ಮಂಗಳೂರು ಗುಡ್ಡ ಕುಸಿತ ದುರಂತ: ಮೃತರ ಕುಟುಂಬಗಳಿಗೆ ಪರಿಹಾರ, ಶಾಶ್ವತ ಪುನರ್ವಸತಿಗೆ ಎಸ್‌ಡಿಟಿಯು ಆಗ್ರಹ

ಮಂಗಳೂರು, ಜು. 1: ನಗರದ ಗರೋಡಿ ಪ್ರದೇಶದಲ್ಲಿ ಭಾರೀ ಮಳೆಯಿಂದ ಸಂಭವಿಸಿದ ಗುಡ್ಡ ಕುಸಿತದಲ್ಲಿ ಇಬ್ಬರು ಮಕ್ಕಳು ಹಾಗೂ ಓರ್ವ ಮಹಿಳೆ ಮೃತಪಟ್ಟಿರುವ ಘಟನೆ ಅತ್ಯಂತ ದುಃಖಕರವಾಗಿದೆ ಎಂದು ಎಸ್‌ಡಿಟಿಯು ಮಂಗಳೂರು ನಗರ ಜಿಲ್ಲಾ ಉಪಾಧ್ಯಕ್ಷ ಇರ್ಫಾನ್ ಕಾನ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಮೃತರ ಕುಟುಂಬಗಳಿಗೆ ರಾಜ್ಯ ಸರ್ಕಾರ ತಕ್ಷಣವೇ ಸಮರ್ಪಕ ಪರಿಹಾರ ಘೋಷಿಸಬೇಕು. ಗಾಯಾಳುಗಳಿಗೆ ಉಚಿತ ಹಾಗೂ ಗುಣಮಟ್ಟದ ಚಿಕಿತ್ಸೆ ಒದಗಿಸುವುದರೊಂದಿಗೆ, ಮನೆ ಹಾಗೂ ಆಸ್ತಿಪಾಸ್ತಿ ಕಳೆದುಕೊಂಡ ಕುಟುಂಬಗಳಿಗೆ ಶಾಶ್ವತ…

Read More

ಕರಾವಳಿಗೆ ಮೂರು ದಿನಗಳ ರೆಡ್ ಅಲರ್ಟ್: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು, ಜು. 1: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಜುಲೈ 1ರಿಂದ 3ರವರೆಗೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡಕ್ಕೆ ರೆಡ್ ಅಲರ್ಟ್ ಘೋಷಿಸಿದೆ. ಕರಾವಳಿ ಭಾಗದಲ್ಲಿ ಅತಿಭಾರೀ ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು, ಮೀನುಗಾರರು ಹಾಗೂ ಪ್ರವಾಸಿಗರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ. ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವುದು, ಮರಗಳು ಉರುಳುವುದು, ಭೂಕುಸಿತ…

Read More

ಉಡುಪಿ ಶ್ರೀಕೃಷ್ಣ ಮಠದಲ್ಲಿ ಎಸ್‌ಐಆರ್‌ ಅಭಿಯಾನಕ್ಕೆ ಚಾಲನೆ

ಉಡುಪಿ: ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅವರು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು. ಬಳಿಕ ಪರ್ಯಾಯ ಪುತ್ತಿಗೆ ಮಠದ ಪರ್ಯಾಯ ಪೀಠಾಧಿಪತಿ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ-ಮಂತ್ರಾಕ್ಷತೆ ಸ್ವೀಕರಿಸಿದರು. ಇದೇ ಸಂದರ್ಭದಲ್ಲಿ ಎಸ್‌ಐಆರ್‌ (SIR) ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಅಭಿಯಾನವು ಯಶಸ್ವಿಯಾಗಿ ನಡೆಯಲೆಂದು ಶ್ರೀಪಾದರು ಆಶೀರ್ವಚನ ನೀಡಿದರು. ಎಸ್‌ಐಆ‌ರ್ ಅಭಿಯಾನವನ್ನು ಯಶಸ್ವಿಗೊಳಿಸಲು ಸಾರ್ವಜನಿಕರು ಹಾಗೂ ಸಂಬಂಧಿತ ಅಧಿಕಾರಿಗಳು ಸಹಕರಿಸುವಂತೆ ಮನವಿ ಮಾಡಿದರು. ಸಮಾಜದ ಪ್ರತಿಯೊಬ್ಬರೂ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಂಡು…

Read More

ದಕ್ಷಿಣ ಕನ್ನಡ ಕ್ರೀಡಾಪಟುಗಳಿಂದ ರಾಷ್ಟ್ರೀಯ ಕಿಕ್‌ಬಾಕ್ಸಿಂಗ್‌ನಲ್ಲಿ ಭರ್ಜರಿ ಸಾಧನೆ: 22 ಪದಕಗಳ ಜಯ

ಮಂಗಳೂರು: ಭಾರತ ಸರ್ಕಾರ ಹಾಗೂ ಭಾರತೀಯ ಕ್ರೀಡಾ ಪ್ರಾಧಿಕಾರ ಮಾನ್ಯತೆ ಪಡೆದ ವಾಕೋ ಇಂಡಿಯಾ ಸಬ್ ಜೂನಿಯರ್ ರಾಷ್ಟ್ರೀಯ ಕಿಕ್‌ಬಾಕ್ಸಿಂಗ್ ಚಾಂಪಿಯನ್‌ಶಿಪ್–2026ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ IKMA Institute of Karate Martial Arts ಕ್ರೀಡಾಪಟುಗಳು ಗಮನಾರ್ಹ ಸಾಧನೆ ಮಾಡಿದ್ದಾರೆ. ಕರ್ನಾಟಕ ಕಿಕ್‌ಬಾಕ್ಸಿಂಗ್ ಸ್ಪೋರ್ಟ್ಸ್ ಅಸೋಸಿಯೇಷನ್ ಅಧ್ಯಕ್ಷ ಸತ್ಯಜಿತ್ ಸುರತ್ಕಲ್ ಅವರು ತಿಳಿಸಿದಂತೆ, ಮಧ್ಯಪ್ರದೇಶದ ಇಂದೋರ್‌ನಲ್ಲಿ ಜೂನ್ 17ರಿಂದ 21ರವರೆಗೆ ನಡೆದ ಈ ಸ್ಪರ್ಧೆಯಲ್ಲಿ IKMA ಕ್ರೀಡಾಪಟುಗಳು ಒಟ್ಟು 11 ಚಿನ್ನ, 2 ಬೆಳ್ಳಿ ಹಾಗೂ 9…

Read More

ಕಂಕನಾಡಿ ಸಮೀಪ ತಡೆಗೋಡೆ ಕುಸಿತ: ಇಬ್ಬರು ಮಕ್ಕಳು ಸೇರಿ ಮೂವರು ಮೃತ್ಯು – ಶಾಸಕ ವೇದವ್ಯಾಸ ಕಾಮತ್ ಸಂತಾಪ

ನಗರದಲ್ಲಿ ಕಳೆದ ರಾತ್ರಿಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕಂಕನಾಡಿ ಸಮೀಪ ತಡೆಗೋಡೆ ಕುಸಿದು ಮನೆ ಮೇಲೆ ಬಿದ್ದು ಸಂಭವಿಸಿದ ದುರಂತದಲ್ಲಿ ಓರ್ವ ಮಹಿಳೆ ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಘಟನೆಯ ಬಗ್ಗೆ ಸ್ಥಳೀಯ ಶಾಸಕರಾದ ವೇದವ್ಯಾಸ ಕಾಮತ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು, ಮೃತರ ಕುಟುಂಬಕ್ಕೆ ತಕ್ಷಣ ಸೂಕ್ತ ಪರಿಹಾರ ಒದಗಿಸಲು ಜಿಲ್ಲಾಧಿಕಾರಿಗಳೊಂದಿಗೆ ಈಗಾಗಲೇ ಮಾತುಕತೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ. ಜೊತೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯ ವಿಚಾರಿಸಿ, ಅವರು…

Read More

ಬೀದಿಬದಿ ವ್ಯಾಪಾರಿಗಳ ಮೇಲಿನ ಧಾಳಿ ನಿಲ್ಲದಿದ್ದಲ್ಲಿ ಹೋರಾಟ ತೀವ್ರಗೊಳ್ಳಲಿದೆ – ಸಿಐಟಿಯು

ಮಂಗಳೂರು : ಮಹಾನಗರ ಪಾಲಿಕೆ ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡದೆ ಏಕಪಕ್ಷೀಯ ಕಾರ್ಯಾಚರಣೆ ನಡೆಸಿದರೆ ಹೋರಾಟ ತೀವ್ರಗೊಳಿಸಲು ಸಿಐಟಿಯು ನಿರ್ಧರಿಸಿದೆ. ಇಂದು ಬೋಳಾರದ ಎ.ಕೆ.ಜಿ ಭವನದಲ್ಲಿ ಬೀದಿಬದಿ ವ್ಯಾಪಾರಿಗಳ ಬದುಕುವ ಹಕ್ಕಿನ ರಕ್ಷಣೆಗಾಗಿ,ನಗರಪಾಲಿಕೆ ನಡೆಸುತ್ತಿರುವ ಬೀದಿ ವ್ಯಾಪಾರದ ಕಾನೂನು ಉಲ್ಲಂಘಿಸಿ ನಡೆಸುತ್ತಿರುವ ಧಾಳಿಯನ್ನು ವಿರೋಧಿಸಿ ಇಂದು ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ (ಸಿಐಟಿಯು) ನೇತೃತ್ವದಲ್ಲಿ ಜರಗಿದ ಸಂಘಟನಾ ಸಮಾವೇಶ ನಡೆಯಿತು. ಈ ಸಮಾವೇಶವನ್ನು ಉದ್ಘಾಟಿಸಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್…

Read More

ಮಂಗಳೂರು ನಾಗೂರಿ ದುರಂತ: ತಡೆಗೋಡೆ ಕುಸಿದು ಒಂದೇ ಕುಟುಂಬದ ಮೂವರು ಸಾವು; ಭಾರೀ ಮಳೆಗೆ ನಗರ ತತ್ತರ …. !

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಂಗಳವಾರ ರಾತ್ರಿಯಿಂದ ಸುರಿಯುತ್ತಿರುವ ಭಾರೀ ಮಳೆಯು ಮಂಗಳೂರು ನಗರದಲ್ಲಿ ಹೃದಯವಿದ್ರಾವಕ ದುರಂತವೊಂದಕ್ಕೆ ಮುನ್ನುಡಿ ಬರೆದಿದೆ . ನಗರದ ಕಂಕನಾಡಿ ಸಮೀಪದ ನಾಗೂರಿಯಲ್ಲಿ ತಡೆಗೋಡೆ ಕುಸಿದು ಹಳೆಯ ಹಂಚಿನ ಮನೆಯ ಮೇಲೆ ಬಿದ್ದ ಪರಿಣಾಮ ನಿದ್ರೆಯಲ್ಲಿದ್ದ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ಬುಧವಾರ ಮುಂಜಾನೆ ನಡೆದಿದೆ. ಅವಶೇಷಗಳಡಿ ಸಿಲುಕಿದ್ದ ಬಿಹಾರ ಮೂಲದ ಶಾಂತ (46), ಅನಾಮಿಕ ಚೌರಾಸಿಯಾ (8) ಹಾಗೂ ಪರಿ (4) ಅವರನ್ನು ಹೊರತೆಗೆದಾಗ ಅವರು ಮೃತಪಟ್ಟಿರುವುದು ದೃಢಪಟ್ಟಿದೆ. ದುರಂತದ…

Read More

ಕಂಕನಾಡಿ ನಾಗೂರಿ ದುರಂತ: ಇಂತಹ ಘಟನೆಗಳು ಮರುಕಳಿಸದಂತೆ ತಕ್ಷಣ ಕ್ರಮ ಕೈಗೊಳ್ಳಿ – ಶ್ರೀ ಐವನ್ ಡಿ’ಸೋಜಾ

ಮಂಗಳೂರು ನಗರದ ಕಂಕನಾಡಿ ಸಮೀಪದ ನಾಗೂರಿಯಲ್ಲಿ ಭಾರೀ ಮಳೆಯಿಂದ ತಡೆಗೋಡೆ ಕುಸಿದು ಶಾಂತಾ (46), ಅನಾಮಿಕಾ ಚೌರಾಸಿಯಾ (8) ಹಾಗೂ ಪರಿ (4) ಮೃತಪಟ್ಟಿರುವ ದುರಂತದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶ್ರೀ ಐವನ್ ಡಿ’ಸೋಜಾ ಅವರು ತಿಳಿಸಿದ್ದಾರೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಾಗೂ ಅವರ ಕುಟುಂಬದವರಿಗೆ ಈ ನೋವನ್ನು ಭರಿಸುವ ಶಕ್ತಿ ಸಿಗಲಿ ಎಂದು ಅವರು ಸಂತಾಪ ಸೂಚಿಸಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಶ್ರೀ…

Read More

ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸಿ: ಪೊಲೀಸ್ ಆಯುಕ್ತರಿಗೆ ಮಹಿಳಾ ಕಾಂಗ್ರೆಸ್ ಮನವಿ

ಮಂಗಳೂರಿನ ಕಾಟಿಪಳ್ಳದಲ್ಲಿ 17 ವರ್ಷದ ಗರ್ಭಿಣಿ ಅಪ್ರಾಪ್ತ ಬಾಲಕಿಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಿಷ್ಪಕ್ಷಪಾತ ಹಾಗೂ ಪಾರದರ್ಶಕ ತನಿಖೆಗೆ ಒತ್ತಾಯ ಕೇಳಿಬಂದಿದೆ. ಈ ಕುರಿತು ಸುರತ್ಕಲ್ ಮಹಿಳಾ ಕಾಂಗ್ರೆಸ್ ನಿಯೋಗ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರನ್ನು ಭೇಟಿ ಮಾಡಿದ ಸುರತ್ಕಲ್ ಮಹಿಳಾ ಕಾಂಗ್ರೆಸ್ ನಿಯೋಗ, ಪ್ರಕರಣದ ಸಂಪೂರ್ಣ ಸತ್ಯಾಂಶ ಹೊರಬರಲು ಯಾವುದೇ ಒತ್ತಡ ಅಥವಾ ಪ್ರಭಾವಕ್ಕೆ ಮಣಿಯದೆ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಒತ್ತಾಯಿಸಿತು. ತಪ್ಪಿತಸ್ಥ…

Read More

ಎನ್‌ಸಿಇಆರ್‌ಟಿ 7ನೇ ತರಗತಿ ಪಠ್ಯದಲ್ಲಿ ರಾಣಿ ಅಬ್ಬಕ್ಕ: ಕನ್ನಡಿಗರಿಗೆ ಹೆಮ್ಮೆಯ ಕ್ಷಣ – ಕೆಆರ್‌ಎಂಎಸ್‌ಎಸ್

ವೀರವನಿತೆಯ ಜೀವನ ರಾಷ್ಟ್ರದ ವಿದ್ಯಾರ್ಥಿಗಳಿಗೆ ತಲುಪುವುದು ಐತಿಹಾಸಿಕ ಬೆಳವಣಿಗೆ; ಎನ್‌ಸಿಇಆರ್‌ಟಿಗೆ ಸಂಘಟನೆಗಳ ಅಭಿನಂದನೆ ಬೆಂಗಳೂರು, ಜುಲೈ 1: ಕರ್ನಾಟಕದ ವೀರವನಿತೆ ಹಾಗೂ ದೇಶದ ಸ್ವಾತಂತ್ರ್ಯ ಹೋರಾಟದ ಪ್ರಥಮ ಮಹಿಳಾ ಹೋರಾಟಗಾರ್ತಿಯರಲ್ಲಿ ಒಬ್ಬರಾದ ರಾಣಿ ಅಬ್ಬಕ್ಕ ಅವರ ಜೀವನಾಧಾರಿತ ಪಾಠವನ್ನು ಎನ್‌ಸಿಇಆರ್‌ಟಿ 7ನೇ ತರಗತಿಯ ಇಂಗ್ಲಿಷ್ ಪಠ್ಯಪುಸ್ತಕದಲ್ಲಿ ಸೇರ್ಪಡೆಗೊಳಿಸಿರುವುದು ಕನ್ನಡಿಗರಿಗೆ ಹೆಮ್ಮೆಯ ಕ್ಷಣವಾಗಿದೆ ಎಂದು ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ (ಕೆಆರ್‌ಎಂಎಸ್‌ಎಸ್) ಹಾಗೂ ಅಖಿಲ ಭಾರತೀಯ ಶೈಕ್ಷಿಕ ಮಹಾಸಂಘ ತಿಳಿಸಿವೆ. ಈ ಐತಿಹಾಸಿಕ ನಿರ್ಧಾರವನ್ನು ಹೃತ್ಪೂರ್ವಕವಾಗಿ ಸ್ವಾಗತಿಸಿರುವ…

Read More
error: Content is protected !!