ಕರಾವಳಿಗೆ ಮುಂಗಾರು ಶಾಕ್..! ದಕ್ಷಿಣ ಕನ್ನಡದಲ್ಲಿ ಜೂನ್‌ನಲ್ಲೇ 50%ಕ್ಕೂ ಅಧಿಕ ಮಳೆ ಕೊರತೆ

ಮಂಗಳೂರು: ರಾಜ್ಯದಲ್ಲೇ ಅತ್ಯಧಿಕ ಮಳೆಯಾಗುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ ಮುಂಗಾರು ಕೈಕೊಟ್ಟಿದ್ದು, ಜೂನ್ ತಿಂಗಳಲ್ಲೇ ಶೇ.50ಕ್ಕೂ ಅಧಿಕ ಮಳೆ ಕೊರತೆ ದಾಖಲಾಗಿದೆ. ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗದಿರುವುದು, ಕೃಷಿ ಚಟುವಟಿಕೆಗಳು ಕುಂಠಿತವಾಗಿರುವುದು ಹಾಗೂ ಮೀನುಗಾರಿಕೆ ಮೇಲೂ ಪ್ರತಿಕೂಲ ಪರಿಣಾಮ ಬೀರುವ ಆತಂಕ ಎದುರಾಗಿದೆ. ಜೂನ್ 28ರವರೆಗೆ ಕಳೆದ ವರ್ಷ 1,080.5 ಮಿ.ಮೀ. ಮಳೆಯಾಗಿದ್ದರೆ, ಈ ಬಾರಿ ಕೇವಲ 494.8 ಮಿ.ಮೀ. ಮಳೆಯಷ್ಟೇ ದಾಖಲಾಗಿದೆ. ಬಂಟ್ವಾಳದಲ್ಲಿ ನದಿಯ ನೀರಿನ ಮಟ್ಟ 4.47 ಮೀಟರ್ ಇದ್ದು, ಇದು…

Read More

ಐವನ್ ಡಿ’ಸೋಜಾ ನಿವಾಸದಲ್ಲಿ ಎಸ್‌ಐಆರ್ ಎಣಿಕೆ ಪ್ರಕ್ರಿಯೆಗೆ ಚಾಲನೆ

ಮಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಂಗವಾಗಿ ಮನೆ-ಮನೆಗೆ ತೆರಳಿ ನಡೆಸಲಾಗುತ್ತಿರುವ ಎಣಿಕೆ ಹಾಗೂ ನಮೂನೆ ಭರ್ತಿ ಪ್ರಕ್ರಿಯೆಗೆ ಕೆಪಿಸಿಸಿ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ಅವರ ಮಂಗಳೂರಿನ ನಿವಾಸದಲ್ಲಿ ಸೋಮವಾರ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಅವರು ಐವನ್ ಡಿ’ಸೋಜಾ ಹಾಗೂ ಅವರ ಕುಟುಂಬ ಸದಸ್ಯರ ಎಣಿಕೆ ನಮೂನೆಗಳನ್ನು ಭರ್ತಿ ಮಾಡುವ ಮೂಲಕ ಎಸ್‌ಐಆರ್ ಎಣಿಕೆ ಪ್ರಕ್ರಿಯೆಗೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಬ್ಲಾಕ್…

Read More

ವಿಶೇಷ ಚೇತನರಿಗೆ ಕೃತಕ ಕಾಲು ವಿತರಣೆ: ಆತ್ಮವಿಶ್ವಾಸದ ಬದುಕಿಗೆ ಶಾಸಕ ರಾಜೇಶ್ ನಾಯ್ಕ್ ಅವರ ನೆರವು

ಬಂಟ್ವಾಳ: ವಿಶೇಷ ಚೇತನರ ಬದುಕಿನಲ್ಲಿ ಹೊಸ ಭರವಸೆ ಮೂಡಿಸುವ ನಿಟ್ಟಿನಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಮ್ಮ ಬಿ.ಸಿ.ರೋಡ್ ಕಚೇರಿಯಲ್ಲಿ ಶಂಭೂರು ನಿವಾಸಿ ತನುಷ್ ಕುಲಾಲ್ ಹಾಗೂ ಮಹಮ್ಮದ್ ಶರೀಫ್ (ಗೂಡಿನ ಬಳಿ) ಅವರಿಗೆ ಕೃತಕ ಕಾಲುಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ರಾಜೇಶ್ ನಾಯ್ಕ್ ಅವರು, ವಿಶೇಷ ಚೇತನರಿಗೆ ಅಗತ್ಯ ಸೌಲಭ್ಯಗಳು ಹಾಗೂ ಸಹಾಯೋಪಕರಣಗಳನ್ನು ಒದಗಿಸುವುದು ಸಮಾಜದ ಜವಾಬ್ದಾರಿಯಾಗಿದೆ. ಕೃತಕ ಕಾಲಿನ ಮೂಲಕ ಅವರು ಹೆಚ್ಚು ಆತ್ಮವಿಶ್ವಾಸದಿಂದ ಸ್ವಾವಲಂಬಿ ಜೀವನ ನಡೆಸಲು…

Read More

ಬಿ.ಸಿ.ರೋಡ್ ರಿಕ್ಷಾ ನಿಲ್ದಾಣ ಸಮಸ್ಯೆ: ರಮಾನಾಥ ರೈಗೆ ಚಾಲಕರ ಮನವಿ

ಬಂಟ್ವಾಳ: ಬಿ.ಸಿ.ರೋಡ್‌ನ ರಿಕ್ಷಾ ನಿಲ್ದಾಣ ಸಮಸ್ಯೆಗೆ ಸಂಬಂಧಿಸಿದಂತೆ ರಿಕ್ಷಾ ಚಾಲಕರ ನಿಯೋಗವು ಮಾಜಿ ಸಚಿವ ಬಿ. ರಮಾನಾಥ ರೈ ಅವರನ್ನು ಭೇಟಿ ಮಾಡಿ ತಮ್ಮ ಅಹವಾಲು ಸಲ್ಲಿಸಿತು. ಈ ಸಂದರ್ಭದಲ್ಲಿ ರಿಕ್ಷಾ ಚಾಲಕರು ನಿಲ್ದಾಣದ ಕೊರತೆಯಿಂದ ಎದುರಾಗುತ್ತಿರುವ ತೊಂದರೆಗಳು, ಪ್ರಯಾಣಿಕರಿಗೆ ಆಗುತ್ತಿರುವ ಅಸೌಕರ್ಯ ಹಾಗೂ ತಮ್ಮ ಜೀವನೋಪಾಯದ ಮೇಲಿನ ಪರಿಣಾಮದ ಕುರಿತು ವಿವರಿಸಿದರು. ಚಾಲಕರ ಮನವಿಯನ್ನು ಆಲಿಸಿದ ರಮಾನಾಥ ರೈ, ಸಮಸ್ಯೆಯ ಗಂಭೀರತೆಯನ್ನು ಮನಗಂಡು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸ್ಥಳೀಯ ಆಡಳಿತದೊಂದಿಗೆ ಚರ್ಚಿಸಿ ಶೀಘ್ರದಲ್ಲೇ ಸೂಕ್ತ ಪರಿಹಾರ…

Read More

ಡಾ. ಸದಾಶಿವ ಶೆಟ್ಟಿ ಜನ್ಮದಿನ: 150 ಬಡ ಕುಟುಂಬಗಳಿಗೆ ವಸ್ತ್ರದಾನ

ಮಂಗಳೂರು: ಶ್ರೀ ಸದಾಶಿವ ಶೆಟ್ಟಿ ಅಭಿಮಾನಿ ಸೇವಾ ಬಳಗದ ಬಾಯಾರು–ಬೆರಿಪದವು ಘಟಕದ ವತಿಯಿಂದ ಸಮಾಜಸೇವಕ ಡಾ. ಸದಾಶಿವ ಶೆಟ್ಟಿ ಕುಳೂರು ಕನ್ಯಾನ ಅವರ ಜನ್ಮದಿನದ ಅಂಗವಾಗಿ ಸುಮಾರು 150 ಬಡ ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ವಸ್ತ್ರದಾನ ಕಾರ್ಯಕ್ರಮ ನಡೆಯಿತು. ಬೆರಿಪದವು ವಿದ್ಯಾರಣ್ಯ ಶಾಲೆಯಲ್ಲಿ ನಡೆದ ಕಾರ್ಯಕ್ರಮವನ್ನು ಸೇವಾ ಬಳಗದ ಕೇಂದ್ರ ಸಮಿತಿಯ ಉಪಾಧ್ಯಕ್ಷ ಹಾಗೂ ಡಾ. ಸದಾಶಿವ ಶೆಟ್ಟಿಯವರ ಸಹೋದರ ಚಂದ್ರಹಾಸ ಶೆಟ್ಟಿ ಕುಳೂರು ಕನ್ಯಾನ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬಡವರು ಹಾಗೂ…

Read More

ಮೂರು ಸರ್ಕಾರಿ ಕಾಲೇಜುಗಳಲ್ಲಿ ಕಲಾ ವಿಭಾಗದ ಕೆಲವು ವಿಷಯ ಸಂಯೋಜನೆ ಸ್ಥಗಿತ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಮೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಲಾ ವಿಭಾಗದ ಕೆಲವು ವಿಷಯ ಸಂಯೋಜನೆಗಳನ್ನು 2026-27ನೇ ಶೈಕ್ಷಣಿಕ ವರ್ಷದಿಂದ ಸ್ಥಗಿತಗೊಳಿಸಲು ಶೈಕ್ಷಣಿಕ ಮಂಡಳಿ ಅನುಮೋದನೆ ನೀಡಿದೆ. ಸೋಮವಾರ ನಡೆದ ಶೈಕ್ಷಣಿಕ ಮಂಡಳಿ ಸಭೆಯಲ್ಲಿ ಕುಲಪತಿ ಪ್ರೊ. ಪಿ.ಎಲ್. ಧರ್ಮ ಈ ವಿಷಯ ತಿಳಿಸಿದರು. ಕಾವೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ–ಇತಿಹಾಸ–ಸಮಾಜಶಾಸ್ತ್ರ ಹಾಗೂ ಇತಿಹಾಸ–ಪತ್ರಿಕೋದ್ಯಮ–ಕನ್ನಡ, ಪುಂಜಾಲಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ–ಕನ್ನಡ–ಸಮಾಜಶಾಸ್ತ್ರ ಮತ್ತು ಉಡುಪಿಯ…

Read More

ಕೊಟ್ಟಾರದಲ್ಲಿ ಖಾಸಗಿ ಬಸ್‌ಗೆ ಬ್ರೇಕ್ ವೈಫಲ್ಯ: ಭಾರೀ ಅನಾಹುತ ತಪ್ಪಿಸಿದ ಚಾಲಕ

ಮಂಗಳೂರು: ನಗರದ ಜನನಿಬಿಡ ಕೊಟ್ಟಾರ ಪ್ರದೇಶದಲ್ಲಿ ಖಾಸಗಿ ಬಸ್‌ಗೆ ಬ್ರೇಕ್ ವೈಫಲ್ಯ ಉಂಟಾದ ಘಟನೆ ನಡೆದಿದೆ. ಬ್ರೇಕ್ ಕೈಕೊಟ್ಟ ಹಿನ್ನೆಲೆಯಲ್ಲಿ ಸಂಭವಿಸಬಹುದಾದ ಅನಾಹುತವನ್ನು ತಪ್ಪಿಸಲು ಚಾಲಕ ಸಮಯಪ್ರಜ್ಞೆ ಮೆರೆದು ಬಸ್‌ನ್ನು ಗೋಡೆಗೆ ಡಿಕ್ಕಿ ಹೊಡೆಸಿ ನಿಲ್ಲಿಸಿದ್ದಾರೆ. ಇದರಿಂದ ಸಂಭವಿಸಬಹುದಾಗಿದ್ದ ಭಾರೀ ದುರಂತ ತಪ್ಪಿದೆ. ಘಟನೆಯಲ್ಲಿ ಚಾಲಕ ಸೇರಿದಂತೆ ಬಸ್‌ನಲ್ಲಿದ್ದ ಎಲ್ಲಾ ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೆ ಸುರಕ್ಷಿತವಾಗಿ ಪಾರಾಗಿದ್ದಾರೆ.

Read More

ದೇರಳಕಟ್ಟೆಯಲ್ಲಿ ಎಂಸಿಸಿ ಬ್ಯಾಂಕ್ 22ನೇ ಶಾಖೆ ಉದ್ಘಾಟನೆ

ಮಂಗಳೂರು, ಜೂ. 28: ಗ್ರಾಹಕರ ಸರ್ವತೋಮುಖ ಅಭಿವೃದ್ಧಿ ಹಾಗೂ ಸಮುದಾಯದ ಪ್ರಗತಿಯೇ ಎಂಸಿಸಿ ಬ್ಯಾಂಕ್‌ನ ಮುಖ್ಯ ಧ್ಯೇಯವಾಗಿದ್ದು, ಇದೇ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಬ್ಯಾಂಕ್ ಗ್ರಾಹಕರ ವಿಶ್ವಾಸ ಗಳಿಸಿದೆ ಎಂದು ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಹೇಳಿದರು. ದೇರಳಕಟ್ಟೆಯ ಫಾದರ್ ಮುಲ್ಲರ್ ಕಟ್ಟಡ ಸಂಕೀರ್ಣದಲ್ಲಿ ಎಂಸಿಸಿ ಬ್ಯಾಂಕ್‌ನ 22ನೇ ಶಾಖೆ ಹಾಗೂ 16ನೇ ಎಟಿಎಂ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 114 ವರ್ಷಗಳ ಸೇವೆ ಪೂರ್ಣಗೊಳಿಸಿರುವ ಎಂಸಿಸಿ ಬ್ಯಾಂಕ್, 2025-26ನೇ ಹಣಕಾಸು ವರ್ಷದಲ್ಲಿ 22.89 ಶೇಕಡಾ…

Read More

ವಿಶೇಷ ಸಹಕಾರ ಸಪ್ತಾಹಕ್ಕೆ ಮಂಗಳೂರಿನಲ್ಲಿ ಚಾಲನೆ: ಸಹಕಾರಿ ಕ್ಷೇತ್ರ ಬಲಪಡಿಸಲು ಕರೆ

ಮಂಗಳೂರು, ಜೂನ್ 29: ಕೇಂದ್ರ ಸಹಕಾರ ಸಚಿವಾಲಯ ಸ್ಥಾಪನೆಯ ಐದು ವರ್ಷಗಳ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ, ಎಸ್‌ಸಿಡಿಸಿಸಿ ಬ್ಯಾಂಕ್, ಜಿಲ್ಲಾ ಸಹಕಾರಿ ಯೂನಿಯನ್ ಹಾಗೂ ಸಹಕಾರ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ವಿಶೇಷ ಸಹಕಾರ ಸಪ್ತಾಹಕ್ಕೆ ಸೋಮವಾರ ಎಸ್‌ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಮಾತನಾಡಿ, ರಾಜ್ಯದಲ್ಲಿ 47 ಸಾವಿರಕ್ಕೂ ಹೆಚ್ಚು ಸಹಕಾರಿ ಸಂಘಗಳು ಕಾರ್ಯನಿರ್ವಹಿಸುತ್ತಿದ್ದು,…

Read More

ರಾಜ್ಯಸಭಾ ಸದಸ್ಯರಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಮಾಣವಚನ ಸ್ವೀಕಾರ

ನವದೆಹಲಿ, ಜೂನ್ 29: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭಾ ಸದಸ್ಯರಾಗಿ ನೂತನವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಸೋಮವಾರ ನವದೆಹಲಿಯ ಉಪರಾಷ್ಟ್ರಪತಿ ಕಚೇರಿಯಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಲೋಕಸಭಾ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ, ಮಲ್ಲಿಕಾರ್ಜುನ ಖರ್ಗೆ ಅವರ ಪತ್ನಿ ರಾಧಾಬಾಯಿ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಸೇರಿದಂತೆ ಪಕ್ಷದ…

Read More
error: Content is protected !!