ದ್ವತ್ ಪಿಯು ಕಾಲೇಜಿನಲ್ಲಿ ಸಿಎ ಸ್ಪರ್ಧಾತ್ಮಕ ಪರೀಕ್ಷೆ ಕುರಿತು ಮಾಹಿತಿ ಕಾರ್ಯಕ್ರಮ
ಬೆಳ್ತಂಗಡಿ, ಜೂ. 26: ಪರಿಶ್ರಮ, ದೃಢ ಸಂಕಲ್ಪ ಹಾಗೂ ನಿರಂತರ ಅಭ್ಯಾಸದ ಮೂಲಕ ಯಾವುದೇ ಗುರಿಯನ್ನು ಸಾಧಿಸಬಹುದು. ಸಿಎ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು ಗಳಿಸಲು ನಿಖರವಾದ ಅಧ್ಯಯನ, ಸಮರ್ಪಕ ಮಾರ್ಗದರ್ಶನ ಹಾಗೂ ಸಂಶೋಧನಾತ್ಮಕ ಕಲಿಕೆಯ ಮನೋಭಾವ ಅಗತ್ಯ ಎಂದು ಯುವ ಲೆಕ್ಕಪರಿಶೋಧಕಿ (ಸಿಎ) ನಿರೀಕ್ಷಾ ನಾವರ ಹೇಳಿದರು. ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವತಿಯಿಂದ ಜೂನ್ 25ರಂದು ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದ ಸಿಎ ಸ್ಪರ್ಧಾತ್ಮಕ ಪರೀಕ್ಷೆ ಕುರಿತು ಮಾಹಿತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು….
