₹25 ಕೋಟಿ ವಿಶೇಷ ಅನುದಾನ ಹಂಚಿಕೆಯಲ್ಲಿ ತಾರತಮ್ಯ: ಶಾಸಕಿ ವಿರುದ್ಧ ಕಾಂಗ್ರೆಸ್ ಆರೋಪ

ಕಡಬ, ಜೂನ್ 27:ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ₹25 ಕೋಟಿ ವಿಶೇಷ ಅಭಿವೃದ್ಧಿ ಅನುದಾನದ ಹಂಚಿಕೆಯಲ್ಲಿ ತಾರತಮ್ಯ ಎಸಗಿ ಸಾರ್ವಜನಿಕ ಹಣ ದುರ್ಬಳಕೆ ಮಾಡಲಾಗಿದೆ ಎಂದು ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಭಿಲಾಷ್ ಪಿ.ಕೆ. ಆರೋಪಿಸಿದರು. ಶುಕ್ರವಾರ ಕಡಬದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅನುದಾನ ಹಂಚಿಕೆಯಲ್ಲಿ ಪಾರದರ್ಶಕತೆ ಇಲ್ಲದೆ ಬಿಜೆಪಿ ಮುಖಂಡರು, ಬಿಜೆಪಿ ಬೆಂಬಲಿತ ವ್ಯಕ್ತಿಗಳು ಹಾಗೂ ಸಂಘ-ಸಂಸ್ಥೆಗಳ ಶಿಫಾರಸ್ಸಿನ ಮೇರೆಗೆ ಕಾಮಗಾರಿಗಳಿಗೆ ಅನುದಾನ ಮಂಜೂರು ಮಾಡಲಾಗಿದೆ. ಅಗತ್ಯವಿರುವ ಹಲವು ಅಭಿವೃದ್ಧಿ…

Read More

ಲೋಬೋ ಫೌಂಡೇಶನ್ ನಿಂದ ಒಲವಿನಹಳ್ಳಿ ಆಶ್ರಮಕ್ಕೆ 1ಲಕ್ಷದ ದೇಣಿಗೆ

ಉಳ್ಳಾಲ :ಜಾನ್ ವಿಲ್ಸನ್ ಲೋಬೋ ನೇತೃತ್ವದಲ್ಲಿ ನಿರ್ಮಿಸುತ್ತಿರುವ ವೇಳ್ ಘಡಿ ಕೊಂಕಣಿ ಸಿನಿಮಾದ ಕಲಾವಿದರು ಹಾಗೂ ತಂತ್ರಜ್ಞರ ತಂಡ ಕಿನ್ಯ ಗ್ರಾಮದ ಒಳವಿನಹಳ್ಳಿ ಅಶ್ರಮಕ್ಕೆ ಭೇಟಿನಿಡಿದರು.ವೇಳ್ ಘಡಿ ಕೊಂಕಣಿ ಸಿನಿಮಾ ತಂಡದ ವತಿಯಿಂದ ಅಶ್ರಮದ ನಿವಾಸಿಗಳಿಗೆ ಅನ್ನದಾನ ಹಾಗೂ ಲೋಬೋ ಫೌಂಡೇಶನ್ ವತಿಯಿಂದ ಒಲವಿನಹಳ್ಳಿ ಆಶ್ರಮದ‌ ಕಟ್ಟಡ ನಿರ್ಮಾಣಕ್ಕೆ ಒಂದು ಲಕ್ಷದ ದೇಣಿಗೆಯನ್ನು ನೀಡಿದರು.ಆಶ್ರಮದ ಆಡಳಿತಾಧಿಕಾರಿ ಸಿಸ್ಟರ್ ಐಲೀನ್ ಮಾಥಿಯಾಸ್ ದೇಣಿಗೆಯನ್ನು ಸ್ವೀಕರಿಸಿದ ‌ ಮಾತನಾಡಿ ಜಾನ್ ವಿಲ್ಸನ್ ಲೋಬೋ ರಂತಹ ಸಮಾಜ ಸೇವಕರೇ ನಮ್ಮ ಆಶ್ರಮದ…

Read More

ಉಡುಪಿ ಜಿಲ್ಲೆಯಲ್ಲಿ ಮೂವರು ರೌಡಿ ಶೀಟರ್‌ಗಳಿಗೆ ಗಡಿಪಾರು ಆದೇಶ

ಕೊಲೆ, ಕೊಲೆ ಯತ್ನ ಸೇರಿದಂತೆ 30 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪ; ಕಳೆದ ವರ್ಷ 14 ಮಂದಿಯ ವಿರುದ್ಧ ಗಡಿಪಾರು ಕ್ರಮ ಉಡುಪಿ, ಜೂನ್ 27:ಜಿಲ್ಲೆಯ ಮೂವರು ರೌಡಿ ಶೀಟರ್‌ಗಳ ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರು ಗಡಿಪಾರು ಆದೇಶ ಹೊರಡಿಸಿದ್ದಾರೆ. ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಮೊಹಮ್ಮದ್ ದಾನೀಶ್ ಮದನಿ (23), ಕರಾಣಿ ಮುಸೀನ್ (44) ಹಾಗೂ ಶಿರ್ವ ಪೊಲೀಸ್ ಠಾಣೆ ವ್ಯಾಪ್ತಿಯ ಇಲಿಯಾಸ್ (36) ಅವರಿಗೆ ಜೂನ್ 24ರಂದು ಗಡಿಪಾರು…

Read More

ರಾಮಮಂದಿರ ಅವ್ಯವಹಾರ ಸತ್ಯವಾದರೆ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ: ಪೇಜಾವರ ಶ್ರೀ

ಉಡುಪಿ: ದೇಶ-ವಿದೇಶದ ಕೋಟ್ಯಂತರ ಭಕ್ತರ ಆರಾಧನಾ ಕೇಂದ್ರವಾದ ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಅವ್ಯವಹಾರದಂತಹ ಗಂಭೀರ ಆರೋಪಗಳು ಕೇಳಿಬಂದಿರುವುದು ಅತ್ಯಂತ ದುರದೃಷ್ಟಕರ. ಆರೋಪಗಳು ಸತ್ಯವಾಗಿದ್ದರೆ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ರಾಮಮಂದಿರ ತೀರ್ಥಕ್ಷೇತ್ರ ಟ್ರಸ್ಟ್ ಸದಸ್ಯ ಹಾಗೂ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಒತ್ತಾಯಿಸಿದರು. ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಎಸ್‌ಐಟಿ ತನಿಖೆಯ ಮೇಲೆ ವಿಶ್ವಾಸವಿದ್ದು, ಶೀಘ್ರದಲ್ಲೇ ಸತ್ಯಾಸತ್ಯತೆ ಹೊರಬರಬೇಕು ಎಂದು ಹೇಳಿದರು. 200 ಕೆ.ಜಿ. ಬೆಳ್ಳಿ ದೇಣಿಗೆ ನೀಡಿದರೂ ರಶೀದಿ ನೀಡಿಲ್ಲ…

Read More

ಜುಲೈ 3ರ ದಲಿತ ಜನಾಗ್ರಹ ಸಮಾವೇಶಕ್ಕೆ ಉಡುಪಿಯಿಂದ 500 ಕಾರ್ಯಕರ್ತರು ಭಾಗವಹಣೆ

ಉಡುಪಿ, ಜೂನ್ 27:ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ರಾಜ್ಯ ಸಮಿತಿಯ ಆಶ್ರಯದಲ್ಲಿ ಜುಲೈ 3ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ದಲಿತ ಜನಾಗ್ರಹ ಸಮಾವೇಶ ಆಯೋಜಿಸಲಾಗಿದೆ. ಈ ಸಮಾವೇಶದಲ್ಲಿ ಉಡುಪಿ ಜಿಲ್ಲೆಯಿಂದ ಸುಮಾರು 500 ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ದಸಂಸ ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಮಾಸ್ತರ್ ತಿಳಿಸಿದ್ದಾರೆ. ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ಅವರ ನೇತೃತ್ವದಲ್ಲಿ ನಡೆಯಲಿರುವ ಸಮಾವೇಶದಲ್ಲಿ ದಲಿತ ಸಂಘರ್ಷ…

Read More

ಕಾಂಗ್ರೆಸ್ ಕಚೇರಿ ನನ್ನ ದೇಗುಲ, ಪಕ್ಷವೇ ನನ್ನ ತಾಯಿ: ಪಿ.ವಿ. ಮೋಹನ್

ಮಂಗಳೂರು, : “ಕಾಂಗ್ರೆಸ್ ಕಚೇರಿ ನನ್ನ ದೇಗುಲ. ಪಕ್ಷವೇ ನನ್ನ ತಾಯಿ. ನನಗೆ ಹಾರ-ತುರಾಯಿ ಬೇಡ. ಹೋರಾಟದ ರಾಜಕೀಯದ ಮೂಲಕ ಬೆಳೆದವನಾದ ನಾನು ಸದಾ ನಿಮ್ಮವನಾಗಿರುತ್ತೇನೆ” ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ನೂತನ ವಿಧಾನ ಪರಿಷತ್ ಸದಸ್ಯ ಪಿ.ವಿ. ಮೋಹನ್ ಹೇಳಿದರು. ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ ಅವರನ್ನು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ನಾನು…

Read More

ಮಲ್ಪೆಯಲ್ಲಿ ಎಂಡಿಎಂಎ ಮಾರಾಟ ಆರೋಪ: ಯುವಕನ ಬಂಧನ

ಉಡುಪಿ: ಮಲ್ಪೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದಡಿ 19 ವರ್ಷದ ಯುವಕನನ್ನು ಮಲ್ಪೆ ಪೊಲೀಸರು ಬಂಧಿಸಿದ್ದು, ₹1.52 ಲಕ್ಷ ಮೌಲ್ಯದ ಮಾದಕ ವಸ್ತು, ಸ್ಕೂಟರ್ ಹಾಗೂ ಇತರೆ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತನನ್ನು ಬ್ರಹ್ಮಾವರದ ಸ್ವರ್ಣ ರೆಸಿಡೆನ್ಸಿ ನಿವಾಸಿ, ಮೂಲತಃ ಶಿರೂರಿನ ಸೈಯ್ಯದ್ ಮೊಹಮ್ಮದ್ ಮೆಹರಾಜ್ (19) ಎಂದು ಗುರುತಿಸಲಾಗಿದೆ. ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಬೆಳ್ಳಿಯಪ್ಪ ಕೆ.ಯು. ಹಾಗೂ ಮಲ್ಪೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ನೇತೃತ್ವದ ತಂಡವು…

Read More

ಕಾಸರಗೋಡಿನ ಡಾ. ವಾಮನ್ ರಾವ್ ಬೇಕಲ್ ದಂಪತಿಗೆ ಆರ್ಯಭಟ ರಾಷ್ಟ್ರೀಯ ಪ್ರಶಸ್ತಿ

ಬೆಂಗಳೂರು: ನಗರದ ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕ ಮಹಾದೇವಿ ಸಭಾಂಗಣದಲ್ಲಿ ನಡೆದ ಅಖಿಲ ಕರ್ನಾಟಕ ಶಿಕ್ಷಕರ ಸಮ್ಮೇಳನದಲ್ಲಿ ಗಡಿನಾಡು ಕಾಸರಗೋಡಿನ ಕನ್ನಡ ಭವನದ ಖ್ಯಾತಿಯ ಡಾ. ವಾಮನ್ ರಾವ್ ಬೇಕಲ್ ಹಾಗೂ ಸಂದ್ಯಾರಾಣಿ ಟೀಚರ್ ದಂಪತಿಗಳಿಗೆ “ಆರ್ಯಭಟ ರಾಷ್ಟ್ರೀಯ ಪ್ರಶಸ್ತಿ” ಪ್ರದಾನ ಮಾಡಿ ಗೌರವಿಸಲಾಯಿತು. ಆರ್ಯಭಟ ಚಾರಿಟೇಬಲ್ ಟ್ರಸ್ಟ್, ಬೆಳಗಾವಿ (ಮುಂಬೈ ಪ್ರಾಂತ್ಯ) ಹಾಗೂ ಚೇತನ ಫೌಂಡೇಶನ್ ಸಂಯುಕ್ತ ಆಶ್ರಯದಲ್ಲಿ ನಡೆದ ಸಮಾರಂಭದಲ್ಲಿ, ಶಿಕ್ಷಣ, ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ನೀಡಿದ ಅಮೂಲ್ಯ ಸೇವೆಯನ್ನು ಪರಿಗಣಿಸಿ…

Read More

ತೈಲ ಬೆಲೆ ಏರಿಕೆಯಿಂದ ಆಟೋ ಚಾಲಕರ ಜೀವನ ಸಂಕಷ್ಟ: ಕನಿಷ್ಠ ದರ ₹50 ಹಾಗೂ ಪ್ರತಿ ಕಿ.ಮೀ.ಗೆ ₹30 ನಿಗದಿಪಡಿಸಲು ಎಸ್.ಡಿ.ಟಿ.ಯು ಆಗ್ರಹ

ಮಂಗಳೂರು,: ಪೆಟ್ರೋಲ್, ಡೀಸೆಲ್ ಸೇರಿದಂತೆ ಇಂಧನದ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿರುವುದರಿಂದ ಆಟೋ ರಿಕ್ಷಾ ಚಾಲಕರ ಜೀವನ ತೀವ್ರ ಸಂಕಷ್ಟಕ್ಕೆ ಸಿಲುಕಿದೆ ಎಂದು ಎಸ್.ಡಿ.ಟಿ.ಯು ಮಂಗಳೂರು ನಗರ ಜಿಲ್ಲಾಧ್ಯಕ್ಷ ರಹಿಮಾನ್ ಬೋಳಿಯಾರ್ ಆತಂಕ ವ್ಯಕ್ತಪಡಿಸಿದ್ದಾರೆ. ಇಂಧನ ಬೆಲೆ ಏರಿಕೆಯೊಂದಿಗೆ ವಾಹನಗಳ ನಿರ್ವಹಣೆ, ಬಿಡಿಭಾಗಗಳ ವೆಚ್ಚ, ವಿಮೆ, ಪರವಾನಗಿ ಶುಲ್ಕ ಸೇರಿದಂತೆ ಎಲ್ಲಾ ಖರ್ಚುಗಳು ಗಣನೀಯವಾಗಿ ಹೆಚ್ಚಾಗಿವೆ. ಆದರೆ ಹಲವು ವರ್ಷಗಳಿಂದ ಮಂಗಳೂರಿನ ಆಟೋ ರಿಕ್ಷಾ ದರವನ್ನು ಪರಿಷ್ಕರಿಸದಿರುವುದರಿಂದ ಚಾಲಕರು ತಮ್ಮ ಕುಟುಂಬದ ನಿರ್ವಹಣೆಯನ್ನೇ ಕಷ್ಟದಿಂದ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ….

Read More

ಗುರುವಪ್ಪ ಬಾಳೆಪುಣಿ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ-ಆರ್ಥಿಕ ನೆರವು ವಿತರಣೆ

ಮಂಗಳೂರು6: ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ. ಬಾಳೆಪುಣಿ ಅವರು ಶಾಲಾ ದಿನಗಳಿಂದಲೇ ನಾಯಕತ್ವ ಗುಣಗಳನ್ನು ಬೆಳೆಸಿಕೊಂಡಿದ್ದು, ಪತ್ರಕರ್ತರಾಗಿಯೂ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಅವರ ಹೆಸರಿನಲ್ಲಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವು ನೀಡುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ನರಿಂಗಾನ ಕಂಬಳ ಸಮಿತಿ ಕಾರ್ಯಾಧ್ಯಕ್ಷ ಪ್ರಶಾಂತ್ ಹೇಳಿದರು. ನಗರದ ಪ್ರೆಸ್ ಕ್ಲಬ್‌ನಲ್ಲಿ ಎಜುಕಾರುಣ್ಯ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್, ಮಂಗಳೂರು ವತಿಯಿಂದ ಹಮ್ಮಿಕೊಂಡಿದ್ದ ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ. ಬಾಳೆಪುಣಿ ಅವರ ಸ್ಮರಣಾರ್ಥ ದತ್ತಿನಿಧಿ ಹಸ್ತಾಂತರ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು…

Read More
error: Content is protected !!