ಯೋಜನೆ ಜಾರಿಗೆ ತರಲು ಸರ್ಕಾರಗಳು ವಿಫಲ – ಐವನ್ ಡಿಸೋಜಾ ಆರೋಪ

ಮಂಗಳೂರು: ನಗರದ ಒಳಚರಂಡಿ ವ್ಯವಸ್ಥೆ ಸಂಪೂರ್ಣ ಶಿಥಿಲಗೊಂಡಿದ್ದು, ಸಮಗ್ರ ಯೋಜನೆ ಜಾರಿಯಾಗದ ಕಾರಣ ನಾಗರಿಕರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಆರೋಪಿಸಿದರು. ಮನಪಾ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1952ರಿಂದಲೂ ಸಮಗ್ರ ಒಳಚರಂಡಿ ಯೋಜನೆ ಜಾರಿಗೆ ತರಬೇಕೆಂಬ ಮಾತು ಕೇಳಿಬರುತ್ತಿದ್ದರೂ, ಇಂದಿಗೂ ಅದು ಸಾಕಾರವಾಗಿಲ್ಲ. ಮಳೆಗಾಲದ ಈ ಸಮಯದಲ್ಲಿ ನಗರದ ಅನೇಕ ಪ್ರದೇಶಗಳಲ್ಲಿ ಇನ್ನೂ ಒಳಚರಂಡಿ ಸಂಪರ್ಕ ವ್ಯವಸ್ಥೆ ಇಲ್ಲದ ಕಾರಣ ಬಾವಿಗಳು ಹಾಗೂ ಕೆರೆಗಳು…

Read More

ಪಯ್ಯನ್ನೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಸ್ವಿಫ್ಟ್ ಬಸ್‌ಗೆ ತಗುಲಿದ ಬೆಂಕಿ;

ಬೆಂಗಳೂರು : ಪಯ್ಯನ್ನೂರುದಿಂದ ಬೆಂಗಳೂರಿಗೆ ಬರುತ್ತಿದ್ದ Karnataka State Road Transport Corporation ಸ್ವಿಫ್ಟ್ ಬಸ್‌ಗೆ ಬೆಂಕಿ ಹೊತ್ತಿಕೊಂಡಿದೆ. ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.ಶುಕ್ರವಾರ ಸಂಜೆ ಸುಮಾರು 6.30ರ ವೇಳೆಗೆ Jnanabharathi Metro Station ಸಮೀಪದ ಕೆಂಗೇರಿಯಲ್ಲಿ ಈ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್‌ನಿಂದಲೇ ಬೆಂಕಿ ಕಾಣಿಸಿಕೊಂಡಿರಬಹುದು ಎಂಬುದು ಪ್ರಾಥಮಿಕ ತನಿಖೆಯ ಮಾಹಿತಿ. ಬಸ್ ಈಗಾಗಲೇ ಬೆಂಗಳೂರಿನ ಸಮೀಪ ತಲುಪಿದ್ದರಿಂದ ಅದರಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿತ್ತು. ಘಟನೆ ನಡೆದ ವೇಳೆ ಇಬ್ಬರು ಪ್ರಯಾಣಿಕರು, ಚಾಲಕ…

Read More

ಮಂಗಳೂರು ಬೈಕಂಪಾಡಿಯಲ್ಲಿ ಪಯ್ಯನ್ನೂರಿನ ಚಿನ್ನದ ವ್ಯಾಪಾರಿಯನ್ನು ಅಪಹರಿಸಿ ದರೋಡೆ; ಕಣ್ಣೂರು ಮೂಲದವನೂ ಸೇರಿ ಮೂವರು ಬಂಧನ

ಮಂಗಳೂರು : ಕಾರನ್ನು ಅಡ್ಡಗಟ್ಟಿ ಪಯ್ಯನ್ನೂರಿನ ಚಿನ್ನದ ವ್ಯಾಪಾರಿಯನ್ನು ಅಪಹರಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ ದರೋಡೆ ಮಾಡಿದ ಪ್ರಕರಣದಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೂ 13 ಮಂದಿ ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಪತ್ತೆಗೆ ಪೊಲೀಸರು ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ. ಬಂಧಿತರನ್ನು ಕಣ್ಣೂರು ಜಿಲ್ಲೆಯ ಪಾತಿರಿಯಾಡು ನಿವಾಸಿ ಆರ್.ಕೆ. ನಿಮಿಲ್ (37) ಹಾಗೂ ಮಡಿಕೇರಿ ಮೂಲದ ಇರ್ಷಾದ್ (40) ಮತ್ತು ಮುಸ್ತಫಾ (49) ಎಂದು ಗುರುತಿಸಲಾಗಿದೆ. ಇವರನ್ನು ಪಣಂಬೂರು ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜೂನ್…

Read More

ಲಯನ್ಸ್ ಕ್ಲಬ್ ಮಂಗಳೂರು ನೂತನ ಪದಾಧಿಕಾರಿಗಳ ಪದಗ್ರಹಣ ಇಂದು

ಮಂಗಳೂರು, ಲಯನ್ಸ್ ಇಂಟರ್‌ನ್ಯಾಷನಲ್‌ನ ಲಯನ್ಸ್ ಕ್ಲಬ್ ಮಂಗಳೂರು ಘಟಕದ 2026–27ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜುಲೈ 4ರಂದು ಸಂಜೆ 7 ಗಂಟೆಗೆ ನಗರದ ಲಯನ್ಸ್ ಸೇವಾ ಭವನದಲ್ಲಿ ನಡೆಯಲಿದೆ. ನೂತನ ಅಧ್ಯಕ್ಷರಾಗಿ ಹೇಮಾ ರಾವ್, ಕಾರ್ಯದರ್ಶಿಯಾಗಿ ನ್ಯಾನ್ಸಿ ಮಸ್ಕರೆನ್ಹಾಸ್ ಹಾಗೂ ಕೋಶಾಧಿಕಾರಿಯಾಗಿ ಸೀಮಾ ವಿಜಯ ವಿಷ್ಣುಮಯ ಅಧಿಕಾರ ಸ್ವೀಕರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮಾಜಿ ಜಿಲ್ಲಾ ರಾಜ್ಯಪಾಲ ಕವಿತಾ ಶಾಸ್ತ್ರಿ ಅವರು ಪದಗ್ರಹಣ ಅಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದು, ಗೌರವ ಅತಿಥಿಯಾಗಿ ನಿಕಟಪೂರ್ವ ಜಿಲ್ಲಾ ರಾಜ್ಯಪಾಲ ಅರವಿಂದ್ ಶೆಣೈ (ಉಡುಪಿ)…

Read More

ಸಾಹಿತಿ ಎಂ. ಬಸವರಾಜ್‌ಗೆ ‘ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ–2026’

ದಾವಣಗೆರೆ, ಜು. 4: ದಾವಣಗೆರೆಯ ಜನಪ್ರಿಯ ಸಾಹಿತಿ, 36ಕ್ಕೂ ಹೆಚ್ಚು ಕೃತಿಗಳ ಕರ್ತೃ, ಸಾಮಾಜಿಕ ಹಾಗೂ ಸಾಹಿತ್ಯ ಸಂಘಟಕರಾದ ಎಂ. ಬಸವರಾಜ್ ಅವರಿಗೆ ‘ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ–2026’ ಪ್ರದಾನ ಮಾಡಲಾಗುತ್ತಿದೆ. ಜುಲೈ 26ರಂದು ಕಾಸರಗೋಡು ಕನ್ನಡ ಭವನದಲ್ಲಿ ನಡೆಯಲಿರುವ ‘ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮ’ ಹಾಗೂ ‘ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ’ದ ಅಂಗವಾಗಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಎಂ. ಬಸವರಾಜ್ ಅವರಿಗೆ ಪ್ರದಾನ ಮಾಡಲಾಗುವುದು ಎಂದು ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ.ಎನ್….

Read More

ಕರೋಪಾಡಿಯಲ್ಲಿ ಅಕ್ರಮ ಕೆಂಪುಕಲ್ಲು, ಮಣ್ಣು ಗಣಿಗಾರಿಕೆ ಮೇಲೆ ದಾಳಿ: ಯಂತ್ರೋಪಕರಣ, ವೇ-ಬ್ರಿಡ್ಜ್ ವಶ

ಬಂಟ್ವಾಳ, ಜು. 4: ತಾಲೂಕಿನ ಕರೋಪಾಡಿ ಗ್ರಾಮದ ಮುಗುಳಿ ಪ್ರದೇಶದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಹಾಗೂ ಮಣ್ಣು ಗಣಿಗಾರಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ವಿಟ್ಲ ಪೊಲೀಸ್ ಠಾಣೆಯ ಉಪನಿರೀಕ್ಷಕ ರಾಮಕೃಷ್ಣ ನೇತೃತ್ವದ ಪೊಲೀಸ್ ತಂಡ ದಾಳಿ ನಡೆಸಿ, ವಾಹನಗಳು, ಯಂತ್ರೋಪಕರಣಗಳು ಹಾಗೂ ವೇ-ಬ್ರಿಡ್ಜ್‌ನ್ನು ವಶಪಡಿಸಿಕೊಂಡಿದೆ. ದಾಳಿಯ ವೇಳೆ ಮುಳಿಗದ್ದೆ ಝಕಾರಿಯಾ ಹಾಗೂ ಇತರರು ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದರು ಎನ್ನಲಾಗಿದ್ದು, ಪೊಲೀಸ್ ವಾಹನವನ್ನು ಕಂಡ ಕೂಡಲೇ ಸ್ಥಳದಿಂದ ಪರಾರಿಯಾಗಿದ್ದಾರೆ. ಸ್ಥಳ ಪರಿಶೀಲನೆ ನಡೆಸಿದಾಗ ಯಾವುದೇ ಪರವಾನಗಿ ಇಲ್ಲದೆ…

Read More

ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣ: ಹಲವು ಪ್ರಕರಣಗಳ ಆರೋಪಿಗೆ ಸೈಬರ್ ಪೊಲೀಸರ ಬಲೆ

ಬಂಟ್ವಾಳ, ಜು. 4: ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಬ್ಯಾಂಕ್ ಖಾತೆಗಳನ್ನು ಪಡೆದು ಸೈಬರ್ ವಂಚನೆಗೆ ಬಳಸಲು ಸಹಕರಿಸುತ್ತಿದ್ದ ಆರೋಪಿಯನ್ನು ಸೈಬರ್ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಕುಡ್ತಮುಗೇರು ನಿವಾಸಿ ಜುಬೈರ್ (32) ಎಂದು ಗುರುತಿಸಲಾಗಿದೆ. ಆರೋಪಿಯನ್ನು ಜುಲೈ 3ರಂದು ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಪ್ರಕರಣವು ದಕ್ಷಿಣ ಕನ್ನಡ ಜಿಲ್ಲಾ ಸೈಬರ್…

Read More

ಕುದ್ಮುಲ್ ರಂಗರಾವ್ ಜಯಂತಿ ಜು.5ರಂದು: ಉಚಿತ ಕಾಲೇಜು ಬ್ಯಾಗ್ ವಿತರಣೆ

ಮಂಗಳೂರು, ಜು. 4: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ (ಪರಿಶಿಷ್ಟ ಜಾತಿ ವಿಭಾಗ) ವತಿಯಿಂದ ಮಹಾನ್ ಸಮಾಜ ಸುಧಾರಕ, ಶಿಕ್ಷಣದ ಹರಿಕಾರ ಹಾಗೂ ದಲಿತೋದ್ಧಾರದ ಮುಂಚೂಣಿ ನಾಯಕರಾದ ಕುದ್ಮುಲ್ ರಂಗರಾವ್ ಅವರ ಜಯಂತಿಯನ್ನು ಜುಲೈ 5ರಂದು (ಭಾನುವಾರ) ಬೆಳಿಗ್ಗೆ 10.30ಕ್ಕೆ ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ. ಜಯಂತಿ ಅಂಗವಾಗಿ ಪರಿಶಿಷ್ಟ ಜಾತಿಯ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಕಾಲೇಜು ಬ್ಯಾಗ್‌ಗಳನ್ನು ವಿತರಿಸಲಾಗುವುದು. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ…

Read More
error: Content is protected !!