ಗ್ಯಾಸ್ ಸೋರಿಕೆಯಿಂದ ಮನೆಗೆ ಬೆಂಕಿ: ಗಾಯಾಳು ಲಿಂಗಪ್ಪ ಗೌಡರಿಗೆ ಶಾಸಕ ಡಾ. ವೈ. ಭರತ್ ಶೆಟ್ಟಿ ಚಿಕಿತ್ಸೆಗೆ ನೆರವು ಭರವಸೆ

ಗಂಜಿಮಠ ಬಡಗುಳಿಪಾಡಿ ಗ್ರಾಮದ ಗಣೇಶನಗರದಲ್ಲಿ ಎಲ್‌ಪಿಜಿ ಗ್ಯಾಸ್ ಸೋರಿಕೆಯಿಂದ ಮನೆಗೆ ಬೆಂಕಿ ತಗುಲಿ ಮನೆ ಸಂಪೂರ್ಣ ಹಾನಿಗೀಡಾದ ಘಟನೆ ನಡೆದಿದೆ. ಘಟನೆಯಲ್ಲಿ ಮನೆ ಯಜಮಾನ ಲಿಂಗಪ್ಪ ಗೌಡ (68) ಅವರಿಗೆ ಶೇ.60ರಷ್ಟು ಸುಟ್ಟ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಲಿಂಗಪ್ಪ ಗೌಡರ ಆರೋಗ್ಯ ವಿಚಾರಿಸಿದರು. ವೈದ್ಯರೊಂದಿಗೆ ಸಮಾಲೋಚನೆ ನಡೆಸಿ…

Read More

ಸುರತ್ಕಲ್ ಹೈವೇ ದರೋಡೆ ಪ್ರಕರಣ: ದೋಚಿದ್ದ ಕಾರು ಬಂಟ್ವಾಳದಲ್ಲಿ ಪತ್ತೆ, ಆರೋಪಿಗಳಿಗಾಗಿ ವ್ಯಾಪಕ ಶೋಧ

ಸುರತ್ಕಲ್ ಸಮೀಪದ ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿನಿಮಾ ಶೈಲಿಯಲ್ಲಿ ಚರ್ಚೆಗೆ ಗ್ರಾಸವಾದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ದರೋಡೆಕೋರರು ಕೊಂಡೊಯ್ದಿದ್ದ ಕೇರಳ ಮೂಲದ ಚಿನ್ನದ ವ್ಯಾಪಾರಿ ವಿಕಾಸ್ ಅವರಿಗೆ ಸೇರಿದ ಸ್ವಿಫ್ಟ್ ಡಿಸೈರ್ ಕಾರು ಬಂಟ್ವಾಳ ತಾಲೂಕಿನ ಕಲ್ಪನೆ ಪ್ರದೇಶದಲ್ಲಿ ಪತ್ತೆಯಾಗಿದೆ. ಜೂನ್ 29ರಂದು ನಸುಕಿನ ಜಾವ ಸುಮಾರು 3 ಗಂಟೆ ವೇಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಿನ್ನದ ವ್ಯಾಪಾರಿ ವಿಕಾಸ್ ಪ್ರಯಾಣಿಸುತ್ತಿದ್ದ ಕಾರನ್ನು ದುಷ್ಕರ್ಮಿಗಳ ತಂಡ ಅಡ್ಡಗಟ್ಟಿ, ಕುಟುಂಬಸ್ಥರಿಗೆ ಜೀವ ಬೆದರಿಕೆ ಒಡ್ಡಿ ಸುಮಾರು…

Read More

ಇಂದಿನಿಂದ ರಾಜ್ಯಾದ್ಯಂತ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಆರಂಭ

ಬೆಂಗಳೂರು: ರಾಜ್ಯಾದ್ಯಂತ ವಿಶೇಷ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆ ಮಂಗಳವಾರದಿಂದ ಆರಂಭಗೊಂಡಿದೆ. ಈ ಪ್ರಕ್ರಿಯೆಯಡಿ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಜೂನ್ 30ರಿಂದ ಜುಲೈ 29ರವರೆಗೆ ಮನೆ ಮನೆಗೆ ಭೇಟಿ ನೀಡಿ ಮತದಾರರ ವಿವರಗಳ ಪರಿಶೀಲನೆ ನಡೆಸಲಿದ್ದಾರೆ. ಭಾರತದ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ, ಈಗಾಗಲೇ ಮತದಾರರ ಗುರುತಿನ ಚೀಟಿ (EPIC) ಹೊಂದಿರುವವರು ಅಥವಾ ಆಧಾರ್ ಕಾರ್ಡ್ ಹೊಂದಿರುವವರು ಅಗತ್ಯ ವಿವರಗಳನ್ನು ಪರಿಶೀಲಿಸಿ ನಮೂನೆಗಳನ್ನು ಭರ್ತಿ ಮಾಡಬೇಕು. 2002ರ ನಂತರ…

Read More

ಸರ್ಕಾರಿ ಆಸ್ಪತ್ರೆ ಅಭಿವೃದ್ಧಿಗೆ ಆಗ್ರಹಿಸಿ ಮಾನವ ಸರಪಳಿ, ಪ್ರತಿಭಟನೆ

ಸರಕಾರದ ವೈದ್ಯಕೀಯ ಅಧಿನಿಯಮದ ಪ್ರಕಾರ ಜನಸಂಖ್ಯೆಗೆ ಅನುಗುಣವಾಗಿ ಇರಬೇಕಾದ ಆರೋಗ್ಯ ಕೇಂದ್ರ, ಆಸ್ಪತ್ರೆಗಳು ಉಳ್ಳಾಲ ತಾಲೂಕಿನಲ್ಲೇ ಇಲ್ಲ‌. ಇರುವಂತಹ ಸರಕಾರಿ ಆಸ್ಪತ್ರೆಗಳೆಲ್ಲದರಲ್ಲಿ ವೈದ್ಯರು, ನುರಿತ ಸಿಬ್ಬಂದಿಗಳ ಸಹಿತ ಮೂಲಭೂತ ಸೌಕರ್ಯಗಳಿಂದ ವಂಚನೆಗೊಳಗಾಗಿದೆ. ಆರೋಗ್ಯ ಸಚಿವರಿಗೆ ತನ್ನ ಕ್ಷೇತ್ರವನ್ನೇ ರಾಜ್ಯಕ್ಕೆ ಮಾದರಿ ಮಾಡುವ ಇಚ್ಚಾಸಕ್ತಿಯೇ ಇಲ್ಲದೆ ಇರುವಾಗ ಇನ್ನು ಉಳಿದ ಜಿಲ್ಲೆಯ ಸರಕಾರಿ ಆಸ್ಪತ್ರೆಗಳು ಅಭಿವೃದ್ದಿಗೊಳ್ಳಲು ಸಾಧ್ಯವೇ ? ಮೊದಲು ಆರೋಗ್ಯ ಮಂತ್ರಿಗಳು ಸರಕಾರಿ ಆಸ್ಪತ್ರೆ ಬಲಪಡಿಸುವ ಕೆಲಸವನ್ನು ತನ್ನ ಸ್ವಕ್ಷೇತ್ರದಿಂದಲೇ ಪ್ರಾರಂಭಿಸಲಿ ಎಂದು ಸಿಪಿಐಎಂ ಜಿಲ್ಲಾ ಸಮಿತಿ…

Read More

ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ವಿಶೇಷ ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಗೆ ಚಾಲನೆ

ಮಂಗಳೂರು:ರಾಜ್ಯಾದ್ಯಂತ ವಿಶೇಷ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬುಧವಾರ ಆರಂಭಗೊಂಡಿದ್ದು, ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ವೇದವ್ಯಾಸ ಕಾಮತ್ ಅಧಿಕಾರಿಗಳ ಸಮ್ಮುಖದಲ್ಲಿ ಪ್ರಕ್ರಿಯೆಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಮುಂದಿನ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆ ಮನೆಗೆ ಭೇಟಿ ನೀಡಿ ಅಗತ್ಯ ನಮೂನೆಗಳನ್ನು ವಿತರಿಸಲಿದ್ದಾರೆ. ಸಾರ್ವಜನಿಕರು ಅಗತ್ಯ ದಾಖಲೆಗಳೊಂದಿಗೆ ನಮೂನೆಗಳನ್ನು ಸರಿಯಾಗಿ ಭರ್ತಿ ಮಾಡಿ ಸಲ್ಲಿಸುವ ಮೂಲಕ ಪರಿಷ್ಕೃತ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು…

Read More

400 ಕೆ.ವಿ. ವಿದ್ಯುತ್ ಯೋಜನೆಯಿಂದ ಭೂಮಿ ಕಳೆದುಕೊಂಡ ರೈತರಿಗೆ ಶೀಘ್ರ ಪರಿಹಾರ ನೀಡಿ: ಅಧಿಕಾರಿಗಳಿಗೆ ಶಾಸಕ ರಾಜೇಶ್ ನಾಯ್ಕ್ ಸೂಚನೆ

ಉಡುಪಿಯಿಂದ ಕಾಸರಗೋಡು ಜಿಲ್ಲೆಗೆ ಸಂಪರ್ಕ ಕಲ್ಪಿಸುವ 400 ಕೆ.ವಿ. ವಿದ್ಯುತ್ ಪ್ರಸರಣ ಮಾರ್ಗ ಯೋಜನೆಯಿಂದ ಕೃಷಿ ಭೂಮಿಯನ್ನು ಕಳೆದುಕೊಂಡು ಪರಿಹಾರಕ್ಕಾಗಿ ಕಾಯುತ್ತಿರುವ ರೈತರ ಸಮಸ್ಯೆಗಳ ಕುರಿತು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಅಧಿಕಾರಿಗಳೊಂದಿಗೆ ವಿಶೇಷ ಸಭೆ ನಡೆಸಿ, ಬಾಕಿ ಉಳಿದಿರುವ ಪರಿಹಾರವನ್ನು ತ್ವರಿತವಾಗಿ ವಿತರಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಉಡುಪಿ–ಕಾಸರಗೋಡು 400 ಕೆ.ವಿ. ವಿದ್ಯುತ್ ಪ್ರಸರಣ ಮಾರ್ಗವು ಬಂಟ್ವಾಳ ತಾಲೂಕಿನ ಹಲವು ಗ್ರಾಮಗಳ ಮೂಲಕ ಹಾದುಹೋಗಿದ್ದು, ಯೋಜನೆಗಾಗಿ ಅನೇಕ ರೈತರ ಕೃಷಿ…

Read More

ಬಂಟ್ವಾಳದಲ್ಲಿ ಮತದಾರರ ಪಟ್ಟಿಯ ಸಮಗ್ರ ಪರಿಶೀಲನೆಗೆ ಚಾಲನೆ

ಬಂಟ್ವಾಳ, ಜೂನ್ 30: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯ ಸಮಗ್ರ ಪರಿಶೀಲನೆ (Special Intensive Revision) ಕಾರ್ಯಕ್ರಮಕ್ಕೆ ಬಂಟ್ವಾಳ ತಾಲೂಕಿನಲ್ಲಿ ಮಂಗಳವಾರ ಚಾಲನೆ ನೀಡಲಾಯಿತು. ಬಂಟ್ವಾಳ ವಿಧಾನಸಭಾ ಕ್ಷೇತ್ರದ ಭಾಗ ಸಂಖ್ಯೆ–130ರ ಬಿ. ಮೂಡ ಗ್ರಾಮದ ಬಸ್ತಿಪಡ್ಪು ಚೆನ್ನಮ್ಮ ಕುಟೀರ ನಿವಾಸದಲ್ಲಿ ವಾಸವಾಗಿರುವ ಮಾಜಿ ಕೇಂದ್ರ ಹಣಕಾಸು ಸಚಿವ ಬಿ. ಜನಾರ್ದನ ಪೂಜಾರಿ ಅವರ ನಿವಾಸದಲ್ಲಿ ಮೊದಲ ಎನ್ಯೂಮರೇಷನ್ (Enumeration) ಫಾರ್ಮ್ ಅನ್ನು ವಿತರಿಸುವ ಮೂಲಕ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ…

Read More

ವಿವಾಹಿತೆಯೊಂದಿಗೆ ಯುವಕ ಪರಾರಿ ಆರೋಪ: ಮನೆ ಧ್ವಂಸ, ದರೋಡೆ ಆರೋಪ

ಬೆಳಗಾವಿ, ಜೂನ್ 30: ವಿವಾಹಿತ ಮಹಿಳೆಯೊಬ್ಬರು ಯುವಕನೊಂದಿಗೆ ಪರಾರಿಯಾಗಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಗುಂಪೊಂದು ಯುವಕನ ಮನೆಯ ಮೇಲೆ ದಾಳಿ ನಡೆಸಿ ಮನೆ ಧ್ವಂಸಗೊಳಿಸಿರುವ ಘಟನೆ ಬೆಳಗಾವಿ ತಾಲೂಕಿನ ಭರಮ್ಯಾನಟ್ಟಿ ಗ್ರಾಮದಲ್ಲಿ ನಡೆದಿದೆ. ಘಟನೆ ಬಳಿಕ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಸಂತ್ರಸ್ತ ಕುಟುಂಬವು ಬೆಳಗಾವಿ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದೆ. ಮಾಹಿತಿಯ ಪ್ರಕಾರ, ಗ್ರಾಮದ ನಾಗವ್ವ ಎಂಬ ವಿವಾಹಿತೆ ಕಳೆದ ಎರಡು ದಿನಗಳ ಹಿಂದೆ ಯಲ್ಲಪ್ಪ ನಾಯಕ ಎಂಬ ಯುವಕನೊಂದಿಗೆ ಪರಾರಿಯಾಗಿರುವುದಾಗಿ ಹೇಳಲಾಗಿದೆ….

Read More

ಜುಲೈ 3ರಂದು ರಾಜ್ಯಾದ್ಯಂತ ತೆರೆಗೆ ‘ಅಪರಾಧಿ ನಾನಲ್ಲ’ಅರ್ಜುನ್ ಕಾಪಿಕಾಡ್, ಪ್ರಮೋದ್ ಶೆಟ್ಟಿ, ಜ್ಯೋತಿ ರೈ ಪ್ರಮುಖ ಪಾತ್ರಗಳಲ್ಲಿ ಅಭಿನಯ

ಮಂಗಳೂರು, ಜೂನ್ 30: ಎಸ್‌ಎಲ್‌ವಿ ಕಲರ್ಸ್ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ ‘ಅಪರಾಧಿ ನಾನಲ್ಲ’ ಕನ್ನಡ ಚಲನಚಿತ್ರವು ಜುಲೈ 3ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಯಶಂತ್ ಕಲ್ಲಡ್ಕ ನಿರ್ದೇಶಿಸಿರುವ ಈ ಚಿತ್ರದಲ್ಲಿ ಆಕ್ಷನ್ ಕಿಂಗ್ ಅರ್ಜುನ್ ಕಾಪಿಕಾಡ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದು, ವಿಭಿನ್ನ ಕಥಾಹಂದರದ ಮೂಲಕ ಈಗಾಗಲೇ ಟ್ರೈಲರ್‌ನಿಂದ ಸಿನಿಪ್ರಿಯರ ಗಮನ ಸೆಳೆದಿದೆ. ಚಿತ್ರದಲ್ಲಿ ನಾಯಕಿಯರಾಗಿ ಅಮೃತ ಮೂರ್ತಿ ಹಾಗೂ ಶ್ರೀಶಾ ಸಾಮಾನಿ ಅಭಿನಯಿಸಿದ್ದಾರೆ. ಕನ್ನಡ ಮತ್ತು ತೆಲುಗು ಚಿತ್ರರಂಗದ ನಟಿ ಜ್ಯೋತಿ ರೈ, ನಟ ಪ್ರಮೋದ್ ಶೆಟ್ಟಿ, ದಿನೇಶ್…

Read More

ಜೆಡಿಎಸ್ ಜಿಲ್ಲಾ ಮಹಿಳಾ ಘಟಕ ಪದಗ್ರಹಣ ಸಮಾರಂಭ.ಮಹಿಳಾ ಸಂಘಟನೆ ಮತ್ತಷ್ಟು ಬಲಪಡಿಸಲು ಕರೆ

ಮಂಗಳೂರು, ಜೂನ್ 30: ಜನತಾದಳ (ಜಾತ್ಯತೀತ) ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಘಟಕದ ವತಿಯಿಂದ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಸಂಘಟನಾ ಸಭೆ ಮಂಗಳವಾರ ನಗರದ ವುಡ್‌ಲ್ಯಾಂಡ್ಸ್ ಹೋಟೆಲ್‌ನಲ್ಲಿ ನಡೆಯಿತು.ಶಾರದಾ ಶೆಟ್ಟಿ ಅವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಜ್ಯೋತಿ ಜೈನ್ ಅವರು ಸಭಿಕರನ್ನು ಸ್ವಾಗತಿಸಿದರು. ಪ್ರಸ್ತಾವಿಕವಾಗಿ ಮಾತನಾಡಿದ ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ ಯೋಗಿಶ್ ಶೆಟ್ಟಿ ಜಪ್ಪು, ಮಹಿಳಾ ಸಂಘಟನೆಯನ್ನು ಗ್ರಾಮ ಮಟ್ಟದಿಂದ ಜಿಲ್ಲಾ ಮಟ್ಟದವರೆಗೆ…

Read More
error: Content is protected !!