ಮಂಗಳೂರಿನಲ್ಲಿ ‘ಭಾವಸಂಗಮ’ ಜಿಲ್ಲಾ ಮಟ್ಟದ ಗಾಯನ ಸ್ಪರ್ಧೆ: ಜುಲೈ 18, 19 ಹಾಗೂ 26ರಂದು ಆಯೋಜನೆ

ಮಂಗಳೂರು, ಜು.3: ಕಲಾಮೃತ ಮಂಗಳೂರು ಹಾಗೂ ನಮ್ಮ ಕುಡ್ಲ ಸಂಸ್ಥೆಗಳು, ಶಾರದಾ ವಿದ್ಯಾಲಯ ಮಂಗಳೂರು ಸಹಯೋಗದೊಂದಿಗೆ “ಭಾವಸಂಗಮ” ಜಿಲ್ಲಾ ಮಟ್ಟದ ಭಕ್ತಿಗೀತೆ, ಭಾವಗೀತೆ ಹಾಗೂ ದೇಶಭಕ್ತಿ ಗೀತೆಗಳ ವೈಯಕ್ತಿಕ ಗಾಯನ ಸ್ಪರ್ಧೆಯನ್ನು ಜುಲೈ 18, 19 ಹಾಗೂ 26ರಂದು ಮಂಗಳೂರಿನಲ್ಲಿ ಆಯೋಜಿಸಿವೆ ಎಂದು ಕಲಾಮೃತ ಸದಸ್ಯ ಗಣೇಶ್ ಸೋಮಯಾಜಿ ತಿಳಿಸಿದ್ದಾರೆ. ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಪರ್ಧೆಯ ಪ್ರಥಮ ಹಂತ ಜುಲೈ 18 ಮತ್ತು 19ರಂದು ನವರತ್ನ ಪ್ಯಾಲೇಸ್‌ನಲ್ಲಿ ನಡೆಯಲಿದ್ದು, ದ್ವಿತೀಯ ಹಂತದ ಸೆಮಿಫೈನಲ್ ಹಾಗೂ…

Read More

75 ದಿನ ಕಳೆದರೂ ಪತ್ತೆಯಾಗದ ಬೆಂಗಳೂರು ವಿದ್ಯಾರ್ಥಿನಿಯರು: CIDಗೆ ತನಿಖೆ ವರ್ಗಾವಣೆ

ಬೆಂಗಳೂರು, ಜುಲೈ 3: ವಿದ್ಯಾರಣ್ಯಪುರದ ಪಿಯುಸಿ ವಿದ್ಯಾರ್ಥಿನಿಯರಾದ ತನಿಷ್ಕಾ ಮತ್ತು ತೇಜಸ್ವಿನಿ ನಾಪತ್ತೆಯಾಗಿ 75 ದಿನಗಳಾದರೂ ಅವರ ಸುಳಿವು ಇನ್ನೂ ಲಭ್ಯವಾಗಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸರು ಆರಂಭದಿಂದಲೇ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ್ದರೂ ಮಹತ್ವದ ಸುಳಿವು ಸಿಕ್ಕಿರಲಿಲ್ಲ. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ಕರ್ನಾಟಕ ಸರ್ಕಾರ ತನಿಖೆಯನ್ನು ಅಪರಾಧ ತನಿಖಾ ಇಲಾಖೆ (CID)ಗೆ ವರ್ಗಾಯಿಸಿದೆ. ವಿದ್ಯಾರ್ಥಿನಿಯರ ಪೋಷಕರು ಕೂಡ ಶೀಘ್ರ ಪತ್ತೆಗಾಗಿ ಸಂಬಂಧಿತ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು, ಪ್ರಕರಣದ ಕುರಿತು ಸಾರ್ವಜನಿಕರಲ್ಲಿಯೂ ಆತಂಕ ವ್ಯಕ್ತವಾಗಿದೆ. CID ಅಧಿಕಾರಿಗಳು…

Read More

ಸಕ್ರಿಯ ರಾಜಕಾರಣಕ್ಕೆ ಮಾಜಿ ತಾಲೂಕು ಪಂಚಾಯತ್ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಅಸೈಗೋಳಿ ಮರಳಿಕೆ; ಜೆಡಿಎಸ್‌ಗೆ ಮತ್ತಷ್ಟು ಬಲ

ಮಂಗಳೂರು, ಜುಲೈ 2: ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿರುವ ಮಾಜಿ ತಾಲೂಕು ಪಂಚಾಯತ್ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಅಸೈಗೋಳಿ ಅವರು ಮತ್ತೆ ಸಕ್ರಿಯ ರಾಜಕಾರಣಕ್ಕೆ ಮರಳಿದ್ದು, ಜನತಾದಳ (ಜಾತ್ಯತೀತ) ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ. ಜಿಲ್ಲಾ ಅಧ್ಯಕ್ಷರಾದ ಜಾಕೆ ಮಾಧವ ಗೌಡ ಅವರ ನಿರ್ದೇಶನದಂತೆ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಜೆಡಿಎಸ್ ರಾಜ್ಯ ಮೀನುಗಾರರ ಘಟಕದ ಅಧ್ಯಕ್ಷ ರತ್ನಾಕರ ಸುವರ್ಣ, ಜಿಲ್ಲಾ ಕಾರ್ಯಾಧ್ಯಕ್ಷರಾದ ಇಕ್ಬಾಲ್ ಅಹಮ್ಮದ್ ಮುಲ್ಕಿ ಹಾಗೂ ವಸಂತ್ ಪೂಜಾರಿ ಅವರ ಉಪಸ್ಥಿತಿಯಲ್ಲಿ ಜಿಲ್ಲಾ…

Read More

ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾವ್ ಸ್ಮರಣಾರ್ಥ ಪ್ರತಿಭಾ ಪುರಸ್ಕಾರ ಜು.4ರಂದು

ಮಂಗಳೂರು: ಸಹಕಾರಿ ಪಿತಾಮಹ ದಿವಂಗತ ಮೊಳಹಳ್ಳಿ ಶಿವರಾವ್ ಅವರ ಸ್ಮರಣಾರ್ಥ ಪ್ರತಿಭಾ ಪುರಸ್ಕಾರ ಸಮಾರಂಭವು ಜುಲೈ 4ರಂದು ಮಧ್ಯಾಹ್ನ 3 ಗಂಟೆಗೆ ಎಸ್‌ಸಿಡಿಸಿಸಿ ಬ್ಯಾಂಕ್‌ನ ಪ್ರಧಾನ ಕಚೇರಿಯ ಮೊಳಹಳ್ಳಿ ಶಿವರಾವ್ ಸಭಾಭವನದಲ್ಲಿ ನಡೆಯಲಿದೆ. 2025–26ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕಗಳಿಸಿ ಸಾಧನೆಗೈದ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಹಾಗೂ ಬ್ಯಾಂಕಿನ ಸಿಬ್ಬಂದಿಗಳ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿವೇತನವನ್ನು ಇದೇ ಸಂದರ್ಭದಲ್ಲಿ ವಿತರಿಸಲಾಗುವುದು. ಮಾಜಿ ಸಚಿವ ಹಾಗೂ…

Read More

ಬೋಳೂರಿನ ಒಳಚರಂಡಿ ಸಮಸ್ಯೆ ಪರಿಹಾರಕ್ಕೆ ಶಾಸಕರ ನೇತೃತ್ವದಲ್ಲಿ ಸಮಗ್ರ ಸಭೆ

ಮಂಗಳೂರು, ಜು. 2: ನಗರದ ಬೋಳೂರಿನ ಶ್ರೀ ಜಾರಂದಾಯ ದೈವಸ್ಥಾನದ ಆವರಣದಲ್ಲಿ ಸ್ಥಳೀಯರ ಬಹುಕಾಲದ ಒಳಚರಂಡಿ ಸಮಸ್ಯೆ ಕುರಿತು ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಹಿರಿಯ ಅಧಿಕಾರಿಗಳು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಸ್ಥಳೀಯ ನಿವಾಸಿಗಳ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ಸುಮಾರು 75 ವರ್ಷಗಳಿಂದ ಈ ಭಾಗದಲ್ಲಿ ಒಳಚರಂಡಿ ವ್ಯವಸ್ಥೆಯ ಕೊರತೆ ಪ್ರಮುಖ ಸಮಸ್ಯೆಯಾಗಿದ್ದು, ಹಿಂದಿನ ಅವಧಿಯಲ್ಲೇ ಕುಡ್ಸೆಂಪ್ ಮೂಲಕ ಅನುದಾನ ಮೀಸಲಿಡಲಾಗಿತ್ತು. ಆದರೆ ನೆಲದಡಿಯ ಬಂಡೆಕಲ್ಲುಗಳಂತಹ ಭೌಗೋಳಿಕ ಸಮಸ್ಯೆಯಿಂದ ಯೋಜನೆ…

Read More

ಮಂಗಳೂರು ಪೊಲೀಸ್ ಆಯುಕ್ತರಿಂದ ಜಲ ಸಂರಕ್ಷಣಾ ಅಭಿಯಾನದ ಪೋಸ್ಟರ್ ಬಿಡುಗಡೆಎಲ್ ನಿನೋ ಪರಿಣಾಮದ ಹಿನ್ನೆಲೆಯಲ್ಲಿ ನೀರು ಉಳಿಸುವ ಕುರಿತು ಜನಜಾಗೃತಿಗೆ ಕರೆ

ಮಂಗಳೂರು, ಜುಲೈ 2, ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಆಯೋಜಿಸುತ್ತಿರುವ “ಜಲ ಸಂರಕ್ಷಣಾ ಅಭಿಯಾನ” ದ ಪೋಸ್ಟರ್ ಅನ್ನು ಮಂಗಳೂರು ನಗರ ಪೊಲೀಸ್ ಆಯುಕ್ತ ಶ್ರೀ ಸುಧೀರ್ ಕುಮಾರ್ ರೆಡ್ಡಿ, ಐಪಿಎಸ್ ಅವರು ಇಂದು ಬಿಡುಗಡೆಗೊಳಿಸಿದರು. ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದ ಪೊಲೀಸ್ ಆಯುಕ್ತರು, ಎಲ್ ನಿನೋ (El Niño) ಪರಿಣಾಮದಿಂದ ಈ ವರ್ಷ ದೇಶದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆಗಳಿರುವ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ನಾಗರಿಕರೂ ನೀರಿನ ಮಹತ್ವವನ್ನು ಅರಿತು ಅದನ್ನು ಸಂರಕ್ಷಿಸುವ ಜವಾಬ್ದಾರಿಯನ್ನು ಹೊತ್ತುಕೊಳ್ಳಬೇಕು…

Read More

ಬೆಂಗಳೂರು ಇಸ್ರೋ ಕೇಂದ್ರಕ್ಕೆ ಬಾಂಬ್ ಬೆದರಿಕೆ; ಸಿಬ್ಬಂದಿಯನ್ನು ತುರ್ತಾಗಿ ಸ್ಥಳಾಂತರ

ಬೆಂಗಳೂರು: ಬೆಂಗಳೂರಿನ ಇಸ್ರೋ (ISRO) ಮುಖ್ಯ ಕಚೇರಿಗೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಸಿಬ್ಬಂದಿಯನ್ನು ಕಚೇರಿಯಿಂದ ಸುರಕ್ಷಿತವಾಗಿ ಹೊರಗೆ ಸ್ಥಳಾಂತರಿಸಲಾಗಿದೆ. ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದ್ದು, ಇಸ್ರೋ ಕಚೇರಿಯಲ್ಲಿ ಬಾಂಬ್ ಇಡಲಾಗಿದೆ ಹಾಗೂ ಸಂಸ್ಥೆಯನ್ನು ಸ್ಫೋಟಿಸುವುದಾಗಿ ಅದರಲ್ಲಿ ಉಲ್ಲೇಖಿಸಲಾಗಿದೆ. ಮಾಹಿತಿ ದೊರೆಯುತ್ತಿದ್ದಂತೆ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಧಾವಿಸಿ ತಪಾಸಣೆ ನಡೆಸುತ್ತಿದ್ದಾರೆ. ಈ ಬೆದರಿಕೆ ಸಂದೇಶವು ನಕಲಿಯೇ ಎಂಬ ಅನುಮಾನವೂ ಪೊಲೀಸರಿಗೆ ಇದ್ದು, ಎಲ್ಲಾ ಆಯಾಮಗಳಲ್ಲಿ ತನಿಖೆ ಮುಂದುವರಿದಿದೆ.

Read More

ಬೆಳ್ತಂಗಡಿ ಗುರುವಾಯನಕೆರೆಯಲ್ಲಿ ಅನುಮಾನಾಸ್ಪದ ಮೃತದೇಹ ಪತ್ತೆ; ಕೊಲೆ ಶಂಕೆ ವ್ಯಕ್ತಪಡಿಸಿದ ಕುಟುಂಬ

27 ವರ್ಷದ ಲಾರಿ ಚಾಲಕ ಮೃತ್ಯು; ಪೊಲೀಸರು ಸ್ಥಳ ಪರಿಶೀಲನೆ, ತನಿಖೆ ಆರಂಭ ಬೆಳ್ತಂಗಡಿ, ಜು. 2: ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿರುವ ಘಟನೆ ನಡೆದಿದೆ. ಕುವೆಟ್ಟು ಗ್ರಾಮದ ಶಕ್ತಿನಗರ ಸಮೀಪದ ಯನೋಪೊಯೋ ವಿದ್ಯುತ್ ಸಬ್ ಸ್ಟೇಷನ್ ಪ್ರದೇಶದಲ್ಲಿ ಮೃತದೇಹ ಪತ್ತೆಯಾಗಿದೆ. ಮೃತರನ್ನು ತಣ್ಣೀರುಪಂತ ಗ್ರಾಮದ ಕಲ್ಲೇರಿ ಜನತಾ ಕಾಲೋನಿ ನಿವಾಸಿ ಶರೀಫ್ ಕೆ ಅವರ ಪುತ್ರ ಮುಸ್ತಾಕ್ (27) ಎಂದು ಗುರುತಿಸಲಾಗಿದೆ. ಅವರು ವೃತ್ತಿಯಲ್ಲಿ ಲಾರಿ ಚಾಲಕರಾಗಿದ್ದರು. ಘಟನೆ ಕುರಿತು…

Read More

SIR ಪ್ರಕ್ರಿಯೆಗೆ ಅಗತ್ಯವಾದ ಎನ್ಯೂಮರೇಷನ್ ಫಾರ್ಮ್‌ಗಳ, BLO ಗಳ ಕೊರತೆ ; ಮತದಾರರಿಗೆ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಬೇಕು : ಎಸ್ ಡಿ ಪಿ ಐ

ಮಂಗಳೂರು : ಕರ್ನಾಟಕ ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಆರಂಭಗೊಂಡಿರುವ ಸಂದರ್ಭದಲ್ಲಿ, ಮತದಾರರಿಗೆ ವಿತರಿಸಬೇಕಾದ ಎನ್ಯೂಮರೇಷನ್ ಫಾರ್ಮ್‌ಗಳು (Enumeration Forms) ಸಾಕಷ್ಟು ಪ್ರಮಾಣದಲ್ಲಿ ಬೂತ್ ಮಟ್ಟದ ಅಧಿಕಾರಿಗಳ (BLO) ಬಳಿ ಲಭ್ಯವಿಲ್ಲ ಎಂಬ ಮಾಹಿತಿ ವಿವಿಧ ಭಾಗಗಳಿಂದ ಕೇಳಿ ಬರುತ್ತಿದೆ. ಹಲವಾರು ಬೂತ್‌ಗಳಲ್ಲಿ ಒಬ್ಬ BLOಗೆ ಶೇ.50 ರಷ್ಟು ಫಾರ್ಮ್‌ಗಳಷ್ಟೇ ನೀಡಲಾಗಿದೆ ಎನ್ನುವುದು ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಇದರಿಂದ ಮನೆ – ಮನೆಗೆ ತೆರಳಿ ಮತದಾರರಿಗೆ ನಮೂನೆಗಳನ್ನು ವಿತರಿಸುವ ಹಾಗೂ ಭರ್ತಿ ಮಾಡಿಸಿಕೊಂಡು ಸಂಗ್ರಹಿಸುವ…

Read More

ಡಾ. ವಿ.ಎಸ್. ಆಚಾರ್ಯರ ನಿವಾಸಕ್ಕೆ ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ; ಶಾಂತಾ ಆಚಾರ್ಯರಿಗೆ ಸನ್ಮಾನ

ಮೋದಿ ಸರ್ಕಾರದ 12 ವರ್ಷಗಳ ಸಾಧನೆ ಕುರಿತು ಚರ್ಚೆ; ಕರಾವಳಿ ರಾಜಕೀಯದ ಹಿರಿಯ ನಾಯಕನ ಸ್ಮರಣೆ ಉಡುಪಿ, ಜು. 2: ಮೌಲ್ಯಾಧಾರಿತ ರಾಜಕಾರಣದ ರೂವಾರಿ ಹಾಗೂ ಉಡುಪಿ ಅಭಿವೃದ್ಧಿಯ ಹರಿಕಾರ ದಿವಂಗತ ಡಾ. ವಿ.ಎಸ್. ಆಚಾರ್ಯ ಅವರ ನಿವಾಸಕ್ಕೆ ಉಡುಪಿ–ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ 12 ವರ್ಷಗಳ ‘ವಿಶ್ವಾಸ, ವಿಕಾಸ ಮತ್ತು ಜನ ಕಲ್ಯಾಣ’…

Read More
error: Content is protected !!