ಮಂಗಳೂರು: ಫೇಸ್‌ಬುಕ್‌ನಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ಆರೋಪ – ವ್ಯಕ್ತಿ ಬಂಧನ
ಮಂಗಳೂರು: ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನ ‘ಸನಾತನಿ ಸಿಂಹ’ ಎಂಬ ಪೇಜ್ ಮೂಲಕ ಕೋಮು ಸೌಹಾರ್ದತೆಗೆ ಧಕ್ಕೆಯಾಗುವಂತಹ ಆಕ್ಷೇಪಾರ್ಹ ಕಾಮೆಂಟ್‌ಗಳನ್ನು ಪ್ರಕಟಿಸಿದ ಆರೋಪದಡಿ ವ್ಯಕ್ತಿಯೊಬ್ಬನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ 2025ರ ಸೆಪ್ಟೆಂಬರ್ 18ರಂದು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ವಿಟ್ಲ ಠಾಣೆ ಪೊಲೀಸರು, ಆರೋಪಿಯಾದ ಬೆಂಗಳೂರಿನ ವಿದ್ಯಮಾನ್ಯನಗರ ನಿವಾಸಿ ಆನಂದ್ ಎ. ಅವರನ್ನು ಜೂನ್ 27ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ತನಿಖೆ ವೇಳೆ, ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ವಿಷಯಗಳನ್ನು ಪ್ರಸಾರ…
