ಕರಾವಳಿಯತ್ತ ಕಿಂಗ್ ಖಾನ್ ಹೆಜ್ಜೆ: ಮಂಗಳೂರಿನಲ್ಲಿ ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮ

ಮಂಗಳೂರು: ಬಾಲಿವುಡ್‌ನ ಖ್ಯಾತ ನಟ ಹಾಗೂ ಜಾಗತಿಕ ಮಟ್ಟದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿರುವ ಶಾರುಖ್ ಖಾನ್ ಅವರು ಜೂನ್ 25ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಕರಾವಳಿಯ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆಯಾದ ರೋಹನ್ ಕಾರ್ಪೊರೇಶನ್ ಆಯೋಜಿಸಿರುವ ‘ಆನ್ ಈವಿನಿಂಗ್ ವಿತ್ ಶಾರುಖ್ ಖಾನ್’ ಕಾರ್ಯಕ್ರಮದಲ್ಲಿ ಅವರು ವಿಶೇಷ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಮಂಗಳೂರಿನ ಅಡ್ಯಾ‌ರ್ ಗಾರ್ಡನ್‌ನಲ್ಲಿ ನಡೆಯಲಿರುವ ಈ ವಿಶೇಷ ಕಾರ್ಯಕ್ರಮಕ್ಕೆ ಸಂಜೆ 4 ಗಂಟೆಯಿಂದ ಪ್ರವೇಶ ಆರಂಭವಾಗಲಿದ್ದು, ವಿವಿಧ ಕ್ಷೇತ್ರಗಳ ಗಣ್ಯರು, ಉದ್ಯಮಿಗಳು, ಸಾರ್ವಜನಿಕ ಪ್ರತಿನಿಧಿಗಳು ಹಾಗೂ ಪೂರ್ವ…

Read More

ಮಂಗಳೂರಿನಲ್ಲಿ ಕಾಂಗ್ರೆಸ್‌ನ SIR ಜನಜಾಗೃತಿ ಸಮಾವೇಶ; ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್‌ಗೆ ಅದ್ದೂರಿ ಸ್ವಾಗತ

ಮಂಗಳೂರು: ಕಾಂಗ್ರೆಸ್ ಪಕ್ಷದ ವತಿಯಿಂದ ಆಯೋಜಿಸಲಾದ SIR ಜನಜಾಗೃತಿ ಸಮಾವೇಶವು ಮಂಗಳೂರಿನಲ್ಲಿ ಭಾನುವಾರ ನಡೆಯಲಿದ್ದು, ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ತವರು ಜಿಲ್ಲೆಗೆ ಆಗಮಿಸಿದ ಬಿ.ಕೆ. ಹರಿಪ್ರಸಾದ್ ಅವರಿಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತ ಕೋರಿದರು. ಬಳಿಕ ನಗರದ ಪುರಭವನದಲ್ಲಿ ಆಯೋಜಿಸಲಾದ ಜನಜಾಗೃತಿ ಸಮಾವೇಶದಲ್ಲಿ ಬಿ.ಕೆ. ಹರಿಪ್ರಸಾದ್ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ವಿ.ಆರ್. ಸುದರ್ಶನ ಭಾಗವಹಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಸಮಾವೇಶದಲ್ಲಿ ಪಕ್ಷದ…

Read More

ದಕ್ಷಿಣ ಕನ್ನಡ ಜಿಲ್ಲಾ ಖಾಝಿ ತ್ವಾಕಾ ಅಹ್ಮದ್ ಮುಸ್ಲಿಯಾರ್ ನಿಧನ

78ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದ ಧಾರ್ಮಿಕ ನಾಯಕ; ಸಚಿವ ಯು.ಟಿ. ಖಾದರ್ ಸಂತಾಪ ಮಂಗಳೂರು, ಜೂನ್ 23: ದಕ್ಷಿಣ ಕನ್ನಡ ಜಿಲ್ಲಾ ಖಾಝಿ, ಖ್ಯಾತ ಧಾರ್ಮಿಕ ನಾಯಕ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಅವರು ಇಂದು ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 78 ವರ್ಷ ವಯಸ್ಸಾಗಿತ್ತು. ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರು…

Read More

ಯುಪಿಎಸ್‌ಸಿ ಪರೀಕ್ಷೆಗೆ ಮಾರ್ಗದರ್ಶನ: ಜೂನ್ 28ರಂದು ‘ಮಾರ್ಗದರ್ಶಿ’ ಕಾರ್ಯಕ್ರಮ

ಮಂಗಳೂರು IAS, ರಚನಾ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ಹಾಗೂ ರಾಮಕೃಷ್ಣ ಮಿಷನ್ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ನಾಗರಿಕ ಸೇವಾ ಪರೀಕ್ಷಾ ಆಕಾಂಕ್ಷಿಗಳಿಗಾಗಿ “ಮಾರ್ಗದರ್ಶಿ – Cracking the UPSC Examination” ವಿಶೇಷ ಮಾರ್ಗದರ್ಶನ ಕಾರ್ಯಕ್ರಮವು ಜೂನ್ 28ರಂದು ಭಾನುವಾರ ಬೆಳಿಗ್ಗೆ 8.30ರಿಂದ ಮಧ್ಯಾಹ್ನ 12.30ರವರೆಗೆ ಮಂಗಳೂರಿನ ಮಂಗಳಾದೇವಿಯಲ್ಲಿರುವ ರಾಮಕೃಷ್ಣ ಮಿಷನ್ ಸಭಾಂಗಣದಲ್ಲಿ ನಡೆಯಲಿದೆ ಎಂದುರಚನಾ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿಯ ಅಧ್ಯಕ್ಷ ರೊಯ್ ಕ್ಯಾಸ್ಟೆಲಿನೊ ತಿಳಿಸಿದರು. ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ…

Read More

ಜೂನ್ 28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ: ಎಲ್ಲ ಇಲಾಖೆಗಳ ಸಹಕಾರ ಅಗತ್ಯ – ಆಯುಕ್ತ ರವಿಚಂದ್ರ ನಾಯಕ್

ಮಂಗಳೂರು, ಜೂ.22: ಜೂನ್ 28ರಂದು ನಡೆಯಲಿರುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಯಶಸ್ವಿ ಅನುಷ್ಠಾನಕ್ಕೆ ಸಂಬಂಧಿತ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಸೂಚಿಸಿದರು. ಮಹಾನಗರಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಸೋಮವಾರ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ನಗರ ಮಟ್ಟದ ಚಾಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 0ರಿಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಕಡ್ಡಾಯವಾಗಿ ಪೋಲಿಯೋ ಲಸಿಕೆ ನೀಡಬೇಕು. ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ಅಗತ್ಯ ಸಿದ್ಧತೆಗಳನ್ನು…

Read More

ಮಕ್ಕಳ ನಾಪತ್ತೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ: ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚನೆ

ಮಂಗಳೂರು, ಜೂ.22: ಜಿಲ್ಲೆಯಲ್ಲಿ ಮಕ್ಕಳ ನಾಪತ್ತೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ವಿಳಂಬವಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಜಿಲ್ಲಾ ಮಕ್ಕಳ ಕಲ್ಯಾಣ ಮತ್ತು ರಕ್ಷಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಳೆದ ಒಂದು ವರ್ಷದಲ್ಲಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ 86 ಮಕ್ಕಳ ನಾಪತ್ತೆ ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 79 ಮಕ್ಕಳು ಪತ್ತೆಯಾಗಿದ್ದಾರೆ. ಉಳಿದ ಪ್ರಕರಣಗಳಲ್ಲಿಯೂ ತ್ವರಿತ ತನಿಖೆ ನಡೆಸಿ ಮಕ್ಕಳನ್ನು…

Read More

ಯಮುನಾ ಪೂಜಾರಿ ಕುಟುಂಬಕ್ಕೆ ಬಿಜೆಪಿ ಕಾರ್ಯಕರ್ತರಿಂದ ನೂತನ ಮನೆ ನಿರ್ಮಾಣ

ಬಂಟ್ವಾಳ, ಜೂ. 23: ಮಣಿನಾಲ್ಕೂರು ಗ್ರಾಮದ ಅರ್ಬಿ ನಿವಾಸಿ ಯಮುನಾ ಪೂಜಾರಿ ಅವರ ಕುಟುಂಬಕ್ಕೆ ದೇವಶ್ಯಮೂಡೂರು ಹಾಗೂ ಮಣಿನಾಲ್ಕೂರು ಬಿಜೆಪಿ ಕಾರ್ಯಕರ್ತರ ನೇತೃತ್ವದಲ್ಲಿ ನಿರ್ಮಿಸಲಾದ ನೂತನ ಮನೆಯ ಗೃಹಪ್ರವೇಶ ಸಮಾರಂಭ ಭಾನುವಾರ ನಡೆಯಿತು. ಯಮುನಾ ಪೂಜಾರಿ ಅವರು ಪುತ್ರಿಯೊಂದಿಗೆ ವಾಸಿಸುತ್ತಿದ್ದು, ಹೊರಗಡೆ ತೆರಳಿ ದುಡಿಯಲು ಅಸಾಧ್ಯವಾಗಿರುವ ಹಿನ್ನೆಲೆಯಲ್ಲಿ ಅವರ ಜೀವನೋಪಾಯಕ್ಕೆ ನೆರವಾಗುವ ಉದ್ದೇಶದಿಂದ ಬಿಜೆಪಿ ಕಾರ್ಯಕರ್ತರು ಸುಮಾರು 50 ಮಲ್ಲಿಗೆ ಗಿಡಗಳನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಸಾನ್ವಿ ಪೂಜಾರಿ ಕೋಡ್ಲೆ…

Read More

ಸೇತುವೆ ಅಗಲೀಕರಣಕ್ಕೆ ಆಗ್ರಹಿಸಿ ಪೆರುವಾಯಿಯಲ್ಲಿ ಪ್ರತಿಭಟನೆ

ವಿಟ್ಲ, ಜೂ. 23: ಪೆರುವಾಯಿ–ಪಕಳಕುಂಜ ರಸ್ತೆಯ ಕೆದುಮೂಲೆ ಹಾಗೂ ಪೆರುವಾಯಿ ಸೇತುವೆ, ಪೆರುವಾಯಿ–ಬೆರಿಪದವು ರಸ್ತೆಯ ಪೇರಡ್ಕ ಸೇತುವೆಯನ್ನು ವೈಜ್ಞಾನಿಕ ರೀತಿಯಲ್ಲಿ ಅಗಲೀಕರಣಗೊಳಿಸಬೇಕು. ಅಲ್ಲದೆ, ಪೆರುವಾಯಿಯಿಂದ ಬಾಳಶೆಟ್ಟಿಮೂಲೆ ಮೂಲಕ ಹಾದು ಹೋಗುವ ಕನ್ಯಾನ ರಸ್ತೆಯನ್ನು ಲೋಕೋಪಯೋಗಿ ಇಲಾಖೆ ವ್ಯಾಪ್ತಿಗೆ ತರಬೇಕು ಹಾಗೂ ಓಣಿಬಾಗಿಲುವಿನಿಂದ ಪಕಳಕುಂಜ ತನಕ ರಸ್ತೆ ಅಗಲೀಕರಣಗೊಳಿಸಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಪೆರುವಾಯಿ ಜಂಕ್ಷನ್‌ನಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನುದ್ದೇಶಿಸಿ ಮುರುವ ಮಹಾಬಲ ಭಟ್, ಗೋಪಾಲ ಶೆಟ್ಟಿ, ರಾಘವ ಬೆರಿಪದವು ಹಾಗೂ ಗಣೇಶ್ ಕುಮಾರ್ ದೇಲಂತಮಲು ಮಾತನಾಡಿ, ಸೇತುವೆಗಳ…

Read More

ಅರ್ಭಿ–ದೆಂಬುಡೆ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗೆ ಚಾಲನೆ

ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅರಳ ಗ್ರಾಮದ ಬಹುಕಾಲದ ಬೇಡಿಕೆಯಾಗಿದ್ದ ಅರ್ಭಿ–ದೆಂಬುಡೆ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ರೂ.20 ಲಕ್ಷ ವಿಶೇಷ ಅನುದಾನ ಮಂಜೂರಾಗಿದ್ದು, ಕಾಮಗಾರಿಗೆ ಮಾಜಿ ಸಚಿವ ಬಿ. ರಮಾನಾಥ ರೈ ಚಾಲನೆ ನೀಡಿದರು. ಗ್ರಾಮಸ್ಥರ ಬಹುವರ್ಷಗಳ ಬೇಡಿಕೆಗೆ ಸ್ಪಂದಿಸಿ ರಸ್ತೆ ಅಭಿವೃದ್ಧಿಗೆ ವಿಶೇಷ ಅನುದಾನ ಒದಗಿಸಲಾಗಿದ್ದು, ಈ ಕಾಮಗಾರಿಯಿಂದ ಸ್ಥಳೀಯ ನಿವಾಸಿಗಳಿಗೆ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ. ಗ್ರಾಮೀಣ ಪ್ರದೇಶದ ಮೂಲಸೌಕರ್ಯ ಅಭಿವೃದ್ಧಿಗೆ ಇದು ಮಹತ್ವದ ಕೊಡುಗೆಯಾಗಿದೆ ಎಂದು ರಮಾನಾಥ…

Read More

ಹದಗೆಟ್ಟ ರಸ್ತೆಯನ್ನು ಶೀಘ್ರವಾಗಿ ದುರಸ್ತಿಗೊಳಿಸಲು ಎಸ್.ಡಿ.ಪಿ.ಐ ಬೋಳಿಯಾರ್ ಗ್ರಾಮ ಸಮಿತಿಯಿಂದ ಪ್ರತಿಭಟನೆ

ಬೋಳಿಯಾರ್ , ಜೂ22: ಬೋಳಿಯಾರ್ ಗ್ರಾಮದ ಗೋಳಿದಡಿ ಕ್ರಾಸ್‌ನಿಂದ ರಂತಡ್ಕವರೆಗೆ ಸಂಪರ್ಕಿಸುವ ರಸ್ತೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ವಾಹನ ಸವಾರರು ತೀವ್ರ ಸಂಕಷ್ಟ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ, ರಸ್ತೆಯನ್ನು ತಕ್ಷಣ ದುರಸ್ತಿಗೊಳಿಸುವಂತೆ ಆಗ್ರಹಿಸಿ ಎಸ್.ಡಿ.ಪಿ.ಐ ಬೋಳಿಯಾರ್ ಗ್ರಾಮ ಸಮಿತಿಯ ವತಿಯಿಂದ ಇಂದು ಬೋಳಿಯರ್ ಗೋಳಿದಡಿ ಕ್ರಾಸ್ ಬಳಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯ ಅಧ್ಯಕ್ಷತೆಯನ್ನು ಎಸ್.ಡಿ.ಪಿ.ಐ ಬೋಳಿಯಾರ್ ಗ್ರಾಮ ಸಮಿತಿಯ ಅಧ್ಯಕ್ಷರಾದ ಶರ್ವನ್ ಬೋಳಿಯಾರ್ ವಹಿಸಿದ್ದರು. ಪ್ರಾಸ್ತಾವಿಕವಾಗಿ ಮಾತನಾಡಿದ ಅಶ್ರಫ್ ಮೋನು ಬೋಳಿಯಾರ್ ಅವರು, ಬೋಳಿಯಾರ್ ಕ್ರಾಸ್…

Read More
error: Content is protected !!